Headlines

nagaraj11081993

ಹಬ್ಬಕ್ಕೆ ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

ಬೆಂಗಳೂರು, ಮಾರ್ಚ್​ 18: ಯುಗಾದಿ ಮತ್ತು ರಂಜಾನ್ ಹಬ್ಬ ಹಿನ್ನೆಲೆ ಇಂದು ಮಧ್ಯಾಹ್ನದಿಂದಲೇ ಜನರು ತಮ್ಮ ಊರಿಗೆ ಹೊರಟ್ಟಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್​ನಲ್ಲಿ ಕಿಕ್ಕಿರಿದು ತುಂಬಿದ್ದಾರೆ. ಬಸ್​ಗಳು ಬರುತ್ತಿದ್ದಂತೆ ಕಿಟಕಿ ಮೂಲಕ ಬ್ಯಾಗ್ ಗಳನ್ನು ಹಾಕಿ ಸೀಟ್​ ಪ್ರಯಾಣಿಕರು ಮುಂದಾಗಿದ್ದಾರೆ. ಇದೇ ವೇಳೆ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಓರ್ವ ಮಹಿಳೆ ಕೆಳಗೆಬಿದಿದ್ದಾರೆ. ಸರ್ಕಾರಿ ಬಸ್ ಮುಂದೆ ಚಲಿಸುವಾಗ ಮಹಿಳೆ ಆಯತಪ್ಪಿಬಿದಿದ್ದಾರೆ. ಸಹ ಪ್ರಯಾಣಿಕರ ಸಮಯ ಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ. ಮತ್ತಷ್ಟು…

Read More

ಮಾರ್ಗ ಬದಲಿಸಿ ಭಾರತಕ್ಕೆ ಧಾವಿಸಿದ ಚೀನಾಕ್ಕೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್‌ಗಳು

ನವದೆಹಲಿ, ಮಾರ್ಚ್ 18: ಚೀನಾಕ್ಕೆ ಹೋಗುತ್ತಿದ್ದ ರಷ್ಯಾದ ತೈಲ (Oil Tanker) ತುಂಬಿದ ಟ್ಯಾಂಕರ್ ದಕ್ಷಿಣ ಚೀನಾದ ಸಮುದ್ರದಲ್ಲಿ ತನ್ನ ದಿಕ್ಕನ್ನು ಬದಲಾಯಿಸಿದೆ. ಆ ಹಡಗು ಯು-ಟರ್ನ್ ಹೊಡೆದು ಈಗ ಭಾರತಕ್ಕೆ ಆಗಮಿಸುತ್ತಿದೆ. ಅಮೆರಿಕ, ಇಸ್ರೇಲ್-ಇರಾನ್ ಯುದ್ಧದ ಮಧ್ಯೆ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಡಗಿನ ಟ್ರ್ಯಾಕಿಂಗ್ ಡೇಟಾ ಅಫ್ರಾಮ್ಯಾಕ್ಸ್ ಟ್ಯಾಂಕರ್ ಅಕ್ವಾ ಟೈಟಾನ್ ಮಾರ್ಚ್ 21ರಂದು ರಷ್ಯಾದ ಯುರಲ್ಸ್ ಕಚ್ಚಾ ತೈಲದ ಸರಕುಗಳನ್ನು ಹೊತ್ತು ನವಮಂಗಳೂರು ಬಂದರಿಗೆ ಆಗಮಿಸುವ…

Read More

ಹಬ್ಬಕ್ಕೆ ಊರಿಗೆ ಹೊರಟವರಿಗೆ ಭರ್ಜರಿ ಶಾಕ್​​: ಬಸ್​​ಗಳ ಟಿಕೆಟ್​​ ದರ ದುಪ್ಟಟ್ಟು ಏರಿಕೆ

ಬೆಂಗಳೂರು, ಮಾರ್ಚ್​​ 18: ಯುಗಾದಿ ಮತ್ತು ರಂಜಾನ್​​ ಹಬ್ಬಗಳನ್ನು ಮನೆಯವರ ಜೊತೆ ಸೇರಿಕೊಂಡು ಆಚರಿಸಬೇಕು ಎಂಬ ಆಸೆಯಲ್ಲಿ ಬೆಂಗಳೂರಿನಿಂದ ಊರುಗಳತ್ತ ಮುಖ ಮಾಡುತ್ತಿರುವ ಪ್ರಯಾಣಿಕರಿಗೆ ಭರ್ಜರಿ ಶಾಕ್​​ ಎದುರಾಗಿದೆ. ಇದೇ ಸಮಯವನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್​​ ಮಾಲಕರು ದುಪ್ಪಟ್ಟು ದರ ವಸೂಲಿಗೆ ಇಳಿದಿದ್ದಾರೆ. ನಾಳೆ ಯುಗಾದಿ ಹಬ್ಬವಾದರೆ, ಶುಕ್ರವಾರ ಹೊಸ ತೊಡಕು ಆಚರಣೆ ಇದೆ. ಶನಿವಾರ ರಂಜಾನ್​​ ಬಂದಿದ್ದು, ಭಾನುವಾರ ಎಂದಿನಂತೆ ವಾರದ ರಜೆ ಇರಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯ ಜನ ಊರುಗಳತ್ತ ಹೊರಟು ನಿಂತಿದ್ದಾರೆ….

Read More

Video: ಹಗ್ಗ ಎಳೆದ್ರೂ ಕದಲದೇ ನಿಂತಿದ್ದ ಎಮ್ಮೆ ಕರುವಿಗೆ ಸವಾಲು ಹಾಕಿದ ಪುಟಾಣಿ

ಈಗಿನ ಕಾಲದ ಮಕ್ಕಳು (children) ಎಲ್ಲದರಲ್ಲೂ ಒಂದು ಹೆಜ್ಜೆ ಮುಂದೆನೇ. ಏನೇ ಕೇಳಿದ್ರೂ ಪಟ ಪಟನೇ ಉತ್ತರ ಹೇಳ್ತಾರೆ. ಹೆತ್ತವರನ್ನು ಮಾತಿನಲ್ಲೇ ಕಟ್ಟಿ ಹಾಕ್ತಾರೆ, ಆದರೆ ಈ ಪುಟ್ಟ ಹುಡುಗಿಯೂ (little girl) ಎಮ್ಮೆ ಕರುವಿಗೆ ಓಪನ್ ಚಾಲೆಂಜ್ ಹಾಕಿದ್ದಾಳೆ. ಕುತ್ತಿಗೆಗೆ ಕಟ್ಟಿದ ಹಗ್ಗವನ್ನು ಎಷ್ಟೇ ಎಳೆದರೂ ಎಮ್ಮೆ ಕರುವು ಕದಲದೇ ಹಾಗೆಯೇ ನಿಂತುಕೊಂಡಿದ್ದು, ಇದರಿಂದ ಕೋಪಗೊಂಡ  ಈ ಪುಟ್ಟ ಹುಡುಗಿಯೂ ಸವಾಲು ಹಾಕಿರುವ ವಿಡಿಯೋ ವೈರಲ್‌ ಆಗಿದೆ. ಈ ಪುಟ್ಟ ಬಾಲಕಿಯ ಮಾತು ಕೇಳಿ ನೆಟ್ಟಿಗರು…

Read More

21 ವರ್ಷ ಹಳೆಯ ಕ್ಯೂಟ್ ವಿಡಿಯೋ ಹಂಚಿಕೊಂಡ ನಟಿ ರಮ್ಯಾ

ಪುನೀತ್ ರಾಜ್​​ಕುಮಾರ್ (Puneeth Rajkumar) ನಟನೆಯ ‘ಆಕಾಶ್’ ಸಿನಿಮಾ 2005 ರಲ್ಲಿ ಬಿಡುಗಡೆ ಆಗಿ ಭಾರಿ ದೊಡ್ಡ ಹಿಟ್ ಆಗಿತ್ತು. ಕೆಲ ದಿನಗಳ ಹಿಂದಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದ್ದು, ಪ್ರೇಕ್ಷಕರು, ಅಭಿಮಾನಿಗಳು ಬಲು ಅದ್ಧೂರಿಯಾಗಿ ‘ಆಕಾಶ್’ ಸಿನಿಮಾವನ್ನು ಮತ್ತೊಮ್ಮೆ ಸ್ವಾಗತ ಮಾಡಿದ್ದಾರೆ. ರಮ್ಯಾ ಸೇರಿದಂತೆ ದೊಡ್ಮನೆಯ ಹಲವು ಸದಸ್ಯರು ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಿದರು. ರಮ್ಯಾ ಅಂತೂ ಅಭಿಮಾನಿಗಳೊಟ್ಟಿಗೆ ಸೇರಿ ಚಿತ್ರಮಂದಿರದಲ್ಲಿಯೇ ‘ನೀನೆ ನೀನೆ’ ಹಾಡು ಸಹ ಹಾಡಿದರು. ಸಿನಿಮಾ ಮರು ಬಿಡುಗಡೆ ಆದ…

Read More

ಚಿಕ್ಕಮಗಳೂರು BJP-ಹಿಂದೂ ಕಾರ್ಯಕರ್ತರು, ನಾಲ್ವರು ಮುಸ್ಲಿಮರು ಸೇರಿ 15 ಜನರಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು (ಮಾರ್ಚ್.18): ಜಿಲ್ಲೆಯಲ್ಲಿ ಬಿಜೆಪಿ (BJP) ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು, ಮುಸ್ಲಿಂ ಘಟನೆಯ ಸದಸ್ಯರು ಸೇರಿ ಒಟ್ಟು 15 ಜನರಿಗೆ ಗಡಿಪಾರು ನೋಟಿಸ್ (externment Notice) ನೀಡಲಾಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ , ಬಜರಂಗದಳ ಹಾಸನ ವಿಭಾಗದ ಸಹ ಸಂಯೋಜಕ ಶ್ಯಾಮ್ ವಿ ಗೌಡ‌, ಮುಸ್ಲಿಂ ಸಂಘಟನೆಯ ನಾಲ್ವರು ಸೇರಿದಂತೆ 15 ಜನರಿಗೆ ಪೊಲೀಸ್ ‌ಕಾಯ್ದೆ1963 ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತದಿಂದ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದ್ದು, ಈ…

Read More

ಐಪಿಎಲ್ ಇತಿಹಾಸದಲ್ಲಿ ಒಂದೇ ಒಂದು ಸಿಕ್ಸ್ ಹೊಡೆಯದ ಐವರು ಆಟಗಾರರಿವರು

ಹಣದ ಮಳೆಯನ್ನೇ ಹರಿಸುವ ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಬ್ಯಾಟ್ಸ್‌ಮನ್​ಗಳ ಅಬ್ಬರವನ್ನೇ ಕೇಳುವ ಈ ಲೀಗ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡುತ್ತದೆ. ಆದಾಗ್ಯೂ ಈ ಲೀಗ್​ನಲ್ಲಿ ಸಿಕ್ಸರ್​ ಬಾರಿಸಿದ ಆಟಗಾರರೂ ಇದ್ದಾರೆ ಎಂಬುದು ಅಚ್ಚರಿಯ ಸಂಗತಿ. ರೋಹಿತ್ ಶರ್ಮಾ, ಧೋನಿ, ಅಭಿಷೇಕ್ ಶರ್ಮಾ ಮತ್ತು ಆಂಡ್ರೆ ರಸೆಲ್ ಅವರಂತಹ ಆಟಗಾರರು ಸಿಕ್ಸ್-ಹಿಟ್ಟಿಂಗ್ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆದರೆ ಐಪಿಎಲ್‌ನಲ್ಲಿ ಎಂದಿಗೂ ಸಿಕ್ಸ್ ಹೊಡೆಯದ ಐವರು…

Read More

ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: 30 ಅರ್ಹ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ಬೆಂಗಳೂರು, ಮಾರ್ಚ್​ 18: ಕೋಗಿಲು ನಿರಾಶ್ರಿತರಿಗೆ ಕೊನೆಗೂ ನಿವೇಶನ ಭಾಗ್ಯ ದೊರೆತಿದೆ. ಮೂರ್ನಾಲ್ಕು ತಿಂಗಳ ಬಳಿಕ 30 ಅರ್ಹ ನಿವಾಸಿಗಳಿಗೆ ಸಚಿವರಾದ ಕೃಷ್ಣಬೈರೇಗೌಡ ಮತ್ತು ಜಮೀರ್ ಅಹ್ಮದ್‌ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಆ ಮೂಲಕ ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ ಮತ್ತು ರಂಜಾನ್​​ ಹಬಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ರಾಜೀವ್ ಗಾಂಧಿ ವಸತಿ ನಿಗಮದ ಸಮುಚ್ಚಯದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಹಕ್ಕುಪತ್ರ ಪಡೆದವರಲ್ಲಿ ಸಾಮಾನ್ಯ ವರ್ಗದ 10 ಕುಟುಂಬಗಳಿಗೆ ಆದ್ಯತೆ ನೀಡಲಾಗಿದೆ. ಪರಿಶಿಷ್ಟ ಜಾತಿಯ…

Read More

ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ

‘ಲವ್ ಸೀಸನ್ಸ್’ (Love Seasons) ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ರಂಗಭೂಮಿ ಹಿನ್ನೆಲೆಯ ಕೃತ್ವಿಕ್ ನಿರ್ದೇಶನದಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಹೊಸ ಕಲಾವಿದರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಮಂಡ್ಯ ರಮೇಶ್ ಅವರ ‘ನಟನಾ’ ಸಂಸ್ಥೆಯಲ್ಲಿ ಅಭಿನಯದ ಪಾಠ ಕಲಿತಿರುವ ಮುಕುಂದ ರಾಮಸ್ವಾಮಿ ಹೀರೋ ಆಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ, ಶ್ವೇತಾ ಕೊಗ್ಲೂರ್ ಅವರು ನಾಯಕಿಯರಾಗಿ ಅಭಿನಯಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ,…

Read More

ಉತ್ತರ ಕೊರಿಯಾ ಚುನಾವಣೆಯಲ್ಲಿ ಶೇ. 99.93 ಮತಗಳಿಂದ ಗೆದ್ದ ಕಿಮ್ ಜಾಂಗ್ ಉನ್; ಉಳಿದ 18 ಸಾವಿರ ಜನರ ಗತಿಯೇನು!

ನವದೆಹಲಿ, ಮಾರ್ಚ್ 18: ಉತ್ತರ ಕೊರಿಯಾದ (North Korea Elections) ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ (Kim Jong-Un) ಅಚ್ಚರಿಯೇನಲ್ಲದ ರೀತಿಯಲ್ಲಿ ಚುನಾವಣೆಯಲ್ಲಿ ಮತ್ತೊಂದು ಬಾರಿ ಭರ್ಜರಿ ಜಯ ಸಾಧಿಸಿದ್ದಾರೆ. ಅವರ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾ ಮತ್ತು ಅದರ ಮಿತ್ರಪಕ್ಷಗಳು ಈ ಬಾರಿಯ ಸಂಸತ್ ಚುನಾವಣೆಯಲ್ಲಿ ಶೇ. 99.97ರಷ್ಟು ಮತಗಳನ್ನು ಪಡೆದಿವೆ. 15ನೇ ಸುಪ್ರೀಂ ಪೀಪಲ್ಸ್ ಅಸೆಂಬ್ಲಿಯ ಸದಸ್ಯರನ್ನು ಆಯ್ಕೆ ಮಾಡಲು ಮಾರ್ಚ್ 15ರಂದು ಮತದಾನ ನಡೆಯಿತು. ಪೀಪಲ್ಸ್ ಕೊರಿಯಾದ ವರದಿಯ ಪ್ರಕಾರ, ಉತ್ತರ…

Read More