ಅಂತರ್ಜಾತಿ ವಿವಾಹವಾಗುವವರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ
ಬೆಂಗಳೂರು, ಮಾರ್ಚ್ 18: ಅಂತರ್ಜಾತಿ ವಿವಾಹ ಸಂದರ್ಭ ಕುಟುಂಬಸ್ಥರಿಂದ ತೀವ್ರ ಆಕ್ಷೇಪ, ಬಹಿಷ್ಕಾರ ಸೇರಿ ಕೆಲ ಪ್ರಕರಣಗಳಲ್ಲಿ ಕೊಲೆಯೂ ನಡೆದಿರುವ ಉದಾಹರಣೆಗಳಿವೆ. ಹೀಗಾಗಿ ಅಂತರ್ಜಾತಿ ವಿವಾಹಿತರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಕಾಯ್ದೆ ತರಲು ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ ಮಾಡಲಾಗಿದ್ದು, ಜಾತಿ ಶ್ರೇಣೀಕರಣ, ಸಂಪ್ರದಾಯಗಳ ಹೆಸರಿನಲ್ಲಿ ಹಿಂಸೆ ಮತ್ತು ಕಿರುಕುಳ ತಪ್ಪಿಸಲು ಮುಂದಾಗಿದೆ. ಈ ವಿಧೇಯಕ ಕಾಯ್ದೆಯಾಗಿ ಜಾರಿಗೆ ಬಂದಿದ್ದೇ ಆದರೆ ಅಂತರ್ಜಾತಿ ವಿವಾಹಕ್ಕೆ ಹೆಚ್ಚಿನ ಮಾನ್ಯತೆ…