IPL 2026: ಕನ್ನಡಿಗ ಕೆಎಲ್ ರಾಹುಲ್ಗೆ ಮಹತ್ವದ ಜವಾಬ್ದಾರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್
ರಣಜಿ ಅಂಗಳದಲ್ಲಿ ಕರ್ನಾಟಕ ತಂಡವನ್ನು ಫೈನಲ್ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಐಪಿಎಲ್‌ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕೆಎಲ್ ರಾಹುಲ್, ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ತಂಡದಲ್ಲಿ ಹೊಸ ಪಾತ್ರವನ್ನು ನಿರ್ವಹಿಸಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹಿಂದಿನ ತಪ್ಪುಗಳಿಂದ ಪಾಠ ಕಲಿತಿದ್ದು, ಕೆಎಲ್ ರಾಹುಲ್ ಅವರನ್ನು ಓಪನರ್ ಆಗಿ ಆಡಿಸಲು ನಿರ್ಧರಿಸಿದೆ. ಹೀಗಾಗಿ ಅವರು ಈ ಆವೃತ್ತಿಯ ಮೊದಲ ಪಂದ್ಯದಿಂದಲೇ ಡೆಲ್ಲಿ ಕ್ಯಾಪಿಟಲ್ಸ್…