ಕೆಯುಡಬ್ಲ್ಯೂಜೆ ಸಂಸ್ಥಾಪಕ ಡಿವಿಜಿ ಜನ್ಮ ದಿನಾಚರಣೆ: ಇತಿಹಾಸ ಸ್ಮರಿಸಿದ ಶಿವಾನಂದ ತಗಡೂರು
ಬೆಂಗಳೂರು, ಮಾರ್ಚ್ 17: ಆಧುನಿಕ ಕನ್ನಡ ಸಾಹಿತ್ಯದ ಸರ್ವಜ್ಞ, ಸಾಹಿತ್ಯ ದಿಗ್ಗಜ ಡಿ.ವಿ. ಗುಂಡಪ್ಪನವರು ಕೇವಲ ಸಾಹಿತಿಯಷ್ಟೇ ಅಲ್ಲದೆ ಪತ್ರಕರ್ತರ ಹಿತರಕ್ಷಣೆಗಾಗಿ 95 ವರ್ಷಗಳ ಹಿಂದೆಯೇ ಸಂಘಟನೆಯನ್ನು ಕಟ್ಟಿದ ದೂರದರ್ಶಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ನಗರದಲ್ಲಿ ನಡೆದ ಬೆಂಗಳೂರು ಜಿಲ್ಲಾ ಘಟಕದ ನೂತನ ಕಚೇರಿ ಪೂಜೆ ಹಾಗೂ ಡಿ.ವಿ.ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡಿ.ವಿ.ಜಿ ಅವರು ಅಂದು ಹಾಕಿಕೊಟ್ಟ ಅಡಿಪಾಯದ ಮೇಲೆ ಇಂದು…