ದಾವಣಗೆರೆ ಬೈ ಎಲೆಕ್ಷನ್: ಮುಸ್ಲಿಂ ಸಮುದಾಯದ ಆಕ್ರೋಶವೇ ಕಾಂಗ್ರೆಸ್ಗೀಗ ಟೆನ್ಷನ್!
ದಾವಣಗೆರೆ, ಏಪ್ರಿಲ್ 01: ಉಪ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪಕ್ಷಗಳ ಪ್ರಚಾರವೂ ಭರದಿಂದ ಸಾಗಿದೆ. ಆದರೆ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯದ ಅಸಮಾಧಾನವೇ ಈಗ ಬಿಸಿ ತುಪ್ಪವಾಗಿ ಮಾರ್ಪಟ್ಟಿದೆ. ಸಮುದಾಯಕ್ಕೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದ ಕೆಲ ನಾಯಕರನ್ನು ಸ್ವತಃ ಸಿಎಂ ಮತ್ತು ಡಿಸಿಎಂ ಅವರೇ ಖುದ್ದು ಅಖಾಡಕ್ಕಿಳಿದು ಸಮಾಧಾನಪಡಿಸಿದ್ದರೂ, ಕೆಲ ಮುಖಂಡರ ಆಕ್ರೋಶದ ಕಿಚ್ಚು ಮಾತ್ರ ಇನ್ನೂ ಆರಿಲ್ಲ. ಹೀಗಾಗಿ ಮುಸ್ಲಿಂ ಮುಖಂಡರ ಮನೆಗಳಿಗೆ…