ಸಾರ್ವಕಾಲಿಕ RCB ಇಲೆವೆನ್ ಹೆಸರಿಸಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ಕಳೆದ 18 ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿದಿದ್ದಾರೆ. ಈ ಹದಿನೆಂಟು ವರ್ಷಗಳಲ್ಲಿ ಅನೇಕ ಆಟಗಾರರು ಬಂದು ಹೋಗಿದ್ದಾರೆ. ಇವರಲ್ಲಿ ಕೆಲವರು ಆರ್ಸಿಬಿ ತಂಡದ ಆಲ್ ಟೈಮ್ ಫೇವರೇಟ್ ಆಗಿ ಗುರುತಿಸಿಕೊಂಡರೆ, ಇನ್ನು ಕೆಲವರು ಮಿಂಚಿ ಮರೆಯಾಗಿದ್ದಾರೆ. ಹೀಗೆ ಆರ್ಸಿಬಿ ತಂಡದಲ್ಲಿ ಕಾಣಿಸಿಕೊಂಡ ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಸಾರ್ವಕಾಲಿಕ ಇಲೆವೆನ್ ಹೆಸರಿಸಿದ್ದಾರೆ ವಿರಾಟ್ ಕೊಹ್ಲಿ. ಈ ಹನ್ನೊಂದು ಆಟಗಾರರಲ್ಲಿ ಇಬ್ಬರು ಕನ್ನಡಿಗರು ಕೂಡ ಕಾಣಿಸಿಕೊಂಡಿರುವುದು ವಿಶೇಷ. ವಿರಾಟ್ ಕೊಹ್ಲಿ ತಮ್ಮ ಸಾರ್ವಕಾಲಿಕ ಇಲೆವೆನ್ನಲ್ಲಿ…