All posts by nagaraj11081993

Christmas 2025: ಯೇಸುಕ್ರಿಸ್ತರ ಜನ್ಮ ದಿನಾಚರಣೆಯ ಸಂಭ್ರಮ; ಕ್ರಿಸ್ಮಸ್‌ ಹಬ್ಬದ ಇತಿಹಾಸ, ಮಹತ್ವವನ್ನು ತಿಳಿಯಿರಿ – Kannada News | Christmas 2025: Do you know why we celebrate Christmas?

ಡಿಸೆಂಬರ್‌ ಎಂದಾಕ್ಷಣ ಮೊದಲಿಗೆ ನೆನಪಿಗೆ ಬರುವುದೇ ಕ್ರಿಸ್‌ಮಸ್‌ (Christmas) ಹಬ್ಬ. ಕ್ರೈಸ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈ ಕ್ರಿಸ್ಮಸ್‌  ಹಬ್ಬವನ್ನು  ಪ್ರಪಂಚದಾದ್ಯಂತ ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ, ವಿನೋದದ ಮೂಲಕ ಈ ಹಬ್ಬವನ್ನು ಆಚರಿಸುತ್ತೇವೆ. ಕ್ರಿಸ್‌ಮಸ್ ಕೇವಲ ಆಚರಣೆಯಲ್ಲ, ಇದು ಪ್ರೀತಿ, ಕರುಣೆ, ನಂಬಿಕೆ ಮತ್ತು ಮಾನವೀಯತೆಯ ಪುನರುಜ್ಜೀವನದ ಕಥೆಯಾಗಿದೆ. ಅಲ್ಲದೆ ಈ ಹಬ್ಬದ ಹಿಂದೆ ಆಳವಾದ ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವವಿದೆ, ಯೇಸು ಕ್ರಿಸ್ತರು ಜನಿಸಿದ ಪುಣ್ಯ ದಿನದಂದು ಕ್ರಿಸ್ಮಸ್‌ ಹಬ್ಬವನ್ನು ಆಚರಿಸುವ ಸಂಪ್ರದಾಯ ನಡೆದುಕೊಂಡು ಬಂದಿದ್ದು, ಈ ಹಬ್ಬದ ಇತಿಹಾಸವೇನು, ಕ್ರಿಸ್‌ಮಸ್‌ ಹಬ್ಬ ಆರಂಭವಾಗಿದ್ದು ಹೇಗೆ ಈ ಎಲ್ಲದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯೋಣ ಬನ್ನಿ.

ಕ್ರಿಸ್‌ಮಸ್ ಹಬ್ಬವನ್ನು ಏಕೆ ಆಚರಿಸಲಾಗುತ್ತದೆ?

ಯೇಸುಕ್ರಿಸ್ತರ ಜನ್ಮದಿನವಾದ ಡಿಸೆಂಬರ್‌ 25 ರಂದು ಕ್ರಿಸ್‌ಮಸ್ ಹಬ್ಬವನ್ನು ಆಚರಿಸಲಾಗುತ್ತದೆ. ಕ್ರಿಶ್ಚಿಯನ್ ನಂಬಿಕೆಯ ಪ್ರಕಾರ, ಯೇಸುಕ್ರಿಸ್ತರು ದೇವರ ಮಗ ಮತ್ತು ಮಾನವೀಯತೆಯ ರಕ್ಷಕರೆಂದು ಪರಿಗಣಿಸಲ್ಪಟ್ಟಿದ್ದಾರೆ. ಪ್ರೀತಿ, ಕ್ಷಮೆ, ಸೇವೆ ಮತ್ತು ತ್ಯಾಗದ ಮಾರ್ಗವನ್ನು ತೋರಿದ, ಸಮಾಜದಲ್ಲಿ ಕರುಣೆ ಮತ್ತು ಸಹೋದರತ್ವ ಪಾಠ ಮಾಡಿದ ಇವರನ್ನು ಸ್ಮರಿಸುವ ಸಲುವಾಗಿ ಕ್ರಿಸ್ಮಸ್‌ ಹಬ್ಬವನ್ನು ಆಚರಿಸಲಾಗುತ್ತದೆ.

ಕ್ರಿಸ್ಮಸ್‌ ಹಬ್ಬದ ಇತಿಹಾಸವೇನು?

ಬೈಬಲ್‌ನಲ್ಲಿ ಯೇಸುಕ್ರಿಸ್ತರ ನಿಖರವಾದ ಜನ್ಮ ದಿನಾಂಕದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇತಿಹಾಸಕಾರರ ಪ್ರಕಾರ, ರೋಮನ್ ಸಾಮ್ರಾಜ್ಯದಲ್ಲಿ, ಸೂರ್ಯ ದೇವರ ಹಬ್ಬವನ್ನು (ಸೋಲ್ ಇನ್ವಿಕ್ಟಸ್) ಡಿಸೆಂಬರ್ 25 ರಂದು ಆಚರಿಸಲಾಗುತ್ತಿತ್ತು. ಈ ಸಮಯವು ಚಳಿಗಾಲದ ಅಯನ ಸಂಕ್ರಾಂತಿಯ ಆಸುಪಾಸಿನಲ್ಲಿ ಬರುತ್ತದೆ, ಆಗ ಹಗಲು ಹೆಚ್ಚಿರುತ್ತವೆ. ಇದರಿಂದಾಗಿ ನಾಲ್ಕನೇ ಶತಮಾನದಲ್ಲಿ ನಾಲ್ಕನೇ ಶತಮಾನದಲ್ಲಿ ಕ್ರಿಶ್ಚಿಯನ್ ಧರ್ಮದ ವಿಸ್ತರಣೆಯ ಸಮಯದಲ್ಲಿ, ಚರ್ಚ್‌ಗಳು ಯೇಸುವಿನ ಜನ್ಮದಿನವನ್ನು ಡಿಸೆಂಬರ್ 25 ರಂದು ಆಚರಿಸುವುದಾಗಿ ಘೋಷಿಸಿದವು. ಹಳೆಯ ಸೂರ್ಯನ ಹಬ್ಬವನ್ನು ಆಧ್ಯಾತ್ಮಿಕ ಬೆಳಕಿನ ಹಬ್ಬವಾಗಿ, ಅಂದರೆ ಕತ್ತಲಿನಿಂದ ಬೆಳಕಿನೆಡೆಗೆ ಎಂಬ ಕಲ್ಪನೆಯೊಂದಿಗೆ ಕ್ರಿಸ್ಮಸ್‌ ಹಬ್ಬದ ಆಚರಣೆ ಶುರುವಾಯಿತು.

ಕ್ರಿಸ್‌ಮಸ್ ಹಬ್ಬವನ್ನು ಮೊದಲು ಔಪಚಾರಿಕವಾಗಿ ರೋಮ್‌ನಲ್ಲಿ ನಾಲ್ಕನೇ ಶತಮಾನದಲ್ಲಿ ಆಚರಿಸಲಾಯಿತು. ಕಾಲಾನಂತರದಲ್ಲಿ, ಈ ಆಚರಣೆಯು ಯುರೋಪಿನಾದ್ಯಂತ ಮತ್ತು ನಂತರ ಪ್ರಪಂಚದಾದ್ಯಂತ ಹರಡಿತು. ಕ್ರಿಸ್‌ಮಸ್ ಹಬ್ಬವು ಭಾರತಕ್ಕೆ ಪೋರ್ಚುಗೀಸ್ ಮತ್ತು ಬ್ರಿಟಿಷ್ ಮಿಷನರಿಗಳೊಂದಿಗೆ ಆಗಮಿಸಿತು. ಇಂದು ಪ್ರಪಂಚದಾದ್ಯಂತ ಈ ಹಬ್ಬವನ್ನು ಜಾತಿ ಧರ್ಮದ ಬೇಧವಿಲ್ಲದೆ ಆಚರಿಸಲಾಗುತ್ತಿದೆ.

ಕ್ರಿಸ್‌ಮಸ್‌ಗೆ ಸಂಬಂಧಿಸಿದ ಪ್ರಮುಖ ಸಂಪ್ರದಾಯಗಳೇನು?

ಕ್ರಿಸ್‌ಮಸ್ ದಿನದಂದು ಕ್ರಿಶ್ಚಿಯನ್ನರು ಚರ್ಚ್‌ಗೆ ಹೋಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮತ್ತು ಕ್ಯಾರೋಲ್‌ಗಳನ್ನು ಹಾಡಲಾಗುತ್ತದೆ. ಯೇಸುಕ್ರಿಸ್ತರ ಜನನವನ್ನು ಸಂಭ್ರಮಿಸುವ ಹಾಡುಗಳನ್ನು ಕ್ಯಾರೋಲ್‌ಗಳು ಎಂದು ಕರೆಯಲಾಗುತ್ತದೆ.  ಮುಖ್ಯವಾಗಿ  ಮನೆಗಳು ಮತ್ತು ಚರ್ಚ್‌ಗಳನ್ನು ದೀಪಗಳಿಂದ ಅಲಂಕರಿಸಲಾಗುತ್ತದೆ. ಕ್ರಿಸ್‌ಮಸ್ ಟ್ರೀ ಅಲಂಕರಿಸುವ, ಕೇಕ್ ಕತ್ತರಿಸುವ ಮತ್ತು ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಸಂಪ್ರದಾಯಗಳು ಇವೆ.

ಇದನ್ನೂ ಓದಿ: ಕ್ರಿಸ್ಮಸ್‌ ಹಬ್ಬಕ್ಕೆ ಮನೆಯಲ್ಲೇ ಬಲು ಸುಲಭವಾಗಿ ತಯಾರಿಸಿ ಆರೋಗ್ಯಕರ ಡ್ರೈಫ್ರೂಟ್‌ ಕೇಕ್‌

ಕ್ರಿಸ್‌ಮಸ್‌ ಹಬ್ಬದ ಸಾಮಾಜಿಕ ಮತ್ತು ಮಾನವೀಯ ಸಂದೇಶ:

ಕ್ರಿಸ್‌ಮಸ್ ಕೇವಲ ಆಚರಣೆಯಲ್ಲ, ಅಗತ್ಯವಿರುವವರಿಗೆ, ಬಡವರಿಗೆ ಸಹಾಯ ನೀಡುವ ಮತ್ತು ಸೇವೆ ಮಾಡುವ ದಿನವೂ ಆಗಿದೆ. ಪ್ರೀತಿ ಮತ್ತು ಕರುಣೆ ಸಮಾಜವನ್ನು ಉತ್ತಮವಾಗಿ ಬದಲಾಯಿಸಬಹುದು ಎಂದು ಈ ಹಬ್ಬವು ನಮಗೆ ಕಲಿಸುತ್ತದೆ. ಅದಕ್ಕಾಗಿಯೇ ಇಂದು ಪ್ರಪಂಚದಾದ್ಯಂತ ಶಾಂತಿ ಮತ್ತು ಮಾನವೀಯತೆಯ ಸಂದೇಶದೊಂದಿಗೆ ಕ್ರಿಸ್‌ಮಸ್ ಹಬ್ಬವನ್ನು ಆಚರಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:57 pm, Wed, 24 December 25

Source link

10 ರನ್​ಗಳಿಂದ ದ್ವಿಶತಕ ವಂಚಿತರಾದ ವೈಭವ್ ಆರ್ಭಟದ ಇನ್ನಿಂಗ್ಸ್ ಹೇಗಿತ್ತು ನೋಡಿ – Kannada News | Vaibhav Suryavanshi’s 190: Bihar Star Shines in Vijay Hazare Trophy 2025 26

2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡದ ಉಪನಾಯಕನಾಗಿರುವ ವೈಭವ್ ಸೂರ್ಯವಂಶಿ ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ತಮ್ಮ ಲಿಸ್ಟ್ ಎ ವೃತ್ತಿಜೀವನದ ಅತ್ಯಧಿಕ ಸ್ಕೋರ್ ಕೂಡ ದಾಖಲಿಸಿದ್ದಾರೆ. ಅರುಣಾಚಲ ವಿರುದ್ಧದ ಪಂದ್ಯದಲ್ಲಿ ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ ಕೇವಲ 84 ಎಸೆತಗಳಲ್ಲಿ 190 ರನ್​ಗಳ ಇನ್ನಿಂಗ್ಸ್ ಆಡಿದರು. 226 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ವೈಭವ್ ತಮ್ಮ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್‌ಗಳು ಮತ್ತು 16 ಬೌಂಡರಿಗಳನ್ನು ಬಾರಿಸಿದರು. ಆದಾಗ್ಯೂ ಕೇವಲ 10 ರನ್​ಗಳ ಅಂತರದಿಂದ ದ್ವಿಶತಕ ವಂಚಿತರಾದರು. ವಿಜಯ್ ಹಜಾರೆ ಟ್ರೋಫಿ ಅಥವಾ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಇದು ವೈಭವ್ ಸೂರ್ಯವಂಶಿ ಅವರ ಮೊದಲ ಶತಕವಾಗಿದ್ದು, ಲಿಸ್ಟ್ ಎ ವೃತ್ತಿಜೀವನದಲ್ಲಿ ಅವರ ಅತ್ಯಧಿಕ ಸ್ಕೋರ್ ಕೂಡ ಆಗಿದೆ.

Source link

ಕಾಂಗ್ರೆಸ್​​ಗೆ ಭಾರಿ ಮುಖಭಂಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯದ್ದೇ ಪಾರುಪತ್ಯ – Kannada News | BJP Dominates Karnataka Town Panchayat Elections, Congress Faces Major Setback

ಬೆಂಗಳೂರು, ಡಿಸೆಂಬರ್​​ 24: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್​​ಗೆ ಭಾರಿ ಮುಖಭಂಗವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್, ಉತ್ತರ ಕನ್ನಡ ಜಿಲ್ಲೆಯ ಮಂಕಿ ಪಟ್ಟಣ ಪಂಚಾಯತ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್​​ಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ಮತ್ತು ರಾಯಚೂರು ಜಿಲ್ಲೆಯ ತುರವಿಹಾಳ ಪಟ್ಟಣ ಪಂಚಾಯತ್​​ಗಳ ತಲಾ 1 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿಯೂ ಬಿಜೆಪಿಗೆ ಗೆಲುವಿನ ನಗೆ ಬೀರಿದೆ.

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಪ್ರಾಬಲ್ಯ

ಬಜಪೆ ಪಟ್ಟಣ ಪಂಚಾಯತ್‌ನ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ಪಡೆದಿದೆ. SDPI ಮೂರು ಸ್ಥಾನ ಪಡೆದಿದ್ದರೆ, ಉಳಿದ ಒಂದು ಸ್ಥಾನ ಸ್ವತಂತ್ರ ಅಭ್ಯರ್ಥಿ ಪಾಲಾಗಿದೆ. ಕಿನ್ನಿಗೋಳಿ ಪಟ್ಟಣ ಪಂಚಾಯತ್​​ನಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಪಡೆದಿವೆ. ಒಟ್ಟು 42 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದರು.

ಇದನ್ನೂ ಓದಿ: ಅಪೆಕ್ಸ್ ಬ್ಯಾಂಕ್ ಜಟಾಪಟಿ; ಡಿಕೆಶಿಗೆ ಚೆಕ್​ಮೇಟ್ ಕೊಟ್ಟ ಸಿದ್ದರಾಮಯ್ಯ!

ಮೊದಲ ಚುನಾಣೆಯಲ್ಲೇ ಗೆದ್ದ BJP

ಮಂಕಿ ಪಟ್ಟಣ ಪಂಚಾಯತ್​​ ಆದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಕಂಡುಬಂದಿತ್ತು. ಆದರೆ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿದೆ. 12 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರ ಹಿಡಿದಿದ್ದರೆ, 8 ಸ್ಥಾನಗಳನ್ನು ಗೆಲ್ಲುವಲ್ಲಿ ಮಾತ್ರ ಕಾಂಗ್ರೆಸ್​​ ಸಫಲವಾಗಿದೆ.

ಬಾಶೆಟ್ಟಿಹಳ್ಳಿಯಲ್ಲಿ ಕೇಸರಿ ಪಡೆ ಕಮಾಲ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲೂ ಕಮಲ ಪಡೆ ಗೆದ್ದು ಬೀಗಿದೆ. 19 ಸ್ಥಾನಗಳ ಪೈಕಿ 14 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. 11 ವರ್ಷಗಳ ಬಳಿಕ ನಡೆದ ಚುನಅವಣೆಯಲ್ಲಿ ಕೇಸರಿ ಪಡೆ ಕಮಾಲ್​​ ಮಾಡಿದೆ.

ಬಿ.ಎಲ್​​. ಸಂತೋಷ್​​ ಸಂತಸ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಸಂಘಟನಾ ‌ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಾಮಾಜಿಕ ‌ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿನ ಓಟ ಮುಂದುವರಿಸಿದೆ. ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ, ಅದರಲ್ಲೂ ಮತಪತ್ರದ ಮೂಲಕ ನಡೆದ ಚುನಾವಣೆಯಲ್ಲಿ ಬಿಜೆಪಿ ವಿಜಯ ಸಾಧಿಸಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:41 pm, Wed, 24 December 25

Source link

ದರ್ಶನ್ ಬಗ್ಗೆ ಸುದೀಪ್ ಯಾವತ್ತೂ ಕೆಟ್ಟದಾಗಿ ಮಾತನಾಡಿಲ್ಲ: ಜೋಗಿ ಪ್ರೇಮ್ – Kannada News | KD movie director Jogi Prem talks about Darshan and Sudeep Fans War

ಕನ್ನಡ ಚಿತ್ರರಂಗದ ಸ್ಟಾರ್ ಹೀರೋಗಳಾದ ದರ್ಶನ್ ಹಾಗೂ ಸುದೀಪ್ (Kichcha Sudeep) ಅವರ ಅಭಿಮಾನಿಗಳ ನಡುವೆ ಸಂಘರ್ಷ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಲಾಗುತ್ತಿದೆ. ಈ ಘಟನೆಗಳ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಿರ್ದೇಶಕ ‘ಜೋಗಿ’ ಪ್ರೇಮ್ (Jogi Prem) ಅವರು ಟಿವಿ9 ಜೊತೆ ಮಾತನಾಡಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ತಾವು ಕಂಡಂತೆ ಕಿಚ್ಚ ಸುದೀಪ್ ಹಾಗೂ ದರ್ಶನ್ (Darshan) ಹೇಗೆ ಇದ್ದಾರೆ ಎಂಬುದನ್ನು ಪ್ರೇಮ್ ವಿವರಿಸಿದ್ದಾರೆ.

‘ನನ್ನ ಮುಂದೆ ಸುದೀಪ್ ಅವರು ದರ್ಶನ್ ಬಗ್ಗೆಯಾಗಲೀ, ದರ್ಶನ್ ಕುಟುಂಬದ ಬಗ್ಗೆಯಾಗಲಿ ಮಾತನಾಡಿಲ್ಲ. ಮಧ್ಯದಲ್ಲಿ ಯಾರೋ ಕಿತಾಪತಿ ಮಾಡುತ್ತಾರೆ. ಅದಕ್ಕೆ ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು ಕಿವಿಗೊಡಬಾರದು. ಸುದೀಪ್ ಅವರು ಒಂದು ಒಳ್ಳೆಯ ಮಾತು ಹೇಳಿದ್ದಾರೆ. ಸಿನಿಮಾ ಚೆನ್ನಾಗಿ ಇದ್ದರೆ ಮಾತ್ರ ಫ್ಯಾನ್ಸ್ ಬರುತ್ತಾರೆ, ಸಿನಿಮಾ ಚೆನ್ನಾಗಿ ಇಲ್ಲದಿದ್ದರೆ ಯಾರೂ ಬರಲ್ಲ ಅಂತ ಹೇಳಿದ್ದಾರೆ. ಇಲ್ಲಿ ಹೀರೋ, ಹೀರೋಗಿರಿಗಿಂತ ಸಿನಿಮಾ ದೊಡ್ಡದು’ ಎಂದಿದ್ದಾರೆ ಜೋಗಿ ಪ್ರೇಮ್.

‘ಸುದೀಪ್ ಮತ್ತು ದರ್ಶನ್ ಅವರ ಮನಸ್ತಾಪಕ್ಕೆ ಅವರ ವೈಯಕ್ತಿಕ ಕಾರಣ ಇರಬಹುದು. ಆದರೆ ಯಾವತ್ತೂ ಕೂಡ ಅವರು ಪರಸ್ಪರ ಕೆಟ್ಟದಾಗಿ ಬೈಯ್ದುಕೊಂಡಿಲ್ಲ. ಕೆಟ್ಟದಾಗಿ ಮಾತನಾಡಿಲ್ಲ. ನನಗೆ ಅವರು ಆತ್ಮೀಯರಾದ ಕಾರಣ ತುಂಬಾ ಚೆನ್ನಾಗಿ ಗೊತ್ತಿದ್ದಾರೆ. ಸುದೀಪ್ ಜೊತೆ ಸಿನಿಮಾ ಮಾಡುತ್ತೇನೆ ಎಂದಾಗ ಚೆನ್ನಾಗಿ ಮಾಡಿ ಅಂತ ದರ್ಶನ್ ಹೇಳುತ್ತಾರೆ. ದರ್ಶನ್ ಜೊತೆ ಸಿನಿಮಾ ಮಾಡುತ್ತೇನೆ ಅಂತ ಸುದೀಪ್ ಅವರಿಗೆ ಹೇಳಿದಾಗ ಚೆನ್ನಾಗಿ ಮಾಡು ಅಂತಾನೇ ಅವರು ಕೂಡ ಹೇಳಿದ್ದರು. ದರ್ಶನ್ ಮತ್ತು ಸುದೀಪ್ ಅವರ ಮನಸ್ಸಿನ ಒಳಗಿರುವ ಭಾವನೆ ಬಗ್ಗೆ ನನಗೆ ತಿಳಿದಿಲ್ಲ’ ಎಂದಿದ್ದಾರೆ ಪ್ರೇಮ್.

‘ನನ್ನ ಕುಟುಂಬಕ್ಕೆ ದರ್ಶನ್ ಮತ್ತು ಸುದೀಪ್ ಇಬ್ಬರೂ ಆತ್ಮೀಯರು. ಇಬ್ಬರ ಜೊತೆಗೂ ನಾನು ಕೆಲಸ ಮಾಡಿದ್ದೇನೆ. ಸುದೀಪ್ ಅವರನ್ನು ಅಣ್ಣನ ಸ್ಥಾನದಲ್ಲಿ ನೋಡುತ್ತೇನೆ. ದರ್ಶನ್ ನನಗೆ ಸ್ನೇಹಿತ, ಆತ್ಮೀಯರು. ದರ್ಶನ್ ಅವರು ಸಹ ಸುದೀಪ್ ಬಗ್ಗೆ ಒಂದು ದಿನವೂ ಕೆಟ್ಟದಾಗಿ ಮಾತಾಡಿಲ್ಲ. ಯಾರೋ ಕಿಡಿಗೇಡಿಗಳು ಮಧ್ಯದಲ್ಲಿ ಬೆಂಕಿ ಹಚ್ಚೋದರಿಂದ ಈ ರೀತಿ ಮಾಡುತ್ತಿದ್ದಾರೆ’ ಎಂಬುದು ಜೋಗಿ ಪ್ರೇಮ್ ಮಾತು.

ಇದನ್ನೂ ಓದಿ: ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ? ಉತ್ತರ ನೀಡಿದ ಕಿಚ್ಚ ಸುದೀಪ್

‘ಮಾರ್ಕ್’ ಮತ್ತು ‘45’ ಚಿತ್ರಗಳು ಒಂದೇ ದಿನ ಬಿಡುಗಡೆ ಆಗುತ್ತಿವೆ. ಆ ಬಗ್ಗೆ ಪ್ರೇಮ್ ಮಾತನಾಡಿದ್ದಾರೆ. ‘ಎರಡು ದೊಡ್ಡ ಸಿನಿಮಾಗಳು ಒಂದೇ ದಿನ ಬಿಡುಗಡೆ ಆದಾಗ ಖಂಡಿತವಾಗಿಯೂ ಬಾಕ್ಸ್ ಆಫೀಸ್​ ಮೇಲೆ ಹೊಡೆತ ಬೀಳುತ್ತದೆ. ಒಂದು ಸಮಯಕ್ಕೆ ಒಂದು ಸಿನಿಮಾ ಬಿಡುಗಡೆ ಆದರೆ ನಮ್ಮ ಕನ್ನಡಿಗರು ಖಂಡಿತಾ ಸಪೋರ್ಟ್ ಮಾಡುತ್ತಾರೆ. 2 ಸಿನಿಮಾ ಬಂದರೆ ವ್ಯವಹಾರಕ್ಕೆ ಹೊಡೆತ ಬೀಳುತ್ತದೆ’ ಎಂದು ಪ್ರೇಮ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

GAMCB Recruitment 2025: ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | Bengaluru Ayurvedic College Jobs: GAMCB Professor Vacancies, Apply by Dec 30

ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಡಿಸೆಂಬರ್ 30ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು.

GAMCB ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಬೆಂಗಳೂರು (GAMCB)
  • ಹುದ್ದೆಗಳ ಸಂಖ್ಯೆ: 8
  • ಉದ್ಯೋಗ ಸ್ಥಳ: ಬೆಂಗಳೂರು
  • ಹುದ್ದೆಯ ಹೆಸರು: ಪ್ರಾಧ್ಯಾಪಕರು
  • ಸಂಬಳ: ತಿಂಗಳಿಗೆ 45,000 ರೂ.

ಶೈಕ್ಷಣಿಕ ಅರ್ಹತೆ:

GAMCB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ , BAMS, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ ಸಡಿಲಿಕೆ:

  • ವರ್ಗ 2A, 2B, 3A, 3B ಅಭ್ಯರ್ಥಿಗಳು: 3 ವರ್ಷಗಳು
  • SC, ST, Cat-1 ಅಭ್ಯರ್ಥಿಗಳು: 5 ವರ್ಷಗಳು

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಪ್ರಾಂಶುಪಾಲರು , ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು, ಧನ್ವಂತರಿ ರಸ್ತೆ, ಬೆಂಗಳೂರು-560009 ಕಳುಹಿಸಬೇಕು.

ಅರ್ಜಿ ಸಲ್ಲಿಸುವ ಕ್ರಮಗಳು:

  • ಮೊದಲನೆಯದಾಗಿ GAMCB ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
  • ಕೊನೆಗೆ ಅರ್ಜಿ ನಮೂನೆಯನ್ನು ಈ ಮೇಲೆ ತಿಳಿಸಿದ ವಿಳಾಸಕ್ಕೆ ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕಳುಹಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುದೀಪ್ ಹೇಳಿಕೆಗೆ ಧ್ರುವ ಸರ್ಜಾ ನೀಡಿದ ಪ್ರತಿಕ್ರಿಯೆ ಹೇಗಿತ್ತು? – Kannada News | What Dhruva Sarja says about Sudeep’s speech about Piracy

ಸುದೀಪ್ (Sudeep) ಅವರು ಕೆಲ ದಿನಗಳ ಹಿಂದೆ ‘ಮಾರ್ಕ್’ ಸಿನಿಮಾ ಕಾರ್ಯಕ್ರಮದಲ್ಲಿ ಪೈರಸಿ ವಿರುದ್ಧ ಹೋರಾಟದ ಬಗ್ಗೆ ಆಡಿದ ಮಾತು ಏನೇನೋ ಅರ್ಥ ರೂಪ ಪಡೆದು ಇದೀಗ ಫ್ಯಾನ್ಸ್ ವಾರ್​​​ ಮಟ್ಟಕ್ಕೆ ಬಂದು ನಿಂತಿದೆ. ಪೈರಸಿ ವಿರುದ್ಧ, ದುರುದ್ದೇಶದಿಂದ ಪೈರಸಿ ಮಾಡುವ ಪಡೆಗಳ ವಿರುದ್ಧ ಯುದ್ಧ ಮಾಡಬೇಕಿದೆ ಎಂಬರ್ಥದ ಮಾತುಗಳನ್ನು ಸುದೀಪ್ ಆಡಿದ್ದರು. ದರ್ಶನ್ ಅಭಿಮಾನಿಗಳ ಬಗ್ಗೆಯೇ ಸುದೀಪ್ ಆ ಮಾತುಗಳನ್ನು ಆಡಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಸುದೀಪ್ ಅವರ ಮಾತುಗಳಿಗೆ ಧ್ರುವ ಸರ್ಜಾ ಪ್ರತಿಕ್ರಿಯೆ ಹೇಗಿತ್ತು ಎಂದು ನಿರ್ದೇಶಕ ಪ್ರೇಮ್ ವಿವರಿಸಿದ್ದಾರೆ.

ಧ್ರುವ ಸರ್ಜಾ ಅವರು ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಶೂಟಿಂಗ್ ಬಹುತೇಕ ಮುಕ್ತಾಯ ಹಂತದಲ್ಲಿದೆ ಎನ್ನಲಾಗುತ್ತಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಇದೀಗ ಪ್ರೇಮ್ ಅವರು ಟಿವಿ9ಗೆ ಸಂದರ್ಶನ ನೀಡಿದ್ದು, ಸುದೀಪ್ ಅವರ ಮಾತಿಗೆ ಧ್ರುವ ಸರ್ಜಾ ಪ್ರತಿಕ್ರಿಯೆ ಏನಿತ್ತು ಎಂಬುದನ್ನು ಟಿವಿ9 ಜೊತೆಗೆ ಹಂಚಿಕೊಂಡಿದ್ದಾರೆ.

‘ಸುದೀಪ್ ಅವರ ಮಾತುಗಳನ್ನು ಕೇಳಿ, ಧ್ರುವ ಸರ್ಜಾ ನನಗೆ ಫೋನ್ ಮಾಡಿದ್ದರು. ಪ್ರೇಮ್ ಅವರೇ, ಸುದೀಪ್ ಅವರು ಹೀಗೆ ಹೇಳಿದ್ದಾರೆ. ಪೈರಸಿ ವಿರುದ್ಧ ಯುದ್ಧ ಮಾಡಬೇಕು ಎಂದಿದ್ದಾರೆ. ನಮ್ಮ ಸಿನಿಮಾಕ್ಕೂ ಪೈರಸಿಕೋರರು ಕಾಟ ಕೊಡಬಹುದು ನಾವು ಸಹ ಎಲ್ಲ ರೀತಿಯಲ್ಲಿಯೂ ಸಿದ್ಧವಾಗಿರಬೇಕು. ನಾವೂ ಸಹ ಹೋರಾಟ ಮಾಡಬೇಕು’ ಎಂದು ಹೇಳಿದರು. ನಾನು ಸಹ ಖಂಡಿತ ಅದರ ವಿರುದ್ಧ ಹೋರಾಟ ಮಾಡೋಣ ಎಂದೆ’ ಎಂದು ಪ್ರೇಮ್ ಹೇಳಿದ್ದಾರೆ.

ಅಸಲಿಗೆ ಧ್ರುವ ಸರ್ಜಾ ಹಾಗೂ ದರ್ಶನ್ ನಡುವೆಯೂ ಸಂಬಂಧ ಹಳಸಿದೆ. ದರ್ಶನ್ ಅವರು ಜೈಲಿಗೆ ಹೋಗುವ ಮುಂಚೆಯೇ ದರ್ಶನ್ ಹಾಗೂ ಧ್ರುವ ಸರ್ಜಾ ನಡುವೆ ಸಂಬಂಧದಲ್ಲಿ ಬಿರುಕು ಮೂಡಿತ್ತು. ಅರ್ಜುನ್ ಸರ್ಜಾ ನಿರ್ದೇಶಿಸಿದ್ದ ‘ಪ್ರೇಮ ಬರಹ’ ಸಿನಿಮಾನಲ್ಲಿ ದರ್ಶನ್, ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಆ ಸಿನಿಮಾದ ವಿತರಣೆಯನ್ನೂ ಮಾಡಿದ್ದರು. ಆದರೆ ಆ ಸಿನಿಮಾದ ಹಣಕಾಸು ವಿಚಾರದಲ್ಲಿ ಸರ್ಜಾ ಹಾಗೂ ದರ್ಶನ್ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ಈ ಬಗ್ಗೆ ಧ್ರುವ ಸರ್ಜಾ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದೇ ಕಾರಣಕ್ಕೆ ಧ್ರುವ ಸರ್ಜಾ ಅವರಿಗೂ ಸಹ ತಮ್ಮ ‘ಕೆಡಿ’ ಸಿನಿಮಾದ ಮೇಲೂ ಪೈರಸಿಕೋರರ ಕಣ್ಣು ಬೀಳಬಹುದೆಂಬ ಭಯ ಇದ್ದಂತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನೈಸ್ ಪ್ರಕರಣ- ರಿಟ್ ಅರ್ಜಿಯಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ: ದೇವೇಗೌಡ ಬೇಸರ – Kannada News | HD Deve Gowda blasts congress and state government

ಎಚ್.ಡಿ. ದೇವೇಗೌಡ

ಬೆಂಗಳೂರು, ಡಿಸೆಂಬರ್ 24: ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿಯಾಗಿ ಮಾಡಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Deve Gowda) ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಾದ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಎಂಐಸಿ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಾಗ ತಾನು ಸಿಎಂ ಆಗಿದ್ದೆ. ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಆ ಯೋಜನೆಗೆ ಹಣಕಾಸು ಇಲಾಖೆಯ ಸಮ್ಮತಿಯೂ ಇತ್ತು. ಆ ಒಪ್ಪಂದದ ಎಲ್ಲಾ ಮಾಹಿತಿಯೂ ಅವರಿಗೆ ಕೂಡ ಇದೆ. ಆದರೆ, ಕೆಲ ರೈತರು ಹಾಗೂ ನನ್ನನ್ನು ಪಾರ್ಟಿ ಮಾಡಿದ್ದಾರೆ. ಈ ಇಳಿ ವಯಸ್ಸಿನಲ್ಲೂ ನಾನು ವಕೀಲರಿಗೆ ಶುಲ್ಕ ಕೊಟ್ಟು ಕೋರ್ಟ್​ನಲ್ಲಿ ಹೋರಾಟ ಮಾಡಬೇಕಾಗಿದೆ’ ಎಂದು ಬೇಸರ ಹೊರಹಾಕಿದರು.

‘ನೈಸ್‌‍ ಕಂಪನಿ ವಿಚಾರದಲ್ಲಿ ಕಾನೂನು ಸಲಹೆಗಾರರಿಗೆ 55 ಲಕ್ಷ ರೂಪಾಯಿ ಕೊಡುತ್ತಿದ್ದಾರಂತೆ. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್‌, ಕಾನೂನು ಸಲಹೆಗಾರರು ಇದ್ದರೂ ಸಹ ಇನ್ನೊಬ್ಬರನ್ನು ನೈಸ್‌‍ ಕಂಪನಿಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೆ’ ಎಂದು ಅವರು ಕಟುವಾಗಿ ಟೀಕಿಸಿದರು.

ಒಂದು ಲಕ್ಷಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆ ಮೂಲಕ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಹುದ್ದೆಗಳು ಭರ್ತಿಯಾಗದೇ ಹಾಗೆಯೇ ಖಾಲಿ ಉಳಿದಿವೆ. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರೆ ಎಷ್ಟು ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ದೇವೇಗೌಡರು ದೂರಿದರು.

ಇದನ್ನೂ ಓದಿ: ಅಪೆಕ್ಸ್ ಬ್ಯಾಂಕ್ ಜಟಾಪಟಿ: ರಾಜಣ್ಣ ಭೇಟಿ ಮಾಡಿದ್ದ ಡಿಕೆ ಶಿವಕುಮಾರ್​ಗೆ ಚೆಕ್​ಮೇಟ್ ಕೊಟ್ಟ ಸಿದ್ದರಾಮಯ್ಯ!

ಕೇಂದ್ರವನ್ನು ದೂರಿದರೆ ಪ್ರಯೋಜನ ಇಲ್ಲ: ದೇವೇಗೌಡ

ರಾಜ್ಯದ ಕೆಲ ಹಣಕಾಸು ಸಮಸ್ಯೆಗಳಿಗೆ ಕೇಂದ್ರ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ದೂಷಿಸುವುದನ್ನು ಎಚ್​ಡಿಡಿ ವಿರೋಧಿಸಿದ್ದಾರೆ.

‘ರಾಜ್ಯ ಸರ್ಕಾರ ಪ್ರತೀ ವಿಷಯಕ್ಕೂ ಕೇಂದ್ರ ಸರ್ಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ. ಅದರಿಂದ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದಾಗ ಕೇಂದ್ರ ಸರ್ಕಾರದಲ್ಲಿ ಡಾ. ಮನಮೋಹನ ಸಿಂಗ್‌ ಅವರು ಹಣಕಾಸು ಸಚಿವರಾಗಿದ್ದರು. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯಂತೆ ರೈತರ ಸಾಲದ ಮೇಲಿನ ಸುಸ್ತಿ ಬಡ್ಡಿ ಮನ್ನಾ ಮಾಡಲು ಪತ್ರ ಬರೆದಾಗ ಕೇಂದ್ರ ಮನಮೋಹನ್‌ ಸಿಂಗ್‌, ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್‌, ನಬಾರ್ಡ್‌ ಯಾರೂ ಕೂಡ ಒಪ್ಪಿಗೆ ಕೊಡಲಿಲ್ಲ. ಈಗ ನೋಡಿದರೆ ರಾಜ್ಯ ಸರ್ಕಾರ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡುತ್ತಿದೆ. ಹೀಗೆ ಟೀಕೆ ಮಾಡುತ್ತಾ ಹೋದರೆ ಆಗುವ ಪ್ರಯೋಜನ ಏನು? ಮುಖ್ಯಮಂತ್ರಿ ಆದವರು ಪ್ರಧಾನಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಿಶಾ ಸಭೆಗೆ ಹೋಗಿ ರಾಜ್ಯಕ್ಕೆ ಏನು ಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿ ಹೋರಾಟ ಮಾಡಬೇಕು’ ಎಂದು ದೇವೇಗೌಡರು ರಾಜ್ಯ ಸರ್ಕಾರಕ್ಕೆ ತಿಳಿಹೇಳಿದರು.

‘ಪಕ್ಷದ ಸಮಾವೇಶಗಳನ್ನು ಮಾಡುತ್ತೇವೆ’

‘ಜನವರಿ 30ರಂದು ಸಂಸತ್‌ನ ಜಂಟಿ ಅಧಿವೇಶನ ಶುರುವಾಗುತ್ತಿದ್ದು, ಅದಕ್ಕೂ ಮೊದಲೇ ಜನವರಿ 23ರಿಂದ 25ರ ನಡುವೆ ಹಾಸನ ಹಾಗೂ ಬಾಗಲಕೋಟೆ ಭಾಗದಲ್ಲಿ ಪಕ್ಷದ ವತಿಯಿಂದ ತಲಾ ಒಂದು ಸಮಾವೇಶ ನಡೆಸಲಾಗುವುದು. ಈ ಬಗ್ಗೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ. ರಾಜ್ಯ ಸರ್ಕಾರದ ವೈಫಲ್ಯಗಳು ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಜನಪರ ಕಾರ್ಯಕ್ರಮಗಳನ್ನು ಮುಂದುವರೆಸದಿರುವುದರ ಬಗ್ಗೆ ಸಮಾವೇಶದಲ್ಲಿ ಪ್ರಸ್ತಾಪಿಸಲಾಗುವುದು’ ಎಂದರು.

ನರೇಗಾ: ಗಾಂಧೀಜಿ ಮೇಲೆ ಕಾಂಗ್ರೆಸ್ ಅಕ್ಕರೆ ಏನು ಅಂತ ಗೊತ್ತಿದೆ!!

ನರೇಗಾ ಯೋಜನೆ ಹೆಸರನ್ನು ಬದಲಾವಣೆ ಮಾಡಿದರು ಎನ್ನುವ ಕಾರಣಕ್ಕೆ ಕಾಂಗ್ರೆಸ್ ನಾಯಕರು ನರೇಂದ್ರ ಮೋದಿ ಅವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್​ನವರು ಆಡಳಿತ ನಡೆಸುತ್ತಿದ್ದಾಗ ಮಹಾತ್ಮ ಗಾಂಧಿ ಅವರಿಗೆ ಎಷ್ಟು ಗೌರವ ನೀಡಿದ್ದಾರೆ ಎನ್ನುವುದು ತನಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿಗಳು ವ್ಯಂಗ್ಯ ಮಾಡಿದರು.

ನರೇಗಾ ಹೆಸರು ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ಪ್ರತಿರೋಧ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮಹಾತ್ಮಾ ಗಾಂಧಿ ಅವರ ಬಗ್ಗೆ ಇಷ್ಟೊಂದು ಕಾಳಜಿ, ಕಳಕಳಿ ಇರುವವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಆಳ್ವಿಕೆ ಮಾಡಿದ ಸಂದರ್ಭದಲ್ಲಿ ಎಲ್ಲಿಯಾದರೂ ಗಾಂಧೀಜಿ ಅವರ ಒಂದು ಪೋಸ್ಟರ್ ನೋಡಿದೀರಾ? ಎಲ್ಲಿಯಾದರೂ ಮಹಾತ್ಮ ಗಾಂಧಿ ಅವರ ಫೋಟೋ ಇಟ್ಟುಕೊಂಡು ಚುನಾವಣೆ ನಡೆಸಿದ್ದಾರಾ?’ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

‘ನಾನು ಮೋದಿ ಅವರನ್ನು ಹೊಗಳಲು ಬಂದಿಲ್ಲ. ಆದರೆ ಮೋದಿ ಅವರಿಗೆ ದೇಶ ನಡೆಸಲು ಗೊತ್ತು. ಎಲ್ಲೆಲ್ಲಿ ಹಣ ಪೋಲಾಗ್ತಾ ಇದೆ ಅಂತ ಕೂಡ ಅವರಿಗೆ ಗೊತ್ತು. ಯಾವ ರಾಜ್ಯ ಹೇಗೆಲ್ಲಾ ಹಣ ಖರ್ಚು ಮಾಡುತ್ತಿದೆ ಎಂಬುದು ಕೂಡ ಅವರಿಗೆ ಗೊತ್ತು’ ಎಂದು ಹೇಳಿದರು.

‘ನರೇಗಾಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಿದ್ದಾರೆ. ಕೆಲಸದ ದಿನಗಳನ್ನು ಹೆಚ್ಚು ಮಾಡಿದ್ದಾರೆ. ರಾಮನ ಹೆಸರು ಇಟ್ಟಿದ್ದಾರೆ ಅಂತಾರೆ. ನಮ್ಮ ಮನೆಗೆ ಬನ್ನಿ, ರಾಮ, ಕೃಷ್ಣ ವೆಂಕಟೇಶ್ವರ ಎಲ್ಲರ ಫೋಟೋಗಳು ಇವೆ.ರಾಮ ಪುರುಷೋತ್ತಮ ಅಂತ ವಾಲ್ಮೀಕಿ ಹೇಳಿದ್ದಾರೆ. ಇದರ ಬಗ್ಗೆ ಇಷ್ಟು ಜಿಜ್ಞಾಸೆ ಯಾಕೆ?’ ಎಂದು ಎಚ್.ಡಿ. ದೇವೇಗೌಡರು ವಿವರಿಸಿದರು.

ವಿಧಾನ ಪರಿಷತ್‌ ಸದಸ್ಯ ಟಿ.ಎನ್. ಜವರಾಯಿ ಗೌಡ, ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ ಮುಂತಾದವರು ಈ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಲ್‌ ಮಧ್ಯೆ ಕೈಕೊಟ್ಟ ಡಕೋಟಾ ಸರ್ಕಾರಿ ಬಸ್: ಪ್ರಯಾಣಿಕರು ಮಾಡಿದ್ದೇನು ನೋಡಿ – Kannada News | Kalyana Karnataka Bus Stranded in Gadag: Passengers Aid Conductor to Restart Vehicle

ಗದಗ, ಡಿ23:  ಗದಗ ನಗರದ ಪುಟ್ಟರಾಜ್ ಸರ್ಕಲ್‌ನಲ್ಲಿ ರಾಯಚೂರು ವಿಭಾಗಕ್ಕೆ ಸೇರಿದ ಕಲ್ಯಾಣ ಕರ್ನಾಟಕ ಸಾರಿಗೆಯ ಡಕೋಟಾ ಬಸ್ ನಡುರಸ್ತೆಯಲ್ಲೇ ಕೆಟ್ಟು ನಿಂತ ಘಟನೆಯೊಂದು ನಡೆದಿದೆ. ಲಿಂಗಸಗೂರ-ಕುಷ್ಟಗಿ-ಗದಗ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ಈ ಬಸ್, ಸಿಗ್ನಲ್‌ನಲ್ಲಿ ಕೆಟ್ಟು ನಿಂತ ಕಾರಣ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಬಸ್ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಉಂಟಾಯಿತು. ಈ ಸಂದರ್ಭದಲ್ಲಿ, ಬಸ್‌ನ ಕಂಡಕ್ಟರ್ ಮತ್ತು ಪ್ರಯಾಣಿಕರು ಬಸ್ ಅನ್ನು ತಳ್ಳಿದ್ದಾರೆ. ಟಿಕೆಟ್‌ ಖರೀದಿಸಿದ್ದ ಪ್ರಯಾಣಿಕರು ಬಸ್ ಮುಂದೆ ಹೋಗಲಿ ಎಂದು ಬಸ್ ಅನ್ನು ತಳ್ಳಲು ಹರಸಾಹಸ ಪಟ್ಟರು. ಇನ್ನು ಬಸ್ ಚಾಲಕ ಕೂಡ ಸ್ಟಾರ್ಟ್ ಮಾಡಲು ಪರದಾಡಿದ್ದಾರೆ. ಕೊನೆಗೂ ಚಾಲಕನ ಪ್ರಯತ್ನದಿಂದ ಬಸ್ ಮತ್ತೆ ಸ್ಟಾರ್ಟ್ ಆಗಿ ಮುಂದಕ್ಕೆ ಹೋಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಕ್ಷಿಣದ ಮೇಲೆ ಕಣ್ಣು ಪ್ಯಾನ್ ಇಂಡಿಯಾ ಆಗಲಿದೆ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಬಾಕ್ಸ್ ಆಫೀಸ್​​ನಲ್ಲಿ ನಾಗಾಲೋಟ ಮುಂದುವರೆಸಿದೆ. ದಿನಗಳು ಕಳೆದಂತೆ ಸಿನಿಮಾದ ಕಲೆಕ್ಷನ್ ಏರುತ್ತಲೇ ಸಾಗುತ್ತಿದೆ. ಈ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದೆ. ಸಿನಿಮಾದ ಬಗ್ಗೆ ಅಲ್ಲಲ್ಲಿ ತುಸು ನೆಗೆಟಿವ್ ಅಭಿಪ್ರಾಯಗಳು ಕೇಳಿ ಬರುತ್ತಿದ್ದರೂ ಸಹ ಸಿನಿಮಾ ಪ್ರಿಯರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿಯೂ ಸಹ ಸಿನಿಮಾ ಅನ್ನು ಪ್ರೇಕ್ಷಕರು ನೋಡಿ ಮೆಚ್ಚಿಕೊಂಡಿದ್ದು, ಇಲ್ಲಿಯೂ ಸಹ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ.

ಡಿಸೆಂಬರ್ 5 ರಂದು ಬಿಡುಗಡೆ ಆದ ‘ಧರುಂಧರ್’ ಸಿನಿಮಾ, ಕೇವಲ ಹಿಂದಿ ಭಾಷೆಯಲ್ಲಿ ಮಾತ್ರವೇ ವೀಕ್ಷಣೆಗೆ ಲಭ್ಯವಿದೆ. ಕೇವಲ ಹಿಂದಿ ಆವೃತ್ತಿ ಒಂದರಿಂದಲೇ ಈ ಸಿನಿಮಾ ಈ ವರೆಗೆ 900 ಕೋಟಿಗೂ ಹೆಚ್ಚು ಹಣವನ್ನು ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದೆ. ಬೆಂಗಳೂರಿನಲ್ಲಿ ಈಗಲೂ (ಡಿಸೆಂಬರ್ 24) ಸಿನಿಮಾದ ಬಹುತೇಕ 90% ಶೋಗಳು ಸೋಲ್ಡ್ ಔಟ್ ಆಗಿವೆ. ಮಾತ್ರವಲ್ಲದೆ ಮುಂದಿನ ಮೂರು ನಾಲ್ಕು ದಿನಗಳ ಶೋಗಳು ಸಹ ಬಹುತೇಕ ಮುಂಗಡವಾಗಿ ಬುಕ್ ಆಗಿವೆ.

‘ಧುರಂಧರ್’ ಸಿನಿಮಾದ ಸೀಕ್ವೆಲ್ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಆದರೆ ಇದೀಗ ಸಿನಿಮಾಕ್ಕೆ ಬೇಡಿಕೆ ಹೆಚ್ಚಾಗುತ್ತಲೇ ಸಿನಿಮಾವನ್ನು ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಿಗೆ ಡಬ್ ಮಾಡಲಾಗಿದ್ದು, ದಕ್ಷಿಣ ಭಾರತದಲ್ಲಿ ಆಯಾ ಭಾಷೆಗಳಲ್ಲಿಯೇ ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಸಿನಿಮಾದ ಗಳಿಕೆ ಇನ್ನಷ್ಟು ಹೆಚ್ಚಾಗುವುದು ಪಕ್ಕಾ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ?

ಹಿಂದಿ ಸಿನಿಮಾಗಳು ದಕ್ಷಿಣ ಭಾರತದಲ್ಲಿ ಒಳ್ಳೆಯ ಪ್ರದರ್ಶನ ಕಾಣುವುದಿಲ್ಲ ಎಂಬ ಮಾತು ಚಾಲ್ತಿಯಲ್ಲಿದೆ. ಉತ್ತರ ಭಾರತದಲ್ಲಿ ಸೂಪರ್ ಹಿಟ್ ಆದ ‘ಬ್ರಹ್ಮಾಸ್ತ್ರ’, ‘ಪಠಾಣ್’ ಇನ್ನಿತರೆ ಕೆಲವು ಸಿನಿಮಾಗಳು ಸಹ ದಕ್ಷಿಣ ಭಾರತದಲ್ಲಿ ದೊಡ್ಡ ಕಲೆಕ್ಷನ್ ಮಾಡಿರಲಿಲ್ಲ. ಆದರೆ ‘ಧುರಂಧರ್’ ಹಾಗಿಲ್ಲ, ದಕ್ಷಿಣ ಭಾರತದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದೇ ಕಾರಣಕ್ಕೆ ‘ಧುರಂಧರ್ 2’ ಸಿನಿಮಾವನ್ನು ದಕ್ಷಿಣ ಭಾರತದ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

‘ಧುರಂಧರ್’ ಸಿನಿಮಾ ಸ್ಪೈ ಥ್ರಿಲ್ಲರ್ ಆಗಿದ್ದು, ರಣ್ವೀರ್ ಸಿಂಗ್ ಗೂಢಚಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ಅಕ್ಷನ್ ಖನ್ನ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾನಲ್ಲಿ ಮಾಧವನ್ ಸಹ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಆದಿತ್ಯ ಧಾರ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿ ಮಾಲಿನ್ಯದ ಭೀಕರತೆಯನ್ನು ತೆರೆದಿಟ್ಟ ಸಚಿವ ನಿತಿನ್ ಗಡ್ಕರಿ – Kannada News | Nitin Gadkari Warns of Delhi’s Air Crisis, Cites Health Impact

ನವದೆಹಲಿ, ಡಿಸೆಂಬರ್ 24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಮಾನವನ ಆರೋಗ್ಯಕ್ಕೆ ಹಾನಿಕಾರಕ ಎಂದು ಘೋಷಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಕೂಡ ದೆಹಲಿಯ ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ನಾನು ಎರಡು ದಿನಗಳ ಕಾಲ ದೆಹಲಿಯಲ್ಲಿದ್ದೆ ಮತ್ತು ಗಂಟಲು ಸೋಂಕಿಗೆ ಒಳಗಾಗಿದ್ದೆ ಎಂದರು.

‘ಮೈ ಐಡಿಯಾ ಆಫ್ ನೇಷನ್ ಫರ್ಸ್ಟ್​ ಅನ್​ಲಾಯ್ಡ್​ ನ್ಯಾಷನಲಿಸಂ’ ಎಂಬ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ಶೇಕಡಾ 40 ರಷ್ಟು ಮಾಲಿನ್ಯ ನಮ್ಮಿಂದಲೇ ಉಂಟಾಗುತ್ತದೆ. ಇದಕ್ಕೆ ಕಾರಣ ಪಳೆಯುಳಿಕೆ ಇಂಧನಗಳು, ಪೆಟ್ರೋಲ್ ಮತ್ತು ಡೀಸೆಲ್ ಎಂದು ಹೇಳಿದ್ದಾರೆ.

ಇಂದಿಗೂ ನಾವು ಕಚ್ಚಾ ತೈಲ ಆಮದಿಗೆ 22 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದ್ದೇವೆ. ದೇಶ ಕಲುಷಿತಗೊಂಡಿದೆ. ಇದು ಯಾವ ರೀತಿಯ ರಾಷ್ಟ್ರೀಯತೆ? ಇಂದು ನಿಜವಾದ ರಾಷ್ಟ್ರೀಯತೆ ಇದ್ದರೆ, ಅದು ಆಮದುಗಳನ್ನು ಕಡಿಮೆ ಮಾಡುವುದು ಮತ್ತು ರಫ್ತು ಹೆಚ್ಚಿಸುವುದರಲ್ಲಿದೆ. ಪರ್ಯಾಯ ಇಂಧನಗಳು ಮತ್ತು ಜೈವಿಕ ಇಂಧನಗಳಲ್ಲಿ ನಾವು ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸಾಧ್ಯವಿಲ್ಲವೇ ಎಂದು ಗಡ್ಕರಿ ಪ್ರಶ್ನಿಸಿದ್ದಾರೆ.

ಮತ್ತಷ್ಟು ಓದಿ: ನಾನು ಬ್ರಾಹ್ಮಣ, ನಮಗೆ ಯಾವುದೇ ಮೀಸಲಾತಿ ಇಲ್ಲ, ಇದು ದೇವರು ನಮಗೆ ಕೊಟ್ಟ ವರ: ನಿತಿನ್ ಗಡ್ಕರಿ

ನಾನು ಇಲ್ಲಿಗೆ 100 ಪ್ರತಿಶತ ಎಥೆನಾಲ್‌ನಲ್ಲಿ ಚಲಿಸುವ ವಾಹನದಲ್ಲಿ ಬಂದಿದ್ದೇನೆ. ಇದು ಶೇ. 60 ರಷ್ಟು ವಿದ್ಯುತ್ ಉತ್ಪಾದಿಸುತ್ತದೆ ಮತ್ತು ಪ್ರತಿ ಕಿಲೋಮೀಟರ್‌ಗೆ ಸರಾಸರಿ 25 ರೂಪಾಯಿಗಳನ್ನು ನೀಡುತ್ತದೆ.ಹಡಗು ಸಾಗಣೆ, ವಾಯುಯಾನ, ಕೈಗಾರಿಕೆ ಮತ್ತು ಸ್ಮಾರ್ಟ್ ಸಾರಿಗೆಯಲ್ಲಿ ಹೈಡ್ರೋಜನ್ ಮಹತ್ವದ ಪಾತ್ರ ವಹಿಸುತ್ತದೆ.

ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು ಸರ್ಕಾರ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು. ದೇಶಾದ್ಯಂತ 28 ಪ್ರವೇಶ-ನಿಯಂತ್ರಿತ ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸುವ ಪ್ರಕ್ರಿಯೆಯಲ್ಲಿ ಸರ್ಕಾರವಿದೆ ಎಂದು ಅವರು ಹೇಳಿದರು. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ರಸ್ತೆ ಅಭಿವೃದ್ಧಿ ಯೋಜನೆಗಳಲ್ಲಿ ಸರ್ಕಾರ 150,000 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ವಾಯು ಗುಣಮಟ್ಟ ಸೂಚ್ಯಂಕ (AQI) ಅಪಾಯಕಾರಿ ಮಟ್ಟದಲ್ಲಿ 413 ದಾಖಲಾಗಿದ್ದು, ಇದು ಗೋಚರತೆ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link