All posts by nagaraj11081993

ಇನ್ಮುಂದೆ ಮಹಿಳೆಯರು ಸ್ಮಾರ್ಟ್​ಫೋನ್ ಬಳಸುವಂತಿಲ್ಲ, ಕೀಪ್ಯಾಡ್ ಫೋನ್​ಗಳೇ ಗತಿ

ಜೈಪುರ, ಡಿಸೆಂಬರ್ 24: ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್​ಫೋನ್(Smartphone) ಬಳಕೆ ಹೆಚ್ಚಾಗಿದೆ. ಮನೆಯಲ್ಲಿ ಪೋಷಕರು ಹೆಚ್ಚೆತ್ತು ಮೊಬೈಲ್​ಗಳನ್ನು ಬಳಕೆ ಮಾಡುವುದನ್ನು ನೋಡಿ ಮಕ್ಕಳು ಕೂಡ ಅದೇ ಪರಿಪಾಠ ಬೆಳೆಸಿಕೊಳ್ಳುತ್ತಾರೆ. ಅದು ಅವರ ದೃಷ್ಟಿ ಮೇಲೂ ಪರಿಣಾಮ ಬೀರುತ್ತದೆ. ಮಕ್ಕಳ ಜತೆ ಮನೆಯಲ್ಲಿ ಹೆಚ್ಚು ಹೊತ್ತು ತಂದೆಗಿಂತ ತಾಯಿಯೇ ಇರುತ್ತಾರೆ. ಹಾಗಾಗಿ ಇನ್ನುಮುಂದೆ ಹೆಣ್ಣುಮಕ್ಕಳು ಸ್ಮಾರ್ಟ್​ ಫೋನ್ ಬಳಸುವಂತಿಲ್ಲ ಬದಲಾಗಿ ಕೀ ಪ್ಯಾಡ್ ಬಳಸುವಂತೆ ಸೂಚನೆ ನೀಡಲಾಗಿದೆ.

ಇದು ದೇಶಾದ್ಯಂತ ತಮದ ನಿಯಮವಲ್ಲ ಬದಲಾಗಿ, ರಾಜಸ್ಥಾನದ ಪಂಚಾಯತ್ ಈ ನಿರ್ಧಾರ ತೆಗೆದುಕೊಂಡಿದೆ. ರಾಜಸ್ಥಾನದ ಜಲೋರ್ ಜಿಲ್ಲೆಯ ಪಂಚಾಯತ್ 15 ಹಳ್ಳಿಗಳ ಮಹಿಳೆಯರು ಮತ್ತು ಹುಡುಗಿಯರಿಗೆ ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ನಿಷೇಧಿಸಿದೆ. ಈ ನಿಷೇಧವು ಜನವರಿ 26 ರಿಂದ ಜಾರಿಗೆ ಬರಲಿದೆ.

ಜಾಲೋರ್ ಜಿಲ್ಲೆಯ ಚೌಧರಿ ಸಮುದಾಯದ ಸುಂಧಮತ ಪಟ್ಟಿಯ ಘಾಜಿಪುರ ಗ್ರಾಮದಲ್ಲಿ ಸುಜನರಾಮ್ ಚೌಧರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಹೊರಬಿದ್ದಿದೆ. ಸಭೆಯಲ್ಲಿ 15 ಗ್ರಾಮಗಳ ಗ್ರಾಮಸ್ಥರು ಮತ್ತು ಪಂಚಾಯತ್ ಸದಸ್ಯರು ಭಾಗವಹಿಸಿದ್ದರು.

ಮತ್ತಷ್ಟು ಓದಿ: Tech Tips: ಕದ್ದ ಮೊಬೈಲ್ ಅನ್ನು ಪೊಲೀಸರು ಹೇಗೆ ಟ್ರ್ಯಾಕ್ ಮಾಡುತ್ತಾರೆ ಗೊತ್ತೇ?

ಹೊಸ ನಿಯಮದ ಪ್ರಕಾರ, ಸಾರ್ವಜನಿಕ ಸಭೆಗಳು, ಸಾಮಾಜಿಕ ಕಾರ್ಯಕ್ರಮಗಳು, ಮದುವೆಗಳು ಅಥವಾ ನೆರೆಹೊರೆಯವರ ಮನೆಗಳಿಗೆ ಭೇಟಿ ನೀಡುವಾಗಲೂ ಮಹಿಳೆಯರು ಸ್ಮಾರ್ಟ್‌ಫೋನ್‌ಗಳನ್ನು ಕೊಂಡೊಯ್ಯಲು ಅನುಮತಿಸಲಾಗುವುದಿಲ್ಲ. ಬದಲಾಗಿ, ಸಂವಹನಕ್ಕಾಗಿ ಮೂಲ ಕೀಪ್ಯಾಡ್ ಮೊಬೈಲ್ ಫೋನ್‌ಗಳನ್ನು ಬಳಸಲು ಅವರಿಗೆ ಸೂಚಿಸಲಾಗಿದೆ. ನಿರ್ಬಂಧವು ಸಾರ್ವಜನಿಕ ಸ್ಥಳಗಳನ್ನು ಮೀರಿ ವಿಸ್ತರಿಸುತ್ತದೆ, ಮನೆಯ ಹೊರಗೆ ಸ್ಮಾರ್ಟ್‌ಫೋನ್‌ಗಳ ಬಳಕೆಯನ್ನು ಗಮನಾರ್ಹವಾಗಿ ಸೀಮಿತಗೊಳಿಸುತ್ತದೆ.

ಆದಾಗ್ಯೂ, ಶಾಲಾ ಬಾಲಕಿಯರು ತಮ್ಮ ಅಧ್ಯಯನಕ್ಕಾಗಿ ಸ್ಮಾರ್ಟ್‌ಫೋನ್‌ಗಳನ್ನು ಬಳಸಲು ಅನುಮತಿಸಲಾಗಿದೆ. ಸಮುದಾಯದ ಅಧ್ಯಕ್ಷ ಸುಜನರಾಮ್ ಚೌಧರಿ ಮಾತನಾಡಿ, ಎಲ್ಲಾ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರೊಂದಿಗೆ ಚರ್ಚಿಸಿದ ನಂತರ, 15 ಹಳ್ಳಿಗಳ ಮಹಿಳೆಯರು ಮತ್ತು ಹುಡುಗಿಯರು ಕರೆಗಳನ್ನು ಮಾಡಲು ಕೀಪ್ಯಾಡ್ ಫೋನ್‌ಗಳನ್ನು ಬಳಸಬೇಕೆಂದು ನಿರ್ಧರಿಸಲಾಯಿತು.

ವಿಡಿಯೋ

ಶಾಲಾ ಬಾಲಕಿಯರು ತಮ್ಮ ಅಧ್ಯಯನಕ್ಕಾಗಿ ಮೊಬೈಲ್ ಫೋನ್‌ಗಳನ್ನು ಹೊಂದಿರುವುದು ಅಗತ್ಯವಿದ್ದರೆ, ಅವರು ಮನೆಯಲ್ಲಿ ಮಾತ್ರ ಅವುಗಳನ್ನು ಬಳಸಲು ಅನುಮತಿಸಲಾಗುವುದು. ಮಕ್ಕಳು ಅತಿಯಾಗಿ ಮೊಬೈಲ್ ಫೋನ್ ಬಳಸುತ್ತಿರುವುದರಿಂದ ಈ ನಿಯಮವನ್ನು ಪರಿಚಯಿಸಲಾಗಿದೆ ಎಂದು ಸುಜನರಾಮ್ ಚೌಧರಿ ಈ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಜಲೋರ್ ಜಿಲ್ಲೆಯ ಗಾಜಿಪುರ, ಪಾವ್ಲಿ, ಕಲ್ಡಾ, ಮನೋಜಿಯಾ ವಾಸ್, ರಾಜಿಕವಾಸ್, ದತ್ಲವಾಸ್, ರಾಜಪುರ, ಕೋಡಿ, ಸಿದ್ರೋಡಿ, ಅಲ್ದಿ, ರೋಪ್ಸಿ, ಖಾನದೇವಲ್, ಸವಿಧರ್, ಹತ್ಮಿ ಕಿ ಧನಿ (ಭಿನ್ಮಲ್), ಮತ್ತು ಖಾನ್‌ಪುರ ಗ್ರಾಮಸ್ಥರಲ್ಲಿ ಈ ನಿಯಮವನ್ನು ಜಾರಿಗೊಳಿಸಲಾಗುವುದು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Source link

ಕೊಲೆ ಆರೋಪ ಕೋರ್ಟ್​ನಲ್ಲಿ ಸಾಬೀತಾದರೂ ಮಹಿಳೆ ಅಪರಾಧಮುಕ್ತ! ಮಂಗಳೂರಲ್ಲೊಂದು ಅಚ್ಚರಿಯ ತೀರ್ಪು – Kannada News | Woman Acquitted Despite Murder Charge Being Proven in Mangaluru Court: Know Interesting reson behind this

ಮಂಗಳೂರು, ಡಿಸೆಂಬರ್ 24: ಆಕೆ ಪತಿಯನ್ನೇ ಕೊಲೆ ಮಾಡಿದಾಕೆ. ಸಾಲದೆಂಬಂತೆ ನ್ಯಾಯಾಲಯದಲ್ಲೂ ಆರೋಪ ಸಾಬೀತಾಗಿದೆ. ಇಷ್ಟಾದರೂ ಆಕೆಗೆ ಕೋರ್ಟ್ ಶಿಕ್ಷೆ ವಿಧಿಸಿಲ್ಲ! ಅಷ್ಟೇ ಅಲ್ಲ, ಆಕೆಯನ್ನು ಅಪರಾಧಮುಕ್ತಗೊಳಿಸಿದೆ! ಹಾಗೆಂದು ಆಕೆ ಮನೆಗೆ ಮರಳುವಂತೆಯೂ ಇಲ್ಲ. ಮತ್ತೆಲ್ಲಿಗೆ ಕಳುಹಿಸುತ್ತಾರೆ? ಇದು ಹೇಗೆ ಸಾಧ್ಯ ಎಂಬೆಲ್ಲ ಪ್ರಶ್ನೆಗಳು ಮೂಡುವುದು ಸಹಜ. ಆಶ್ಚರ್ಯ ಆದರೂ ಇದು ಸತ್ಯ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ವಿಶೇಷ ತೀರ್ಪು ನೀಡಿದೆ.

ಏನಿದು ಪ್ರಕರಣ, ಆಶ್ಚರ್ಯಕರ ತೀರ್ಪು?

ಇದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022ರ ಜುಲೈ 5 ರಂದು ನಡೆದಿದ್ದ ಕೊಲೆ ಪ್ರಕರಣ. ಯೋಹಾನನ್ ಎಂಬುವವರನ್ನು ಅವರ ಪತ್ನಿ ಎಲಿಯಮ್ಮ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದರು. ಪ್ರಕರಣದ ವಿಚಾರಣೆ ವೇಳೆ ಬೆಳ್ತಂಗಡಿ ಪೊಲೀಸರು‌ ಆರೋಪಿ ಎಲಿಯಮ್ಮ ಬಂಧಿಸಿದ್ದರು.

ತಪ್ಪೊಪ್ಪಿಕೊಂಡಿದ್ದ ಆರೋಪಿ ಎಲಿಯಮ್ಮ

ಬೆಳ್ತಂಗಡಿ ಪೊಲೀಸರ ವಿಚಾರಣೆ ವೇಳೆ ಆರೋಪಿ ಎಲಿಯಮ್ಮ ‘ಪರಿಯನ್ನು ಕೊಲೆ ಮಾಡಿರುವುದು ಹೌದು’ ಎಂದು ಒಪ್ಪಿಕೊಂಡಿದ್ದರು. ಹೀಗಾಗಿ ಕೃತ್ಯದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಲಯ ಸಾಕ್ಷಿ ವಿಚಾರಣೆಯನ್ನು ಮುಂದುವರೆಸಿತ್ತು. ಸಾಕ್ಷಿದಾರರು ಕೂಡ ಆಕೆಯ ವಿರುದ್ಧ ಸಾಕ್ಷಿ ನುಡಿದಿದ್ದರು.

ಎಲಿಯಮ್ಮ ಬಚಾವಾಗಿದ್ಹೇಗೆ?

ಕೊಲೆ ಪ್ರಕರಣದ ವಿಚಾರಣೆಯ ಕ್ರಾಸ್ ಎಕ್ಸಾಮಿನೇಷನ್ ಹಂತದಲ್ಲಿ ಆರೋಪಿ ಪರ ವಕೀಲ ವಿಕ್ರಮ್ ರಾಜ್ ಎ. ವಾದ ಮಂಡಿಸಿದ್ದರು. ಎಲಿಯಮ್ಮ ದೀರ್ಘಕಾಲದಿಂದ ಮಾನಸಿಕ ಅಸ್ವಸ್ಥತೆ ಮತ್ತು ಭ್ರಮೆಗಳಿಂದ (Delusional Disorder) ಬಳಲುತ್ತಿದ್ದಾರೆ. ಮಾನಸಿಕ ಅಸ್ವಸ್ಥತೆಯ ಕಾರಣದಿಂದಾಗಿ ಕೃತ್ಯವು ತಪ್ಪು ಅಥವಾ ಕಾನೂನು ಬಾಹಿರ ಎಂದು ತಿಳಿಯುವ ಸ್ಥಿತಿಯಲ್ಲಿ ಆರೋಪಿ ಇರಲಿಲ್ಲ. ಆದ್ದರಿಂದ ಆಕೆ ಅಪರಾಧ ಎಸಗಿಲ್ಲ ಎಂದು ವಿಕ್ರಮ್ ರಾಜ್ ಎ ವಾದ ಮಂಡಿಸಿದ್ದರು.

ಅಚ್ಚರಿಯ ತೀರ್ಪು ಪ್ರಕಟಿಸಿ ಕೋರ್ಟ್ ಹೇಳಿದ್ದೇನು?

ವಾದ-ಪ್ರತಿವಾದಗಳನ್ನು ಆಲಿಸಿ ನ್ಯಾಯಾಧೀಶರಾದ ಮೋಹನ ಜೆ.ಎಸ್. ತೀರ್ಪು ನೀಡಿದ್ದು, ಕೊಲೆ ಕೃತ್ಯ ಸಾಬೀತಾಗಿದ್ದರೂ ಆರೋಪಿ ಅಪರಾಧಿಕ ಹೊಣೆಯಿಂದ ಮುಕ್ತ ಎಂದು ಹೇಳಿದ್ದಾರೆ. ನಂತರ ಆರೋಪಿಯನ್ನು ನಿಮ್ಹಾನ್ಸ್‌ಗೆ (NIMHANS) ಕಳುಹಿಸಲು ಜೈಲು ಅಧೀಕ್ಷಕರಿಗೆ ಆದೇಶ ನೀಡಿದ್ದಾರೆ.

ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳಿಗೆ ಪೊಲೀಸರ ಖೆಡ್ಡಾ: ವಿದೇಶದಲ್ಲಿ ಕೂತು ಪ್ರಚೋದನಾಕಾರಿ ಪೋಸ್ಟ್ ಮಾಡಿದವರೂ ಅಂದರ್

ಆಕೆ ಬಿಡುಗಡೆಗೆ ಯೋಗ್ಯಳೇ ಮತ್ತು ಆಕೆಯಿಂದ ಸಮಾಜಕ್ಕೆ ಅಥವಾ ಆಕೆಯ ಜೀವಕ್ಕೆ ಅಪಾಯವಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಆರೋಪಿ ಪರ ನ್ಯಾಯವಾದಿಗಳಾದ ವಿಕ್ರಮ್ ರಾಜ್ ಎ ಮತ್ತು ಜೀವನ್ ಎ.ಎಂ. ವಾದ ಮಂಡಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಶಿವ ತಾಂಡವ ನೋಡಿದಂತಾಯ್ತು’; ಹೊತಬಿತ್ತು‘45’ ಚಿತ್ರದ ಮೊದಲ ವಿಮರ್ಶೆ – Kannada News | 45 Movie First Review Out on Social Media Fans Says it is Not A Movie Its A Shivatandava

ಅರ್ಜುನ್ ಜನ್ಯ ನಿರ್ದೇಶನದ ‘45’ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಈ ಚಿತ್ರಕ್ಕೆ ಡಿಸೆಂಬರ್ 23ರಂದು ವಿಶೇಷ ಶೋ ನಡೆದಿದೆ. ಈ ಶೋ ನೋಡಿದ ಅನೇಕರು ಸಿಳ್ಳೆ-ಚಪ್ಪಾಳೆ ಹೊಡೆದಿದ್ದಾರೆ. ‘ಸಿನಿಮಾ ಅಲ್ಲ, ಶಿವ ತಾಂಡವ ನೋಡಿದಂತಾಯ್ತು’ ಎಂದು ಎಂದು ಅನೇಕರು ಹೇಳಿದ್ದಾರೆ. ‘45’ ಚಿತ್ರದ ನೋಡಿದವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Optical Illusion: ಜಸ್ಟ್ 7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ನವಿಲನ್ನು ಗುರುತಿಸಬಲ್ಲಿರಾ – Kannada News | Optical Illusion: If you are smart, try to spot the peacock hidden in this fort.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಸುಲಭವಾಗಿ ಕಂಡರೂ ಬಿಡಿಸುವುದು ಅಷ್ಟೇ ಕಷ್ಟ. ಇಂತಹ ಒಗಟಿನ ಆಟಗಳತ್ತ ಹೆಚ್ಚಿನವರು ಆಸಕ್ತಿ ತೋರುತ್ತಾರೆ. ಇದೀಗ ನಿಮ್ಮ ಬುದ್ಧಿವಂತಿಕೆ ಹಾಗೂ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಚಿತ್ರವೊಂದಿದೆ. ಈ ಕೋಟೆಯ ಚಿತ್ರದಲ್ಲಿ ನವಿಲೊಂದಿದೆ. ಜಾಣತನದಿಂದ ಮರೆಮಾಡಲಾಗಿರುವ ಈ ಪಕ್ಷಿಯನ್ನು ಕಂಡುಹಿಡಿಯುವುದೇ ದೊಡ್ಡ ಸವಾಲು. ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಈ ಒಗಟನ್ನು ಬಿಡಿಸಲು ಸಾಧ್ಯವಿದ್ದು ನೀವು ಅವರಲ್ಲಿ ಒಬ್ಬರಾಗಿದ್ದೀರಾ ಎಂದು ಪರೀಕ್ಷಿಸಿಕೊಳ್ಳಿ.

ಈ ಚಿತ್ರದತ್ತ ಒಮ್ಮೆ ಕಣ್ಣಾಯಿಸಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಕೋಟೆಯನ್ನು ಕಾಣಬಹುದು. ಕೋಟೆಯ ಮುಂದೆ ಹುಡುಗನೊಬ್ಬ ನಿಂತು ಕೊಂಡಿದ್ದಾನೆ. ಈ ಕೋಟೆಯಲ್ಲಿ ನವಿಲು ಕೂಡ ಇದೆ. ಇಲ್ಲಿರುವ ಸವಾಲು ಈ ಪಕ್ಷಿ ಎಲ್ಲಿದೆ ಎಂಬುದನ್ನು ಕಂಡುಹಿಡಿಯುವುದು. ನೀವು 7 ಸೆಕೆಂಡುಗಳಲ್ಲಿ ನವಿಲನ್ನು ಹುಡುಕಲು ಸಾಧ್ಯವೇ ಎಂದು ನೋಡಿ.

ಇದನ್ನೂ ಓದಿ:ನಿಮ್ಮ ಕಣ್ಣು ಚುರುಕಾಗಿದ್ದರೆ ಈ ಚಿತ್ರದಲ್ಲಿರುವ ನಿಧಿ ಪೆಟ್ಟಿಗೆಯನ್ನು ಹುಡುಕಿ

ನವಿಲನ್ನು ಗುರುತಿಸಲು ಸಾಧ್ಯವಾಯಿತೇ?

ಮೊದಲ ನೋಟಕ್ಕೆ ಈ ಚಿತ್ರವನ್ನು ನೋಡಿದಾಗ ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಆದರೆ ಈ ಕೋಟೆಯಲ್ಲಿ ಅವಿತು ಕುಳಿತಿರುವ ನವಿಲನ್ನು ತ್ವರಿತ ವೀಕ್ಷಣಾ ಕೌಶಲ್ಯ ಹೊಂದಿದ್ದವರು ಮಾತ್ರ ಗುರುತಿಸಲು ಸಾಧ್ಯ. ಒಗಟು ಬಿಡಿಸುವಲ್ಲಿ ಸೋತಿದ್ದೀರಾ. ನಾವೇ ನಿಮಗೆ ನವಿಲು ಎಲ್ಲಿದೆ ಎಂದು ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ನವಿಲು ಎಲ್ಲಿದೆ ಎಂದು ನಾವೇ ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

National Consumer Rights Day 2025: ಒಬ್ಬ ಜವಾಬ್ದಾರಿಯುತ ಗ್ರಾಹಕರಾಗಿ ನಿಮ್ಮ ಹಕ್ಕುಗಳೇನು, ತಿಳಿದುಕೊಳ್ಳಿ – Kannada News | National Consumer Rights Day 2025: Why is National Consumer Rights Day celebrated? Here is the information

ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನImage Credit source: vecteezy

ದಿನಸಿ, ಬಟ್ಟೆಗಳಿಂದ ಹಿಡಿದು ಪ್ರತಿಯೊಂದು ಅಗತ್ಯ ವಸ್ತುಗಳನ್ನು ನಾವು ಮಾರುಕಟ್ಟೆಯಿಂದ ಕೊಳ್ಳುತ್ತೇವೆ. ಅದೇ ರೀತಿ ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಊಟ ಮಾಡುತ್ತೇವೆ. ಆದರೆ ಕೆಲವೊಂದು ಬಾರಿ ಗುಣಮಟ್ಟದ ಆಹಾರಗಳು, ವಸ್ತುಗಳು ಸಿಗುವುದೇ ಇಲ್ಲ. ಗ್ರಾಹಕರಿಗೆ (Consumer) ಒಂದಷ್ಟು ಮೋಸಗಳಾಗುತ್ತವೆ. ಈ ಮೋಸಗಳಿಗೆ ಯಾವ ರೀತಿ ಪರಿಹಾರವನ್ನು ಪಡೆಯುವುದು ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಈ ರೀತಿಯ ಮೋಸಗಳಿಗೆ ಪರಿಹಾರ ಪಡೆಯಲು ಗ್ರಾಹಕರಿಗಾಗಿ ಕೆಲವು ಹಕ್ಕುಗಳಿವೆ, ಈ ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು, ಜಾಗೃತಿ ಮೂಡಿಸಲು ಭಾರತದಲ್ಲಿ ಪ್ರತಿವರ್ಷ ಡಿಸೆಂಬರ್‌ 24 ರಂದು ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯಿರಿ.

ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನದ ಇತಿಹಾಸವೇನು?

ಗ್ರಾಹಕ ಸಂರಕ್ಷಣಾ ಕಾಯ್ದೆಯನ್ನು 1986 ರಲ್ಲಿ ಅಂಗೀಕರಿಸಲಾಯಿತು ಮತ್ತು ಡಿಸೆಂಬರ್ 24 ರಂದು ರಾಷ್ಟ್ರಪತಿಗಳು ಅದಕ್ಕೆ ಅನುಮೋದನೆ ನೀಡಿದರು. ಉತ್ಪಾದಕರು ಅಥವಾ ಮಾರಾಟಗಾರರಿಂದಾಗುವ ಮೋಸ, ವಂಚನೆ, ಶೋಷಣೆಗಳಿಂದ ಗ್ರಾಹಕರಿಗೆ ರಕ್ಷಣೆ ಒದಗಿಸುವ ಉದ್ದೇಶದಿಂದ ಈ ಕಾಯಿದೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಯನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತಿವರ್ಷ ಡಿಸೆಂಬರ್‌ 24 ರಂದು ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನದ ಮಹತ್ವವೇನು?

  • ರಾಷ್ಟ್ರೀಯ ಗ್ರಾಹಕ ದಿನದ ಪ್ರಾಥಮಿಕ ಉದ್ದೇಶವೆಂದರೆ ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅವರ ಹಕ್ಕುಗಳನ್ನು ಪ್ರತಿಪಾದಿಸಲು ಅವರಿಗೆ ಅಧಿಕಾರ ನೀಡುವುದು.
  • ಉತ್ಪನ್ನಗಳು ಮತ್ತು ಸೇವೆಗಳ ಗುಣಮಟ್ಟವನ್ನು ಹೇಗೆ ನಿರ್ಣಯಿಸುವುದು, ವಂಚನೆ ಮತ್ತು ಶೋಷಣೆಯನ್ನು ತಪ್ಪಿಸುವುದು ಮತ್ತು ಕಾನೂನು ನೆರವು ಪಡೆಯುವುದು ಹೇಗೆ ಎಂಬುದರ ಕುರಿತು ಗ್ರಾಹಕರಿಗೆ ಶಿಕ್ಷಣ ನೀಡುವ ಸಾಧನವಾಗಿಯೂ ಈ ದಿನ ಕಾರ್ಯನಿರ್ವಹಿಸುತ್ತದೆ.
  • ಗ್ರಾಹಕ ವೇದಿಕೆಗಳು, ಸಂಸ್ಥೆಗಳು ಮತ್ತು ಸರ್ಕಾರಿ ಸಂಸ್ಥೆಗಳು ಹಲವಾರು ಜಾಗೃತಿ ಅಭಿಯಾನಗಳು, ವಿಚಾರ ಸಂಕಿರಣಗಳು ಮತ್ತು ಕಾರ್ಯಾಗಾರಗಳನ್ನು ಆಯೋಜಿಸುತ್ತವೆ.

ಇದನ್ನೂ ಓದಿ: ರೈತನೇ ದೇಶದ ಬೆನ್ನೆಲುಬು, ಜಗದ ಹಸಿವು ನೀಗಿಸುವ ಅನ್ನದಾತನಿಗೊಂದು ನಮನ     

ಭಾರತದಲ್ಲಿ ಗ್ರಾಹಕರಿಗಾಗಿ ಇರುವ ಹಕ್ಕುಗಳು ಯಾವುವು?

ಸುರಕ್ಷತೆಯ ಹಕ್ಕು:  ಗ್ರಾಹಕರು ಮಾರುಕಟ್ಟೆಯಿಂದ ಗುಣಮಟ್ಟದ ಮತ್ತು ಸುಸ್ಥಿರ ಸೇವೆಗಳನ್ನು ಪಡೆಯುವ ಹಕ್ಕನ್ನು ಹೊಂದಿದ್ದಾರೆ. ಈ ಗುಣಮಟ್ಟವನ್ನು ಭಾರತೀಯ ಗುಣಮಟ್ಟ ಸಂಸ್ಥೆ (ISAE) (ಕೈಗಾರಿಕಾ ಮತ್ತು ಎಲೆಕ್ಟ್ರಾನಿಕ್ ಸರಕುಗಳಿಗೆ), ಆಗ್‌ಮಾರ್ಕ್ (ಕೃಷಿ ಉತ್ಪನ್ನಗಳಿಗೆ) ಮತ್ತು FPO ಮಾರ್ಕ್ (ಸಂಸ್ಕರಿಸಿದ ಆಹಾರ ವಸ್ತುಗಳಿಗೆ) ಗುರುತುಗಳ ಮೂಲಕ ವ್ಯಕ್ತಪಡಿಸಲಾಗುತ್ತದೆ.

ಮಾಹಿತಿ ಹಕ್ಕು:  ಗ್ರಾಹಕರು ಮತ್ತು ಗ್ರಾಹಕರು ತಾವು ಖರ್ಚು ಮಾಡುತ್ತಿರುವ ಉತ್ಪನ್ನದ ಬಗ್ಗೆ ಅಗತ್ಯ ಮಾಹಿತಿಯನ್ನು ಪಡೆಯುವ ಹಕ್ಕನ್ನು ಹೊಂದಿರುತ್ತಾರೆ. ಹೌದು ಅವರು ಖರೀದಿಸುತ್ತಿರುವ ಉತ್ಪನ್ನ, ಅದರ ಬೆಲೆ, ಗುಣಮಟ್ಟ, ಪ್ರಮಾಣ, ಉತ್ಪಾದನಾ ದಿನಾಂಕ, ಮುಕ್ತಾಯ ದಿನಾಂಕ ಮತ್ತು ಅದನ್ನು ಹೇಗೆ ಬಳಸುವುದು ಎಂಬುದನ್ನು ತಿಳಿದುಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ಅಂಗಡಿಯವರು ತಪ್ಪು ಮಾಹಿತಿಯನ್ನು ಒದಗಿಸಿದರೆ, ಅವರು ದೂರು ದಾಖಲಿಸಬಹುದು.

ಆಯ್ಕೆ ಮಾಡುವ ಹಕ್ಕು: ಯಾವುದೇ ಗ್ರಾಹಕರು ಯಾವುದೇ ಅಂಗಡಿ, ಯಾವುದೇ ಮಾಲ್ ಅಥವಾ ಯಾವುದೇ ಶಾಪಿಂಗ್ ತಾಣಕ್ಕೆ ಹೋಗಿ ತಾವು ಬಯಸುವ ಮತ್ತು ತಮ್ಮ ಬಜೆಟ್ ಒಳಗೆ ಏನು ಬೇಕಾದರೂ ಖರೀದಿಸಬಹುದು. ಅಂಗಡಿಯವರು ಅಥವಾ ಮಾರಾಟಗಾರರು ನಿರ್ದಿಷ್ಟ ವಸ್ತುವನ್ನು ಖರೀದಿಸಲು ಅವರ ಮೇಲೆ ಒತ್ತಡ ಹೇರುವಂತಿಲ್ಲ. ಗ್ರಾಹಕರು ತಾವು ಆರಿಸಿಕೊಳ್ಳುವ ಯಾವ ವಸ್ತುವನ್ನಾದರೂ ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ.

ವಿಚಾರಣೆಯ ಹಕ್ಕು : ವಂಚನೆ ಅಥವಾ ವಂಚನೆಯ ಸಂದರ್ಭದಲ್ಲಿ ಗ್ರಾಹಕರು ಮೇಲ್ಮನವಿ ಸಲ್ಲಿಸುವ ಅಥವಾ ವಿಚಾರಣೆಯನ್ನು ಕೋರುವ ಹಕ್ಕನ್ನು ಹೊಂದಿರುತ್ತಾರೆ. ಅವರು ಸೂಕ್ತ ವೇದಿಕೆಯ ಮುಂದೆ ತಮ್ಮ ಪ್ರಕರಣವನ್ನು ಮಂಡಿಸಬಹುದು ಮತ್ತು ಕಾನೂನು ಕ್ರಮ ಕೈಗೊಳ್ಳಬಹುದು. ಈ ಉದ್ದೇಶಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಗ್ರಾಹಕ ವೇದಿಕೆಗಳು ಅಸ್ತಿತ್ವದಲ್ಲಿವೆ.

ಪರಿಹಾರದ ಹಕ್ಕು:  ಸರಕು ಮತ್ತು ಸೇವೆಗಳು ನಿಗದಿತ ಬೆಲೆಯಲ್ಲಿ ಲಭ್ಯವಿಲ್ಲದಿದ್ದರೆ, ವಂಚನೆಗಳಾದರೆ ಗ್ರಾಹಕರು ಪರಿಹಾರವನ್ನು ಪಡೆಯುವ ಹಕ್ಕನ್ನು ಹೊಂದಿರುತ್ತಾರೆ. ನಷ್ಟ ಮತ್ತು ಮೋಸಗಳಿಗೆ ದೂರು ನೀಡಬಹುದು. ಉತ್ಪನ್ನ ಮತ್ತು ಸೇವೆಗಳ ಗುಣಮಟ್ಟದಲ್ಲಿ ತೃಪ್ತಿ ಇಲ್ಲದಿದ್ದರೆ ಗ್ರಾಹಕರು ದೂರನ್ನು ದಾಖಲಿಸಬಹುದು. ಇದಲ್ಲದೆ ಒಂದು ಉತ್ಪನ್ನ ಅಥವಾ ಸೇವೆಯಿಂದಾಗಿ ಗ್ರಾಹಕರು ನಷ್ಟ ಅನುಭವಿಸಿದ್ದರೆ, ಅವರು ಮರುಪಾವತಿಗೆ ಮಾತ್ರವಲ್ಲದೆ ಪರಿಹಾರಕ್ಕೂ ಅರ್ಹರು.

ಎಲ್ಲಿ ದೂರು ನೀಡಬೇಕು?

ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಪೋರ್ಟಲ್‌ https://consumerhelpline.gov.in/public/ಅಲ್ಲಿ ದೂರನ್ನು ನೋಂದಾಯಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜನವರಿ 21ರವರೆಗೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ – Kannada News | Jasprit Bumrah will rest till January 21.

ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟೂರ್ನಿಗೆ ಚಾಲನೆ ದೊರೆತಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಮಾತ್ರ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಬುಮ್ರಾ ಈ ಬಾರಿ ಕೂಡ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.

ವಿಜಯ ಹಝಾರೆ ಟೂರ್ನಿಯಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಬಿಸಿಸಿಐ ಅವರಿಗೆ ವಿಶ್ರಾಂತಿ ನೀಡಿರುವ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್​ನ ಕಾರ್ಯದರ್ಶಿ ಅನಿಲ್ ಪಟೇಲ್ ತಿಳಿಸಿದ್ದಾರೆ. ಹೀಗಾಗಿ ಪ್ರಸ್ತುತ ನಡೆಯುತ್ತಿರುವ ಏಕದಿನ ಟೂರ್ನಿಯಲ್ಲಿ ಬುಮ್ರಾ ಕಾಣಿಸಿಕೊಳ್ಳುತ್ತಿಲ್ಲ.

ಬುಮ್ರಾ ಮತ್ತೆ ಮೈದಾನಕ್ಕಿಳಿಯುವುದು ಯಾವಾಗ?

ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದ ಜಸ್​ಪ್ರೀತ್ ಬುಮ್ರಾ ಟಿ20 ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಬುಮ್ರಾ ಮೂರು ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದರು. ಇದೀಗ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧದ ಸರಣಿಗಾಗಿ ಸಜ್ಜಾಗುತ್ತಿದೆ.

ನ್ಯೂಝಿಲೆಂಡ್ ವಿರುದ್ಧದ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ.

ಆದರೆ ಈ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆಯೂ ಬುಮ್ರಾಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ಟೀಮ್ ಇಂಡಿಯಾ ವೇಗಿ ಟಿ20 ಸರಣಿ ವೇಳೆ ಮತ್ತೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿ ಶುರುವಾಗುವುದು ಜನವರಿ 21 ರಿಂದ. ಅಲ್ಲಿಯವರೆಗೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ ಕಲ್ಪಿಸಲು ಟೀಮ್ ಇಂಡಿಯಾ ಆಯ್ಕೆ ಸಮಿತಿ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಬುಮ್ರಾಗೆ ವಿಶ್ರಾಂತಿ ಯಾಕೆ?

ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾದ ಪ್ರಮುಖ ವೇಗಿ. ಕಳೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ವೇಳೆ ಅವರು ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ದೀರ್ಘಾವಧಿಯ ಪಂದ್ಯಗಳನ್ನಾಡುತ್ತಿರುವುದರಿಂದ ಅವರಿಗೆ ಈ ಸಮಸ್ಯೆ ಎದುರಾಗಿತ್ತು.

ಇದನ್ನೂ ಓದಿ: ಭಾರತದ ವಿರುದ್ಧದ ಸರಣಿಯಿಂದ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದೇಕೆ?

ಇದೇ ಕಾರಣದಿಂದ ಬುಮ್ರಾ ಅವರನ್ನು ಪ್ರಮುಖ ಸರಣಿಗಳಲ್ಲಿ ಮಾತ್ರ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ಗೂ ಮುನ್ನ ಜಸ್​ಪ್ರೀತ್ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದ್ದು, ಹೀಗಾಗಿ ವಿಜಯ ಹಝಾರೆ ಟೂರ್ನಿ ಹಾಗೂ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ವೇಗಿಯನ್ನು ಹೊರಗಿಡಲಾಗಿದೆ.

Published On – 10:25 am, Wed, 24 December 25

Source link

ಕೃಷಿ ಅಧಿಕಾರಿಯೋ, ಕುಬೇರನೋ! ಲೋಕಾಯುಕ್ತ ದಾಳಿ ವೇಳೆ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ – Kannada News | Lokayukta Raid on Vijayapura Agriculture Officer Exposes ₹2.5 Crore Disproportionate Assets

ವಿಜಯಪುರ, ಡಿಸೆಂಬರ್ 24: ವಿಜಯಪುರ ಜಿಲ್ಲೆಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಳಪ್ಪ ಯರಝರಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಆದಾಯಕ್ಕಿಂತ ಹೆಚ್ಚುವರಿಯಾಗಿ ಮಾಡಿಟ್ಟ 2.50 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬಾಗೇವಾಡಿಯ ಕೃಷಿ ಇಲಾಖೆಯ ಈ ಅಧಿಕಾರಿಯ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಲೋಕಾಯುಕ್ತ ತಂಡ ವಶಪಡಿಸಿಕೊಂಡಿದೆ. ದಾಳಿ ವೇಳೆ 29.48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಮತ್ತು ನಗದು ಪತ್ತೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತದ ವಿರುದ್ಧದ ಸರಣಿಯಿಂದ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದೇಕೆ? – Kannada News | Why Kane Williamson isn’t part of New Zealand’s squad

ಭಾರತದ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡಗಳನ್ನು ಪ್ರಕಟಿಸಲಾಗಿದೆ. ಈ ತಂಡಗಳಲ್ಲಿ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅನುಭವಿ ಆಟಗಾರನಾಗಿದ್ದರೂ ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ವಿಲಿಯಮ್ಸನ್ ಹೊರಗುಳಿದಿದ್ದೇಕೆ? ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ…

ಕೇನ್ ವಿಲಿಯಮ್ಸನ್ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ ಜೊತೆ ಸಾಂದರ್ಭಿಕ ಕಾಂಟ್ರಾಕ್ಟ್ ಒಪ್ಪಂದದಲ್ಲಿದ್ದಾರೆ. ಅಂದರೆ ನ್ಯೂಝಿಲೆಂಡ್ ಪರ ಆಡಬೇಕಾ ಅಥವಾ ಬೇಡವಾ ಎಂಬುದನ್ನು ನಿರ್ಧರಿಸುವ ಹಕ್ಕು ಅವರಿಗಿದೆ. ಈ ಒಪ್ಪಂದದಿಂದಾಗಿ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ ನೀವು ಆಡಲೇಬೇಕು ಎಂದು ಒತ್ತಾಯ ಮಾಡುವಂತಿಲ್ಲ.

ಅತ್ತ ಭಾರತದ ವಿರುದ್ಧದ ಸರಣಿಯ ವೇಳೆ ಸೌತ್ ಆಫ್ರಿಕಾ ಟಿ20 ಲೀಗ್ ಕೂಡ ನಡೆಯುತ್ತಿದೆ. ಈ ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯಲು ಕೇನ್ ವಿಲಿಯಮ್ಸನ್ ಒಪ್ಪಂದ ಮಾಡಿಕೊಂಡಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಸರಣಿಯಿಂದ ಹೊರಗುಳಿದು, ಅವರು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದೇ ಕಾರಣದಿಂದಾಗಿ ಜನವರಿ 11 ರಿಂದ ಶುರುವಾಗಲಿರುವ ಭಾರತದ ವಿರುದ್ಧದ ಸರಣಿಯಲ್ಲಿ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ.

ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ನ್ಯೂಝಿಲೆಂಡ್ ತಂಡ ಹೀಗಿದೆ:

ನ್ಯೂಝಿಲೆಂಡ್ ಏಕದಿನ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಸ್ಟಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೆ, ಝ್ಯಾಕ್ ಫೌಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್.

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್), ಜೇಕಬ್ ಡಫಿ, ಝ್ಯಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜೇಕಬ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.

ಭಾರತ vs ನ್ಯೂಝಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ – ಜನವರಿ 11 – ವಡೋದರಾ – ಮಧ್ಯಾಹ್ನ 1:30
  • ಎರಡನೇ ಏಕದಿನ ಪಂದ್ಯ – ಜನವರಿ 14 – ರಾಜ್‌ಕೋಟ್ – ಮಧ್ಯಾಹ್ನ 1:30
  • ಮೂರನೇ ಏಕದಿನ ಪಂದ್ಯ – ಜನವರಿ 18 – ಇಂದೋರ್ – ಮಧ್ಯಾಹ್ನ 1:30

ಇದನ್ನೂ ಓದಿ: ಸೂಪರ್ ಶರ್ಮಾ… ಅಭಿಷೇಕ್ ಆರ್ಭಟಕ್ಕೆ ವಿಶ್ವ ದಾಖಲೆ ಉಡೀಸ್

ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00
  • ಎರಡನೇ ಟಿ20 ಪಂದ್ಯ – ಜನವರಿ 23 – ರಾಯ್ಪುರ – ರಾತ್ರಿ 7:00
  • ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00
  • ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00
  • ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00

Source link

Video: ಚಿನ್ನ, ಬೆಳ್ಳಿ, ವಜ್ರಗಳಿಂದ ಕೂಡಿದ ಬಾಲರಾಮನ ವಿಗ್ರಹವನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ – Kannada News | Anonymous Devotee From Karnataka Donates Precious Ram Lalla Idol to Ayodhya Ram Temple

ಅಯೋಧ್ಯೆ, ಡಿಸೆಂಬರ್ 24: ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವಜ್ರಗಳಿಂದ ಮಾಡಲಾದ ಭವ್ಯವಾದ ವಿಗ್ರಹ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಈ ಪ್ರತಿಮೆಯನ್ನು ಕರ್ನಾಟಕದ ಭಕ್ತರೊಬ್ಬರು ದಾನ ಮಾಡಿದ್ದು ಮಂಗಳವಾರ ಸಂಜೆ ನಗರಕ್ಕೆ ತರಲಾಗಿದೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲೆ ತಂತ್ರಗಳನ್ನು ಬಳಸಿ ರಚಿಸಲಾದ ಈ ಪ್ರತಿಮೆಯ ಮೌಲ್ಯ ಅಂದಾಜು 25–30 ಕೋಟಿ ರೂ. ಎನ್ನಲಾಗಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ. ಅನಿಲ್ ಮಿಶ್ರಾ, ದಾನಿ ಯಾರೆಂಬುದು ತಿಳಿದಿಲ್ಲ ಎಂದಿದ್ದಾರೆ. ತಿಮೆಯ ತೂಕವನ್ನು ಅಳೆಯಲಾಗುತ್ತಿದೆ, ಆದರೂ ಅದು ಸುಮಾರು ಐದು ಕ್ವಿಂಟಾಲ್‌ಗಳಷ್ಟಿದೆ. ಸಂಪೂರ್ಣ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಡಿಸೆಂಬರ್ 29, 2025 ರಿಂದ ಜನವರಿ 2, 2026 ರವರೆಗೆ ಆಚರಿಸಲಾಗುವ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಯ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಷ್ಠಾ ದ್ವಾದಶಿಗೆ ಸಿದ್ಧತೆಗಳು ಪ್ರಾರಂಭವಾಗಿವೆ.

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶ್ರೀ ರಾಮ ಅಭಿಷೇಕ, ಶೃಂಗಾರ, ಭೋಗ ಮತ್ತು ಪ್ರಕತ್ಯ ಆರತಿ ಸೇರಿವೆ, ಇವುಗಳನ್ನು ಬೆಳಗ್ಗೆ 9.30 ರಿಂದ ಮಧ್ಯಾಹ್ನ ಆರತಿಯವರೆಗೆ ಗರ್ಭಗುಡಿಯಲ್ಲಿ ನಡೆಸಲಾಗುತ್ತದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಜಯಲಕ್ಷ್ಮೀ ಮನೆ ತುಂಬೆಲ್ಲಾ ಲಕ್ಷ್ಮೀ ಕೃಪಾಕಟಾಕ್ಷ! 53 ಆಸ್ತಿ, 2 ಕೋಟಿ ರೂ. ಮೌಲ್ಯದ ಲೇಔಟ್, ಇನ್ನೂ ಏನೇನು ಸಿಕ್ತು ಗೊತ್ತಾ? – Kannada News | Lokayukta Raid Exposes Massive Assets: Raichur Sub Division AEE Found With 53 Properties and Rs 2 Crore Layout

ವಿಜಯಪುರ ಕೃಷಿ ಇಲಾಖೆ ಅಧಿಕಾರಿ ಮಲ್ಲಪ್ಪ ಯರಝರಿ ನಿವಾಸದಲ್ಲಿ ಸಿಕ್ಕ ಸಂಪತ್ತು

ಬೆಂಗಳೂರು, ಡಿಸೆಂಬರ್ 24: ಕಣ್ಣು ಕುಕ್ಕುವಂಥ ಬಂಗಲೆ, ಎಕರೆಗಟ್ಟಲೆ ಫಾರ್ಮ್​ ಹೌಸ್, ಮನೆ ಮನೆಯಲ್ಲೂ ಶೋಧ, ಬೈಕ್​, ಕಾರಲ್ಲೂ ತಲಾಶ್, ಕಚೇರಿಗಳಲ್ಲೂ ಪರಿಶೀಲನೆ. ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು (Lokayukta Raid) ಮಂಗಳವಾರ ಬೆಳ್ಳಂಬೆಳಗ್ಗೆಯಿಂದಲೇ ಶಾಕ್ ನೀಡಿದ್ದಾರೆ. ನಸುಕಿನಲ್ಲಿ ದಾಳಿ ನಡೆಸಿ ಶುರುವಾದ ಪರಿಶೀಲನೆ ತಡರಾತ್ರಿ ವರೆಗೂ ನಡೆದಿದೆ. ಈ ವೇಳೆ, ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ಹಲವು ಅಧಿಕಾರಿಗಳ ಬಳಿ ಸಂಪತ್ತಿನ ಖಜಾನೆಗಳೇ ಪತ್ತೆಯಾಗಿವೆ.

ರಾಯಚೂರು ಜಿಲ್ಲೆ ಸಿಂಧನೂರು ಸಬ್ ಡಿವಿಷನ್ ಎಇಇ ವಿಜಯಲಕ್ಷ್ಮೀ ಬಳಿ ಒಂದಲ್ಲ, ಎರಡಲ್ಲ ಸುಮಾರು 53 ಕಡೆ ಆಸ್ತಿ ಇರುವುದು ಪತ್ತೆಯಾಗಿದೆ. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ರಾಯಚೂರಿನ 5 ಕಡೆ ದಾಳಿ ನಡೆಸಿದ್ದಾರೆ. ವಿಜಯಲಕ್ಷ್ಮೀ ಸಂಬಂಧಿಕರ ಮನೆ, ತಂಗಿ ಮನೆ, ಯಾದಗಿರಿಯಲ್ಲಿ ಖಾಸಗಿ ಲೇಔಟ್, ಫಾರ್ಮ್​ ಹೌಸ್​ಗಳ ದಾಖಲೆ ಪರಿಶೀಲಿಸಿದ್ದಾರೆ. ದಾಳಿ ವೇಳೆ ವಿಜಯಲಕ್ಷ್ಮೀ ಮನೆಯಲ್ಲಿರಲಿಲ್ಲ. ಸೊಸೆಗೆ ಡೆಲಿವರಿ ಅಂತಾ ಬೇರಡೆ ತೆರಳಿದ್ದರು. ಫೋನ್ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಕೂಡಲೇ ಬರುವಂತೆ ಸೂಚಿಸಿದ್ದರು. ಯಾದಗಿರಿಯಲ್ಲಿ 2 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಲೇಔಟ್, 290 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳು ಪತ್ತೆಯಾಗಿವೆ.

ಬಾಗಲಕೋಟೆ ಜಿ.ಪಂ. ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ‌ ಮನೆ ಮತ್ತು ಗದಗ ಜಿಲ್ಲೆ ನರಗುಂದದ ಮನೆ ಮೇಲೂ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸಿದ್ದಾರೆ. ದಾಳಿ ವೇಳೆ ಅಂದಾಜು 1 ಕೋಟಿ ರೂಪಾಯಿಗೂ ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ. 278 ಗ್ರಾಂ ಬಂಗಾರದ ಆಭರಣ, 494 ಗ್ರಾಂ ಬೆಳ್ಳಿಯ ಆಭರಣ, 1 ದ್ವಿಚಕ್ರ ವಾಹನ, 15 ಖಾಲಿ ನಿವೇಶನಗಳು ಹಾಗೂ 3 ಮನೆಗಳು ಇರುವುದು ಪತ್ತೆಯಾಗಿದೆ.

ವಿಜಯಪುರ ಕೃಷಿ ಇಲಾಖೆ ಅಧಿಕಾರಿ ಮಲ್ಲಪ್ಪ ಯರಝರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನವರಸಪೂರ ಬಡಾವಣೆ, ತೋಟದ ಮನೆ, ಮಾವನ ಮನೆ, ಕಚೇರಿ, ಕಾರು, ಬೈಕ್​ಗಳ ದಾಖಲಾತಿ ಪರಿಶೀಲಿಸಿದ್ದಾರೆ. ಈ ವೇಳೆ ಆದಾಯಕ್ಕಿಂತ ಹೆಚ್ಚಿನ 2.50 ಕೋಟಿ ರೂ. ಆಸ್ತಿ ಗಳಿಕೆ ಮಾಡಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಕೋಲ್ ಸಿರ್ಸಿ ಗ್ರೂಪ್ ಗ್ರಾಮ ಸೇವಾ ಸಹಕಾರಿ ಸಂಘ ನಿಯಮಿತದ ಸಿಇಒ ಮಾರುತಿ ಯಶವಂತ್ ಮಾಲ್ವಿ ಕಚೇರಿ ಮತ್ತು ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಉಡುಪಿ, ಮಂಗಳೂರು, ಕಾರವಾರ ಲೋಕಾಯುಕ್ತ ಅಧಿಕಾರಿಗಳು ಏಕ ಕಾಲದಲ್ಲಿ ರೇಡ್ ಮಾಡಿ ಪರಿಶೀಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:31 am, Wed, 24 December 25

Source link