PBKS vs GT: ಸೂಪರ್ ಕೊನೊಲಿ: ಪಂಜಾಬ್ ಕಿಂಗ್ಸ್ಗೆ ರೋಚಕ ಜಯ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಮುಲ್ಲನ್ಪುರ್ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ ಕೇವಲ 13 ರನ್ಗಳಿಸಿ ವಿಕೆಟ್ ಒಪ್ಪಿಸಿದ್ದರು….