ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ: ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ, ಮಾ.31: ಉಪಚುನಾವಣೆ ಹಿನ್ನೆಲೆಯಲ್ಲಿ ಮುಗಳ್ಳೊಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಯವರಿಗೆ ಬಡವರ, ದಲಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಬಗ್ಗೆ ಯಾವುದೇ ಕಳಕಳಿ ಅಥವಾ ಕಾಳಜಿ ಇಲ್ಲ ಎಂದು ಅವರು ಆರೋಪಿಸಿದರು. ಬಿಜೆಪಿಯು ಬಡವರ ವಿರೋಧಿಗಳು ಮತ್ತು ಮಹಿಳೆಯರ ವಿರೋಧಿಗಳು ಎಂದು ಸಿಎಂ ಬಣ್ಣಿಸಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್‌ನ ಕೊಡುಗೆಯನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿದರು. ಗ್ರಾಮ ಪಂಚಾಯಿತಿ,…