Headlines

nagaraj11081993

NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!

ಟಿ20 ವಿಶ್ವಕಪ್​ನ ರನ್ನರ್ ಅಪ್ ನ್ಯೂಝಿಲೆಂಡ್ ತಂಡ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದೆ. ಮೌಂಟ್ ಮೌಂಗನುಯಿನ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕಿವೀಸ್ ಪಡೆಗೆ ಆರಂಭಿಕ ಆಘಾತ ನೀಡುವಲ್ಲಿ ಸೌತ್ ಆಫ್ರಿಕಾ ಬೌಲರ್​ಗಳು ಯಶಸ್ವಿಯಾಗಿದ್ದರು. ಪರಿಣಾಮ 35 ರನ್​ಗಳಿಸುವಷ್ಟರಲ್ಲಿ ನ್ಯೂಝಿಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೇಮ್ಸ್ ನೀಶಮ್ 26 ರನ್ ಬಾರಿಸುವ…

Read More

ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್​ಶಾಗೆ ಬಿಷ್ಣೋಯ್ ಗ್ಯಾಂಗ್​ನಿಂದ ಬೆದರಿಕೆ

ಖ್ಯಾತ ರ‍್ಯಾಪರ್ ಮತ್ತು ಗಾಯಕ ಬಾದ್‌ಶಾ (Badshah) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿದ್ದರೆ, ಮತ್ತೊಂದೆಡೆ ಕಾನೂನು ಕ್ರಮಗಳ ಅಡಿಯಲ್ಲಿ ಅವರ ಬಂಧನಕ್ಕೆ ಸಿದ್ಧತೆ ನಡೆಯುತ್ತಿದೆ. ಬಾದ್‌ಶಾ ಅವರ ಇತ್ತೀಚಿನ ‘ಟಟೀರಿ’ (Tateeree) ಹಾಡು ಈಗ ಅವರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಈ ಹಾಡಿನಲ್ಲಿ ಹರಿಯಾಣದ ಸಂಸ್ಕೃತಿ ಮತ್ತು ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಅವರಿಗೆ ಪ್ರಾಣ…

Read More

ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಸಂಬಲ್ಪುರ, ಮಾರ್ಚ್​ 15: ಇಬ್ಬರು ಅಪ್ರಾಪ್ತ ಮಕ್ಕಳನ್ನು ಬಾವಿಗೆ ತಳ್ಳಿ ಮಹಿಳೆ ತಾನೂ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟಮೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜಿಲ್ಲೆಯ ಬಮ್ರಾ ಬ್ಲಾಕ್‌ನ ಮಹುಲಿಪಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಗಿದಿಹಿ ಗ್ರಾಮದ ನಿವಾಸಿ ಸಂಜು ಮಡ್ಕಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸಂಜು ಮಡ್ಕಿ ಶುಕ್ರವಾರ ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಬಾವಿಗೆ ಎಸೆದು ಕೊಂದಿದ್ದಾಳೆ ಎನ್ನಲಾಗಿದೆ. ನಂತರ ಪೊಲೀಸರು ಈ ಅಪರಾಧವನ್ನು ಮಕ್ಕಳ ತಾಯಿಯೇ ಮಾಡಿದ್ದಾರೆ ದೃಢಪಡಿಸಿದ್ದಾರೆ….

Read More

5 ಕೋಟಿ ಆಫರ್​​ ನೀಡಿ ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ

ಬೆಂಗಳೂರು, ಮಾರ್ಚ್​ 15: ನಗರದ ರೆಸಾರ್ಟ್​​ನಲ್ಲಿ ತಂಗಿರುವ ಒಡಿಶಾ ಶಾಸಕರನ್ನು ಅಪರಿಚಿತ ವ್ಯಕ್ತಿಗಳು ಖರೀದಿಸಲು ಪ್ರಯತ್ನಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಗೆ ಮುನ್ನ ನಡೆದ ಈ ಘಟನೆಯಲ್ಲಿ ಶಾಸಕರಿಗೆ ಐದು ಕೋಟಿ ರೂಪಾಯಿ ಮತ್ತು ಖಾಲಿ ಚೆಕ್‌ಗಳ ಆಮಿಷ ಒಡ್ಡಲಾಗಿತ್ತು. ಬೈತರಾಯನಪುರದ ಸುರೇಶ್ ಎಂಬುವರ ಸಹಾಯದಿಂದ ಆನ್‌ಲೈನ್‌ನಲ್ಲಿ ರೆಸಾರ್ಟ್‌ನಲ್ಲಿ ಕೊಠಡಿ ಕಾಯ್ದಿರಿಸಿ ಈ ವ್ಯಕ್ತಿಗಳು ಶಾಸಕರನ್ನು ಭೇಟಿ ಮಾಡಿದ್ದರು. ಶಾಸಕರು ಈ ಪ್ರಸ್ತಾಪವನ್ನು ತಿರಸ್ಕರಿಸಿ ಪಕ್ಷಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ…

Read More

ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!

ದಾವಣಗೆರೆ, ಮಾರ್ಚ್ 15: ದಾವಣಗೆರೆಯಲ್ಲಿ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳು ಪರಸ್ಪರ ಹಾರ ಬದಲಿಸಿಕೊಂಡು ಮತ್ತೆ ಒಂದಾಗಿ ಬಾಳಲು ನಿರ್ಧಾರ ಮಾಡಿದ್ದಾರೆ. ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಆಯೋಜಿಸಲಾದ ಈ ಮಹತ್ವದ ವಿದ್ಯಮಾನಕ್ಕೆ ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಡಿ.ಕೆ.ವೇಲಾ ಅವರು ಶುಭ ಹಾರೈಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನ್ಯಾಯಾಂಗ ಅಧಿಕಾರಿಯೊಬ್ಬರು, ಈ ಜಿಲ್ಲೆಯಲ್ಲಿ ನಡೆದಿರುವ ಎಲ್ಲಾ ರಾಷ್ಟ್ರೀಯ ಲೋಕ ಅದಾಲತ್‌ಗಳ ಜವಾಬ್ದಾರಿಯನ್ನು ನಿಭಾಯಿಸಿ, ಅಂದಾಜು 500 ವ್ಯಾಜ್ಯಪೂರ್ವ ಪ್ರಕರಣಗಳನ್ನು…

Read More

ಪ್ಲೇಸ್ಟೋರ್​ನಲ್ಲಿ ಚ್ಯಾಟ್​ಜಿಪಿಟಿ, ಫ್ಲಿಪ್​ಕಾರ್ಟ್ ಅನ್ನು ಮೀರಿಸಿದ ಎಲ್​ಪಿಜಿ ಬುಕಿಂಗ್ ಆ್ಯಪ್

ನವದೆಹಲಿ, ಮಾರ್ಚ್ 15: ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ಅಭಾವ ಆಗಿದೆಯೋ ಇಲ್ಲವೋ ಬೇರೆ ವಿಚಾರ, ಜನಸಾಮಾನ್ಯರಲ್ಲಿ ಎಲ್​ಪಿಜಿಗೆ (LPG) ಹಾಹಾಕಾರ ಮಾಡುತ್ತಿರುವಂತಹ ಪರಿಸ್ಥಿತಿ ಇದೆ. ಗ್ಯಾಸ್ ಬುಕಿಂಗ್​ಗೆ ಜನರು ಮುಗಿಬಿದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ, ಪ್ಲೇಸ್ಟೋರ್​ನಲ್ಲಿ ಇಂಡಿಯನ್ ಆಯಿಲ್​ನ ಒನ್ ಆ್ಯಪ್ (Indian Oil’s One) ನಂಬರ್ ಒನ್ ಎನಿಸಿದೆ. ಚ್ಯಾಟ್​ಜಿಪಿಟಿ ಇತ್ಯಾದಿ ಸ್ಟಾರ್ ಆ್ಯಪ್​ಗಳನ್ನು ಇದು ಹಿಂದಿಕ್ಕಿದೆ. ಒನ್ ಆ್ಯಪ್​ನಲ್ಲಿ ಇಂಡೇನ್ ಗ್ರಾಹಕರು ಎಲ್​ಪಿಜಿ ಬುಕಿಂಗ್ ಸೇರಿದಂತೆ ಹಲವಾರು ಕಾರ್ಯಗಳನ್ನು ಮಾಡಬಹುದು. ಹೊಸ ಎಲ್​ಪಿಜಿ…

Read More

ನೇಪಾಳ: ಇಳಿಜಾರಿನ ಪ್ರದೇಶಕ್ಕೆ ಉರುಳಿದ ಬಸ್, ಏಳು ಮಂದಿ ಭಾರತೀಯರು ಸಾವು

ಗೂರ್ಖಾ, ಮಾರ್ಚ್​ 15: ನೇಪಾಳ(Nepal)ದಲ್ಲಿ ಮನಕಾಮನಾ ದೇವಸ್ಥಾನದಿಂದ ಹಿಂದಿರುಗುವಾಗ ಭಾರತೀಯರಿದ್ದ ಬಸ್ ರಸ್ತೆಯಿಂದ ಇಳಿಜಾರಿನ ಪ್ರದೇಶಕ್ಕೆ ಉರುಳಿಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೇಪಾಳದಗೂರ್ಖಾದ ಶಾಹಿದ್ ಲಖನ್ ಗ್ರಾಮೀಣ ಪುರಸಭೆ -3 ರ ಕಾಂಟಾರ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮನಕಾಮನಾದಿಂದ ಮಜುವಾ ಕಡೆಗೆ ಬರುತ್ತಿದ್ದ ಮೈಕ್ರೋಬಸ್ (ಬಾಗ್ಮತಿ ಪ್ರಾಂತ್ಯ 006 ಖಾ 8430) ರಸ್ತೆಯಿಂದ ಸುಮಾರು 200 ಮೀಟರ್ ದೂರಕ್ಕೆ ಉರುಳಿಬಿದ್ದಿದೆ. ಬಸ್ಸಿನಲ್ಲಿ 16 ಜನರಿದ್ದರು. ಮನಕಾಮನಾ ದೇವಸ್ಥಾನಕ್ಕೆ ಭೇಟಿ ನೀಡಿ…

Read More

ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್

ಜೋಗಿ ಪ್ರೇಮ್ (Jogi Prem) ನಿರ್ದೇಶನ ಮಾಡಿರುವ ‘ಕೆಡಿ’ ಚಿತ್ರದಿಂದ ಹೊಸ ಹಾಡನ್ನು ರಿಲೀಸ್ ಮಾಡಲಾಗಿದೆ. ಈ ಕಾರ್ಯಕ್ರಮದ ನಿರೂಪಣೆಯನ್ನು ಅನುಶ್ರೀ ಮಾಡಿದ್ದಾರೆ. ಈ ವೇಳೆ ವೇದಿಕೆಗೆ ಬಂದ ಪ್ರೇಮ್ ಅವರು ಅನುಶ್ರೀ ಬಳಿ ಕೈ ಮುಗಿದು ಕ್ಷಮೆ ಕೇಳಿದರು. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ತಿಳಿಸಿದರು. ‘ಅನುಶ್ರೀ ಅವರ ಮದುವೆಗೆ ನಾನು ಹೋಗಿರಲಿಲ್ಲ. ಅದಕ್ಕೆ ಇಲ್ಲಿಯೇ ಕ್ಷಮೆ ಕೇಳುತ್ತೇನೆ. ದಯವಿಟ್ಟು ಕ್ಷಮೆ ಇರಲಿ’ ಎಂದು ಪ್ರೇಮ್ ಹೇಳಿದರು. ಆ ಮಾತಿಗೆ ಅನುಶ್ರೀ (Anushree) ನಕ್ಕರು….

Read More

ಬೆಂಗಳೂರಿನಲ್ಲಿ ತಿಂಗಳಿಗೆ 1.5 ಲಕ್ಷ ರೂ. ಸಂಬಳ, ಉಳಿಯೋದು 20 ಸಾವಿರ ಮಾತ್ರ! ಟೆಕ್ಕಿ ಸಂಬಂಧಿಯ ಪೋಸ್ಟ್ ವೈರಲ್

ಬೆಂಗಳೂರು, ಮಾರ್ಚ್ 15: ಬೆಂಗಳೂರಿನಲ್ಲಿ (Bangalore) ಜೀವನ ನಿರ್ವಹಣೆ ವೆಚ್ಚ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂಬುದನ್ನು ತೋರಿಸುವ ಒಂದು ಸಾಮಾಜಿಕ ಮಾಧ್ಯಮ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಪಡೆದರೂ ತಿಂಗಳ ಕೊನೆಯಲ್ಲಿ ಕೇವಲ 15 ರಿಂದ 20 ಸಾವಿರ ರೂ. ಮಾತ್ರ ಉಳಿಯುತ್ತದೆ ಎಂಬ ಟೆಕ್ಕಿಯೊಬ್ಬರ ಅನುಭವವನ್ನು ಅವರ ಸೋದರ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ನೆಟ್ಟಿಗರ ಗಮನ ಸೆಳೆದಿದೆ. @AlfinCodes ಎಂಬ ಎಕ್ಸ್​ ಖಾತೆಯಲ್ಲಿ ವ್ಯಕ್ತಿಯೊಬ್ಬರು ಸೋದರಸಂಬಂಧಿಯ…

Read More

ಟಿ20 ವಿಶ್ವಕಪ್​ ಗೆದ್ದರೂ ಗಂಭೀರ್ ‘ಕೋಚ್’ ಸ್ಥಾನಕ್ಕೆ ಕುತ್ತು..!

ವೈಟ್ ಬಾಲ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಪಾರುಪತ್ಯ ಮುಂದುವರೆದಿದೆ. ಅದು ಸಹ ಗೌತಮ್ ಗಂಭೀರ್ ಕೋಚಿಂಗ್​ನಲ್ಲಿ. 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿ ಗೆದ್ದಿದ್ದ ಟೀಮ್ ಇಂಡಿಯಾ ಇದೀಗ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಎರಡು ಸಾಧನೆಗಳ ಹೊರತಾಗಿಯೂ ಗೌತಮ್ ಗಂಭೀರ್ ಅವರ ಕೋಚಿಂಗ್ ಸ್ಥಾನದ ಮೇಲೆ ತೂಗುಗತ್ತಿ ಇರುವುದು ಖಚಿತವಾಗಿದೆ. ಅಂದರೆ ಭಾರತ ಟೆಸ್ಟ್ ತಂಡದ ಕೋಚ್ ಬದಲಾಗುವ ಸಾಧ್ಯತೆಯಿದೆ. ಜೂನ್ 2024 ರಲ್ಲಿ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್…

Read More