ತಂದೆ ಜೀವ ಉಳಿಸಲು ಲಿವರ್ ದಾನ ಮಾಡಿದ ಪುತ್ರಿ; ಆಸ್ಪತ್ರೆ ಬಿಲ್ ಭರಿಸಲಾಗದೆ ಸಂಕಷ್ಟದಲ್ಲಿ ತಂದೆ-ಮಗಳು!
ದಾವಣಗೆರೆ, ಮಾರ್ಚ್ 15: ಜಿಲ್ಲೆಯ ಆಹಾರ ಇಲಾಖೆಯ ಶಿರಸ್ತೆದಾರ ಅಜ್ಜಪ್ಪ ಅವರ ಕುಟುಂಬ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ತಂದೆಯ ಜೀವ ಉಳಿಸಲು ಪುತ್ರಿಯೊಬ್ಬಳು ಲಿವರ್ ದಾನ (Organ Donation) ಮಾಡಿದರೂ, ಚಿಕಿತ್ಸಾ ವೆಚ್ಚ ಹೆಚ್ಚಾಗಿ ಕುಟುಂಬ ಆತಂಕದಲ್ಲಿದೆ. ಅಜ್ಜಪ್ಪ ಅವರು ಅಂಗಾಂಗ ವೈಫಲ್ಯದಿಂದ ಗಂಭೀರವಾಗಿ ಅಸ್ವಸ್ಥರಾಗಿದ್ದ ಹಿನ್ನೆಲೆಯಲ್ಲಿ, ಅವರ ಪುತ್ರಿ ಚಂದನಾ ತಮ್ಮ ಲಿವರ್‌ನ ಒಂದು ಭಾಗವನ್ನು ದಾನ ಮಾಡಿದ್ದರು. ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಚಂದನಾ ತಂದೆಯ ಜೀವ ಉಳಿಸಲು ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಕೈಕೊಟ್ಟ ಸಂಜೀವಿನಿ…