ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ ಸ್ಥಿತಿ ಗಂಭೀರ: ಹೆಚ್ಚಿದೆ ಶ್ವಾಸಕೋಶದ ಸೋಂಕು
ಖ್ಯಾತ ಯೂಟ್ಯೂಬರ್ ಹಾಗೂ ಬಿಗ್ ಬಾಸ್ 17ರ ಸ್ಪರ್ಧಿ ಅನುರಾಗ್ ದೊಭಾಲ್ (Anurag Dobhal) ಅಲಿಯಾಸ್ ಯುಕೆ 07 ರೈಡರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇತ್ತೀಚೆಗಷ್ಟೇ ಅವರನ್ನು ಐಸಿಯುನಿಂದ ಹೊರತಂದು ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಆದರೆ ಈಗ ಅವರನ್ನು ಮತ್ತೆ ಐಸಿಯುಗೆ (ICU) ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಅಪಘಾತಕ್ಕೀಡಾಗಿದ್ದ ಅವರ ಶ್ವಾಸಕೋಶದಲ್ಲಿ ತೀವ್ರ ಸೋಂಕು ಕಾಣಿಸಿಕೊಂಡಿರುವುದೇ ಇದಕ್ಕೆ ಕಾರಣ ಎಂದು ಅವರ ಮ್ಯಾನೇಜರ್ ತಿಳಿಸಿದ್ದಾರೆ. ಅನುರಾಗ್ ಅವರ ಮ್ಯಾನೇಜರ್ ರೋಹಿತ್ ಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ…