All posts by nagaraj11081993

ಮೈದಾನದಲ್ಲೇ ಕುಸಿದು ಬಿದ್ದು ಪ್ರಾಣ ಚೆಲ್ಲಿದ ಕ್ಯಾಪಿಟಲ್ಸ್ ತಂಡದ ಕೋಚ್ – Kannada News | BPL Tragedy: Dhaka Capitals Coach Mahbub Zaki Dies of Heart Attack Before Match

2025-26ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ (BPL) ಮೂರನೇ ಪಂದ್ಯ ಢಾಕಾ ಕ್ಯಾಪಿಟಲ್ಸ್ ಹಾಗೂ ರಾಜ್‌ಶಾಹಿ ರಾಯಲ್ಸ್ ನಡುವೆ ಸಿಲ್ಹೆಟ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನವೇ ಮೈದಾನದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೈದಾನದಲ್ಲಿ ಪಂದ್ಯ ಪೂರ್ವ ತಯಾರಿ ನಡೆಸುತ್ತಿದ್ದಾಗ ಢಾಕಾ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಮಹಬೂಬ್ ಅಲಿ ಝಾಕಿ (Mahbub Ali Zaki) ಹಠಾತ್ತನೆ ಅಸ್ವಸ್ಥರಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅವರನ್ನು ಉಳಿಸಲಾಗಲಿಲ್ಲ.

ಢಾಕಾ ಕ್ಯಾಪಿಟಲ್ಸ್ ಕೋಚ್‌ಗೆ ಹೃದಯಾಘಾತ ​

ಹೃದಯಾಘಾತದಿಂದ ಮೆಹಬೂಬ್ ಅಲಿ ಝಾಕಿ ಮೈದಾನದಲ್ಲಿಯೇ ಹಠಾತ್ತನೆ ಕುಸಿದು ಬಿದ್ದರು. ಝಾಕಿ ಅವರನ್ನು ತಕ್ಷಣವೇ ಸಿಪಿಆರ್ ನೀಡಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ಫ್ರಾಂಚೈಸಿ ಝಾಕಿ ಅವರು ಪ್ರಸ್ತುತ ಐಸಿಯುನಲ್ಲಿದ್ದಾರೆ ಎಂದಿತ್ತು . ತಂಡವು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಝಾಕಿ ಅಭ್ಯಾಸದ ಸಮಯದಲ್ಲಿ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ಕುಸಿದು ಬಿದ್ದರು. ಅವರಿಗೆ ತಕ್ಷಣ ಮೈದಾನದಲ್ಲಿ ವೈದ್ಯಕೀಯ ನೆರವು ನೀಡಲಾಯಿತು. ಸಿಪಿಆರ್ ನೀಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆಯ ಬಳಿಕ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದಿತ್ತು. ಆದಾಗ್ಯೂ, ಸ್ವಲ್ಪ ಸಮಯದ ನಂತರ, ಫ್ರಾಂಚೈಸಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ, ‘ಮೆಹಬೂಬ್ ಅಲಿ ಝಾಕಿ ನಿಧನರಾಗಿದ್ದಾರೆ ಎಂಬ ಪೋಸ್ಟ್ ಅನ್ನು ಹಂಚಿಕೊಂಡಿದೆ.

ಢಾಕಾ ಕ್ಯಾಪಿಟಲ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ‘ಢಾಕಾ ಕ್ಯಾಪಿಟಲ್ಸ್ ಕುಟುಂಬದ ಪ್ರೀತಿಯ ಸಹಾಯಕ ತರಬೇತುದಾರ ಹೃದಯ ಕಾಯಿಲೆಯಿಂದ ನಿಧನರಾಗಿದ್ದಾರೆ ಎಂದು ತಿಳಿಸಲು ನಮಗೆ ತುಂಬಾ ದುಃಖವಾಗುತ್ತಿದೆ . ಈ ಸರಿಪಡಿಸಲಾಗದ ನಷ್ಟದಿಂದ ನಾವು ತುಂಬಾ ದುಃಖಿತರಾಗಿದ್ದೇವೆ . ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ನಮ್ಮ ಹೃತ್ಪೂರ್ವಕ ಸಂತಾಪಗಳು’ ಎಂದು ಬರೆದುಕೊಂಡಿದೆ.

ಬಾಂಗ್ಲಾದೇಶ ಕ್ರಿಕೆಟ್‌ಗೆ ಮಹತ್ವದ ಕೊಡುಗೆ

ಮಹಬೂಬ್ ಅಲಿ ಝಾಕಿ ಬಾಂಗ್ಲಾದೇಶ ಕ್ರಿಕೆಟ್‌ನ ದೀರ್ಘಕಾಲೀನ ಸದಸ್ಯರಾಗಿದ್ದರು ಮತ್ತು ಹಲವಾರು ಆಟಗಾರರಿಗೆ ಮಾರ್ಗದರ್ಶಕರಾಗಿದ್ದರು . ಈ ಘಟನೆಯು ಇಡೀ ತಂಡ ಮತ್ತು ಕ್ರಿಕೆಟ್ ಜಗತ್ತನ್ನು ಆಘಾತಗೊಳಿಸಿದೆ. ಅವರು 2020 ರ ಐಸಿಸಿ ಅಂಡರ್-19 ವಿಶ್ವಕಪ್ ಗೆದ್ದ ಬಾಂಗ್ಲಾದೇಶ ತಂಡದ ತರಬೇತುದಾರರ ಭಾಗವಾಗಿದ್ದರು, ಇದು ಬಾಂಗ್ಲಾದೇಶದ ಮೊದಲ ಮತ್ತು ಏಕೈಕ ಐಸಿಸಿ ಟ್ರೋಫಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ: ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ? – Kannada News | Karnataka Power Tussle: Rahul Gandhi to final DK Shivakumar And Siddaramaiah power Sharing after Sankranthi

ನವದೆಹಲಿ, ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಸಿಎಂ ಕುರ್ಚಿ ಚರ್ಚೆ ಜೀವಂತವಿದೆ. ಹೈಕಮಾಂಡ ಹೇಳಿದಂತೆ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್  (DK Shivakumar)ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದರೂ ಸಹ​ ಈ ಬೆಳವಣಿಗೆ ಯಾವ ವಿರಾಮವೂ ಬಿದ್ದಿಲ್ಲ. ಹೀಗಾಗಿ ಇವತ್ತಿನ ಸಿಎಂ ಸಿದ್ದರಾಮಯ್ಯರ ದೆಹಲಿ ಪ್ರವಾಸ ಕಾಂಗ್ರೆಸ್ ಪಾಲಿಗೆ ಕುತೂಹಲದ ವಿಚಾರ. ವಿಷಯ ಅಂದ್ರೆ ಇಂದು (ಡಿಸೆಂಬರ್ 27) ದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಘಟಾನುಘಟಿ ಹೈಕಮಾಂಡ್ ನಾಯಕರು ಭಾಗವಹಿಸಿದ್ದರು. ಇದೇ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಇದ್ದು, ಈ ವೇಳೆ ರಾಜ್ಯ ಕಾಂಗ್ರೆಸ್​​ನಲ್ಲಿನ ಬೆಳವಣಿಗೆಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರ ಕಿವಿಗೆ ಹಾಕಿದ್ದಾರೆ. ಈ ಮೂಲಕ ಗೊಂದಲ ನಿವಾರಿಸಿಕೊಳ್ಳಲು ಯತ್ನಿಸಿದರಾದರೂ ಅದು ಸಾಧ್ಯವಾಗಿಲ್ಲ.

ಹೌದು…ಸಿಡಬ್ಲ್ಯೂ ಸಭೆಯಲ್ಲಿಂದು ಸಿಎಂ ಸಿದ್ದರಾಮಯ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚೆ ನಡೆಸಿದ್ದು, ಈ ವೇಳೆ ವೇಣುಗೋಪಾಲ್ ಜನವರಿಯಲ್ಲಿ ಬಂದು ಭೇಟಿ ಆಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯರ ದೆಹಲಿ ಭೇಟಿ ಕೇವಲ CWC ಸಭೆಗಷ್ಟೇ ಸೀಮಿತವಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ಸಂಕ್ರಾಂತಿಗೆ ರಾಜಕೀಯ ಕ್ರಾಂತಿ ಆಗುತ್ತಾ?

ಅಷ್ಟಕ್ಕೂ ವಿಷಯ ಅಂದ್ರೆ, ರಾಜ್ಯದ ಸಿಎಂ ಕುರ್ಚಿ ತೀರ್ಮಾನ ಸದ್ಯ ರಾಹುಲ್ ಗಾಂಧಿ ಬತ್ತಳಿಕೆಯಲ್ಲಿದೆ. ಎಲ್ಲದಕ್ಕೂ ಲೋಕಸಭೆ ವಿಪಕ್ಷ ನಾಯಕನಿಂದ್ಲೇ ಉತ್ತರ ಸಿಗಬೇಕಿದೆ. ಆದರೆ ರಾಹುಲ್ ಗಾಂಧಿ ನಾಳೆ (ಡಿಸೆಂಬರ್ 28) ರಾತ್ರಿ ರಾಹುಲ್ ಗಾಂಧಿ ವಿದೇಶಕ್ಕೆ ತೆರಳುತ್ತಿದ್ದು, ಜನವರಿ 9ರಂದು ಭಾರತಕ್ಕೆ ಮರಳಲಿದ್ದಾರೆ. ಆ ಬಳಿಕ ಕರ್ನಾಟಕ ಸಿಎಂ ಕುರ್ಚಿ ಕದನ ಬ್ರೇಕ್ ಬೀಳಲಿದ್ದು, ಸಿಎಂ ಬದಲಾವಣೆ ಆಗುತ್ತಾರಾ? ಅಥವಾ ಸಿದ್ದರಾಮಯ್ಯ ಬಾಕಿ ಎರಡು ವರ್ಷ ಪೂರ್ಣಗೊಳಿಸುತ್ತಾರಾ ಎಂಬುದು ಗೊತ್ತಾಗಲಿದೆ. ಹೀಗಾಗಿ ರಾಹುಲ್ ಗಾಂಧಿ ವಾಪಾಸಾದ ಬಳಿಕ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ವಿಚಾರಕ್ಕಾಗಿ ದೆಹಲಿಗೆ ತೆರಳಲಿದ್ದಾರೆ. ಅಷ್ಟೇ ಅಲ್ಲದೇ ಸಿಎಂ ಹಾಗೂ ಡಿಸಿಎಂ ಸೇರಿದಂತೆ ಉಭಯ ಬಣದ ನಾಯಕರು ಈ ವೇಳೆ ದೆಹಲಿ ಯಾತ್ರೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಜನವರಿ 15ರ ಬಳಿಕ ರಾಜ್ಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗುವ ಮುನ್ಸೂಚನೆ ಸಿಕ್ಕಿದೆ.

ಹೈಕಮಾಂಡ್ ಮನವೊಲಿಕೆಗೆ ಡಿಕೆಶಿ ಯತ್ನ

ಇನ್ನೊಂದೆಡೆ ಡಿಕೆ ಶಿವಕುಮಾರ್, ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿಕೊಂಡು ಮುನ್ನಡೆಯುತ್ತಿದ್ದಾರೆ. ಇನ್ನು ರಾಹುಲ್ ಗಾಂಧಿಗೆ ಸಿದ್ದರಾಮಯ್ಯನವರನ್ನ ಮುಂದುವರೆಸುವ ಮನಸ್ಸಿದೆ. ಇತ್ತ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ಡಿಕೆಶಿಯನ್ನು ಸಿಎಂ ಮಾಡಬೇಕೆನ್ನುವ ಮನಸ್ಸಿದ. ಹೀಗಾಗಿ ಡಿಕೆ ಶಿವಕುಮಾರ್, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಮೂಲಕ ರಾಹುಲ್ ಗಾಂಧಿ ಮನವೊಲಿಸುವ ಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಕರ್ನಾಟಕ ಸಿಎಂ ಕುರ್ಚಿ ಕದನ ತೀವ್ರ ಕುತೂಹಲ ಮೂಡಿಸಿದ್ದು, ಅಂತಿಮವಾಗಿ ರಾಹುಲ್ ಗಾಂಧಿ  ಒಲವು ತೋರುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ. ಒಂದು ವೇಲೆ ಸಿಎಂ ಬದಲಾವಣೆ ಆದರೂ ಆಗದಿದ್ದರೂ ರಾಜಕೀಯ ಆಟ ಶುರುವಾಗುವುದು ಗ್ಯಾರಂಟಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗೋಮಾಂಸ ಸಾಗಿಸುವಾಗ ತಡೆದು ನೈತಿಕ ಪೊಲೀಸ್​ಗಿರಿ: ಮಗಳನ್ನು ಬಿಟ್ಟು ಓಡಿಹೋದ ತಂದೆ – Kannada News | Moral Policing in Dakshina Kannada: Man Assaulted After Being Stopped While Transporting Beef

ಮಂಗಳೂರು, ಡಿಸೆಂಬರ್​ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ (Moral Policing) ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ (Mangaluru) ಮಳಲಿ-ನಾರ್ಲಪದವು ರಸ್ತೆಯಲ್ಲಿ ಘಟನೆ ನಡೆದಿದೆ. ಗೋಮಾಂಸ ಸಾಗಣೆ ಹಿನ್ನೆಲೆ ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರ ವಿರುದ್ಧ ಬಜ್ಪೆ ಠಾಣೆಯಲ್ಲಿ ಸ್ವತಂಪ್ರೇರಿತ ಕೇಸ್ ದಾಖಲಾಗಿದೆ.

ನಡೆದದ್ದೇನು?

ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರು ಗೋಮಾಂಸ ಸಾಗಟಕ್ಕೆ ತಮ್ಮ 11 ವರ್ಷದ ಮಗಳನ್ನು ಬಳಕ್ಕೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ ಮಳಲಿ-ನಾರ್ಲಪದವು ರಸ್ತೆಯಲ್ಲಿ ಗೋಮಾಂಸ ಸಾಗಿಸುವಾಗ ಟಾಟಾ ಸುಮೊದಲ್ಲಿ ಚೇಸ್​ ಮಾಡಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಅಬ್ದುಲ್​​ರನ್ನು ತಡೆದು ಸುಮಿತ್ ಬಂಡಾರಿ ಮತ್ತು ರಜತ್ ನಾಯ್ಕ್​ರಿಂದ ನೈತಿಕ ಪೊಲೀಸ್​ಗಿರಿ ಮೆರೆಯಲಾಗಿದೆ.

ಇದನ್ನೂ ಓದಿ: ಕೋಳಿ ಅಂಕ: ಕಾಂಗ್ರೆಸ್ ಶಾಸಕ ಆಯ್ತು ಈಗ ಬಿಜೆಪಿ ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಸೇರಿ 27 ಜನರ ವಿರುದ್ಧ ಕೇಸ್

ದ್ವಿಚಕ್ರ ವಾಹನ ಬಿದ್ದಾಗ ಸೈಲೆನ್ಸರ್ ಟಚ್ ಆಗಿದ್ದರಿಂದ ಬಾಲಕಿಗೆ ಗಾಯವಾಗಿದೆ. ದ್ವಿಚಕ್ರ ವಾಹನ ಮತ್ತು ಮಗಳನ್ನು ಬಿಟ್ಟು ಅಬ್ದುಲ್ ಸತ್ತಾರ್ ಓಡಿಹೋಗಿದ್ದಾರೆ. ಅಬ್ದುಲ್ ಸತ್ತಾರ್ ಪುತ್ರಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ತಂದೆ ಮೇಲೆ ಹಲ್ಲೆ ಮಾಡಿದರು ಎಂದು ಪುತ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಈ ಹಿನ್ನೆಲೆ  ಸುಮಿತ್ ಮತ್ತು ರಜತ್ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ

ಇನ್ನು ಇತ್ತೀಚೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿಯೊಂದು ನಡೆದಿತ್ತು. ಅದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗೆ ಕಾರಣವಾಗಿತ್ತು. ಮುಸ್ಲಿಂ ಯುವತಿಯೊಬ್ಬಳು ಅನ್ಯಕೋಮಿನ ಯುವಕನ ಜೊತೆ ಬೈಕ್​ನಲ್ಲಿ ಬರುತ್ತಿದ್ದ ವೇಳೆ ಮತ್ತೊಂದು ಬೈಕ್​ನಲ್ಲಿ ಬಂದ ಇಬ್ಬರು ಯುವಕರು ರಾಮನಗರ ತಾಲೂಕಿನ ಬೈರಮಂಗಲ ಗ್ರಾಮದ ಬಳಿ ತಡೆದು ನೀವು ಯಾರು? ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು. ನಂತರ ಬೈಕ್‌ನಿಂದ ಯುವತಿಯನ್ನ ಇಳಿಸಿ ಬೆದರಿಕೆ ಕೂಡ ಹಾಕಿದ್ದರು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ಇತ್ತೀಚೆಗೆ ವಿಜಯಲಕ್ಷ್ಮೀ ಅವರು ‘ಕ್ಲಾಸ್ ಫ್ಯಾನ್ಸ್’ ಎಂದು ಉಲ್ಲೇಖಿಸಿ ಪೋಸ್ಟ್ ಒಂದನ್ನು ಹಾಕಿದ್ದರು. ಈ ವಿಷಯದ ಬಗ್ಗೆ ಕೇಳಿದಾಗ, ‘ಕಪಾಳಕ್ಕೆ ಹೊಡೆದರೆ ಹೊಡೆಸಿಕೊಳ್ಳುವಷ್ಟು ಒಳ್ಳೆಯವನು ನಾನಲ್ಲ. ನಾನು ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡಿಕೊಳ್ಳೋಕೆ ಅಲ್ಲ, ನಟನೆ ಮಾಡೋಕೆ’ ಎಂದು ಸುದೀಪ್ ಹೇಳಿದರು. ‘ಯಾವುದು ಸರಿ ಎಂಬುದಕ್ಕೆ ನಾನು ನಿಲ್ಲುತ್ತೇನೆ’ ಎಂದು ಹೇಳಿದರು ಕಿಚ್ಚ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Ashes: ಪ್ರತಿಷ್ಠಿತ ಆಶಸ್ ಸರಣಿಯಿಂದ ಕ್ರಿಕೆಟ್ ಆಸ್ಟ್ರೇಲಿಯಾಕ್ಕೆ 90 ಕೋಟಿ ರೂ. ನಷ್ಟ – Kannada News | Ashes Loss: Cricket Australia Faces 60 Cr Hit After Quick Melbourne Test

ಆಶಸ್ ಸರಣಿಯನ್ನು 3-1 ಅಂತರದಿಂದ ಆಸ್ಟ್ರೇಲಿಯಾ ತಂಡ ವಶಪಡಿಸಿಕೊಂಡಿದೆಯಾದರೂ, ನಾಲ್ಕನೇ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್‌ ತಂಡ ಕೇವಲ ಎರಡೇ ದಿನಗಳಲ್ಲಿ ಗೆದ್ದುಕೊಂಡಿತು. ಈ ಮೂಲಕ ಸುಮಾರು 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಸಾಧನೆಯನ್ನು ಇಂಗ್ಲೆಂಡ್ ಮಾಡಿತ್ತು. ಈ ಫಲಿತಾಂಶವು ಸರಣಿಯ ಮೇಲೆ ಪರಿಣಾಮ ಬೀರದಿದ್ದರೂ, ಮೆಲ್ಬೋರ್ನ್ ಟೆಸ್ಟ್ ಆಸ್ಟ್ರೇಲಿಯಾ ಕ್ರಿಕೆಟ್‌ಗೆ ಎರಡೆರಡು ಆಘಾತಗಳನ್ನು ನೀಡಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಸೋತಿದ್ದು ಮಾತ್ರವಲ್ಲದೆ, ಕ್ರಿಕೆಟ್ ಆಸ್ಟ್ರೇಲಿಯಾಗೆ ಕೋಟಿ ಕೋಟಿ ರೂ. ನಷ್ಟವುಂಟಾಗಿದೆ.

ಡಿಸೆಂಬರ್ 26, ಶುಕ್ರವಾರದಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಕೇವಲ ಎರಡು ದಿನಗಳಲ್ಲಿ ಮುಕ್ತಾಯವಾಯಿತು. ಪಂದ್ಯದ ಎರಡನೇ ದಿನದಂದು ಇಂಗ್ಲೆಂಡ್ ಕೇವಲ ಆರು ವಿಕೆಟ್‌ಗಳನ್ನು ಕಳೆದುಕೊಂಡು 175 ರನ್‌ಗಳ ಗುರಿ ಮುಟ್ಟಿತು. ಮೇಲೆ ಹೇಳಿದಂತೆ 15 ವರ್ಷಗಳ ನಂತರ ಆಸ್ಟ್ರೇಲಿಯಾದಲ್ಲಿ ಇಂಗ್ಲೆಂಡ್ ತಂಡದ ಮೊದಲ ಟೆಸ್ಟ್ ಜಯವಾಗಿದೆ. ಈ ಸೋಲಿನ ಹೊರತಾಗಿಯೂ, ಆಸ್ಟ್ರೇಲಿಯಾ ಆಶಸ್ ಸರಣಿಯನ್ನು ತನ್ನಲ್ಲಿಯೇ ಉಳಿಸಿಕೊಂಡಿತ್ತಾದರೂ, ಕ್ರಿಕೆಟ್ ಮಂಡಳಿಗೆ ಸುಮಾರು 60 ಕೋಟಿ ರೂ. ನಷ್ಟವುಂಟಾಗಿದೆ.

ಕ್ರಿಕೆಟ್ ಮಂಡಳಿಗೆ ಕೋಟಿ ನಷ್ಟ

ವಾಸ್ತವವಾಗಿ, ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ಆಸ್ಟ್ರೇಲಿಯಾಕ್ಕೆ ವರ್ಷದ ಅತ್ಯಂತ ಪ್ರಮುಖ ಪಂದ್ಯವಾಗಿದ್ದು, ಅತಿ ಹೆಚ್ಚು ಪ್ರೇಕ್ಷಕರನ್ನು ಆಕರ್ಷಿಸುತ್ತದೆ. ಈ ವರ್ಷವೂ ಅದೇ ರೀತಿ ನಡೆಯಿತು, ಮೊದಲ ದಿನದಂದು 94,000 ಕ್ಕೂ ಹೆಚ್ಚು ಪ್ರೇಕ್ಷಕರು ಎಂಸಿಜಿಗೆ ಆಗಮಿಸಿದ್ದರು. ಎರಡು ದಿನಗಳಲ್ಲಿ ಒಟ್ಟು 186,000 ಕ್ಕೂ ಹೆಚ್ಚು ಅಭಿಮಾನಿಗಳು ಪಂದ್ಯ ವೀಕ್ಷಿಸಿದ್ದರು. ಮೂರನೇ ಮತ್ತು ನಾಲ್ಕನೇ ದಿನಗಳಲ್ಲಿ ಇದೇ ರೀತಿಯ ಜನಸಂದಣಿಯನ್ನು ನಿರೀಕ್ಷಿಸಲಾಗಿತ್ತು, ಆದರೆ ಪಂದ್ಯದ ಆರಂಭಿಕ ಅಂತ್ಯವು ಈ ಎರಡು ದಿನಗಳ ಟಿಕೆಟ್‌ಗಳನ್ನು ರದ್ದುಗೊಳಿಸಿತು.

ಪಂದ್ಯದ ಎರಡು ದಿನಗಳ ಮುಕ್ತಾಯವು ಟಿಕೆಟ್ ಮಾರಾಟದ ಮೇಲೆ ಮಾತ್ರವಲ್ಲದೆ, ಪ್ರಸಾರ ಹಕ್ಕುಗಳು, ಜಾಹೀರಾತು ಮತ್ತು ಇತರ ಮೂಲಗಳಿಂದ ಬರುವ ಆದಾಯದ ಮೇಲೂ ಪರಿಣಾಮ ಬೀರಿತು, ಇದು ಈಗಾಗಲೇ ಆರ್ಥಿಕ ನಷ್ಟದಿಂದ ಬಳಲುತ್ತಿರುವ ಆಸ್ಟ್ರೇಲಿಯಾ ಮಂಡಳಿಗೆ ಗಮನಾರ್ಹ ಹೊಡೆತವನ್ನು ನೀಡಿತು. ಒಂದು ಅಂದಾಜಿನ ಪ್ರಕಾರ, ಮೆಲ್ಬೋರ್ನ್ ಟೆಸ್ಟ್‌ನಿಂದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಸುಮಾರು 10 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್‌ಗಳು ಅಥವಾ ಸುಮಾರು 60 ಕೋಟಿ ರೂ. ನಷ್ಟವನ್ನು ಅನುಭವಿಸಲಿದೆ.

4 ದಿನಗಳಲ್ಲಿ 90 ಕೋಟಿ ರೂ. ನಷ್ಟ

ಈ ಸರಣಿಯಲ್ಲಿ ಎರಡನೇ ಬಾರಿಗೆ ಇಂತಹ ಪರಿಸ್ಥಿತಿಯನ್ನು ಎದುರಿಸುತ್ತಿರುವುದರಿಂದ ಇದು ಕ್ರಿಕೆಟ್ ಆಸ್ಟ್ರೇಲಿಯಾಗೆ ದೊಡ್ಡ ಹಿನ್ನಡೆಯಾಗಿದೆ. ಹಿಂದಿನ ಪರ್ತ್ ಟೆಸ್ಟ್ ಪಂದ್ಯದಲ್ಲೂ ಇದೇ ರೀತಿಯ ಪರಿಸ್ಥಿತಿ ಉಂಟಾಗಿತ್ತು. ಆಶಸ್ ಸರಣಿಯ ಮೊದಲ ಪಂದ್ಯವೂ ಕೇವಲ ಎರಡು ದಿನಗಳಲ್ಲಿ ಕೊನೆಗೊಂಡಿತು. ಆಸ್ಟ್ರೇಲಿಯಾ ಆ ಪಂದ್ಯವನ್ನು ಗೆದ್ದಿತು, ಆದರೆ ಎರಡು ದಿನಗಳಲ್ಲಿ ಆಟ ಕೊನೆಗೊಂಡಿದ್ದರಿಂದ ಮಂಡಳಿಯ ಆದಾಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿತು, ಇದರ ಪರಿಣಾಮವಾಗಿ ಸರಿಸುಮಾರು 5 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್‌ಗಳು ಅಥವಾ ಸರಿಸುಮಾರು 30 ಕೋಟಿ ರೂ. ನಷ್ಟವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ? ಉತ್ತರಿಸಿದ ಹೀರೋ – Kannada News | Naveen Chandra Explain how She speaks Kannada fluently

ಕಿಚ್ಚ ಸುದೀಪ್ ಅವರು ‘ಮಾರ್ಕ್​’ ಚಿತ್ರದ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಸಿನಿಮಾದಲ್ಲಿ ತಮಿಳು ನಟ ನವೀನ್ ಚಂದ್ರ ಅವರು ನಟಿಸಿದ್ದಾರೆ. ಅವರಿಗೆ ಸುದೀಪ್ ಅವರ ಜೊತೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ನವೀನ್ ಚಂದ್ರ ಉತ್ತಮವಾಗಿ ಕನ್ನಡ ಮಾತನಾಡುತ್ತಾರೆ. ಇದು ಹೇಗೆ ಎಂದು ಕೇಳಿದ್ದಕ್ಕೆ ಅವರು ಉತ್ತರಿಸಿದ್ದಾರೆ. ‘ನಾನು ಬಳ್ಳಾರಿ ಹುಡುಗ. ಕನ್ನಡದಲ್ಲೇ ನಾನು ಓದಿದ್ದು. ಆ ಬಳಿಕ ಒಂದು ಗ್ಯಾಪ್ ಆಯಿತು. ನಾನು ಕನ್ನಡದವರ ಜೊತೆ ಕನ್ನಡದಲ್ಲೇ ಮಾತನಾಡುತ್ತೇನೆ’ ಎಂದಿದ್ದಾರೆ ಅವರು.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತ ವಿರೋಧಿ ಶಕ್ತಿಗಳೊಂದಿಗೆ ರಾಹುಲ್ ಗಾಂಧಿ? ಜರ್ಮನಿಗೆ ಹೋಗಿದ್ದು ಯಾಕೆ? ಬಿಜೆಪಿ ಟೀಕೆ – Kannada News | Congress is part of Global Progressive Alliance, which support anti India narrative, alleges BJP

ನವದೆಹಲಿ, ಡಿಸೆಂಬರ್ 27: ರಾಹುಲ್ ಗಾಂಧಿ ಅವರು ಜರ್ಮನಿ ಪ್ರವಾಸಕ್ಕೆ ಹೋಗಿದ್ದಾಗ ಭಾರತ ವಿರೋಧಿ ಶಕ್ತಿಗಳ ಸಂಪರ್ಕದಲ್ಲಿದ್ದರು ಎಂದು ಬಿಜೆಪಿ ಆರೋಪಿಸಿದೆ. ಜರ್ಮನಿಯಲ್ಲಿ ನಡೆದ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಸಭೆಯಲ್ಲಿ ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಇದು ಭಾರತ ವಿರೋಧಿ ಧೋರಣೆಗಳಿರುವ ಸಂಘಟನೆಯಾಗಿದೆ ಎಂದು ಬಿಜೆಪಿ ಟೀಕಿಸಿದೆ. ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಈ ವಿಚಾರ ಪ್ರಸ್ತಾಪಿಸಿ, ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದೆ ಎಂದಿದ್ದಾರೆ.

‘ರಾಹುಲ್ ಗಾಂಧಿ ಅವರ ಸಲಹೆಗಾರ ಸ್ಯಾಮ್ ಪಿತ್ರೋಡಾ ಅವರು ಕಾಂಗ್ರೆಸ್ ಪಕ್ಷದ ನಿಜ ಮುಖವನ್ನು ತೋರಿಸಿದ್ದಾರೆ. ಕಾಂಗ್ರೆಸ್ ಗ್ಲೋಬಲ್ ಪ್ರೋಗ್ರೆಸಿವ್ ಅಲಾಯನ್ಸ್​ನ ಒಂದು ಭಾಗವಾಗಿರುವುದು, ಹಾಗೂ ಅದರ ಸಭೆಯಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಜರ್ಮನಿಗೆ ಹೋಗಿದ್ದು, ಈ ವಿಚಾರಗಳನ್ನು ಸ್ಯಾಮ್ ಪಿತ್ರೋಡಾ ನಿನ್ನೆ ಸಂದರ್ಶನದಲ್ಲಿ ತಿಳಿಸಿದ್ದಾರೆ’ ಎಂದು ಸುಧಾಂಶು ತ್ರಿವೇದಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿಯ ಸಂಘಟನಾ ಶಕ್ತಿ ಶ್ಲಾಘಿಸಿದ ಮಾಜಿ ಸಿಎಂ ದಿಗ್ವಿಜಯ ಸಿಂಗ್; ಕಾಂಗ್ರೆಸ್ಸನ್ನು ಕಿಚಾಯಿಸಿದ ಬಿಜೆಪಿ

‘ಭಾರತ ವಿರೋಧಿ ನಿಲುವು ಹೊಂದಿರುವ ಹಲವು ಸಂಘಟನೆಗಳ ಜಾಲದ ಭಾಗವಾಗಿರುವ ಸಂಘಟನೆಗೆ ಈ ಅಲಾಯನ್ಸ್ ಸಂಪರ್ಕ ಹೊಂದಿದೆ. ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಮತ್ತು ಕಾಂಗ್ರೆಸ್ ನಡುವೆ ಸಂಪರ್ಕ ಏನು ಎಂಬುದನ್ನು ಸ್ಯಾಮ್ ಪಿತ್ರೋಡ ತಿಳಿಸಿದ್ದಾರೆ. ಈ ಸಂಘಟನೆಯಲ್ಲಿ ಪಿತ್ರೋಡಾ ಸದಸ್ಯರಾಗಿದ್ದಾರೆ. ರಾಹುಲ್ ಗಾಂಧಿ ಅವರು ಅದರ ಪ್ರೆಸಿಡಿಯಂನಲ್ಲಿ (ಕಾರ್ಯಕಾರಿ ಸಮಿತಿ) ಇದ್ದಾರೆ. ಕಾಂಗ್ರೆಸ್ ಹೇಗೆ ಭಾರತ ವಿರೋಧಿ ಶಕ್ತಿಗಳ ಜೊತೆ ಕೈಜೋಡಿಸಿದೆ?’ ಎಂದು ಬಿಜೆಪಿ ಸಂಸದ ಪ್ರಶ್ನಿಸಿದ್ದಾರೆ.

ಸುಧಾಂಶು ತ್ರಿವೇದಿ ಮಾತನಾಡಿರುವುದು

‘ಕಾಂಗ್ರೆಸ್ ಈಗ ಮುಚ್ಚಿಡುವ ಪ್ರಯತ್ನವನ್ನೂ ಮಾಡುತ್ತಿಲ್ಲ. ಪ್ರಗತಿಪರತೆಯ ಹೆಸರಿನಲ್ಲಿ ವಿದೇಶಗಳಿಂದ ಫಂಡಿಂಗ್ ಪಡೆದ ವೈಚಾರಿಕ ಇಕೋಸಿಸ್ಟಂವೊಂದು ಭಾರತೀಯ ರಾಜಕಾರಣವನ್ನು ಇಷ್ಟು ಮುಕ್ತವಾಗಿ ಪ್ರಭಾವಿಸುತ್ತಿದೆಯಲ್ಲ. ಕಾಂಗ್ರೆಸ್ ಬಹಳ ಸಹಜವೆಂಬಂತೆ ಇದೆ. ಈ ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಯಾವಾಗ ಉತ್ತರಿಸುತ್ತಾರೆ?’ ಎಂದು ಬಿಜೆಪಿ ನಾಯಕ ಕೇಳಿದ್ದಾರೆ.

ಇತ್ತೀಚೆಗೆ ರಾಹುಲ್ ಗಾಂಧಿ ಅವರು ಜರ್ಮನಿಗೆ ಭೇಟಿ ನೀಡಿದ್ದರು. ಅಲ್ಲಿಯ ಬಿಎಂಡಬ್ಲ್ಯು ಕಾರ್ ಘಟಕದಲ್ಲಿದ್ದ ವಿಡಿಯೋವೊಂದನ್ನು ಹಂಚಿಕೊಂಡು, ಭಾರತದಲ್ಲಿ ಉತ್ಪಾದನಾ ವಲಯ ಕುಂಠಿತಗೊಂಡಿದೆ ಎಂದು ಹೇಳಿದ್ದರು. ಇದೇ ಜರ್ಮನಿಯಲ್ಲೇ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್​ನ ಮುಖ್ಯ ಕಚೇರಿ ಇರುವುದು.

ಇದನ್ನೂ ಓದಿ: ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ

2013ರಲ್ಲಿ ಜರ್ಮನಿಯ ಲೀಪ್ಜಿಗ್ ಎಂಬಲ್ಲಿ ಮೈತಳೆದ ಇದು ಅಂತಾರಾಷ್ಟ್ರೀಯ ಪ್ರಗತಿಪರ, ಸಾಮಾಜಿಕ, ಪ್ರಜಾತಾಂತ್ರಿಕ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳ ಮೈತ್ರಿಕೂಟವಾಗಿದೆ. ಅಮೆರಿಕದ ವಿಪಕ್ಷವಾದ ಡೆಮಾಕ್ರಾಟ್, ಬ್ರಿಟನ್​ನ ಲೇಬರ್ ಪಾರ್ಟಿ ಮೊದಲಾದ ರಾಜಕೀಯ ಪಕ್ಷಗಳು ಈ ಸಂಘಟನೆಯ ಭಾಗವಾಗಿವೆ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳೂ ಕೂಡ ಇದರ ಭಾಗ ಎಂದು ಹೇಳಲಾಗುತ್ತದೆ. ಸೋಷಿಯಲ್ಸ್ಟ್ ವಿಚಾರಧಾರೆ ಹೊಂದಿರುವ ಆದರೆ, ಪ್ರಜಾತಂತ್ರ ವ್ಯವಸ್ಥೆಯ ಮೇಲೆ ನಂಬಿಕೆ ಹೊಂದಿರುವ ಸಂಘಟನೆಗಳು ಈ ಅಲಾಯನ್ಸ್​ನ ಭಾಗವಾಗಬಹುದು ಎಂದೆನ್ನಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ? – Kannada News | A Married Man Commits Suicide For illicit affair Woman blackmail In Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 27): ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ  (Suicide) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಬಾಲಾಜಿ ಸಿಂಗ್ (30) ಮೃತ ದುರ್ದೈವಿ. ಬಾಲಾಜಿ ಸಿಂಗ್ ಗೆ ಮದುವೆಯಾಗಿ 8 ವರ್ಷ ಆಗಿದ್ದು, ಆರು ವರ್ಷದ ಮಗಳು ಇದ್ದಾಳೆ. ಆರ್ಥಿಕವಾಗಿ ಚನ್ನಾಗಿದ್ದ ಬಾಲಾಜಿ ಸಿಂಗ್, ತನ್ನದೆ ಕಾರುಗಳನ್ನು ಬಾಡಿಗೆಗೆ ಬಿಟ್ಟು ಅದರಿಂದ ಬರುವ ಹಣದಲ್ಲಿ ಪತ್ನಿ ಮಕ್ಕಳ ಜೊತೆ ಚನ್ನಾಗಿದ್ದ, ಆದ್ರೆ ಓರ್ವ ಮಹಿಳೆಯ ಸಹವಾಸ ಮಾಡಿ ಇದೀಗ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.

ಅನೈತಿಕ ಸಂಬಂಧವೇ ಪ್ರಾಣ ಬಲಿ ಪಡೆಯಿತಾ?

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ಇಂದು (ಡಿಸೆಂಬರ್ 27) ಬೆಳ್ಳಂಬೆಳಗ್ಗೆ ಬಾಲಾಜಿ ಸಿಂಗ್ ಎನ್ನುವ ವ್ಯಕ್ತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಬಾಲಾಜಿಗೆ ಈಗಾಗಲೇ ಮದುವೆಯಾಗಿ, ಮಗು ಸಹ ಇದೆ. ಹೀಗಿದ್ದೂ ಶಿಡ್ಲಘಟ್ಟ ಮೂಲದ ಮಹಿಳೆ ಜೊತೆ ಅಕ್ರಮ ಸಂಬಂಧ ಇತ್ತು. ಈ ವಿಷಯ ಬಾಲಾಜಿ ಸಿಂಗ್ ಪತ್ನಿಗೆ ಗೊತ್ತಾಗಿ ಗಲಾಟೆಗಳು ಆಗಿವೆ.  ಇದರಿಂದ ಬಾಲಾಜಿ ಮಹಿಳೆಯಿಂದ ದೂರವಾಗಿ ಪತ್ನಿ ಮಕ್ಕಳ ಜತೆ ಅರಾಮ್ ಇರಲು ಮುಂದಾಗಿದ್ದ. ಆದ್ರೆ, ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಮಾತ್ರ ಬಾಲಾಜಿಯನ್ನು ಬಿಡಲು ತಯಾರಿಲ್ಲ.ಬಾಲಾಜಿ ಸಿಂಗ್​ಗನ ಹನಿಟ್ರಾಪ್ ಮಾಡಿ ಬ್ಲಾಕ್ ಮೇಲ್ ಮಾಡ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಬಾಲಾಕಿ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: 40 ವರ್ಷದ ಅಂಕಲ್, 19ರ ಯುವತಿಯ ಪ್ರೀತಿ ಪ್ರೇಮ: ಪ್ರೇಮಲೋಕದಲ್ಲಿ ತೇಲಾಡುವಾಗಲೇ ನಡೆಯಿತು ಘನಘೋರ!

ಬಾಲಾಜಿ ಸಾವಿನ ಸುತ್ತ ಅನುಮಾನದ ಹುತ್ತ

ಬಾಲಾಜಿ ಸಿಂಗ್ ಜೊತೆ ಕೆಲವು ವರ್ಷಗಳಿಂದ ಆಕೆ ಪ್ರೀತಿ ಪ್ರೇಮ ಅಂತ ಇಬ್ಬರು ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಈ ವಿಷಯ ಬಾಲಜಿ ಸಿಂಗ್ ಪತ್ನಿ, ತಾಯಿಗೆ ಗೊತ್ತಾಗಿದೆ. ಬಳಿಕ ಬಾಲಾಜಿ ಸಿಂಗ್​​ಗೆ ಬೈದು ಬುದ್ಧಿವಾದ ಹೇಳಿದ್ದಾರೆ. ಪತ್ನಿ ಮಕ್ಕಳು ಬೇಕಾ? ಇಲ್ಲಾ ಇಟ್ಟುಕೊಂಡವಳು ಬೇಕಾ? ಎಂದು ಪತ್ನಿ ಗಲಾಟೆ ಮಾಡಿದ್ದಳು. ಇದರಿಂದ ಬಾಲಾಜಿ ಸಿಂಗ್ ಪತ್ನಿ ಮಕ್ಕಳ ಜೊತೆ ಇರುತ್ತೇನೆಂದು ಹೇಳಿದ್ದ. ಆದ್ರೆ, ಕಡೆ ಪ್ರಿಯತಮೆ ಮಾತ್ರ ಬಾಲಾಜಿಯನ್ನು ಬಿಡಲು ಸಿದ್ಧಳಿಲ್ಲ. ಪದೇ ಪದೇ ಫೋನ್ ಮಾಡಿ ಕಿರುಕುಳ, ಬ್ಲ್ಯಾಕ್​ ಮೇಲ್ ಮಾಡುವುದನ್ನು ಶುರುಮಾಡಿದ್ದಳು. ಇದರಿಂದ ಬೇಸತ್ತು ಬಾಲಾಜಿ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾಳೆ. ಆದ್ರೆ, ಸ್ವಲ್ಪ ಹೊತ್ತಿನ ಬಳಿಕ ಬಾಲಾಜಿ ಸಿಂಗ್ ಆತ್ಮಹತ್ಯೆಗೆ ಕಾರಣ ಗೊತ್ತಿಲ್ಲ ಎಂದು ಉಲ್ಟಾ ಹೇಳಿಕೆ ನೀಡಿದ್ದಾರೆ. ಇದರಿಂದ ಬಾಲಾಜಿ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ಅಲ್ಲು ಅರ್ಜುನ್ ಎಷ್ಟನೇ ಆರೋಪಿ? – Kannada News | Allu Arjun Accused A11 in Pushpa 2 Stampede, Charge Sheet Filed by Hyderabad Police

‘ಪುಷ್ಪ 2’ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಕೋರ್ಟ್​​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಘಟನೆ ನಡೆದು ಒಂದು ವರ್ಷಗಳ ಬಳಿಕ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ (Allu Arjun) ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದರು.

2024ರ ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ತಮ್ಮ ಕುಟುಂಬದೊಂದಿಗೆ ಹೈದರಾಬಾದ್​​ನ ಸಂಧ್ಯಾ ಚಿತ್ರಮಂದಿರಕ್ಕೆ ‘ಪುಷ್ಪ 2’ ಸಿನಿಮಾ ವೀಕ್ಷಿಸಲು ಆಗಮಿಸಿದ್ದರು. ಆಗ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಇದರಿಂದ ಉಂಟಾದ ಕಾಲ್ತುಳಿತದಲ್ಲಿ ಸಾಕಷ್ಟು ಹಾನಿ ಆಯಿತು. ಅಲ್ಲು ಅರ್ಜುನ್​ ಬಂದ ಕಾರಣದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರೆಂದು ಪೊಲೀಸರು ವಾದಿಸಿದರು. ಅವರನ್ನು ಬಂಧಿಸಿ ಒಂದು ದಿನ ಜೈಲಿನಲ್ಲೂ ಇಡಲಾಯಿತು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಈಗ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ.

ಚಿಕ್ಕಡಪಲ್ಲಿ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ಚಾರ್ಜ್​​ಶೀಟ್​​ನಲ್ಲಿ ಸಲ್ಲಿಕೆ ಮಾಡಿದ್ದಾರೆ. ಸಂಧ್ಯಾ ಥಿಯೇಟರ್​ ಮ್ಯಾನೇಜ್​​ಮೆಂಟ್​ ಅನ್ನು ಎ1 ಆಗಿ ಪರಿಗಣಿಸಲಾಗಿದೆ. ಘಟನೆಗೆ ಕಾರಣವಾದ ಲೋಪಗಳಿಗೆ ಥಿಯೇಟರ್​​ನವರು ಮುಖ್ಯ ಹೊಣೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

ಜನಸಂದಣಿಯ ನಿರ್ವಹಣೆ ಸರಿಯಾಗಿಲ್ಲದ ಕಾರಣ ಮತ್ತು ಸರಿಯಾದ ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಪರಿಸ್ಥಿತಿ ನಿಯಂತ್ರಣ ತಪ್ಪಿತು. ನಟನನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಆಯೋಜಕರು ಜನರನ್ನು ನಿಯಂತ್ರಿಸುವಲ್ಲಿ ವಿಫಲರಾದರು ಎಂದು ತನಿಖೆ ಹೇಳಿದೆ. ಪ್ರಕರಣವನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲು ಪೊಲೀಸರ ಬಳಿ ಈಗ ಸಂಪೂರ್ಣವಾದ ಸಾಕ್ಷಿಗಳು ಸಿಕ್ಕಿವೆ. ಹೀಗಾಗಿ, ಚಾರ್ಜ್​​ಶೀಟ್ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಕಾಲ್ತುಳಿತಕ್ಕೆ ವರ್ಷ: ಬಾಲಕನ ಸ್ಥಿತಿ ಈಗ ಹೇಗಿದೆ? ನಿಂತಿದೆಯೇ ಅಲ್ಲು ಅರ್ಜುನ್ ನೆರವು? 

ಸಂಧ್ಯಾ ಚಿತ್ರಮಂದಿರ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ ಮತ್ತು ‘ಪುಷ್ಪ 2’ ಚಿತ್ರತಂಡದ ವತಿಯಿಂದ ಬರೋಬ್ಬರಿ ಎರಡು ಕೋಟಿ ರೂಪಾಯಿ ಹಣ ನೀಡಲಾಗಿತ್ತು. ನಟ ಅಲ್ಲು ಅರ್ಜುನ್ ಅವರು ಕುಟುಂಬಕ್ಕೆ 25 ಲಕ್ಷ ರೂಪಾಯಿ ಘೋಷಣೆ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೂರು ನೀಡಿದ ವಿವಾಹಿತ ಮಹಿಳೆಯನ್ನೇ ಪಟಾಯಿಸಿದ ‘ಪೋಲಿ’ಸಪ್ಪ: ನ್ಯಾಯಕ್ಕಾಗಿ ಪತಿ ಹೋರಾಟ – Kannada News | Vijayapura: Police Officer Accused of Illicit Affair; Family Ruin Alleged

ವಿಜಯಪುರ, ಡಿಸೆಂಬರ್ 27: ನಾಗರಿಕ ರಕ್ಷಣೆ ಪೊಲೀಸ್ ಇಲಾಖೆ ಕರ್ತವ್ಯ. ಸಾಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾನೂನು ಪಾಲನೆ ಕೂಡ ಸೇರಿದೆ. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಪಾತ್ರ ದೊಡ್ಡದು. ಆದರೆ ಓರ್ವ ಪೊಲೀಸ್ ಅಧಿಕಾರಿಯೇ (Police Officer) ಪುಟ್ಟ ಸಂಸಾರದಲ್ಲಿ ಮಾಡಬಾರದ ಕೆಲಸ ಮಾಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ವಿವಾಹಿತ ಮಹಿಳೆಯ ಸಂಸಾರ ಹಾಳು ಮಾಡಿರುವ ಆರೋಪ ಕೇಳಿಬಂದಿದೆ.

ನಡೆದದ್ದೇನು?

ಭೀಮಾಶಂಕರ ಹೋಳ್ಕರ ಎಂಬುವವರದು ಪುಟ್ಟ ಸಂಸಾರ. ತಾಯಿ, ಪತ್ನಿ, ಇಬ್ಬರು ಪುಟ್ಟ ಮಕ್ಕಳು. ತಾನಾಯ್ತು, ತನ್ನ ಕೆಲಸವಾಯ್ತು ಎಂದುಕೊಂಡಿದ್ದರು. ಇದೀಗ ಸಂಸಾರದ ಸಮಸ್ಯೆಯಿಂದ ದಿಕ್ಕೆಟ್ಟು ಹೋಗಿದ್ದಾರೆ. ತನ್ನ ಸಂಸಾರ ಸಮಸ್ಯೆಗೆ ಓರ್ವ ಪೊಲೀಸ್ ಅಧಿಕಾರಿಯೇ ಕಾರಣವೆಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ನಪುಂಸಕ, ಗಂಡಸೇ ಅಲ್ಲ: ಹೆಂಡ್ತಿ ಕುಟುಂಬಸ್ಥರ ಆರೋಪ, ಮನನೊಂದು ಪತಿ ಸಾವಿಗೆ ಶರಣು

ಕಳೆದ 10 ವರ್ಷಗಳ ಹಿಂದೆ ಭೀಮಾಶಂಕರ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಅನುರಾಧ ಜೊತೆಗೆ ಮದುವೆಯಾಗಿತ್ತು. ದಂಪತಿಗೆ ಒಂದು ಗಂಡು, ಒಂದು ಹೆಣ್ಣು ಮಗುವಿದೆ. ತಂದೆಯನ್ನು ಕಳೆದುಕೊಂಡಿರುವ ಭೀಮಾಶಂಕರ, ತಾಯಿ, ಪತ್ನಿ ಮತ್ತು ಮಕ್ಕಳ ಜೊತೆಗೆ ವಾಸವಿದ್ದರು. ಮದುವೆಯಾದ ಐದು ವರ್ಷಗಳ ಬಳಿಕ ಗಂಡ-ಹೆಂಡತಿ ಮಧ್ಯೆ ಜಗಳ ಹಿನ್ನೆಲೆ ಅನುರಾಧಾ ಆಲಮೇಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ವೇಳೆ ವಿಚಾರಣೆ ನೆಪದಲ್ಲಿ ಆಲಮೇಲ ಠಾಣೆಯ ಎಎಸ್ಐ ಆಗಿದ್ದ ಮನೋಹರ ಕಂಚಗಾರ ಅನುರಾಧ ಮೊಬೈಲ್ ನಂಬರ್ ಪಡೆದುಕೊಂಡಿದ್ದರು. ಇದೇ ನೆಪದಲ್ಲಿ ಅನುರಾಧ ಹಾಗೂ ಪೊಲೀಸ್ ಅಧಿಕಾರಿ ಮನೋಹರ್ ಮಧ್ಯೆ ಮಾತಿನ ಸಲುಗೆ ಮುಂದೆ ಅನೈತಿಕ ಸಂಬಂಧಕ್ಕೆ ತಿರುಗಿತ್ತಂತೆ. ಬಳಿಕ 2023ರಲ್ಲಿ ಭೀಮಾಶಂಕರ ಪತ್ನಿ ಮಕ್ಕಳ ಸಮೇತ ಕೆಲಸಕ್ಕಾಗಿ ಬೆಂಗಳೂರಿಗೆ ಹೋಗಿದ್ದರಂತೆ. ಜೊತೆಗೆ ಪಿತ್ರಾರ್ಜಿ ಆಸ್ತಿ ಮಾರಾಟ ಮಾಡಿದ ಹಣವದಲ್ಲಿ ಬೆಂಗಳೂರಿನಲ್ಲಿ ಒಂದು ಮನೆಯನ್ನು ತನ್ನ ಹಾಗೂ ಪತ್ನಿ ಅನುರಾಧ ಹೆಸರಿನಲ್ಲಿ ಖರೀದಿ ಮಾಡಿದ್ದರು.

ಬೆಂಗಳೂರಿನಲ್ಲಿದ್ದರೂ ಇವರ ಸಂಸಾರದಲ್ಲಿ ಸಾಮರಸ್ಯ ಇರಲಿಲ್ಲ. ಸಣ್ಣ ಪುಟ್ಟ ವಿಷಯಕ್ಕೂ ಕುಂಬಳಗೋಡು ಪೊಲೀಸ್ ಠಾಣೆ ಮೆಟ್ಟಿಲು ಹತ್ತುವುದು ಅನುರಾಧಗೆ ಕಾಮನ್ ಆಗಿತ್ತು. ಇದೆಲ್ಲದರ ಹಿಂದೆ ಪೊಲೀಸ್ ಅಧಿಕಾರಿ ಮನೋಹರ್ ಕಂಚಗಾರ ಇದ್ದಾರೆಂಬ ವಿಚಾರ ಭೀಮಾಶಂಕರಗೆ ಗೊತ್ತಾಗಿದೆ. ಪತ್ನಿ ಹಾಗೂ ಪೊಲೀಸ್ ಅಧಿಕಾರಿ ನಡೆಸಿದ ಮಾತುಕತೆ ವಾಟ್ಸ್ ಆ್ಯಪ್ ಚಾಟಿಂಗ್ ಎಲ್ಲವು ಸಿಕ್ಕಿದ್ದು ಪತ್ನಿಯ ಪರಸಂಗ ಹಾಗೂ ಪೊಲೀಸ್ ಅಧಿಕಾರಿಯ ಅನೈತಿಕ ಸಂಬಂಧ ಬಯಲಾಗಿದೆ.

ಮಕ್ಕಳಿಗೆ ಹಿಂಸೆ

ಯಾವಾಗ ಪತ್ನಿ ಅನುರಾಧ ಹಾಗೂ ಪೊಲೀಸ್ ಅಧಿಕಾರಿಯ ಅನೈತಿಕ ಸಂಬಂಧ ಭೀಮಾಶಂಕರಗೆ ಗೊತ್ತಾಯಿತೋ ಆಗ ಇಬ್ಬರು ಮಕ್ಕಳನ್ನು ಆಕೆಯ ಬಳಿಯೇ ಬಿಟ್ಟು ತನ್ನೂರಿಗೆ ಬಂದಿದ್ದ. ಕೆಲ ದಿನಗಳ ಬಳಿಕ ಭೀಮಾಶಂಕರ ಪುತ್ರ ಬೇರೆಯವರ ಮೊಬೈಲ್​ನಿಂದ ಕಾಲ್ ಮಾಡಿ ತನ್ನನ್ನು ಕರೆದುಕೊಂಡು ಹೋಗು. ಅಮ್ಮನ ಬಳಿ ಓರ್ವ ವ್ಯಕ್ತಿ ಬರುತ್ತಾನೆ. ಆತನಿಗೆ ನಾನು ತಂದೆ ಎಂದು ಕರೆಯಬೇಕೆಂದು ಅಮ್ಮ ಹೇಳುತ್ತಾರೆ. ನನ್ನ ತಂದೆ ಭೀಮಾಶಂಕರ ಎಂದು ಹೇಳಿದ್ದಕ್ಕೆ ಕೈಯನ್ನು ಬೂಟಿನಿಂದ ತುಳಿದು ಹಿಂಸೆ ಕೊಟ್ಟಿದ್ದಾರೆ. ಮೈಗೆ ಬರೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

ಅನೈತಿಕ ಸಂಬಂಧ ಒಪ್ಪಿಕೊಂಡ ಅನುರಾಧ 

ಇದರಿಂದ ನೊಂದ ಭೀಮಾಶಂಕರ ಬೆಂಗಳೂರಿಗೆ ತೆರಳಿ ತನ್ನ ಅಪ್ರಾಪ್ತ ಮಗನನ್ನು ಕುಂಬಳಗೋಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾನೆ. ಪೊಲೀಸ್ ಅಧಿಕಾರಿಗಳು ಭೀಮಾಶಂಕರ ಹಾಗೂ ಅನುರಾಧ ಇಬ್ಬರ ಕೌನ್ಸಲಿಂಗ್ ಮಾಡಿದಾಗ ತಾನು ಪೊಲೀಸ್ ಅಧಿಕಾರಿ ಮನೋಹರ್ ಕೆಂಚಗಾರ ಜೊತೆ ಇರುತ್ತೇನೆ. ಅವರ ಹಾಗೂ ನನ್ನ ಮಧ್ಯೆ ಸಂಬಂಧವಿದೆ ಎಂದು ಒಪ್ಪಿಕೊಂಡಿದ್ದಾಳಂತೆ. ಆಕೆಯೇ ಸಂಬಂಧ ಒಪ್ಪಿಕೊಂಡು ಪೊಲೀಸ್ ಅಧಿಕಾರಿ ಮನೋಹರ್ ಜೊತೆಗೆ ಇರುತ್ತೇನೆಂದು ಹೇಳಿದ್ದಕ್ಕೆ ಭೀಮಾಶಂಕರ ತನ್ನ ಮಗನನ್ನು ವಾಪಸ್ ಕರೆದುಕೊಂಡು ಬಂದಿದ್ದಾರೆ. ಈ ಘಟನೆ ಭೀಮಾಶಂಕರ ಹಾಗೂ ಆತನ ತಾಯಿಗೆ ಆಘಾತ ತಂದಿದೆ.

ಇದನ್ನೂ ಓದಿ: ನವ ವಿವಾಹಿತೆ ಆತ್ಮಹತ್ಯೆ ಕೇಸ್: ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ! ಗಾನವಿ ಅಮ್ಮ ನೋವಿನ ಮಾತು

ಸದ್ಯ ಪತ್ನಿ ಅನುರಾಧ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿರುವ ಹಿಂದೆ ಪೊಲೀಸ್ ಅಧಿಕಾರಿ ಮನೋಹರ್ ಕಂಚಗಾರ ಕೈವಾಡವಿದೆ. ಆಲಮೇಲದಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಗೆ ಪ್ರಮೋಷನ್ ಆಗಿದ್ದು ಪಿಎಸ್ಐ ಆಗಿ ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ಧಾರೆ.

ಇನ್ನು ಬಸವನಬಾಗೇವಾಡಿ ಪೊಲೀಸ್ ಠಾಣೆಗೂ ಒಂದೂವರೆ ತಿಂಗಳಿನಿಂದ ಪಿಎಸ್ಐ ಮನೋಹರ್ ಕಂಚಗಾರ ಸೇವೆಗೆ ಹಾಜರಾಗಿಲ್ಲ. ಇಡೀ ಘಟನೆ ಕುರಿತು ಜಿಲ್ಲಾ ಪೊಲೀಸ್ ಇಲಾಖೆ ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯ ನೀಡಬೇಕಾಗಿರುವ ಪೊಲೀಸ್ ಅಧಿಕಾರಿಯೇ ಅನ್ಯಾಯ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link