IPL 2026: ಬಾಂಗ್ಲಾದಲ್ಲಿ ಹಿಂದೂಗಳ ಹಿಂಸಾಚಾರ; ಕೆಕೆಆರ್ ತಂಡಕ್ಕೆ ಭಾರತೀಯರಿಂದ ಹಿಡಿಶಾಪ
2026 ರ ಐಪಿಎಲ್ ಮಿನಿ ಹರಾಜಿನ ನಂತರ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅಷ್ಟಕ್ಕೂ ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಲು ಕಾರಣವೇನು ಎಂದರೆ, ಮಿನಿ ಹರಾಜಿನಲ್ಲಿ ಅದೊಂದು ದೇಶದ ಆಟಗಾರನನ್ನು ತನ್ನ ತಂಡಕ್ಕೆ ಖರೀದಿಸಿದ್ದು. ವಾಸ್ತವವಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಬಾಂಗ್ಲಾದೇಶ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ತನ್ನ ತಂಡಕ್ಕೆ ಖರೀದಿ ಮಾಡಿತ್ತು. ಹೀಗಾಗಿ ಬಾಂಗ್ಲಾದೇಶದಲ್ಲಿ…