ಮಲಯಾಳಂಗೆ ಭರ್ಜರಿ ಎಂಟ್ರಿ ಕೊಟ್ಟ ನಟಿ ಅನುಷ್ಕಾ ಶೆಟ್ಟಿ
ಕರ್ನಾಟಕ ಮೂಲದ ನಟಿ ಅನುಷ್ಕಾ ಶೆಟ್ಟಿ (Anushka Shetty) ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ದಶಕದ ಕಾಲ ಸ್ಟಾರ್ ನಟಿಯಾಗಿ ಮೆರೆದವರು. ಅದರಲ್ಲೂ ತೆಲುಗು ರಾಜ್ಯಗಳಲ್ಲಿ ದೊಡ್ಡ ಅಭಿಮಾನಿ ವರ್ಗವನ್ನು ಅನುಷ್ಕಾ ಹೊಂದಿದ್ದಾರೆ. ‘ಅರುಂಧತಿ’ ಸೇರಿದಂತೆ ಕೆಲವು ಮಹಿಳಾ ಪ್ರಧಾನ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಿಂದ ದೂರ ಉಳಿದಿರುವ ಅನುಷ್ಕಾ ಶೆಟ್ಟಿ, ಒಂದು ಭರ್ಜರಿ ಕಮ್ಬ್ಯಾಕ್ಗಾಗಿ ಪ್ರಯತ್ನಿಸುತ್ತಿದ್ದಾರೆ. ಅನುಷ್ಕಾರ ಈ ಹಿಂದಿನ ಸಿನಿಮಾ ‘ಘಾಟಿ’ ಸಿನಿಮಾ ನಿರೀಕ್ಷೆ ಮೂಡಿಸಿತ್ತಾದರೂ ಬಾಕ್ಸ್ ಆಫೀಸ್ನಲ್ಲಿ ಧಾರುಣ ಸೋಲು…