ಆ ಒಂದು ವಿಷಯದ ಬಗ್ಗೆ ಕಂಪ್ಲೇಂಟ್ ಮಾಡಿದ ದೀಪಿಕಾ ಪಡುಕೋಣೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ತಮ್ಮ ಸಿನಿಮಾ ಮೂಲಕ ಗಮನ ಸೆಳೆದವರು. ಅವರು ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಅವರು ಬೇರೆಯದೇ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮುಂಬೈನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅವರ ಪೋಸ್ಟ್ ಚರ್ಚೆ ಹುಟ್ಟುಹಾಕಿದೆ. ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಅನೇಕ ಕಡೆಗಳಲ್ಲಿ ವಾಯು ಮಾಲಿನ್ಯ ಗುಣಮಟ್ಟ ಕಳಪೆ ಮಟ್ಟ ತಲುಪಿದೆ. ಮುಂಬೈನ ಕಳಪೆ ವಾಯು ಗುಣಮಟ್ಟದ ಸೂಚ್ಯಂಕದ…