ಬಜೆಟ್ ಬಗ್ಗೆ ಶಾಸಕ ಇಕ್ಬಾಲ್ ಹೇಳಿಕೆಯಿಂದ ಕಾಂಗ್ರೆಸ್ಗೆ ಡ್ಯಾಮೇಜ್: ರಾಮಲಿಂಗಾರೆಡ್ಡಿ ಏನಂದ್ರು?
ಬೆಂಗಳೂರು, ಮಾರ್ಚ್ 13: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ಬಗ್ಗೆ ಸ್ವಪಕ್ಷ ಶಾಸಕ ಇಕ್ಬಾಲ್ ಹುಸೇನ್ ನೀಡಿದ್ದ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಇಕ್ಬಾಲ್ ಹುಸೇನ್ ಮಾತ್ರವಲ್ಲ, ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಚರ್ಚಿಸಬಾರದು. ಯಾವುದೇ ಸಮಸ್ಯೆಗಳಿದ್ದರೂ, ಮುಖ್ಯಮಂತ್ರಿಗಳು ಅಥವಾ ಉಪಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು. ಮಾಧ್ಯಮಗಳ ಮುಂದೆ ಮಾತನಾಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಸಮಾಧಾನ ತಂದಿಲ್ಲ. ಆಯವ್ಯಯ…