ಡಿಕೆಶಿ ಮಾಸ್ಟರ್ ಪ್ಲಾನ್, ರೆಸಾರ್ಟ್ ರಾಜಕೀಯ ಶುರು: ಬಿಡದಿಯ ವಂಡರ್ ಲಾ ರೆಸಾರ್ಟ್ನತ್ತ 14 ಕಾಂಗ್ರೆಸ್ ಶಾಸಕರು!
ಬೆಂಗಳೂರು, ಮಾರ್ಚ್ 13: ಒಡಿಶಾದಲ್ಲಿ (Odisha) ನಡೆಯಲಿರುವ ರಾಜ್ಯಸಭಾ ಚುನಾವಣೆಯ (Rajyasabha Election) ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ (Congress) ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ. ಗುರುವಾರ ರಾತ್ರಿ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಕೆಂಪೇಗೌಡ…