ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ, ರಾಜ್ಯದಲ್ಲಿ ಮುಂದುವರೆದ ಒಣ ಹವೆ – Kannada News | Bengaluru temperature: misty weather in Bengaluru, Dry weather elsewhere
ಬೆಂಗಳೂರು, ಡಿಸೆಂಬರ್ 27: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಇಂದು…