ತೆಲುಗು ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. ಅವರು ತಮ್ಮ ಗರ್ಲ್ಫ್ರೆಂಡ್ನ ಅಭಿಮಾನಿಗಳ ಎದುರು ಪರಿಚಯಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.
ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಅವರಿಂದ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸಿದ್ದರು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಅವರು ಗರ್ಲ್ಫ್ರೆಂಡ್ ಫೋಟೋ ಪೋಸ್ಟ್ ಮಾಡಿದ್ದಾರೆ.
ಶ್ರೀನಿವಾಸ್ ಅವರ ಗೆಳತಿ ಹೆಸರು ಕಾವ್ಯಾ ರೆಡ್ಡಿ. ನಿಶ್ಚಿತಾರ್ಥ ಹಾಗೂ ಮದುವೆ ಇನ್ನಷ್ಟೇ ಜರುಗಬೇಕಿದೆ ಎಂದು ಅವರು ಹೇಳಿದ್ದಾರೆ. ತನ್ನವಳನನು ಪರಿಚಯಿಸುತ್ತಿರುವುದಾಗಿ ಅವರು ಕ್ಯಾಪ್ಶನ್ ಅಲ್ಲಿ ಬರೆದುಕೊಂಡಿದ್ದಾರೆ.
‘ನನ್ನ ಜೀವನದಲ್ಲಿ ಬಂದಿದ್ದಕ್ಕೆ ಧನ್ಯವಾದ’ ಎಂದು ಕಾವ್ಯಾಗೆ ಹೇಳಿದ್ದಾರೆ. ಇದು ಅನೌನ್ಸ್ಮೆಂಟ್ ಮಾಡಲು ಕ್ಲಿಕ್ಕಿಸಿಕೊಂಡ ಫೋಟೋ ಅಷ್ಟೇ ಎಂದು ಅವರು ಹೇಳಿದ್ದಾರೆ.
ಕಾವ್ಯಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಶ್ರೀನಿವಾಸ್ಗಿಂತ ಅವರು ಐದು ವರ್ಷ ಸಣ್ಣವರು. ಕಾವ್ಯಾ ಅವರ ಅಕ್ಕ ಶ್ರೀನಿವಾಸ್ ಕ್ಲಾಸ್ಮೇಟ್. ಹೀಗೆ ಇಬ್ಬರ ಮಧ್ಯೆ ಪರಿಚಯ ಬೆಳೆಯಿತು ಎಂದು ಹೇಳಲಾಗುತ್ತಿದೆ.
ಆನೇಕಲ್, ಮಾರ್ಚ್ 11: ಆನೇಕಲ್‌ನಲ್ಲಿ ಕಿಡ್ನ್ಯಾಪ್ (kidnapped) ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ತಮಿಳುನಾಡಿನಲ್ಲಿ ಶವವಾಗಿ ಪತ್ತೆ ಪ್ರಕರಣಕ್ಕೆ ಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಠಾಣೆ ಪೊಲೀಸರಿಂದ ಓರ್ವ ಅಪ್ರಾಪ್ತ ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಮೋಹನ್ ಬಾಬು, ತೇಜಸ್, ದರ್ಶನ್, ಲಿಖಿತ್, ನಿಖಿಲ್, ಆನಂದ್, ಪ್ರಶಾಂತ್ ಮತ್ತು ಓರ್ವ ಅಪ್ರಾಪ್ತ ಬಂಧಿತರು. ಆರೋಪಿಗಳು ಕಿಡ್ನ್ಯಾಪ್ ಮಾಡಲು ಬಳಸಿದ್ದ ಹುಂಡೈ ಕಾರನ್ನು ವಶಕ್ಕೆ ಪಡೆಯಲಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿ ಕೋರ್ಟ್ಗೆ ಹಾಜರುಪಡಿಸಲಾಗಿದೆ.
ನಡೆದದ್ದೇನು?
ಗೋಪಾಲ್ ಅಲಿಯಾಸ್ ಗೋಪಿ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೊನ್ನಕಳಶಾಪುರ ನಿವಾಸಿ. ಈತನ ಸಂಬಂಧಿ ಮೋಹನ್ ಬಾಬು ಆ್ಯಂಡ್ ಗ್ಯಾಂಗ್ನಿಂದ ಬರ್ಬರವಾಗಿ ಕೊಲೆಯಾಗಿದ್ದಾನೆ. ಸ್ನೇಹಿತನಿಗೆ ಹೆಣ್ಣು ನೋಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಬರುತ್ತಿದ್ದ ವೇಳೆ ಅತ್ತಿಬೆಲೆ ಮತ್ತು ಆನೇಕಲ್ ಮಾರ್ಗ ಮಧ್ಯೆ ಕರ್ಪೂರು ಬಳಿ ಗೂಡ್ಸ್ ವಾಹನ ಗೋಪಾಲ್ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ಕಾರಿನಲ್ಲಿ ಹಿಂಬಾಲಿಸಿ ಬಂದ ಐದಾರು ಮಂದಿ ಗೋಪಾಲ್ ಮತ್ತು ಸ್ನೇಹಿತ ಸತೀಶ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆದಿದ್ದಾರೆ. ಕಿರುಚಾಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಗೋಪಾಲ್ನನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಎಸ್ಕೇಪ್ ಆಗಿದ್ದರು.
ಗೋಪಾಲ್ ಸ್ನೇಹಿತ ಸತೀಶ್ ಕೂಡಲೇ ಆನೇಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇತ್ತ ಹಳೆ ದ್ವೇಷ ಹಿನ್ನೆಲೆ ಮೋಹನ್ ಬಾಬು ಕಿಡ್ನ್ಯಾಪ್ ಮಾಡಿಸಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದರು. ಸೋಮವಾರ ಬೆಳಗ್ಗೆ ತಮಿಳುನಾಡಿನ ಡೆಂಕಣೀಕೋಟೆ ಬಳಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಗೋಪಾಲ್ ಶವ ಪತ್ತೆಯಾಗಿತ್ತು. ಇತ್ತ ಆಕ್ರೋಶಗೊಂಡ ಮೃತ ಗೋಪಾಲ್ ಕುಟುಂಬದವರು ಮತ್ತು ಸಂಬಂಧಿಗಳು ಆನೇಕಲ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಮಾತ್ರವಲ್ಲದೆ ಆರೋಪಿ ಮೋಹನ್ ಬಾಬು ಮನೆ ಮೇಲೆ ಕಲ್ಲು ತೂರಾಟ ಕೂಡ ಮಾಡಿದ್ದರು.
ತಾನೂ ಆಸೆಪಟ್ಟ ಯುವತಿ ಸಿಗಲಿಲ್ಲವೆಂದು ದ್ವೇಷ
ಮೃತ ಗೋಪಾಲ್ ಮತ್ತು ಆರೋಪಿ ಮೋಹನ್ ಬಾಬು ಮುಂಚೆ ಜೊತೆಯಾಗಿಯೇ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಆದರೆ ಹತ್ತು ವರ್ಷಗಳ ಹಿಂದೆ ಗೋಪಾಲ್ ಸ್ವಾತಿ ಎಂಬ ಯುವತಿಯನ್ನು ವಿವಾಹವಾಗಿದ್ದು, ಆರೋಪಿ ಮೋಹನ್ ಬಾಬುಗೆ ದ್ವೇಷಕ್ಕೆ ಕಾರಣವಾಗಿತ್ತು. ಗೋಪಾಲ್ ಮದುವೆ ಆದ ಸ್ವಾತಿಯನ್ನು ಮದುವೆ ಆಗಲು ಆರೋಪಿ ಮೋಹನ್ ಬಾಬು ಆಸೆ ಪಟ್ಟಿದ್ದ. ಆದರೆ ಗೋಪಾಲ್ ಹಿರಿಯರ ಸಮ್ಮುಖದಲ್ಲಿ ಮದುವೆ ಆಗಿದ್ದ. ಮದುವೆ ಬಳಿಕ ಇಬ್ಬರ ನಡುವೆ ವೈಷಮ್ಯ ಮೂಡಿತ್ತು. ಜೊತೆಗೆ ವ್ಯವಹಾರದಲ್ಲೂ ಗೋಪಾಲ್ ಚೆನ್ನಾಗಿ ಬೆಳೆಯುವುದನ್ನು ಸಹಿಸದ ಮೋಹನ್ ಬಾಬು ಎರಡು ವರ್ಷದ ಹಿಂದೆ ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿ ಬಿಟ್ಟು ಕಳುಹಿಸಿದ್ದ. ಅಲ್ಲದೆ ಪದೇ ಪದೇ ನನ್ನ ವ್ಯವಹಾರಗಳಿಗೆ ನೀನು ಕೈ ಹಾಕುತ್ತಿಯಾ ಎಂದು ಮೋಹನ್ ಬಾಬು ಕೊಲೆ ಬೆದರಿಕೆ ಹಾಕುತ್ತಿದ್ದರು ಗೋಪಾಲ್ ಮಾತ್ರ ಪತ್ನಿ ಬಳಿ ಹೇಳಿಕೊಂಡು ರಾಜಿ ಮಾಡಿಕೊಳ್ಳುವ ಬಗ್ಗೆ ಮಾತನಾಡಿದ್ದನಂತೆ. ಆದರೂ ಮೋಹನ್ ಬಾಬು ದ್ವೇಷವನ್ನ ಬಿಡದೆ ಕಳೆದ ಭಾನುವಾರ 25 ಲಕ್ಷ ರೂ ಸುಪಾರಿ ನೀಡಿ ಗೋಪಾಲ್ನನ್ನು ಕಿಡ್ನ್ಯಾಪ್ ಮಾಡಿಸಿ ಕೊಲೆ ಮಾಡಿಸಿದ್ದಾಗಿ ಆರೋಪಿ ಮೋಹನ್ ಬಾಬು ತಪ್ಪೊಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು, ಮಾರ್ಚ್ 11: ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ಕರ್ನಾಟಕದಲ್ಲಿ ಮತ್ತಷ್ಟು ಉಲ್ಬಣಿಸಿದ್ದು, ಬೆಂಗಳೂರಿನ ಕೆಲ ಪೇಯಿಂಗ್ ಗೆಸ್ಟ್‌ಗಳಲ್ಲಿ (ಪಿಜಿ) ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯಿಂದಾಗಿ ಮಧ್ಯಾಹ್ನದ ಊಟದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಗ್ಯಾಸ್ ಸಿಲಿಂಡರ್ ಸಮಸ್ಯೆ ಬಗೆಹರಿಯುವವರೆಗೂ ಊಟ ನೀಡದಿರಲು ನಿರ್ಧರಿಸಲಾಗಿದೆ ಎಂದು ಪಿಜಿ ಮಾಲೀಕರು ಘೋಷಿಸಿದ್ದು, ಎಲೆಕ್ಟ್ರಿಕ್ ಸ್ಟವ್ ಅಥವಾ ಸೌದೆ ಬಳಕೆಯಂತಹ ಪರ್ಯಾಯ ವ್ಯವಸ್ಥೆಗಳನ್ನು ರಾತ್ರೋರಾತ್ರಿ ಜಾರಿಗೊಳಿಸುವುದು ಸಾಧ್ಯವಿಲ್ಲ ಎಂದು ಅಲವತ್ತುಕೊಂಡಿದ್ದಾರೆ.
ಇನ್ನು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರಕ್ಕೆ ಬ್ರೇಕ್ ಹಾಕಿ ಬೆಂಗಳೂರಿನ ಪಿಜಿಗಳ ಊಟದ ಮೆನು ಬದಲಾವಣೆಗೆ ಪಿಜಿ ಮಾಲೀಕರ ಸಂಘ ನಿರ್ಧರಿಸಿದೆ. ಚಪಾತಿ ಹಾಗೂ ದೋಸೆಗಳ ಬದಲು ರೈಸ್ ಐಟಂಗಳತ್ತ ಹೆಚ್ಚು ಒಲವು ತೋರಿ. ತರಕಾರಿ, ಕಾಳುಗಳನ್ನು ವಿತರಿಸಿ ಎಂದು ಎಲ್ಲಾ ಪಿಜಿ ಮಾಲೀಕರಿಗೂ ಅಸೋಷಿಯೇಷನ್ನಿಂದ ಸೂಚನೆ ನೀಡಲಾಗಿದೆ.
ಹೆಚ್ಚಿನವರು ಉದ್ಯೋಗ ನಿಮಿತ್ತ ಅಥವಾ ವಿದ್ಯಾಭ್ಯಾಸಕ್ಕಾಗಿ ತಮ್ಮ ಮನೆಗಳಿಂದ ದೂರ ಉಳಿದು ಪಿಜಿಗಳನ್ನು ಆಶ್ರಯಿಸಿದ್ದಾರೆ. ಅವರು ಮಾಸಿಕ ಶುಲ್ಕವನ್ನು ಪಾವತಿಸಿದ್ದರೂ, ಸದ್ಯಕ್ಕೆ ಊಟದ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಹೋಟೆಲ್‌ಗಳೂ ಸಹ ವಾಣಿಜ್ಯ ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿರುವುದರಿಂದ, ಹೊರಗಡೆ ಊಟ ಸಿಗುವುದು ಕಷ್ಟಕರವಾಗಿದೆ. ಗೃಹಬಳಕೆಯ ಸಿಲಿಂಡರ್‌ಗಳ ಪೂರೈಕೆಗೆ ಕೇಂದ್ರದಿಂದ ಸೂಚನೆಗಳು ಬಂದಿದ್ದು, ಅವುಗಳು ತಕ್ಕಮಟ್ಟಿಗೆ ಲಭ್ಯವಿವೆ. ತಿಂಗಳಿಗೆ ಒಂದು ಸಿಲಿಂಡರ್ ದೊರೆಯುತ್ತಿರುವುದು ಮನೆಗಳಲ್ಲಿರುವವರಿಗೆ ಸ್ವಲ್ಪ ಸಮಾಧಾನಕರ ಸಂಗತಿ. ಆದರೆ, ವಾಣಿಜ್ಯ ಸಿಲಿಂಡರ್‌ಗಳ ಅಭಾವ ಮಾತ್ರ ಹೆಚ್ಚುತ್ತಲೇ ಇದೆ.
ಎಲ್‌ಪಿಜಿ ಸಿಲಿಂಡರ್ ತೀವ್ರ ಕೊರತೆ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಯ ಮೇಲೂ ಗಂಭೀರ ಪರಿಣಾಮ ಬೀರಿದೆ. ಮಕ್ಕಳಿಗೆ ಆಹಾರ ತಯಾರಿಸಲು ತಿಂಗಳಿಗೆ ಹಲವು ಸಿಲಿಂಡರ್‌ಗಳು ಬೇಕಾಗುತ್ತವೆ. ಆದರೆ, ಕೊರತೆಯಿಂದ ಕಡಿಮೆ ಸಂಖ್ಯೆಯಲ್ಲಿ ಸಿಲಿಂಡರ್ ಪೂರೈಕೆಯಾಗಿರೋದು, ಅಡುಗೆ ಸಿಬ್ಬಂದಿ ಮತ್ತು ಶಿಕ್ಷಕರನ್ನು ಆತಂಕಕ್ಕೆ ತಳ್ಳಿದೆ. ಹಳೇ ಬಾಗಲಕೋಟೆಯ 3ನೇ ನಂಬರ್ ಸರ್ಕಾರಿ ಶಾಲೆಯಲ್ಲಿ ಸಿಲಿಂಡರ್ ಕೊರತೆಯಿಂದ ಅಡುಗೆ ತಯಾರಿಸಲು ಸಿಬ್ಬಂದಿಗಳಿಗೆ ಕಷ್ಟವಾಗಿದ್ದು, ಏಜೆನ್ಸಿಯವರು ಒಂದು ಸಿಲಿಂಡರ್‌ನಲ್ಲಿ ಅಡ್ಜಸ್ಟ್ ಮಾಡಿಕೊಳ್ಳಿ. ನಂತರ ಹೆಚ್ಚಿನ ಸಿಲಿಂಡರ್‌ಗಳು ಬಂದಾಗ ತಲುಪಿಸುತ್ತೇವೆ ಎಂದು ತಿಳಿಸಿದ್ದಾರೆ. ಒಂದು ಸಿಲಿಂಡರ್‌ನಲ್ಲಿ ದೊಡ್ಡ ಪ್ರಮಾಣದ ಅಡುಗೆ ತಯಾರಿಸುವುದು ಕಷ್ಟಕರ ಎಂದು ಸಿಬ್ಬಂದಿ ಹೇಳಿದ್ದು, ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲು ನಿರ್ಧರಿಸಲಾಗಿದೆ.
ಮಾರ್ಚ್ 15 ರಿಂದ ಮಾರ್ಚ್ 25ರವೆರಗೆ ಮೀನ ರಾಶಿಯಲ್ಲಿ ಶುಕ್ರ ಮತ್ತು ಸೂರ್ಯನ ಸಂಯೋಜನೆಯಿಂದ ಉಂಟಾಗುವ ಶುಕ್ರಾದಿತ್ಯ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪ್ರಭಾವವನ್ನು ಬೀರುತ್ತದೆ. ಸೂರ್ಯನು ಆತ್ಮಕಾರಕನಾದರೆ, ಶುಕ್ರನು ಸುಖ ಮತ್ತು ಸಂಪತ್ತಿನ ಕಾರಕ. ಮೀನ ರಾಶಿಯು ಶುಕ್ರನಿಗೆ ಉಚ್ಚ ಸ್ಥಾನವಾದರೆ, ಸೂರ್ಯನಿಗೆ ಇದು ಮಿತ್ರ ರಾಶಿಯಾಗಿದೆ. ಈ ಸಂಯೋಜನೆಯಿಂದ ವಿವಿಧ ರಾಶಿಗಳಿಗೆ ಲಭಿಸುವ ಫಲಗಳು ಈ ಕೆಳಗಿನಂತಿವೆ.
ಶುಭ ಫಲ ಪಡೆಯುವ ರಾಶಿಗಳು
ವೃಷಭ ರಾಶಿ:
ಈ ಯೋಗವು ನಿಮ್ಮ ಲಾಭ ಸ್ಥಾನದಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಉತ್ತಮ ಲಾಭವಿರುತ್ತದೆ. ಬಾಕಿ ಉಳಿದಿರುವ ಹಣ ಕೈ ಸೇರಬಹುದು ಮತ್ತು ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ಲಭಿಸುವ ಸಾಧ್ಯತೆಯಿದೆ.
ಮಿಥುನ ರಾಶಿ:
ಉದ್ಯೋಗ ಕ್ಷೇತ್ರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಹೊಸ ಜವಾಬ್ದಾರಿಗಳು ಅಥವಾ ಬಡ್ತಿ ದೊರೆಯುವ ಯೋಗವಿದೆ. ಸಾಮಾಜಿಕವಾಗಿ ಗೌರವ ಹೆಚ್ಚಾಗಲಿದೆ.
ಕರ್ಕಾಟಕ ರಾಶಿ :
ನಿಮ್ಮ ರಾಶಿಯಿಂದ ಭಾಗ್ಯಸ್ಥಾನದಲ್ಲಿ ಈ ಯೋಗವು ಸಂಭವಿಸುತ್ತಿದೆ. ಇದು ಅತ್ಯಂತ ಶುಭಕರವಾದ ಸ್ಥಾನವಾಗಿದೆ. ಅದೃಷ್ಟವು ನಿಮ್ಮ ಕೈಹಿಡಿಯಲಿದೆ. ಸ್ಥಗಿತಗೊಂಡಿದ್ದ ಕೆಲಸಗಳು ಪುನರಾರಂಭಗೊಳ್ಳುತ್ತವೆ. ಆಧ್ಯಾತ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ತೀರ್ಥಯಾತ್ರೆ ಅಥವಾ ದೂರದ ಪ್ರಯಾಣದ ಯೋಗವಿದೆ. ಸಮಾಜದಲ್ಲಿ ನಿಮ್ಮ ಗೌರವ ಪ್ರತಿಷ್ಠೆಗಳು ಹೆಚ್ಚಾಗುತ್ತವೆ. ತಂದೆಯ ಕಡೆಯಿಂದ ಆಸ್ತಿ ಅಥವಾ ಸಹಾಯ ದೊರೆಯುವ ಸಾಧ್ಯತೆಯಿದೆ. ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಯವು ಅತ್ಯಂತ ಅನುಕೂಲಕರವಾಗಿದೆ.
ಕನ್ಯಾ ರಾಶಿ:
ಸಪ್ತಮ ಸ್ಥಾನದಲ್ಲಿ ಈ ಯೋಗವು ದಾಂಪತ್ಯ ಜೀವನದಲ್ಲಿ ಮಧುರತೆಯನ್ನು ತರುತ್ತದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭವಿರುತ್ತದೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಬಹುದು.
ವೃಶ್ಚಿಕ ರಾಶಿ:
ಈ ರಾಶಿಯವರಿಗೆ ಈ ಸಮಯವು ಸೃಜನಶೀಲ ಕೆಲಸಗಳಿಗೆ ಪೂರಕವಾಗಿದೆ. ಹೂಡಿಕೆಯಿಂದ ಲಾಭವಾಗುವ ಸಾಧ್ಯತೆಯಿದ್ದು, ಮಕ್ಕಳ ಕಡೆಯಿಂದ ಶುಭ ವಾರ್ತೆ ಕೇಳುವಿರಿ.
ಮಕರ ರಾಶಿ:
ನಿಮ್ಮ ರಾಶಿಯಿಂದ ೩ನೇ ಮನೆಯಲ್ಲಿ ಈ ಯೋಗವು ನಡೆಯುತ್ತಿದೆ. ಇದು ನಿಮಗೆ ಧೈರ್ಯ ಮತ್ತು ಯಶಸ್ಸನ್ನು ನೀಡುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಸೂಕ್ತ ಸಮಯ. ಒಡಹುಟ್ಟಿದವರೊಂದಿಗೆ ಸಂಬಂಧ ಸುಧಾರಿಸುತ್ತದೆ ಮತ್ತು ಅವರಿಂದ ಬೆಂಬಲ ಸಿಗುತ್ತದೆ. ಬರವಣಿಗೆ, ಮಾಧ್ಯಮ ಅಥವಾ ಮಾರ್ಕೆಟಿಂಗ್ ಕ್ಷೇತ್ರದಲ್ಲಿರುವವರಿಗೆ ಉತ್ತಮ ಲಾಭ ಮತ್ತು ಮನ್ನಣೆ ಸಿಗಲಿದೆ. ಕಿರು ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ಹೊಸ ವ್ಯವಹಾರದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಯಿದೆ.
ಮಿಶ್ರ ಫಲ ಪಡೆಯುವ ರಾಶಿಗಳು
ಮೇಷ ರಾಶಿ:
ವ್ಯಯ ಸ್ಥಾನದಲ್ಲಿ ಈ ಯೋಗವಿರುವುದರಿಂದ ಶುಭ ಕಾರ್ಯಗಳಿಗಾಗಿ ಖರ್ಚು ಹೆಚ್ಚಾಗಬಹುದು. ದೂರ ಪ್ರಯಾಣದ ಸಾಧ್ಯತೆಯಿದ್ದರೂ ಆರೋಗ್ಯದ ಕಡೆ ಗಮನವಿರಲಿ.
ಸಿಂಹ ರಾಶಿ:
ಎಂಟನೇ ಮನೆಯಲ್ಲಿ ಈ ಸಂಯೋಜನೆ ಇರುವುದರಿಂದ ಅನಿರೀಕ್ಷಿತ ಧನಲಾಭವಾಗಬಹುದು, ಆದರೆ ಕೆಲಸದಲ್ಲಿ ಅಡೆತಡೆಗಳು ಎದುರಾಗಬಹುದು. ಮಾತು ಮತ್ತು ಸಿಟ್ಟಿನ ಮೇಲೆ ನಿಯಂತ್ರಣವಿರಲಿ.
ತುಲಾ ರಾಶಿ:
ನಿಮ್ಮ ರಾಶ್ಯಾಧಿಪತಿಯಾದ ಶುಕ್ರನು ಸೂರ್ಯನೊಂದಿಗೆ ಸೇರಿ ೬ನೇ ಮನೆಯಲ್ಲಿ ಇರುತ್ತಾನೆ. ಇಲ್ಲಿ ಫಲಗಳು ಮಿಶ್ರವಾಗಿರುತ್ತವೆ. ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡುವುದು ಅವಶ್ಯಕ. ಸಣ್ಣಪುಟ್ಟ ಸೋಂಕುಗಳು ಕಾಡಬಹುದು. ನಿಮ್ಮ ವಿರೋಧಿಗಳ ಮೇಲೆ ನೀವು ಮೇಲುಗೈ ಸಾಧಿಸುವಿರಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ಸಾಲ ನೀಡುವಾಗ ಅಥವಾ ತೆಗೆದುಕೊಳ್ಳುವಾಗ ಎಚ್ಚರಿಕೆ ಇರಲಿ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಂಭವವಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡಬಹುದು, ತಾಳ್ಮೆಯಿಂದ ವರ್ತಿಸಿ.
ಧನು ರಾಶಿ:
ಸುಖ ಸ್ಥಾನದಲ್ಲಿ ಈ ಯೋಗವಿರುವುದರಿಂದ ಆಸ್ತಿ ಅಥವಾ ವಾಹನ ಖರೀದಿ ಮಾಡುವ ಆಲೋಚನೆ ಬರಬಹುದು. ಆದರೆ ಮನೆಯಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡದಂತೆ ಎಚ್ಚರ ವಹಿಸಿ.
ಕುಂಭ ರಾಶಿ:
ನಿಮ್ಮ ರಾಶಿಯಿಂದ ೨ನೇ ಮನೆಯಲ್ಲಿ ಈ ಯೋಗವು ಉಂಟಾಗುತ್ತಿದೆ. ಇದು ಆರ್ಥಿಕ ದೃಷ್ಟಿಯಿಂದ ಬಹಳ ಮುಖ್ಯ. ಹಣಕಾಸಿನ ಹರಿವು ಹೆಚ್ಚಾಗುತ್ತದೆ. ಹೂಡಿಕೆಗಳಿಂದ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ನಿಮ್ಮ ಮಾತಿನ ಪ್ರಭಾವ ಹೆಚ್ಚಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮ್ಮ ಮಾತಿಗೆ ಮನ್ನಣೆ ಸಿಗಲಿದೆ. ಕುಟುಂಬದಲ್ಲಿ ಸುಖ-ಸಂತೋಷದ ವಾತಾವರಣವಿರುತ್ತದೆ. ಶುಭ ಕಾರ್ಯಗಳು ಜರುಗುವ ಸಾಧ್ಯತೆಯಿದೆ.
ಮೀನ ರಾಶಿ:
ಲಗ್ನದಲ್ಲೇ ಈ ಯೋಗವಿರುವುದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ಆಕರ್ಷಣೆ ಹೆಚ್ಚುತ್ತದೆ. ಆದರೆ ಅತಿಯಾದ ಆತ್ಮವಿಶ್ವಾಸ ಅಥವಾ ಭಾವನಾತ್ಮಕ ನಿರ್ಧಾರಗಳು ಸಮಸ್ಯೆ ತರಬಹುದು.
ಬೆಂಗಳೂರು, ಮಾರ್ಚ್ 11: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್ ಪೂರೈಕೆ ವ್ಯತ್ಯಯದಿಂದಾಗಿ ರಾಜ್ಯದಲ್ಲಿ ಹೋಟೆಲ್ ಉದ್ಯಮಗಳು, ಜನ ಸಾಮಾನ್ಯರು ವಿಪರೀತ ಸಂಕಷ್ಟಕ್ಕೆ ಸಿಲುಕಿರುವ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಸಿಲಿಂಡರ್ ಕೊರತೆ ಬಗ್ಗೆ ಚರ್ಚೆಗೆ ಸ್ಪೀಕರ್ ಅವಕಾಶ ನೀಡಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಸದನದ ರಣಾಂಗಣವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಪರಸ್ಪರ ದೂಷಿಸಿಕೊಂಡಿದ್ದಾರೆ. ಚರ್ಚೆ ಮಧ್ಯೆ ಪ್ರಧಾನಿ ಮೋದಿ ಅವರ ಹೆಸರು ಪ್ರಸ್ತಾಪವಾಗಿರೋದು ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದೆ.
ಸಿಲಿಂಡರ್ ಕೊರತೆ ಬಗ್ಗೆ ವಿಧಾನಸಭೆಯಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್ ಪ್ರಸ್ತಾಪ ಮಾಡಿದ್ದು, ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ವೇಳೆ ಆಹಾರ ಸಚಿವರಿಂದ ಉತ್ತರ ಕೊಡಿಸೋಣ ಎಂದು ಸ್ಪೀಕರ್ ಹೇಳಿದ್ದಾರೆ. ಶಾಸಕರ ಪ್ರಸ್ತಾಪಕ್ಕೆ ಉತ್ತರಿಸಿದ ಆಹಾರ ಸಚಿವ ಮುನಿಯಪ್ಪ, ಇರಾನ್-ಇಸ್ರೇಲ್ ಯುದ್ಧದಿಂದ ಸಿಲಿಂಡರ್ ಪೂರೈಕೆ ಆಗ್ತಿಲ್ಲ. ಆದರೆ ಗೃಹ ಬಳಕೆಯ ಸಿಲಿಂಡರ್ಗಳಿಗೆ ಯಾವುದೇ ಸಮಸ್ಯೆ ಇಲ್ಲ. 25 ದಿನಕ್ಕೊಮ್ಮೆ ಗೃಹ ಬಳಕೆಯ ಸಿಲಿಂಡರ್ ಕೊಡುತ್ತೇವೆ. ಗ್ಯಾಸ್ ಸಿಲಿಂಡರ್ಗೆ ಹೆಚ್ಚು ಖರ್ಚು ಮಾಡಿ ಸ್ಟೋರೇಜ್ ಮಾಡುವುದು ಬೇಡ ಎಂದಿದ್ದಾರೆ. ಈ ವೇಳೆ ಮುನಿಯಪ್ಪ ಮಾತಿಗೆ ರಂಗನಾಥ್ ಮರು ಪ್ರಶ್ನೆ ಮಾಡಿದ್ದು, 2000 ರೂ. ಕೊಟ್ಟು ವಾಣಿಜ್ಯ ಸಿಲಿಂಡರ್ ಪಡೆಯುವುದು ಹೇಗೆ? ಮೋದಿ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ ಎಂದಿದ್ದಾರೆ. ಈ ವೇಳೆ ಪ್ರತಿಪಕ್ಷ ಸದಸ್ಯರು ಆಕ್ಷೇಪ ತೆಗೆದಿದ್ದು, ಸುಖಾ ಸುಮ್ಮನೆ ಆರೋಪ ಮಾಡಬೇಡಿ ಎಂದಿದ್ದಾರೆ. ಇತ್ತ ಬಿಜೆಪಿ ವಿರುದ್ಧ ಕಾಂಗ್ರೆಸ್ ಶಾಸಕರಿಂದಲೂ ಆಕ್ರೋಶ ವ್ಯಕ್ತವಾಗಿದ್ದು, ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಸರಿಪಡಿಸುವುದು ಯಾರು? ಬಿಜೆಪಿಯವರು ಯಾಕೆ ಮಾತನಾಡಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಮೋದಿ ಅಂದರೆ ಇವರಿಗೆಷ್ಟು ಭಯ ಎಂದು ಗೋಪಾಲಕೃಷ್ಣ ಹೇಳಿದ್ದು ಮತ್ತಷ್ಟು ಮಾತಿನ ಚಕಮಕಿಗೆ ಕಾರಣವಾಗಿದೆ.
ಈ ವೇಳೆ ಮಧ್ಯಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ, ಮುನಿಯಪ್ಪ ತೈಲ ಕಂಪನಿಯವರ ಜೊತೆ ಮಾತನಾಡಿದ್ದಾರೆ. ಗ್ಯಾಸ್ ಪೂರೈಕೆ ಮಾಡುವುದು ಕೇಂದ್ರ ಸರ್ಕಾರ ಅಲ್ಲವೇ? ಅವರು ಉತ್ತರ ಹೇಳೋಕೆ ಅವಕಾಶ ಕೊಡಿ. ಕೇಂದ್ರ ಸಚಿವರು ಹೇಳಿದ್ದನ್ನು ಅವರು ಪ್ರಸ್ತಾಪ ಮಾಡಿದ್ರು. ನೀವು ಕೇಂದ್ರ ಸರ್ಕಾರ ಅಂದರೆ ಎದ್ದು ನಿಂತಿಕೊಳ್ಳುತ್ತೀರಾ ಎಂದು ಸಿಎಂ ಹೇಳಿದ್ದಾರೆ. ಇದು ಸಿಎಂ ಮತ್ತು ವಿಪಕ್ಷ ನಾಯಕರ ನಡುವೆ ವಾಗ್ವಾದಕ್ಕೆ ಕಾರಣವಾಗಿದ್ದು, ವಾಣಿಜ್ಯ ಬಳಕೆ ಸಿಲಿಂಡರ್ ಬರಲಿಲ್ಲ ಅಂದ್ರೆ ಚಳವಳಿ ಮಾಡ್ಬೇಕಾಗುತ್ತೆ ಎಂದು ಸಿಎಂ ಹೇಳಿರೋದಾಗಿ ಅಶೋಕ್ ಕಿಡಿ ಕಾರಿದ್ದಾರೆ. ಆದ್ರೆ ಚಳವಳಿ ಮಾಡಿ ಅಂತಾ ಪ್ರಚೋದನೆ ಮಾಡಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದರೂ ಕೇಳದ ಅಶೋಕ್, ಚಳವಳಿ ಮಾಡಿ ಎಂದಿದ್ದೀರಿ ಅಂತಾ ಮಾಧ್ಯಮಗಳಲ್ಲಿ ಬಂದಿದೆ. ಸ್ಟ್ರೈಕ್ ಮಾಡೋಕೆ ಬೆಂಬಲ ಇದೆ ಎಂದಿದ್ದೀರಿ ಎಂದಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟಾದ ಪ್ರಸಂಗಕ್ಕೂ ವಿಧಾನಸಭೆ ಸಾಕ್ಷಿಯಾಗಿದೆ.
ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಟಿ20 ಕ್ರಿಕೆಟ್ನಿಂದ 18 ತಿಂಗಳುಗಳ ಕಾಲ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಏಕದಿನ ವಿಶ್ವಕಪ್ಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದು ಈ ಮೂಲಕ ತಮ್ಮ ಕೆಲಸದ ಹೊರೆಯನ್ನು ಸರಿದೂಗಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಭಾರತ ತಂಡದ ದ್ವಿಪಕ್ಷೀಯ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ.
ಏಕದಿನ ಮತ್ತು ಟೆಸ್ಟ್ ಗಮನ:
ಜಸ್ಪ್ರೀತ್ ಬುಮ್ರಾ 2024ರ ಟಿ20 ವಿಶ್ವಕಪ್ ಬಳಿಕ ಸತತ ಟಿ20 ಪಂದ್ಯಗಳನ್ನಾಡಿದ್ದಾರೆ. ಇದಕ್ಕೆ ಮುಖ್ಯ ಕಾರಣ 2026ರ ಟಿ20 ವಿಶ್ವಕಪ್. ಇದೀಗ ಈ ವಿಶ್ವಕಪ್ನಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಲ್ಲದೆ ಟೀಮ್ ಇಂಡಿಯಾದ ಮುಂದಿನ ಗುರಿ 2027ರ ಏಕದಿನ ವಿಶ್ವಕಪ್.
ಸೌತ್ ಆಫ್ರಿಕಾ, ನಮೀಬಿಯಾ ಹಾಗೂ ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್‌ಗೆ ಸಿದ್ಧರಾಗಲು ಅವರು ಟೆಸ್ಟ್ ಮತ್ತು ಏಕದಿನ ಪಂದ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲು ಜಸ್ಪ್ರೀತ್ ಬುಮ್ರಾ ನಿರ್ಧರಿಸಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಕಣಕ್ಕೆ:
ಪ್ರಸ್ತುತ ಮಾಹಿತಿ ಪ್ರಕಾರ, ಜಸ್ಪ್ರೀತ್ ಬುಮ್ರಾ ಮುಂದಿನ 18 ತಿಂಗಳುಗಳ ಕಾಲ ಭಾರತದ ಪರ ದ್ವಿಪಕ್ಷೀಯ ಟಿ20 ಸರಣಿಗಳನ್ನು ಆಡುವುದಿಲ್ಲ. ಆದಾಗ್ಯೂ, 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಆಡುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂಬರುವ ಒಲಿಂಪಿಕ್ಸ್ ತಂಡದಲ್ಲಿ ಬುಮ್ರಾ ಅವರನ್ನು ಎದುರು ನೋಡಬಹುದು.
ನಿವೃತ್ತಿಯಿಲ್ಲ:
ಭಾರತ ಟಿ20 ತಂಡದಿಂದ 18 ತಿಂಗಳುಗಳ ಕಾಲ ಹೊರಗುಳಿದರೂ ಜಸ್ಪ್ರೀತ್ ಬುಮ್ರಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಿಲ್ಲ. ಬದಲಿಗೆ ಕೇವಲ ತಮ್ಮ ಫಿಟ್‌ನೆಸ್ ಕಾಪಾಡಿಕೊಳ್ಳಲು ಈ ವಿರಾಮ ಪಡೆಯುತ್ತಿದ್ದಾರೆ ಎಂದು ಸ್ಪಷ್ಟಪಡಿಸಲಾಗಿದೆ.
ಐಪಿಎಲ್ ಕಥೆಯೇನು?
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಹೊರಗುಳಿದರೂ ಜಸ್ಪ್ರೀತ್ ಬುಮ್ರಾ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಬುಮ್ರಾ ಈ ಬಾರಿಯ ಐಪಿಎಲ್ ಟೂರ್ನಿಯಲ್ಲೂ ಕಣಕ್ಕಿಳಿಯಲಿದ್ದಾರೆ.
ಅಂದರೆ ಬುಮ್ರಾ ಬ್ರೇಕ್ ತೆಗೆದುಕೊಳ್ಳುತ್ತಿರುವುದು ಭಾರತ ತಂಡದ ಟಿ20 ಸರಣಿಗಳಿಂದ ಮಾತ್ರ. ಅಲ್ಲದೆ 2027ರ ಏಕದಿನ ವಿಶ್ವಕಪ್ ಹಾಗೂ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಬಳಿಕ ಅವರು ಮತ್ತೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹೈದರಾಬಾದ್, ಮಾರ್ಚ್ 11: ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ.
ಗದಗ, ಮಾ.11: ಲಕ್ಕುಂಡಿಯಲ್ಲಿ (Lakkundi Gold Treasure) ಈ ವರ್ಷದ (2026) ಜನವರಿ 10ರಂದು ಪತ್ತೆಯಾಗಿದ್ದ ಚಿನ್ನದ ನಿಧಿಯ ಕುರಿತು ಕುತೂಹಲಕಾರಿ ವಿಷಯಗಳು ಹೊರಬಂದಿವೆ. ರಿತ್ತಿ ಕುಟುಂಬದ ಮನೆಯ ಪಾಯ ತೋಡುವಾಗ ಸಿಕ್ಕಿದ್ದ ಈ ಆಭರಣಗಳು ಕೇವಲ ಬಂಗಾರವಲ್ಲ, ಅವು ಇತಿಹಾಸದ ಅಮೂಲ್ಯ ದಾಖಲೆಗಳಾಗಿವೆ. ಗದಗ ಜಿಲ್ಲಾಡಳಿತ ಭವನದಲ್ಲಿ ಡಿಸಿ ನೇತೃತ್ವದಲ್ಲಿ ನಡೆದ ಪರಿಶೀಲನೆಯಲ್ಲಿ ಪುರಾತತ್ವ ಶಾಸ್ತ್ರಜ್ಞರ ಸಮಿತಿ ಈ ಕೆಲವೊಂದು ಅಚ್ಚರಿಯ ವಿಚಾರಗಳನ್ನು ತಿಳಿಸಿದೆ. ಈ ಆಭರಣಗಳು ಯಾವ ಕಾಲದ್ದೂ, ಯಾರಿಗೆ ಸೇರಬೇಕಿರುವುದು, ಹಾಗೂ ಇದರ ಮೌಲ್ಯಗಳು ಎಷ್ಟು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಆಭರಣಗಳು ಸುಮಾರು 500 ರಿಂದ 600 ವರ್ಷಗಳಷ್ಟು ಹಳೆಯವು. ಇವು ಕಲ್ಯಾಣ ಚಾಲುಕ್ಯರು ಮತ್ತು ವಿಜಯನಗರ ಅರಸರ ಕಾಲದ ಕಲೆ ಮತ್ತು ಸಂಸ್ಕೃತಿಯನ್ನು ಸಾರಿ ಹೇಳುತ್ತಿವೆ. ಇವು ಸಾಮಾನ್ಯ ಮಹಿಳೆಯರು ಧರಿಸುವ ಒಡವೆಗಳಲ್ಲ, ಬದಲಿಗೆ ಹೆಣ್ಣು ದೇವರಿಗೆ ಅಥವಾ ಉತ್ಸವ ಮೂರ್ತಿಗಳಿಗೆ ಅಲಂಕರಿಸುವ ಅಪರೂಪದ ಆಭರಣಗಳಾಗಿವೆ. ಇದರಲ್ಲಿ ಹೆಣ್ಣು ದೇವರ ಮೂರ್ತಿಯೂ ಪತ್ತೆಯಾಗಿದೆ.ಚಿನ್ನದ ಜೊತೆಗೆ ಈ ಆಭರಣಗಳಲ್ಲಿ ಅತ್ಯಂತ ಅಪರೂಪದ ನೀಲಮಣಿ, ಸ್ಪಟಿಕ, ಹವಳ ಸೇರಿದಂತೆ ರತ್ನಗಳನ್ನು ಬಳಸಲಾಗಿದೆ.
ಕೇವಲ ಚಿನ್ನದ ತೂಕದ (465 ಗ್ರಾಂ) ಲೆಕ್ಕಾಚಾರ ಹಾಕಿದರೆ ಇಂದಿನ ಮಾರುಕಟ್ಟೆ ದರದಲ್ಲಿ ಸುಮಾರು 35-40 ಲಕ್ಷ ರೂ. ಆಗಬಹುದು. ಆದರೆ ಇವುಗಳ ‘ಆ್ಯಂಟಿಕ್’ (ಪ್ರಾಚೀನ) ಮೌಲ್ಯ ಅಂದಾಜು 8 ಕೋಟಿ ರೂಪಾಯಿ! ಅಂದರೆ ಈಗಿನ ದರಕ್ಕಿಂತ ಹತ್ತು ಪಟ್ಟು ಹೆಚ್ಚು. ಸಮಿತಿ ಚೇರ್ಮನ್ ಎಂ.ಎಸ್. ಕೃಷ್ಣಮೂರ್ತಿ ನೇತೃತ್ವದಲ್ಲಿ ಕಲಾ ಇತಿಹಾಸಗಾರರಾದ ರಾಘವೇಂದ್ರ ಕುಲಕರ್ಣಿ, ಪ್ರೊ. ಚೂಡಾಮಣಿ ನಂದಗೋಪಾಲ, ಶಾಸನ ತಜ್ಞ ಹನುಮಾಪಕ್ಷಿ ಗೋಗಿ, ರತ್ನಶಾಸ್ತ್ರಜ್ಞ ಪ್ರಭು ಕಮ್ಮಾರ ಮತ್ತು ಡಾ. ಶೇಜೇಶ್ವರ ಅವರ ತಂಡ ನಾಲ್ಕೈದು ಗಂಟೆಗಳ ಕಾಲ ಒಂದೊಂದು ಆಭರಣವನ್ನು ಸೂಕ್ಷ್ಮವಾಗಿ ಪರಿಶೀಲಿಸಿದೆ.
ಬೆಂಗಳೂರು, ಮಾ.11:ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಶಾಸಕ ಸುನೀಲ್ ಕುಮಾರ್ ಅವರು ಸಚಿವ ತಂಗಡಗಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಿಗಮದ ಅಧ್ಯಕ್ಷರ ನೇಮಕ ಮತ್ತು ಅನುದಾನ ಹಂಚಿಕೆಯಲ್ಲಿನ ಅವ್ಯವಸ್ಥೆಗಳನ್ನು ಎತ್ತಿ ತೋರಿಸಿದ್ದಾರೆ. ನಿಗಮವನ್ನು ಜನವರಿ 2024ರಲ್ಲಿ ನೋಂದಾಯಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ, ಅಧ್ಯಕ್ಷರ ನೇಮಕವು ಅದಕ್ಕೂ ಎಂಟು ತಿಂಗಳ ಮುಂಚೆಯೇ ನಡೆದಿರುವುದು ವಿರೋಧ ಪಕ್ಷದ ನಾಯಕರ ಪ್ರಮುಖ ಪ್ರಶ್ನೆಯಾಗಿದೆ. “ಯಾವ ಪುರುಷಾರ್ಥಕ್ಕೆ ನಿಗಮದ ಅಧ್ಯಕ್ಷರ ನೇಮಕ ಮಾಡಿದ್ರಿ?” ಎಂದು ಸುನೀಲ್ ಅವರು ಪ್ರಶ್ನಿಸಿದರು. ನಿಗಮದ ಬಗ್ಗೆ ಆಸಕ್ತಿ ಇದ್ದಿದ್ದರೆ, ನೋಂದಣಿ ಪ್ರಕ್ರಿಯೆಯನ್ನು ಮೊದಲೇ ಪೂರ್ಣಗೊಳಿಸಿ ಆರ್ಥಿಕ ನೆರವು ನೀಡಬಹುದಿತ್ತು ಎಂದು ಅವರು ವಾದಿಸಿದರು. ಸುನೀಲ್ ಅವರು ತಮ್ಮ ಪ್ರಶ್ನೆಯನ್ನು ವಿಸ್ತರಿಸುತ್ತಾ, ದೇವರಾಜ್ ಅರಸು ನಿಗಮಕ್ಕೆ ಈ ವರ್ಷ ನಿಗದಿಪಡಿಸಿದ ಅನುದಾನದಲ್ಲಿ ಎಷ್ಟು ಹಣವನ್ನು ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ವರ್ಗಾಯಿಸಲಾಗುವುದು ಅಥವಾ 2025-26ನೇ ಸಾಲಿನಲ್ಲಿ ಕೋಶದಲ್ಲಿದ್ದ 10 ಕೋಟಿ ರೂಪಾಯಿ ಸೇರಿದಂತೆ ಎಷ್ಟು ಹೆಚ್ಚುವರಿ ಅನುದಾನವನ್ನು ಈ ನಿಗಮಕ್ಕೆ ನಿಗದಿಪಡಿಸಲಾಗುವುದು ಎಂದು ಸ್ಪಷ್ಟಪಡಿಸುವಂತೆ ಒತ್ತಾಯಿಸಿದರು. ನಿಗಮದ ನಿಯಮಾವಳಿಗಳು ಮತ್ತು ಅನುದಾನವನ್ನು ಯಾವ ಉದ್ದೇಶಗಳಿಗಾಗಿ ಬಳಸಬಹುದು ಎಂಬುದರ ಕುರಿತು ಸ್ಪಷ್ಟನೆ ನೀಡುವಂತೆ ಅವರು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಾರಾಯಣ ಗುರು ನಿಗಮವನ್ನು ನೇಮಕ ಮಾಡಿದ್ದರೂ, ಅದರ ಕಾರ್ಯರೂಪಗಳನ್ನು ಅಂತಿಮಗೊಳಿಸದ ಕಾರಣ ಅದು ನಿಷ್ಕ್ರಿಯವಾಗಿತ್ತು ಎಂದು ತಿಳಿಸಿದರು. ಜನವರಿ 2024ರಲ್ಲಿ ನಿಗಮವನ್ನು ನೋಂದಾಯಿಸಲಾಗಿದ್ದು, ಈಗ ಅದರ ಕಾರ್ಯರೂಪಗಳನ್ನು ಸಿದ್ಧಪಡಿಸಲಾಗುತ್ತಿದೆ. ನೇರ ಸಾಲ, ಗಂಗಾ ಕಲ್ಯಾಣ, ಸಾವಲಂಬಿ ಸಾರಥಿ ಯೋಜನೆಗಳಂತೆ, ಈ ನಿಗಮದ ಅಡಿಯಲ್ಲಿಯೂ ಫಲಾನುಭವಿಗಳಿಗೆ ನೇರವಾಗಿ ಪ್ರಯೋಜನಗಳನ್ನು ತಲುಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ವಿವರಿಸಿದರು. ಪ್ರಸ್ತುತ 10 ಕೋಟಿ ರೂಪಾಯಿ ಅನುದಾನ ಲಭ್ಯವಿದ್ದು, ಹೆಚ್ಚುವರಿ ಅನುದಾನದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಬಜೆಟ್ ಹಂಚಿಕೆಗಳು ಅಂತಿಮಗೊಂಡ ನಂತರ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಆದರೆ, ಸುನೀಲ್ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದರು. ನಾರಾಯಣ ಗುರು ಅಭಿವೃದ್ಧಿ ನಿಗಮವು ರಾಜ್ಯಾದ್ಯಂತ ವ್ಯಾಪ್ತಿ ಹೊಂದಿದ್ದು, 10-12 ಜಿಲ್ಲೆಗಳಲ್ಲಿ ಬಹುಸಂಖ್ಯಾತ ಸಮುದಾಯವನ್ನು ಪ್ರತಿನಿಧಿಸುತ್ತದೆ. ಆದ್ದರಿಂದ, ಕನಿಷ್ಠ 50 ರಿಂದ 100 ಕೋಟಿ ರೂಪಾಯಿಗಳ ಅನುದಾನ ಅಗತ್ಯವಿದೆ ಎಂದು ಅವರು ವಾದಿಸಿದರು. ಕೇವಲ 10 ಕೋಟಿ ರೂಪಾಯಿಗಳಿಂದ ನಿಗಮ ಹೇಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ ಎಂದು ಪ್ರಶ್ನಿಸಿದರು. ನಿಗಮ ಪ್ರಾರಂಭವಾಗುವ ಮೊದಲೇ ಅಧ್ಯಕ್ಷರ ನೇಮಕ ಮಾಡಿ, ಕೇವಲ 10 ಕೋಟಿ ರೂ. ಅನುದಾನ ನೀಡಿ ಎಲ್ಲವನ್ನು ಹಂಚಿಕೆ ಮಾಡುವುದು ಸರಿಯಲ್ಲ ಎಂದು ಸುನೀಲ್ ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು, ಮಾರ್ಚ್ 11: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಮಾರ್ಚ್ 9ರಂದೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಭಯವೇ ಇಲ್ಲದಂತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಂತೋಷ್ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದ್ದು, ಒಂದೆರಡಲ್ಲ ಬರೋಬ್ಬರಿ 68 ಬಾರಿ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ದಾಳಿ ನಡೆಸಿರೋದು ಶರತ್ ಮತ್ತು ಗ್ಯಾಂಗ್ ಎಂಬುದು ಗೊತ್ತಾಗಿದ್ದು, ಅಟ್ಯಾಕ್ ಬಳಿಕ ಅರೋಪಿಗಳು ಡ್ಯಾನ್ಸ್ ಮಾಡಿ ವಿಕೃತಿ ಕೂಡ ಮೆರೆದಿದ್ದಾರೆ.
ಇನ್ನು ಹಲ್ಲೆಗೊಳಗಾದ ಸಂತೋಷ್ ಮೇಲೆ ಕೊಲೆ ಆರೋಪವಿತ್ತು. ಕಾರು ಓಡಿಸುವ ವಿಚಾರಕ್ಕೆ ಸ್ನೇಹಿತ ಮೋಹನ್ ಎಂಬಾತನ ಜೊತೆಗೆ ಸಂತೋಷ್ ಬೆಂಗಳೂರಿನಲ್ಲಿ ಗಲಾಟೆ ಮಾಡಿಕೊಂಡಿದ್ದ. ಬಳಿಕ ಮಂಡ್ಯದಲ್ಲಿ ಕುಡಿದು ಕೊಳ್ಳೇಗಾಲಕ್ಕೆ ಹೋಗಿದ್ದ ವೇಳೆ ಮೋಹನ್ ಮೇಲೆ ದಾಳಿ ಮಾಡಿದ್ದ ಸಂತೋಷ್ ಆತನನ್ನು ಕೊಲೆ ಮಾಡಿದ್ದ. 2024ರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮೋಹನನ್ನು ಕಾರಿನಲ್ಲಿ ಕೂರಿಸಿ ಭಯಗೊಂಡ ಸಂತೋಷ್ ಪರಾರಿಯಾಗಿದ್ದ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊದಲಿಗೆ ಈ ಬಗ್ಗೆ UDR ಆಗಿತ್ತು. ನಂತರ ತನಿಖೆ ವೇಳೆ ಇದು ಕೊಲೆ ಎಂದು ಗೊತ್ತಾಗಿ ಪ್ರಕರಣ ದಾಖಲಿಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ಸಂತೋಷ್ 4 ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದ. ಹೀಗಾಗಿ ಹಳೇ ದ್ವೇಷದ ಹಿನ್ನೆಲೆ ಈತನಿಂದ ಕೊಲೆಯಾಗಿದ್ದ ಮೋಹನ್ನ ಸಹೋದರ ಶರತ್ ತಂಡಕಟ್ಟಿಕೊಂಡು ಬಂದು ಸಂತೋಷ್ ಮೇಲೆ ಅಟ್ಯಾಕ್ ಮಾಡಿದ್ದಾನೆ ಎನ್ನಲಾಗಿದೆ.