ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!
ಟಿ20 ವಿಶ್ವಕಪ್ ಫೈನಲ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡ ಟಿ20 ಸರಣಿಗಾಗಿ ಸಜ್ಜಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ವಿಶ್ವಕಪ್ನಲ್ಲಿ ಕಣಕ್ಕಿಳಿದಿದ್ದ 8 ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಇನ್ನು ನಾಯಕ ಮಿಚೆಲ್ ಸ್ಯಾಂಟ್ನರ್ ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಇನ್ನುಳಿದ ಎರಡು ಮ್ಯಾಚ್ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮೂವರು ಹೊಸ ಆಟಗಾರರಿಗೆ ಅವಕಾಶ…