ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಮಾಗಡಿ, ಮಾ.11: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ. ಕುಣಿಗಲ್ ಮೂಲದ ರಾಮು ಎಂಬ ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ನಿಯಂತ್ರಣ ತಪ್ಪಿದ ಕ್ಯಾಂಟರ್ ಎದುರಿಗೆ ಹೋಗುತ್ತಿದ್ದ ಕಾರು ಹಾಗೂ ಮತ್ತೇರಡು ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರೊಂದು ರಸ್ತೆಯಲ್ಲೇ…