All posts by nagaraj11081993

ಕರ್ನಾಟಕ ಹವಾಮಾನ: ಮುಂದಿನ 3 ದಿನಗಳ ಕಾಲ ಹೇಗಿರಲಿದೆ ವಾತಾವರಣ?

ಕರ್ನಾಟಕ ಹವಾಮಾನ: ಮುಂದಿನ 3 ದಿನಗಳ ಕಾಲ ಹೇಗಿರಲಿದೆ ವಾತಾವರಣ?

ಬೆಂಗಳೂರು, ಮಾ.11: ರಾಜ್ಯಾದ್ಯಂತ ಮಾರ್ಚ್ ತಿಂಗಳ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಂಗೆಟ್ಟಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕೂಡ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜಧಾನಿಯಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಹೆಚ್ಚಿರಲಿದೆ. ಕಲಬುರಗಿ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲು ಕಡು ತೀವ್ರವಾಗಿರಲಿದ್ದು, ತಾಪಮಾನವು 38°C ರಿಂದ 40°C ಗಡಿ ತಲುಪುವ ಸಾಧ್ಯತೆ ಇದೆ. ಹೀಗಾಗಿ ‘ಹೀಟ್ ವೇವ್’ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಹವಾಮಾನವು ಆರ್ದ್ರತೆಯಿಂದ ಕೂಡಿದ್ದು (Humid), ಸೆಖೆ ಹೆಚ್ಚಿರಲಿದೆ.ದಕ್ಷಿಣ ಒಳನಾಡಿನ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಗುಡ್ ನ್ಯೂಸ್: ಬಿಎಂಟಿಸಿ,ಮೆಟ್ರೋ ಪ್ರಯಾಣಕ್ಕೆ ಒಂದೇ ಸ್ಮಾರ್ಟ್ ಕಾರ್ಡ್ ಸಾಕು

ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ನೇರ ಬಿಸಿಲಿಗೆ ಒಡ್ಡಿಕೊಳ್ಳಬಾರದು ಮತ್ತು ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಮತ್ತು ಉಡುಪಿ ನಗರಗಳ ಮುಂದಿನ 3 ದಿನಗಳ (ಮಾರ್ಚ್ 12 – ಮಾರ್ಚ್ 14) ಕಾಲ ವಾತಾವರಣದಲ್ಲಿ ತುಂಬಾ ಬದಲಾವಣೆಗಳು ಆಗಲಿದೆ. ಹೆಚ್ಚು ಬಿಸಿಲಿನ ವಾತಾವರಣದಿಂದ ಭಾಗದಲ್ಲಿ ಇರಲಿದೆ. ಉತ್ತರ ಕರ್ನಾಟಕ (ಹುಬ್ಬಳ್ಳಿ/ಬೆಳಗಾವಿ)ದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸಿ ಎಂದು ಹೇಳಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಮನಶ್ಶಾಂತಿಗೆ ಧಾರ್ಮಿಕ ಕಾರ್ಯ

ಮೇಷ ರಾಶಿ:

ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಿಂದಾಗದ ಕೆಲಸವನ್ನು ನೀವು ಒಪ್ಪಿಕೊಳ್ಳಲಾರಿರಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ.

ವೃಷಭ ರಾಶಿ:

ಮೋಸದ ಜಾಲಕ್ಕೆ ಸಿಕ್ಕುವ, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಕೊಟ್ಟ ಹಣವನ್ನು ಹಿಂದಿರುಗಿಸುವಿರಿ. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟಚಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಹೊಸ ಮನೆಯನ್ನು ಖರೀದಿಸುವ ಬಗ್ಗೆ ಸಂಗಾತಿಯ ಜೊತೆ ಚರ್ಚಿಸುವಿರಿ.

ಮಿಥುನ ರಾಶಿ:

ಹಿತಶತ್ರುಗಳು ನಿಮ್ಮ ಸಂಪತ್ತನ್ನು ಬಳಸಿಕೊಳ್ಲಕುವರು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ಇದು ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುತ್ತದೆ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ.

ಕರ್ಕಾಟಕ ರಾಶಿ:

ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ. ನಿಮ್ಮ ಮಾತನ್ನು ನೀವು ನಿಯಂತ್ರಿಸಬೇಕಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು.

ಸಿಂಹ ರಾಶಿ:

ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಮನೋರಂಜನೆಗೆ ಹೋದರೂ ಸರಿಯಾದ ಆಸ್ವಾದನೆ ಸಿಗದು. ಅತಿಯಾದ ಹಸಿವಾಗಬಹುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಇಂದು ಸಮಯವನ್ನು ಕಳೆಯುವುದು ಕಷ್ಟವಸದೀತು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ.

ಕನ್ಯಾ ರಾಶಿ:

ಕಳೆದುಕೊಂಡ ಮಾತ್ರಕ್ಕೆ ಪಡೆಯಲಾಗದು ಎಂಬ ಭಾವ ಬೇ. ಉತ್ತಮವಾದುದನ್ನು ಪಡೆಯುವ ಚಮತ್ಕಾರ. ನಿಮ್ಮ ಸಂಬಂಧವನ್ನು ನೀವು ಉಳಿಸಿಕೊಳ್ಳಬೇಕು. ನೀವು ಯಾರಿಗೂ ಸಾಲ ನೀಡಬಾರದು. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ನಿದ್ರೆಯಲ್ಲಿ ದುಃಸ್ವಪ್ನಗಳು ಬೀಳಬಹುದು. ಮನೆಯ ಖರ್ಚುಗಳನ್ನು ಸ್ವಲ್ಪ ನಿಯಂತ್ರಿಸಬೇಕು. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ.

ತುಲಾ ರಾಶಿ:

ಸಮ್ಮಾನಗಳಿಂದ ಸಮಾಧಾನ ಇರದು.‌ ಬೇರೆ ಯೋಚನೇಯೇ ನಿಮ್ಮದು. ನಿಮ್ಮ ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಖರ್ಚು ಹೆಚ್ಚಾಗುತ್ತದೆ. ನಿಮ್ಮ ಮನಸ್ಸು ತೊಂದರೆಗೀಡಾಗಿಯೇ ಇರುತ್ತದೆ. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಸಂಸ್ಥೆಯ ಮುಖ್ಯಸ್ಥರಾಗಲು ಆಹ್ವಾನವು ಬರಬಹುದು. ದುಃಖವನ್ನು ಸಹಿಸುವುದು ಅನಿವಾರ್ಯವಾದೀತು. ಅನಪೇಕ್ಷಿತ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ.

ವೃಶ್ಚಿಕ ರಾಶಿ:

ನಿಮ್ಮ ಕೆಲಸವನ್ನು ಬೇರೆಯವರಿಗೆ ವಹಿಸಬೇಡಿ. ಯೋಗ್ಯ ಸಂಬಂಧವನ್ನು ವಿವಾಹಕ್ಕೆ ಹುಡುಕಿಕೊಳ್ಳುವಿರಿ. ಕೆಲವು ಹಳೆಯ ಒಪ್ಪಂದಗಳು ಸಮಯಕ್ಕೆ ಸರಿಯಾಗಿ ಅಂತಿಮಗೊಳ್ಳದ ಕಾರಣ ನೀವು ನಷ್ಟ ಅನುಭವಿಸಬಹುದು. ಸ್ತ್ರೀಯರಿಂದ‌ ಕೆಲವು ಸಮಸ್ಯೆಯು ಬರಲಿದೆ. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು. ಕೋಪದ ನಿಯಂತ್ರಣವು ನಿಮಗೆ ಕಷ್ಟವಾದೀತು. ಪರೀಕ್ಷೆಯಲ್ಲಿ ಉತ್ತಮ‌ ಸಾಧನೆಗೆ ಸಿದ್ಧತೆಯನ್ನು ನಡೆಸುವಿರಿ. ಆದಾಯದಿಂದ ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ.

ಧನು ರಾಶಿ:

ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಅಸಂಬದ್ಧ ಮಾತುಗಳ ನಿಮ್ಮನ್ನು ವ್ಯಕ್ತಿತ್ವವನ್ನು ತಿಳಿಸುವುದು. ಬೇಡವೆಂದುಕೊಂಡ ವಿಷಯವೂ ನಿಮ್ಮ ಬಳಿ ಸುತ್ತಿ ಬರುವುದು. ನೂತನ ನಿರ್ಮಾಣಗಳಿಗೆ ತಡೆಯಾಗುವುದು. ನಿಮ್ಮ ಎದುರಾಳಿ ನಿಮ್ಮನ್ನು ಸೋಲಿಸಬಹುದು. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅಧಿಕೃತ ಮಾಡಿಕೊಳ್ಳದೇ ಯಾವುದನ್ನೂ ಹೇಳುವುದು ಬೇಡ. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ.

ಮಕರ ರಾಶಿ:

ನಿಮ್ಮ ವ್ಯವಹಾರ ಮೊದಲಿಗಿಂತ ಉತ್ತಮವಾಗಿ ನಡೆಯಲಿದೆ. ಗುಣದಲ್ಲಿ ಮತ್ಸರ ಬಿಟ್ಟು ಒಳ್ಳೆಯದರ ಕಡೆಗೆ ಹೊರಟುಬಿಡಿ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ಸಾಲದಿಂದ ನಿಮ್ಮ ಬಗ್ಗೆ ಬೇಡದ ಅಭಿಪ್ರಾಯಗಳು ಬರಬಹುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಹತ್ತಿರದ ಬಂಧುಗಳಿಂದ ವಿಶ್ವಾಸಕ್ಕೆ ತೊಂದರೆಯಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ.

ಕುಂಭ ರಾಶಿ:

ನೀವು ಕೆಲವು ಹೊಸ ಯೋಜನೆಯಲ್ಲಿ ಕೆಲಸ ಮಾಡಬಹುದು. ಕುಟುಂಬದ ವಿಷಯಗಳಿಗೆ ಸಂಬಂಧಿಸಿದಂತೆ ನಿಮ್ಮ ಒತ್ತಡ ಹೆಚ್ಚಾಗುತ್ತದೆ. ಇಂದಿನ ಸಮಯವನ್ನು ಸದ್ವಿನಿಯೋಗ ಮಾಡಿಕೊಳ್ಳುವಿರಿ. ಆರಂಭಿಸಿದ ಕಾರ್ಯವನ್ನು ಮೊಟುಕುಗೊಳಿಸುವಿರಿ. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ.

ಮೀನ ರಾಶಿ:

ಬೇರೆಯವರ ವಿಷಯಗಳಲ್ಲಿ ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಬೇಕು. ಖರ್ಚುಗಳನ್ನು ನಿಯಂತ್ರಿಸಲು ಹೋಗಿ ಅಪಮಾನದಲ್ಲಿ ಸಿಲುಕುವಿರಿ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ಅಪ್ರಯೋಜಕ ಸಂಗತಿಗಳು ಮುಖ್ಯವಾದೀತು. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.‌

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ವಜ್ರ, ಕರಣ : ಕೌಲವ, ಸೂರ್ಯೋದಯ – 06 – 35 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:34 – 14:04, ಯಮಗಂಡ ಕಾಲ 08:06 – 09:35, ಗುಳಿಕ ಕಾಲ 11:05 – 12:34

-ಲೋಹಿತ ಹೆಬ್ಬಾರ್ – 8762924271 (what’s app only)

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 11ರ ದಿನಭವಿಷ್ಯ

ಮನೆಯ ಮುಖ್ಯ ದ್ವಾರಕ್ಕೆ ಅರಿಶಿನ ನೀರು ಚಿಮುಕಿಸಿ. ಹೀಗೆ ಮಾಡುವುದರಿಂದ ನಕಾರಾತ್ಮಕವಾದ ದೃಷ್ಟಿ ದೋಷಗಳು ಪರಿಹಾರ ಆಗಲಿವೆ. ಕುಟುಂಬ ಸದಸ್ಯರ ಮಧ್ಯೆ ಇರುವಂಥ ಭಿನ್ನಾಭಿಪ್ರಾಯಗಳು ದೂರವಾಗಲಿವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಬೇಗ ಆಸಕ್ತಿ ಕಳೆದುಕೊಳ್ಳುವಂತೆ ಆಗಲಿದೆ. ಮನಸ್ಸಿಟ್ಟು, ಶ್ರಮಪಟ್ಟು ಮಾಡಿದ ಕೆಲಸ ಎಲ್ಲದರಲ್ಲೂ ಯಶಸ್ಸು ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ಮುಖ್ಯವಾಗಿ ನಿಮಗಿರುವ ಆಸಕ್ತಿ ಹಾಗೂ ಅಗತ್ಯವೇ ಎಲ್ಲರಿಗೂ ಇರುತ್ತದೆ ಎಂದು ಭಾವಿಸುವುದಕ್ಕೆ ಹೋಗಬೇಡಿ. ಮೇಲುನೋಟಕ್ಕೆ ಕಾಣುವಂತೆಯೇ ನೀವು ಈ ಕೆಲಸ ಮಾಡಿದ್ದು ಸಾಕು ಎಂಬಂತೆ ಕೆಲವರು ನಡೆದುಕೊಳ್ಳುವುದಕ್ಕೆ ಆರಂಭಿಸಲಿದ್ದಾರೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಈ ಹಿಂದೆ ಯಾವಾಗಲೋ ನಿಮ್ಮಿಂದ ಆಗಿದ್ದ ನಷ್ಟವೊಂದಕ್ಕೆ ಪರಿಹಾರ ಕಟ್ಟಿಕೊಡುವಂತೆ ಕೆಲವರು ಬೆನ್ನು ಬೀಳಲಿದ್ದಾರೆ. ಈ ರೀತಿ ನೀವು ಮಾತು ನೀಡಿದ್ದಿರಿ, ಅದಕ್ಕೆ ನಾವೇ ಸಾಕ್ಷಿ ಎಂದು ಹೇಳಿಕೊಂಡು ಕೆಲವು ಜನ ಅವರ ಬೆಂಬಲಕ್ಕೂ ನಿಲ್ಲಲಿದ್ದಾರೆ. ಇಂತಹ ಸನ್ನಿವೇಶದಲ್ಲಿ ಏನು ಹೇಳಬೇಕು ಎಂದು ತಿಳಿಯದೆ ನೀವು ಗೊಂದಲಕ್ಕೆ ಈಡಾಗುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನೀವು ಈ ಹಿಂದೆ ಯಾವುದು ಊಹಿಸಿದ್ದಿರೋ ಅದರಂತೆ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳು, ಸಭೆ- ಸಮಾರಂಭಗಳನ್ನು ಆಯೋಜಿಸುವಂಥ ಜವಾಬ್ದಾರಿಗಳು ನಿಮಗೆ ವಹಿಸುವಂಥ ಸಾಧ್ಯತೆಗಳಿವೆ. ಅಷ್ಟೇ ಅಲ್ಲ, ಹಣಕಾಸು ಹೊಂದಿಸಬೇಕಾದ ಹೆಚ್ಚುವರಿ ಹೊಣೆ ಕೂಡ ನಿಮ್ಮ ಮೇಲೆ ಬೀಳಬಹುದು. ಇದೇ ವಿಚಾರಕ್ಕೆ ನಿಮ್ಮ ಸ್ನೇಹಿತರು- ಆಪ್ತರ ಅಭಿಪ್ರಾಯಗಳು ವಿಭಜನೆ ಆಗಲಿವೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 11ರ ದಿನಭವಿಷ್ಯ

ಹಣದ ಪರ್ಸ್‌ನಲ್ಲಿ ಒಂದು ಸಣ್ಣ ದಾಲ್ಚಿನ್ನಿ ಚಕ್ಕೆಯನ್ನು ಇಟ್ಟುಕೊಳ್ಳಿ. ಇದರಿಂದ ನಿಮ್ಮ ಮೇಲಿರುವ ಆರ್ಥಿಕ ಒತ್ತಡ ಕಡಿಮೆ ಆಗುತ್ತದೆ. ಹಣಕಾಸಿನ ಹರಿವು ಸರಾಗ ಆಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಇನ್ನೇನು ಇಂಥ ದಿನ ಹಣವನ್ನು ನೀಡುತ್ತೇನೆ ಎಂಬ ಮಾತು ನೀಡಿದ್ದವರು ಸಹ ಈ ತೀರ್ಮಾನದ ಬಗ್ಗೆ ಇನ್ನಷ್ಟು ಆಲೋಚನೆ ಮಾಡಬೇಕಿದೆ ಎಂದು ಹಣ ನೀಡುವುದನ್ನೇ ಮುಂದಕ್ಕೆ ಹಾಕಲಿದ್ದೀರಿ. ಸಂಗಾತಿಯ ಜತೆಗೆ ಉತ್ತಮವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ಅವರು ನಿಮಗೆ ಅಚ್ಚರಿ ಮೂಡಿಸುವಂತೆ ಕೆಲವು ಉಡುಗೊರೆಗಳನ್ನು ನೀಡಬಹುದು ಅಥವಾ ಪ್ರವಾಸಕ್ಕೆ ಕರೆದೊಯ್ಯುವುದಕ್ಕೆ ಪ್ಲಾನ್ ಮಾಡಬಹುದು.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಮುಕ್ತ ಮನಸ್ಸಿನಿಂದ ವರ್ತಿಸಲಿದ್ದೀರಿ. ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ಆಗಲಿವೆ. ತುಂಬ ಆಪ್ತರು ಹಾಗೂ ಬಂಧುಗಳು ನೀಡುವ ಕೆಲವು ಸಲಹೆ- ಸೂಚನೆಗಳಿಂದಾಗಿ ಬಹಳ ಬದಲಾವಣೆಗಳನ್ನು ನೀವು ಮಾಡಿಕೊಳ್ಳಲಿದ್ದೀರಿ. ನೀವು ಈಗಾಗಲೇ ತೆಗೆದುಕೊಂಡಿದ್ದ ತೀರ್ಮಾನಗಳನ್ನು ತಕ್ಷಣಕ್ಕೆ ತಿಳಿಸದೆ ಮುಂದಕ್ಕೆ ಹಾಕುವ ಸಾಧ್ಯತೆಗಳಿವೆ. ಬಹಳ ಸಮಯದಿಂದ ಮಾಡಬೇಕು ಎಂದಿದ್ದ ಕೆಲವು ಕೆಲಸ ಈ ದಿನ ಮಾಡಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಪ್ರೀತಿ- ಪ್ರೇಮದ ವಿಚಾರದಲ್ಲಿ ಗಟ್ಟಿ ತೀರ್ಮಾನವನ್ನು ಕೈಗೊಳ್ಳಲೇ ಬೇಕಾದ ಸ್ಥಿತಿ ಉದ್ಭವ ಆಗಲಿದೆ. ಇನ್ನು ಪ್ರಮುಖವಾದ ವ್ಯಕ್ತಿಯೊಬ್ಬರನ್ನು ಈ ದಿನ ಭೇಟಿ ಆಗುವ ಯೋಗ ನಿಮಗೆ ಇದೆ. ಅವರ ಜತೆಗಿನ ಒಡನಾಟದಿಂದ ನಿಮ್ಮ ಆಲೋಚನಾ ಕ್ರಮದಲ್ಲಿ ಬದಲಾವಣೆ ಆಗಲಿದೆ. ಅಷ್ಟೇ ಅಲ್ಲ, ದೀರ್ಘಾವಧಿಯಲ್ಲಿ ಆದಾಯ ತರುವಂಥ ಸಾಧ್ಯತೆಗಳು ಸಹ ಇವೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 11ರ ದಿನಭವಿಷ್ಯ

ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ಒಂದು ಲೋಟ ನೀರು ಇಡಿ. ಹೀಗೆ ಮಾಡುವುದರಿಂದ ಕೆಲಸ- ಕಾರ್ಯದಲ್ಲಿನ ಅಡೆತಡೆಗಳು ನಿವಾರಣೆ ಆಗಲಿದೆ. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಬ್ರಾಂಡೆಡ್ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಇದಕ್ಕಾಗಿ ನೀವೇನಾದರೂ ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಎಂದಾದರೆ ಅಳತೆಗೆ ಮೀರಿ ಖರ್ಚು ಬರಲಿದೆ. ನೀವೇನಾದರೂ ಕಮಿಷನ್ ಆಧಾರದಲ್ಲಿ ಕೆಲಸ ಮಾಡುವಂಥವರಾದರೆ ಅತಿ ಮುಖ್ಯವಾದ ಕೆಲಸವೊಂದು ನಿಮಗೆ ಬರಲಿದ್ದು, ಅದಕ್ಕೆ ದೊಡ್ಡ ಮೊತ್ತದ ಕಮಿಷನ್ ಆಫರ್ ಸಹ ಮಾಡಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಸಿನಿಮಾ ಕ್ಷೇತ್ರದಲ್ಲಿ ಇರುವಂಥವರಿಗೆ ಪ್ರಶಸ್ತಿಗಳು ಬರುವ ಅಥವಾ ದೊಡ್ಡ ವ್ಯಕ್ತಿಗಳಿಂದ ಉಡುಗೊರೆ ಪಡೆಯುವಂತಹ ಸಾಧ್ಯತೆ ಇದೆ. ಮನೆ ಮಾರಾಟ ಮಾಡಿಬಿಡಬೇಕು ಎಂದುಕೊಳ್ಳುತ್ತಿರುವವರಿಗೆ ಒಳ್ಳೆ ಗ್ರಾಹಕರು ದೊರೆಯಬಹುದು. ಅಥವಾ ಈಗಾಗಲೇ ನೋಡಿಕೊಂಡು ಹೋಗಿ, ಬಹಳ ಸಮಯ ಆದಂಥವರೇ ಮತ್ತೆ ನಿಮ್ಮ ಆಸ್ತಿ ಖರೀದಿ ಮಾಡುವುದಕ್ಕೆ ಬರುವ ಸಾಧ್ಯತೆಗಳು ಇವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಹೊಸ ಉತ್ಸಾಹವೊಂದು ನಿಮ್ಮಲ್ಲಿ ಇರಲಿದೆ. ಕುಟುಂಬದಲ್ಲೋ ಅಥವಾ ಸ್ನೇಹಿತರು ಸೇರಿ ಆಯೋಜಿಸಬೇಕು ಎಂದುಕೊಂಡಿದ್ದ ಕಾರ್ಯಕ್ರಮಗಳ ಕೆಲಸ- ಕಾರ್ಯಗಳು ವೇಗ ಪಡೆದುಕೊಳ್ಳುತ್ತವೆ. ಸ್ನೇಹಿತರು ನಿಮ್ಮ ಬಳಿ ಮುಖ್ಯವಾದ ಸಲಹೆ- ಸೂಚನೆಗಳನ್ನು ಕೇಳಿಕೊಂಡು ಬರುವ ಸಾಧ್ಯತೆ ಇದೆ. ಇನ್ನು ನಿಖರವಾಗಿ ಹೇಳಬೇಕು ಅಂದರೆ, ನೀವು ನೀಡುವ ಸಲಹೆ- ಸೂಚನೆಗಳು ಅವರಿಗೆ ಮುಖ್ಯವಾಗುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

IPL 2026: ಪಾಕ್ ತಂಡದ ಮಾಜಿ ಕೋಚ್​ಗೆ ಬ್ಯಾಟಿಂಗ್‌ ಕೋಚ್ ಹುದ್ದೆ ನೀಡಿದ ಗುಜರಾತ್ ಟೈಟನ್ಸ್

2026 ರ ಐಪಿಎಲ್​ಗೆ (IPL 2026) ಕ್ಷಣಗಣನೆ ಆರಂಭವಾಗಿದೆ. ಲೀಗ್‌ನ 19 ನೇ ಆವೃತ್ತಿಯು ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಇದಕ್ಕಾಗಿ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಆರಂಭಿಸಿವೆ. ಈಗಷ್ಟೇ ಟಿ20 ವಿಶ್ವಕಪ್ ಆಡಿ ಮುಗಿಸಿರುವ ಟೀಂ ಇಂಡಿಯಾ ಆಟಗಾರರು ಇನ್ನಷೇ ತಮ್ಮ ತಮ್ಮ ತಂಡಗಳನ್ನು ಕೂಡಿಕೊಳ್ಳಬೇಕಿದೆ. ಇದೆಲ್ಲದರ ನಡುವೆ ಗುಜರಾತ್ ಟೈಟನ್ಸ್ (Gujarat Titans) ತಮ್ಮ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಗುಜರಾತ್ ತಂಡವು ಹೊಸ ಬ್ಯಾಟಿಂಗ್ ಕೋಚ್ ಆಗಿ ಆಸ್ಟ್ರೇಲಿಯಾದ ಅನುಭವಿ ಆಟಗಾರ ಮ್ಯಾಥ್ಯೂ ಹೇಡನ್ (Matthew Hayden) ಅವರನ್ನು ಆಯ್ಕೆ ಮಾಡಿದೆ.

ಮ್ಯಾಥ್ಯೂ ಹೇಡನ್ ಬ್ಯಾಟಿಂಗ್ ಕೋಚ್

ಮೇಲೆ ಹೇಳಿದಂತೆ ಗುಜರಾತ್ ಟೈಟನ್ಸ್ ತಂಡ ಆಸ್ಟ್ರೇಲಿಯಾದ ಮಾಜಿ ಬ್ಯಾಟಿಂಗ್ ದಂತಕಥೆ ಮ್ಯಾಥ್ಯೂ ಹೇಡನ್ ಅವರನ್ನು ತಮ್ಮ ಬ್ಯಾಟಿಂಗ್ ಕೋಚ್ ಆಗಿ ನೇಮಿಸಿಕೊಂಡಿದೆ. ಆಸೀಸ್ ಪರ ಸ್ಮರಣೀಯ ವೃತ್ತಿಜೀವನವನ್ನು ಹೊಂದಿರುವ ಹೇಡನ್ ಆಸ್ಟ್ರೇಲಿಯಾ ಪರ ಆಡಿರುವ 273 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 15,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಹಾಗೆಯೇ ಐಪಿಎಲ್‌ನಲ್ಲಿಯೂ ಆಡಿರುವ ಅನುಭವ ಹೊಂದಿರುವ ಹೇಡನ್ 32 ಪಂದ್ಯಗಳನ್ನು ಆಡಿದ್ದಾರೆ. ಇದೀಗ, ಅವರು ಕೋಚ್ ಆಗಿ ಐಪಿಎಲ್‌ಗೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ಮ್ಯಾಥ್ಯೂ ಹೇಡನ್ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಕ ಮಾಡುವ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಗುಜರಾತ್ ಟೈಟಾನ್ಸ್ ಕ್ರಿಕೆಟ್ ನಿರ್ದೇಶಕ ವಿಕ್ರಮ್ ಸೋಲಂಕಿ, ‘ಮ್ಯಾಥ್ಯೂ ಹೇಡನ್ ಅವರ ನೇಮಕವು ನಮ್ಮ ಪ್ರಯಾಣಕ್ಕೆ ನಿರ್ಣಾಯಕವಾಗಿದೆ. ಫ್ರಾಂಚೈಸಿಯಾಗಿ, ನಾವು ನಮ್ಮ ಕ್ರಿಕೆಟ್ ಪರಿಸರ ವ್ಯವಸ್ಥೆಯನ್ನು ಬಲಪಡಿಸುವತ್ತ ನಿರಂತರವಾಗಿ ಗಮನಹರಿಸುತ್ತೇವೆ. ಅವರ ಉನ್ನತ ಮಟ್ಟದ ಅನುಭವ ಮತ್ತು ಉದಯೋನ್ಮುಖ ಪ್ರತಿಭೆಗಳಿಗೆ ಮಾರ್ಗದರ್ಶನ ನೀಡುವ ಅವರ ಸಾಮರ್ಥ್ಯವು ಮುಂಬರುವ ಆವೃತ್ತಿಯಲ್ಲಿ ನಮ್ಮ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚಿನ ಸಹಾಯ ಮಾಡುತ್ತದೆ’ ಎಂದಿದ್ದಾರೆ.

IPL 2026: ಈ ದಿನದಿಂದ 19ನೇ ಆವೃತ್ತಿಯ ಐಪಿಎಲ್ ಆರಂಭ; ಬಿಸಿಸಿಐ ಅಧಿಕೃತ ಮಾಹಿತಿ

ಪಾಕ್ ತಂಡದೊಂದಿಗೆ ಕೆಲಸ

ಮ್ಯಾಥ್ಯೂ ಹೇಡನ್ ಅವರಿಗೆ ಹೆಚ್ಚಿನ ತರಬೇತಿಯ ಅನುಭವವಿಲ್ಲ. ಆದಾಗ್ಯೂ, ಅವರು ಈ ಹಿಂದೆ ಪಾಕಿಸ್ತಾನ ತಂಡಕ್ಕೆ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದಾರೆ. 2021 ರ ಟಿ20 ವಿಶ್ವಕಪ್‌ಗೆ ಮೊದಲು, ಪಾಕಿಸ್ತಾನ ಅವರನ್ನು ತಮ್ಮ ಬ್ಯಾಟಿಂಗ್ ಕೋಚ್ ಆಗಿ ನೇಮಿಸಿತು. ಆ ಪಂದ್ಯದಲ್ಲಿ ಪಾಕಿಸ್ತಾನ ಭಾರತವನ್ನು ಸೋಲಿಸಿತು. ಇದರ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 2022 ರ ಟಿ20 ವಿಶ್ವಕಪ್‌ಗಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಮಾರ್ಗದರ್ಶಕರಾಗಿ ಹೇಡನ್ ಅವರನ್ನು ನೇಮಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಮಾನ ಪ್ರಯಾಣಿಕರಿಗೆ ಮತ್ತೊಂದು ಶಾಕ್; ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

ನವದೆಹಲಿ, ಮಾರ್ಚ್ 10: ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ವಿಮಾನಯಾನ ಟರ್ಬೈನ್ ಇಂಧನ (ATF) ಬೆಲೆಗಳಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಏರ್ ಇಂಡಿಯಾ (Air India) ತನ್ನ ದೇಶೀಯ ಮತ್ತು ಅಂತಾರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಇಂಧನ ಹೆಚ್ಚುವರಿ ಶುಲ್ಕಗಳ ವಿಸ್ತರಣೆಯನ್ನು ಘೋಷಿಸಿದೆ. ATF ವಿಮಾನಯಾನ ನಿರ್ವಹಣಾ ವೆಚ್ಚದ ಸುಮಾರು ಶೇ. 40ರಷ್ಟಿದೆ. ಮಾರ್ಚ್ 12ರಿಂದ ಜಾರಿಗೆ ಬರುವ 1ನೇ ಹಂತದ ದೇಶೀಯ ಮತ್ತು ಪ್ರಾದೇಶಿಕ ಮಾರ್ಗಗಳಿಗೆ ಅನ್ವಯಿಸುತ್ತದೆ.

ಮಾರ್ಚ್ 12ರಿಂದ ದೇಶೀಯ ವಿಮಾನ ಟಿಕೆಟ್‌ಗಳಿಗೆ 399 ರೂ.ಗಳ ಇಂಧನ ಸರ್ಚಾರ್ಜ್ ಅನ್ನು ಸೇರಿಸಲಾಗುವುದು ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳಲ್ಲಿನ ಪ್ರಯಾಣಿಕರು ಕೂಡ ಹೆಚ್ಚಿನ ಇಂಧನ ಸರ್ಚಾರ್ಜ್‌ಗಳನ್ನು ಎದುರಿಸಬೇಕಾಗುತ್ತದೆ ಎಂದು ವಿಮಾನಯಾನ ಸಂಸ್ಥೆಯು ದೃಢಪಡಿಸಿದೆ.

ಇದನ್ನೂ ಓದಿ: ಪ್ರಯಾಣಿಕರಿದ್ದಾಗಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ, ಇಂಡಿಗೋ ನಡುವೆ ಡಿಕ್ಕಿ

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಒಳಗೊಂಡ ಸಂಘರ್ಷಕ್ಕೆ ಸಂಬಂಧಿಸಿದ ಜಾಗತಿಕ ಇಂಧನ ಮಾರುಕಟ್ಟೆಗಳಲ್ಲಿನ ಅಡೆತಡೆಗಳ ನಡುವೆ ವಿಶ್ವಾದ್ಯಂತ ವಿಮಾನಯಾನ ಸಂಸ್ಥೆಗಳು ಹೆಚ್ಚುತ್ತಿರುವ ಇಂಧನ ವೆಚ್ಚಗಳನ್ನು ಎದುರಿಸುತ್ತಿರುವುದರಿಂದ ಸರ್‌ಚಾರ್ಜ್ ಏರಿಕೆಯಾಗಿದೆ. ವಿಮಾನಯಾನ ಇಂಧನವು ಸಾಮಾನ್ಯವಾಗಿ ವಿಮಾನಯಾನ ಸಂಸ್ಥೆಗಳಿಗೆ ಅತಿ ದೊಡ್ಡ ನಿರ್ವಹಣಾ ವೆಚ್ಚಗಳಲ್ಲಿ ಒಂದಾಗಿದೆ. ಕಚ್ಚಾ ತೈಲ ಬೆಲೆಗಳು ಏರುತ್ತಿರುವುದು ಭಾರತದ ವಾಯುಯಾನ ವಲಯದ ಮೇಲೆ ವ್ಯಾಪಕ ಪರಿಣಾಮ ಬೀರಬಹುದು ಎಂದು ಕೈಗಾರಿಕಾ ಕಾರ್ಯನಿರ್ವಾಹಕರು ಎಚ್ಚರಿಸಿದ್ದಾರೆ.

ಇರಾನ್ ಸಂಘರ್ಷವು ಎರಡನೇ ವಾರಕ್ಕೆ ಕಾಲಿಡುತ್ತಿದ್ದಂತೆ ಇಂಡಿಗೋ, ಏರ್ ಇಂಡಿಯಾ ಮತ್ತು ಸ್ಪೈಸ್‌ಜೆಟ್ ಸೇರಿದಂತೆ ಭಾರತೀಯ ವಿಮಾನಯಾನ ಸಂಸ್ಥೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಹೆಚ್ಚಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ ಹೇಳಿದ ರಮ್ಯಾ

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿ, ಅಸಭ್ಯ ಸಂದೇಶ ಕಳಿಸುವವರಿಗೆ ತಕ್ಕ ಪಾಠ ಕಲಿಸಲು ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಕಾನೂನಿನ ಹಾದಿ ಹಿಡಿದಿದ್ದಾರೆ. ಈ ಪ್ರಕರಣದ ವಿಚಾರಣೆ ಆರಂಭ ಆಗಿದ್ದು, ರಮ್ಯಾ ಅವರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ‘ಈ ಪ್ರಕರಣದಲ್ಲಿ ಜಡ್ಜ್ ಏನು ತೀರ್ಪು ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಒಂದು ಮಾದರಿ ನಿರ್ಮಾಣ ಆಗುತ್ತದೆ. ಆಗ ಜನರಿಗೆ ಒಂದು ಭಯ ಬರುತ್ತದೆ. ಅಂಥ ಕಮೆಂಟ್ ಮಾಡುವುದಕ್ಕೂ ಮುಂಚೆ ಯೋಚನೆ ಮಾಡುತ್ತಾರೆ. ಯಾಕೆಂದರೆ, 2 ವರ್ಷದಿಂದ 7 ವರ್ಷಗಳ ಜೈಲು ಶಿಕ್ಷೆ ಆಗಬಹುದು. ಅವರು ಸಾಮಾನ್ಯವಾಗಿ ಟ್ರೋಲ್ ಮಾಡಿಲ್ಲ. ಮಕ್ಕಳನ್ನೂ ಸೇರಿಸಿ ಟ್ರೋಲ್ ಮಾಡಿದ್ದಾರೆ. ಹೆಂಡ್ತಿ, ಮಕ್ಕಳನ್ನು ಪೊಲೀಸರ ಎದುರಲ್ಲೇ ರೇಪ್ ಮಾಡುತ್ತೇವೆ, ಕೊಲೆ ಮಾಡುತ್ತೇವೆ ಅಂತ ಹೇಳಿದ್ದಾರೆ. ಇದನ್ನು ನಾನು ಸುಮ್ಮನೆ ಬಿಟ್ಟರೆ ಸಾಮಾನ್ಯ ಹೆಣ್ಣು ಮಕ್ಕಳ ಪರಿಸ್ಥಿತಿ ಏನಾಗಹುದು’ ಎಂದು ರಮ್ಯಾ (Ramya) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮನಕಲಕುವ ಘಟನೆ: 2 ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಸಹ ಆತ್ಮಹತ್ಯೆ

ತುಮಕೂರು, (ಮಾರ್ಚ್ 10): ಎರಡು ವರ್ಷದ ಮಗುವಿನ ಜೊತೆ ತಾಯಿ ಒಂದೇ ಕುಣಿಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು (Tumakuru) ಜಿಲ್ಲೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿಯಲ್ಲಿ ನಡೆದಿದೆ, ಗಂಗಾಮಣಿ(30), ಪ್ರೇಕ್ಷಾ (2) ಮೃತರು. ಗಂಗಾಮಣಿ ತನ್ನೊಟ್ಟಿಗೆ ಏನು ಅರಿಯದ 2 ವರ್ಷದ ಮಗುವಿನ ಕುತ್ತಿಗೆಗೆ ಕುಣಿಕೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.  ಗರ್ಭಕೋಶದ ಸಮಸ್ಯೆಯಿಂದ ಮನನೊಂದು ಮಹಿಳೆ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ನೆರಡು ಮಕ್ಕಳು ಸಾವಿನ ಮನೆಯಿಂದ ಪಾರಾಗಿವೆ.

ಎಂಟು ವರ್ಷದ ಹಿಂದೆ ಯತೀಶ್ ಎಂಬಾತನ ಜೊತೆ ಗಂಗಾಮಣಿ ವಿವಾಹವಾಗಿದ್ದು, ದಂಪತಿಗೆ ಮೂರು ಮಕ್ಕಳು. ವೃತ್ತಿಯಲ್ಲಿ ಕ್ಯಾಂಟರ್ ಡ್ರೈವರ್ ಆಗಿರುವ ಯತೀಶ್, ಎಂದಿನಿಂತೆ ಇಂದು(ಮಾರ್ಚ್ 10) ಕೆಲಸಕ್ಕೆ ತೆರಳಿದ್ದಾರೆ. ಇನ್ನು ಇಬ್ಬರು ಮಕ್ಕಳು  ವಿನಯ್ (7) ಹಾಗೂ ರಕ್ಷಿತಾ (5) ಶಾಲೆಗೆ ಹೋಗಿದ್ದಾರೆ. ಆಗ ಮನೆಯಲ್ಲಿ ಯಾರು ಇಲ್ಲದ ವೇಳೆ ಗಂಗಾಮಣಿ ತನ್ನ ಎರಡು ವರ್ಷದ ಪ್ರೇಕ್ಷಾ ಜೊತೆ ನೇಣಿಗೆ ಶರಣಾಗಿದ್ದಾಳೆ.

ಇನ್ನು ಮಕ್ಕಳು ಶಾಲೆಯಿಂದ ಮನೆಗೆ ಬಂದಿದ್ದಾರೆ. ಆದ್ರೆ, ಮನೆ ಒಳಗಿನಿಂದ ಲಾಕ್ ಆಗಿದ್ದು, ಇದನ್ನು ಅಕ್ಕಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ಬಳಿಕ ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಹೊರಗಿನ ಧೂಳು, ಮಾಲಿನ್ಯದ ಕಾರಣದಿಂದ ಚರ್ಮಕ್ಕೆ ಹಾನಿ ಉಂಟಾಗುತ್ತದೆ. ಅಲ್ಲದೆ ದಿನನಿತ್ಯದ ಒತ್ತಡದ ಪರಿಣಾಮಗಳೂ ಮುಖದ ಮೇಲೆ ಗೋಚರಿಸುತ್ತವೆ. ಆದ್ದರಿಂದ ಚರ್ಮದ ಆರೈಕೆಯ (skin care) ಬಗ್ಗೆ ಗಮನವಹಿಸಬೇಕು. ಅದರಲ್ಲೂ ತ್ವಚೆ ಕಾಂತಿಯುತವಾಗಿರಲು, ಆರೋಗ್ಯಕರವಾಗಿರಲು ಮಲಗುವ ಮುನ್ನ ತ್ವಚೆಯ ಆರೈಕೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಇದಕ್ಕಾಗಿ ದುಬಾರಿ ಸ್ಕಿನ್‌ಕೇರ್‌ಗಳ ಮೊರೆ ಹೋಗುವ ಅವಶ್ಯಕತೆಯಿಲ್ಲ. ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡಿದರೆ ಸಾಕು.  ತೆಂಗಿನ ಎಣ್ಣೆಯಲ್ಲಿರುವ ಉತ್ಕರ್ಷಣ ನಿರೋಧಕಗಳು, ಕೊಬ್ಬಿನಾಮ್ಲಗಳು ಮತ್ತು ಆರ್ಧ್ರಕ ಗುಣಲಕ್ಷಣಗಳು ಚರ್ಮವನ್ನು ಆಳವಾಗಿ ಪೋಷಿಸಲು ಸಹಾಯ ಮಾಡುತ್ತದೆ. ಇದರಿಂದ ತ್ವಚೆಯ ಹೊಳಪು ಹೆಚ್ಚುವುದು ಮಾತ್ರವಲ್ಲ ಈ ಪ್ರಯೋಜನಗಳೂ ಲಭಿಸುತ್ತವೆ.

ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡುವುದರಿಂದ ಲಭಿಸುವ ಪ್ರಯೋಜನಗಳು:

ಆಳವಾದ ಮಾಯಿಶ್ಚರೈಸರ್ : ತೆಂಗಿನ ಎಣ್ಣೆ ಅತ್ಯುತ್ತಮವಾದ ನೈಸರ್ಗಿಕ ಮಾಯಿಶ್ಚರೈಸರ್ ಆಗಿದ್ದು,  ಮಲಗುವ ಮುನ್ನ ಇದನ್ನು ಮುಖಕ್ಕೆ ಹಚ್ಚುವುದರಿಂದ ರಾತ್ರಿಯಿಡೀ ನಿಮ್ಮ ಚರ್ಮವು ತೇವಾಂಶದಿಂದ ಕೂಡಿರುತ್ತದೆ ಮತ್ತು ಇದು ಶುಷ್ಕತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ಹೊಳಪು:  ತೆಂಗಿನ ಎಣ್ಣೆ ತ್ವಚೆಯ ಸತ್ತ ಚರ್ಮವನ್ನು ಹೊರಹಾಕುತ್ತದೆ, ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ ಮತ್ತು ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಹಾಗಾಗಿ ನಿಮ್ಮ ತ್ವಚೆ ಕಾಂತಿಯುತವಾಗಿರಲು ಪ್ರತಿದಿನ ರಾತ್ರಿ ಮಲಗುವ ಮುನ್ನ ತೆಂಗಿನ ಎಣ್ಣೆಯನ್ನು  ಮುಖಕ್ಕೆ ಹಚ್ಚಿ.

ಮೊಡವೆಗಳನ್ನು ಹೋಗಲಾಡಿಸುತ್ತದೆ: ತೆಂಗಿನ ಎಣ್ಣೆಯು ಲಾರಿಕ್ ಆಮ್ಲದಂತಹ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದ್ದು, ಇದು ಮೊಡವೆ ಉಂಟುಮಾಡುವ ಸೂಕ್ಷ್ಮಜೀವಿಗಳ ವಿರುದ್ಧ ಹೋರಾಡಲು ಮತ್ತು ಚರ್ಮವನ್ನು ತೇವಗೊಳಿಸಲು ಸಹಾಯ ಮಾಡುತ್ತದೆ. ಇದು ಸುಕ್ಕುಗಳು ಮತ್ತು ಶುಷ್ಕತೆಯನ್ನು ಸಹ ಕಡಿಮೆ ಮಾಡುತ್ತದೆ.

ಕಪ್ಪು ವರ್ತುಲಗಳನ್ನು ನಿವಾರಿಸುತ್ತದೆ: ತೆಂಗಿನ ಎಣ್ಣೆ ಕಣ್ಣುಗಳ ಕೆಳಗಿನ ಕಪ್ಪು ವರ್ತುಲಗಳನ್ನು ತೆಗೆದುಹಾಕಲು ಅತ್ಯುತ್ತಮ ಪರಿಹಾರವಾಗಿದೆ. ರಾತ್ರಿ ಮಲಗುವ ಮುನ್ನ ತೆಂಗಿನ ಎಣ್ಣೆಯಿಂದ ಕಣ್ಣುಗಳ ಸುತ್ತಲೂ ನಿಧಾನವಾಗಿ ಮಸಾಜ್ ಮಾಡುವುದರಿಂದ ಆಯಾಸ ನಿವಾರಣೆಯಾಗುತ್ತದೆ ಮತ್ತು ಕಪ್ಪು ವರ್ತುಲಗಳು ಕಡಿಮೆಯಾಗುತ್ತವೆ. ಇದಲ್ಲದೆ, ಇದು ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ತರುತ್ತದೆ.

ಇದನ್ನೂ ಓದಿ: ಬೇಗನೆ ವಯಸ್ಸಾದವರಂತೆ ಕಾಣಲು ಅಭ್ಯಾಸಗಳೇ ಬಹು ಮುಖ್ಯ ಕಾರಣ ಎನ್ನುತ್ತಾರೆ ಚಾಣಕ್ಯ

ಕಪ್ಪು ಕಲೆಗಳಿಗಳನ್ನು ನಿವಾರಿಸುತ್ತದೆ: ಮಲಗುವ ಮುನ್ನ ಮುಖವನ್ನು ಚೆನ್ನಾಗಿ ತೊಳೆಯಿರಿ. ನಿಮ್ಮ ಅಂಗೈಗಳಿಗೆ ಎಣ್ಣೆ ಹಚ್ಚಿ ಕಲೆಗಳ ಮೇಲೆ ಉಜ್ಜಿಕೊಳ್ಳಿ. ನಿಮ್ಮ ಮುಖವನ್ನು ಮಸಾಜ್ ಮಾಡಿ ರಾತ್ರಿಯಿಡೀ ಬಿಡಿ. ಇದು ಕಪ್ಪು ಕಲೆಗಳನ್ನು ತೆಗೆದುಹಾಕಲು ಮತ್ತು ನಿಮ್ಮ ಚರ್ಮವನ್ನು ಬಿಗಿಗೊಳಿಸಲು ಸಹಾಯ ಮಾಡುತ್ತದೆ.

ತೆಂಗಿನ ಎಣ್ಣೆಯನ್ನು ಬಳಸುವ ಸರಿಯಾದ ವಿಧಾನ:

ಮೊದಲು, ನಿಮ್ಮ ಮುಖವನ್ನು ಸೌಮ್ಯವಾದ ಫೇಸ್ ವಾಶ್ ನಿಂದ ತೊಳೆಯಿರಿ. ನಂತರ ನಿಮ್ಮ ಅಂಗೈಯಲ್ಲಿ 4-5 ಹನಿ ಶುದ್ಧ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು ಅದನ್ನು ನಿಮ್ಮ ಮುಖವನ್ನು ವೃತ್ತಾಕಾರದ ಚಲನೆಯಲ್ಲಿ 5-10 ನಿಮಿಷಗಳ ಕಾಲ ಮಸಾಜ್ ಮಾಡಿ. ರಾತ್ರಿಯಿಡೀ ಎಣ್ಣೆಯನ್ನು ಹಾಗೆಯೇ ಬಿಡಿ ಮತ್ತು ಬೆಳಿಗ್ಗೆ ಉಗುರು ಬೆಚ್ಚಗಿನ ನೀರಿನಿಂದ ನಿಮ್ಮ ಮುಖವನ್ನು ತೊಳೆಯಿರಿ.  ಹೀಗೆ ಪ್ರತಿದಿನ ರಾತ್ರಿ ತೆಂಗಿನ ಎಣ್ಣೆಯಿಂದ ಮಸಾಜ್ ಮಾಡುವುದರಿಂದ, ಚರ್ಮದಲ್ಲಿ ರಕ್ತ ಪರಿಚಲನೆ ಸುಧಾರಿಸಲು ಪ್ರಾರಂಭಿಸುವುದರಿಂದ ಚರ್ಮ ಕಾಂತಿಯುತವಾಗಿ, ಆರೋಗ್ಯಕರವಾಗಿ ಕಾಣಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link