Headlines

nagaraj11081993

ಕೂದಲಿಗೆ ಹೇರ್ ಡೈ ಹಚ್ಚುತ್ತೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುವ ಸಮಸ್ಯೆ ಸಾಮಾನ್ಯವಾಗಿ ಬಿಟ್ಟಿದೆ. ಬದಲಾಗುತ್ತಿರುವ ಜೀವನಶೈಲಿ, ಹೆಚ್ಚುತ್ತಿರುವ ಒತ್ತಡ, ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆಗಳು ಮತ್ತು ಮಾಲಿನ್ಯ (Pollution) ಈ ಸಮಸ್ಯೆಯ ಹೆಚ್ಚಳಕ್ಕೆ ಪ್ರಮುಖ ಕಾರಣಗಳೆಂದು ಹೇಳಲಾಗುತ್ತದೆ. ಈ ರೀತಿ ಕಂಡುಬರುವ ಬಿಳಿ ಕೂದಲನ್ನು ಮರೆಮಾಡಲು ಹೇರ್ ಡೈ ಬಳಸುತ್ತಾರೆ. ಹಿಂದೆ ವಯಸ್ಸಾದವರು ಮಾತ್ರ ಹೇರ್ ಡೈ (Hair Dye) ಬಳಸುತ್ತಿದ್ದರು. ಆದರೆ ಈಗ ಹಾಗಲ್ಲ. ಯುವಕ, ಯುವತಿಯರೂ ಕೂಡ ನಿಯಮಿತವಾಗಿ ಬಳಸಲು ಆರಂಭಿಸಿದ್ದಾರೆ. ಮಾರುಕಟ್ಟೆಯಲ್ಲಿ ಕೆಮಿಕಲ್ ಆಧಾರಿತ…

Read More

ಜೈಪುರದಲ್ಲಿ ಮೈ ಮೇಲೆ ಟ್ರಕ್ ಹರಿದು 22 ವರ್ಷದ ಮಹಿಳೆ ಸಾವು

ಜೈಪುರ, ಮಾರ್ಚ್ 10: ಜೈಪುರದಲ್ಲಿ ಟ್ರಕ್ (Truck Accident) ಹರಿದು 22 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ನಾಗಾಲ್ಯಾಂಡ್ ಮೂಲದ ಲಿಗಾ ಜಿಮೋ ಎಂದು ಗುರುತಿಸಲಾಗಿದೆ. ಅವರು ಕಳೆದ ಎರಡು ವರ್ಷಗಳಿಂದ ಮಾಲ್ವಿಯಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲಿನ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ಅವರು ಬೈಕ್ ಟ್ಯಾಕ್ಸಿಯಲ್ಲಿ ಮಾಲ್ವಿಯಾ ನಗರಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗೋಪಾಲಪುರ ಪುಲಿಯಾ ಬಳಿ ಬೈಕ್​ ನಿಯಂತ್ರಣ ಕಳೆದುಕೊಂಡಿದ್ದರಿಂದ ಮಹಿಳೆ…

Read More

ಗಡಿರಾಷ್ಟ್ರಗಳಿಗೆ ಇದ್ದ ಎಫ್​ಡಿಐ ಬಿಗಿನಿಯಮ ಸಡಿಲಿಸಿದ ಭಾರತ; ಇನ್ಮುಂದೆ ಚೀನೀ ಹೂಡಿಕೆ ಒಳಹರಿವು ಸರಾಗ

ನವದೆಹಲಿ, ಮಾರ್ಚ್ 10: ದೇಶದೊಂದಿಗೆ ಗಡಿ ಹಂಚಿಕೊಂಡಿರುವ ದೇಶಗಳಿಗೆ (border countries) ಇದ್ದ ಎಫ್​ಡಿಐ ನಿರ್ಬಂಧವನ್ನು ಭಾರತ ತೆರವುಗೊಳಿಸುತ್ತಿದೆ. ಎಫ್​ಡಿಐ ನಿಯಮಗಳನ್ನು ಸಡಿಲಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2020ರಲ್ಲಿ ಗಾಲ್ವನ್​ನಲ್ಲಿ ಚೀನಾ ಜೊತೆ ಜಟಾಪಟಿ ನಡೆದ ಬಳಿಕ ಭಾರತವು ಗಡಿ ದೇಶಗಳ ಹೂಡಿಕೆಗಳ ಮೇಲೆ ನಿರ್ಬಂಧ ಹಾಕಿತ್ತು. 2020ರ ಪ್ರೆಸ್ ನೋಟ್-3 ನಿಯಮಗಳ ಪ್ರಕಾರ ಗಡಿ ದೇಶಗಳ ಸಂಸ್ಥೆಗಳಿಂದ ಭಾರತದಲ್ಲಿ ಹೂಡಿಕೆ ಮಾಡಲು…

Read More

ಒಳಮೀಸಲಾತಿ ಬಿಕ್ಕಟ್ಟು ಕ್ಲೈಮ್ಯಾಕ್ಸ್ ಹಂತಕ್ಕೆ: ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು, (ಮಾರ್ಚ್ 10): ದಲಿತ ಒಳಮೀಸಲಾತಿ (Internal reservation )ನೀಡಿಕೆಯು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಜಟಾಪಟಿಗೆ ಕಾರಣವಾಗಿದೆ. ಸರ್ಕಾರ ಒಳ ಮೀಸಲಾತಿ ನೀಡದೇ ಸರ್ಕಾರಿ ನೌಕರರ ನೇಮಕಾತಿಗೆ ಮುಂದಾಗಿದೆ. ಇದಕ್ಕೆ ದಲಿತ ಎಡಗೈ ನಾಯಕರು ವಿರೋಧಿಸುತ್ತಿದ್ದಾರೆ. ಇದರಿಂದ ಸ್ವಪಕ್ಷದಲ್ಲೇ ಹೊತ್ತಿಕೊಂಡ ಈ ಭಿನ್ನಾಭಿಪ್ರಾಯದ ಕಿಡಿ, ಪರಿಸ್ಥಿತಿ ಕೈಮೀರಿಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ದಲಿತ ಸಚಿವರು ಮಹತ್ವದ ಸಭೆ ನಡೆಸಿದ್ದು, ಗೊಂದಲ ಪರಿಹಾರ ಕುರಿತು ಸಿದ್ದರಾಮಯ್ಯ ಜೊತೆಗೆ ಚರ್ಚಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಮುನಿಯಪ್ಪ,…

Read More

ಒಂದೇ ಒಂದು ಕಿಡಿಗೆ ಸತತ 22 ಗಂಟೆ ಕಾಲ ಹೊತ್ತಿ ಉರಿದ ಕೇಬಲ್​​​ ಫ್ಯಾಕ್ಟರಿ

ದೇವನಹಳ್ಳಿ, ಮಾರ್ಚ್​ 10: ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ಕೇಬಲ್​​​ ಫ್ಯಾಕ್ಟರಿಯನ್ನೇ ಸಂಪೂರ್ಣವಾಗಿ ಸುಟ್ಟು (cable factory fire) ಬೂದಿ ಮಾಡಿದ್ದು, ಕೋಟ್ಯಂತರ ರೂ ಮೌಲ್ಯದ ಕೇಬಲ್ ವೈರ್​​ಗಳು ಬೆಂಕಿಗಾಹುತಿಯಾಗಿದೆ. ಸತತ 22 ಗಂಟೆಗಳ‌‌ ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದ್ದು,  ಸ್ಥಳಿಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ‌ ಪ್ರದೇಶದ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿಸ್ ಫ್ಯಾಕ್ಟರಿಯಲ್ಲಿ ನಿನ್ನೆ ಘಟನೆ ನಡೆದಿದೆ. ನಿನ್ನೆ ಸಂಜೆ…

Read More

ಅಶ್ಲೀಲ ಕಮೆಂಟ್ ಪ್ರಕರಣ: ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಕಾರಣ ತಿಳಿಸಿದ ರಮ್ಯಾ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮತ್ತು ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ (Ramya Divya Spandana) ಅವರು ಕಾನೂನು ಸಮರ ಸಾರಿದ್ದಾರೆ. ಆ ಪ್ರಕರಣದ ವಿಚಾರಣೆ ಸಲುವಾಗಿ ಇಂದು (ಮಾರ್ಚ್ 10) ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ‘ಇವತ್ತು ಸಾಕ್ಷಿ ನೀಡಬೇಕಿತ್ತು. ಕ್ರಾಸ್ ಎಕ್ಸಾಮಿನೇಷನ್​ಗೆ ಮುಂದಿನ ದಿನಾಂಕದಲ್ಲಿ ಕರೆದಿದ್ದಾರೆ. ನನಗೆ ಈ ಕೇಸ್ ಮಾಡಬೇಕು ಅಂತ ಆಸೆ ಇಲ್ಲ. ಆರೋಪಿಗಳನ್ನು ನೋಡಿದರೆ ಬೇಜಾರಾಗುತ್ತದೆ. ಆದರೆ ನಾನು ಇದನ್ನು ನನಗೋಸ್ಕರ ಮಾಡುತ್ತಿಲ್ಲ….

Read More

IPL 2026: ಐಪಿಎಲ್ ಆರಂಭಕ್ಕೆ 15 ದಿನಗಳ ವೇಳಾಪಟ್ಟಿ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಐಪಿಎಲ್​ನ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಲ ರಾಜ್ಯಗಳಲ್ಲಿನ ಚುನಾವಣೆ. ಮುಂಬರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ವೇಳಾಪಟ್ಟಿಗೆ ದಿನಾಂಕ ನಿಗದಿ ಮಾಡಲು ಸಮಸ್ಯೆ ಎದುರಾಗಿದೆ. ಹೀಗಾಗಿ ಐಪಿಎಲ್ ಆರಂಭಿಸಲು ಮೊದಲು 15 ದಿನಗಳ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತಿಸಿದೆ. 15 ದಿನಗಳ ವೇಳಾಪಟ್ಟಿ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್…

Read More

ಪವನ್ ಕಲ್ಯಾಣ್ ಅನುಪಸ್ಥಿತಿಯಲ್ಲಿ ಪ್ರಚಾರದ ಜವಾಬ್ದಾರಿ ಹೊತ್ತ ಶ್ರೀಲೀಲಾ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾದ ನಾಯಕ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಪ್ರಚಾರಗಳಲ್ಲಿ ಪಾಲ್ಗೊಳ್ಳುವಷ್ಟು ಸಮಯ ಅವರಿಗಿಲ್ಲ. ಆಡಳಿತದ ದೃಷ್ಟಿಯಿಂದ ಅದು ಉಚಿತವೂ ಅಲ್ಲ. ಆದರೆ ಪವನ್ ಕಲ್ಯಾಣ್ ಗೈರು…

Read More

ಮಾರ್ಚ್​ 14ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ಟೀಂ ಇಂಡಿಯಾ ಸ್ಟಾರ್ ಆಟಗಾರ

ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ (T20 World Cup) ಎತ್ತಿಹಿಡಿದಿದೆ. ಈ ಸಂಭ್ರಮದೊಂದಿಗೆ ತಂಡದ ಎಲ್ಲಾ ಆಟಗಾರರು ತಮ್ಮ ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಿದ್ದಾರೆ. ಬಳಿಕ ಎಲ್ಲಾ ಆಟಗಾರರು ಮುಂಬರುವ ಐಪಿಎಲ್​ನಲ್ಲಿ (IPL) ಕಣಕ್ಕಿಳಿಯಲಿದ್ದಾರೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರನೊಬ್ಬನಿಗೆ ಕಂಕಣ ಭಾಗ್ಯ ಕೂಡಿಬಂದಿದ್ದು ವೈಯಕ್ತಿಕ ಜೀವನದಲ್ಲಿ ಹೊಸ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ. ತಂಡದ ಸ್ಟಾರ್ ಸ್ಪಿನ್ನರ್ ಕುಲ್ದೀಪ್ ಯಾದವ್ (Kuldeep Yadav) ಮಾರ್ಚ್ 14, 2026…

Read More

‘ಟಾಕ್ಸಿಕ್’ ಎಫೆಕ್ಟ್: ರಿಲೀಸ್ ದಿನಾಂಕ ಬದಲಾಯಿಸಿಕೊಂಡ ಬಾಲಿವುಡ್ ಸ್ಟಾರ್ ಹೀರೋ

ಬಾಲಿವುಡ್ ನಟ ವರುಣ್ ಧವನ್ (Varun Dhawan) ಅಭಿನಯದ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಬಿಡುಗಡೆ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ‘ರಾಕಿಂಗ್ ಸ್ಟಾರ್’ ಯಶ್ (Yash) ಅವರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್’ ಚಿತ್ರದೊಂದಿಗೆ ಬಾಕ್ಸ್ ಆಫೀಸ್ ಕ್ಲ್ಯಾಶ್ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವರುಣ್ ಧವನ್ ನಟನೆಯ ಚಿತ್ರವು ಈ ಮೊದಲು ಜೂನ್ 5ರಂದು ಬಿಡುಗಡೆ ಆಗುವುದಾಗಿ ಘೋಷಿಸಿತ್ತು. ಆದರೆ, ಈಗ ಒಂದು ವಾರ ತಡವಾಗಿ ಅಂದರೆ ಜೂನ್ 12ರಂದು…

Read More