All posts by nagaraj11081993

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ; ರಾಹುಲ್ ಭಾಟಿಯಾ ಹಂಗಾಮಿ ಮುಖ್ಯಸ್ಥ

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ; ರಾಹುಲ್ ಭಾಟಿಯಾ ಹಂಗಾಮಿ ಮುಖ್ಯಸ್ಥ

ನವದೆಹಲಿ, ಮಾರ್ಚ್ 10: ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ಲೈನ್ಸ್ ಸಂಸ್ಥೆಯ ಸಿಇಒ ಪೀಟರ್ ಎಲ್ಬರ್ಸ್ (Pieter Elbers) ರಾಜೀನಾಮೆ ನೀಡಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಪೈಲಟ್​ಗಳಿಲ್ಲದೇ ಹಲವಾರು ಫ್ಲೈಟ್​​ಗಳು ಸ್ಥಗಿತಗೊಂಡ ಬಳಿಕ ಸಿಇಒ ತಲೆದಂಡವಾಗಬಹುದು ಎನ್ನುವ ನಿರೀಕ್ಷೆ ಇತ್ತು. ಅಂತೆಯೇ ಪೀಟರ್ಸ್ ರಾಜೀನಾಮೆ ಕೊಟ್ಟಿದ್ದಾರೆ. ಇಂದು ಮಂಗಳವಾರ ಅವರ ರಾಜೀನಾಮೆ ನಿರ್ಧಾರವನ್ನು ಇಂಡಿಗೋ ಸಂಸ್ಥೆ ಪ್ರಕಟಿಸಿದೆ. ಸಂಸ್ಥೆಯ ನಿರ್ವಾಹಕ ನಿರ್ದೇಶಕ ರಾಹುಲ್ ಭಾಟಿಯಾ ಅವರು ಹಂಗಾಮಿ ಸಿಇಒ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಇಂಡಿಗೋದ ಮಾಲಕಸಂಸ್ಥೆಯಾದ ಇಂಟರ್​ಗ್ಲೋಬ್ ಏವಿಯೇಶನ್​ನ ಪ್ರೊಮೋಟರ್ ಆಗಿರುವ ರಾಹುಲ್ ಭಾಟಿಯಾ ಅವರು ಹೊಸ ಸಿಇಒ ಬರುವವರೆಗೂ ಸಂಸ್ಥೆಯ ಮುಖ್ಯ ಎಕ್ಸಿಕ್ಯೂಟಿವ್ ಸ್ಥಾನವನ್ನು ನಿಭಾಯಿಸಲಿದ್ದಾರೆ

ಇದನ್ನೂ ಓದಿ: ನಾವ್ಯಾಕೆ ತೈಲ ನೀಡಬೇಕು? ಬಿಕ್ಕಟ್ಟಿಗೆ ಕಾರಣರಾದವರು ಜವಾಬ್ದಾರರು: ಐಇಎಗೆ ಭಾರತದ ಉತ್ತರ

ಇಂಡಿಗೋ ಬಿಕ್ಕಟ್ಟಿಗೆ ಸಿಲುಕಿದ್ದು ಹೇಗೆ?

ಸರ್ಕಾರವು ಫ್ಲೈಟ್ ಸುರಕ್ಷತೆ ದೃಷ್ಟಿಯಿಂದ ಸಿಬ್ಬಂದಿಯ ಫ್ಲೈಟ್ ಕರ್ತವ್ಯ ಸಮಯ ಪರಿಮಿತಿ ನಿಯಮಗಳನ್ನು ರೂಪಿಸಿದೆ. ಇದು ಜಾರಿ ಮಾಡಲು ಸಾಕಷ್ಟು ಗಡುವು ಕೊಡಲಾಗಿತ್ತು. ಅಂತಿಮ ಗಡುವು ಮುಗಿಯುತ್ತಿದ್ದರಿಂದ ಹೊಸ ನಿಯಮಗಳನ್ನು ಇಂಡಿಗೋ ಪಾಲಿಸಲೇಬೇಕಾಯಿತು. ಪೈಲಟ್​ಗಳ ಕರ್ತವ್ಯ ಸಮಯವನ್ನು ಸೀಮಿತಗೊಳಿಸಬೇಕು. ನಿರ್ದಿಷ್ಟ ಅವಧಿ ವಿಶ್​ರಾಂತಿಗೆ ಅವಕಾಶ ಕೊಡಬೇಕು ಇತ್ಯಾದಿ ನಿಯಮಗಳಿವೆ.

ನವೆಂಬರ್​ನಲ್ಲಿ ಹೊಸ ಫ್ಲೈಟ್ ಡ್ಯೂಟಿ ನಿಯಮಗಳು ಜಾರಿಗೆ ಬಂದಿದ್ದು. ಇದನ್ನು ಪಾಲಿಸಬೇಕೆಂದರೆ ಪೈಲಟ್​ಗಳ ಸಂಖ್ಯೆ ಹೆಚ್ಚಿಸಬೇಕಿತ್ತು. ಇಂಡಿಗೋ ಆ ಕೆಲಸ ಮಾಡಲಿಲ್ಲ. ಹೀಗಾಗಿ, ಅನೇಕ ಇಂಡಿಗೋ ಫ್ಲೈಟ್​ಗಳಿಗೆ ಪೈಲಟ್​ಗಳೇ ಇಲ್ಲವಾದರು. ಹೀಗಾಗಿ, ಹಲವು ಫ್ಲೈಟ್​ಗಳನ್ನು ನಿಲ್ಲಸಬೇಕಾಯಿತು. ವಿಮಾನಗಳು ನಿಲುಗಡೆಗೊಂಡವು. ಬಹಳ ಜನರ ಟಿಕೆಟ್​ಗಳು ಕ್ಯಾನ್ಸಲ್ ಆಯಿತು. ಇದರಿಂದ ಕೆಲ ದಿನಗಳ ಕಾಲ ಬಿಕ್ಕಟ್ಟು ಉದ್ಭವವಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ನಾವ್ಯಾಕೆ ತೈಲ ನೀಡಬೇಕು? ಬಿಕ್ಕಟ್ಟಿಗೆ ಕಾರಣರಾದವರು ಜವಾಬ್ದಾರರು: ಐಇಎಗೆ ಭಾರತದ ಉತ್ತರ

ನವದೆಹಲಿ, ಮಾರ್ಚ್ 10: ಆಂತರಿಕ ಬಳಕೆಗೆಂದು ಇಡಲಾಗಿರುವ ತೈಲ ಸಂಗ್ರಹವನ್ನು (Strategic Oil Reserves) ಬಿಡುಗಡೆ ಮಾಡಬೇಕೆಂದು ಅಂತರರಾಷ್ಟ್ರೀಯ ಇಂಧನ ಸಂಸ್ಥೆಯಾದ ಐಇಎ ಮಾಡಿರುವ ಪ್ಲಾನ್​ಗೆ ಭಾರತ ನಕಾರ ತೋರಿದೆ. ಜಾಗತಿಕವಾಗಿ ತೈಲ ಬೆಲೆ ಕಡಿಮೆಗೊಳಿಸಲು ಐಇಎ ತೈಲ ಸಂಗ್ರಹ ಬಿಡುಗಡೆ ಮಾಡುವಂತೆ ಎಲ್ಲಾ ದೇಶಗಳಿಗೂ ನೀಡಿರುವ ಕರೆಗೆ ಭಾರತ ಓಗೊಟ್ಟಿಲ್ಲ. ಈ ಬಿಕ್ಕಟ್ಟು ಸೃಷ್ಟಿಸಿದವರು ತಾವಲ್ಲ. ನಮ್ಮಿಂದ ಈ ಕೆಲಸ ಆಗಲ್ಲ ಎಂದು ಭಾರತ ಹೇಳೀದೆ.

‘ತೈಲ ಸಂಗ್ರಹವನ್ನು ಭಾರತ ಬಿಡುಗಡೆ ಮಾಡುವುದಿಲ್ಲ. ಈ ಬಿಕ್ಕಟ್ಟು ಸೃಷ್ಟಿಗೆ ನಾವು ಕಾರಣರಲ್ಲ. ಇದಕ್ಕೆ ಕಾರಣರಾದವರು ತೈಲ ಬೆಲೆ ಇಳಿಕೆ ಮಾಡುವ ಜವಾಬ್ದಾರಿ ಹೊಂದಿದ್ದಾರೆ’ ಎಂದು ಸರ್ಕಾರದ ಮೂಲಗಳು ಹೇಳಿದ್ದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಅಗತ್ಯ ಸರಕುಗಳ ಕಾಯ್ದೆ ಎಂದರೇನು? ಎಲ್​ಪಿಜಿ, ಪೈಪ್ಡ್ ಗ್ಯಾಸ್, ಸಿಎನ್​ಜಿ ಸರಬರಾಜು ಖಾತ್ರಿಪಡಿಸಲು ಸರ್ಕಾರದ ಸೂತ್ರವೇನು? ಇಲ್ಲಿದೆ ಡೀಟೇಲ್ಸ್

ಭಾರತದಲ್ಲಿ ಭೂಗತ ತೈಲ ಸಂಗ್ರಹ ಸಾಮರ್ಥ್ಯ 5.33 ಮಿಲಿಯನ್ ಟನ್​ಗಳಷ್ಟಿವೆ. ಆದರೆ, ಇದರಲ್ಲಿ ಶೇ 80 ಮಾತ್ರವೇ ಭರ್ತಿಯಾಗಿರುವುದು. ಭಾರತಕ್ಕೆ ಮೊದಲ ಬಳಕೆ ಎನ್ನುವುದು ಸರ್ಕಾರದ ನೀತಿಯಾಗಿದೆ. ಪೂರೈಕೆಯಲ್ಲಿ ವ್ಯತ್ಯಯವಾದಾಗ ಈ ಸಂಗ್ರಹವನ್ನು ಬಳಸಲಾಗುತ್ತದೆ ಎಂದು ಸರ್ಕಾರದ ಮೂಲಗಳು ಹೇಳಿವೆ.

ಭಾರತದಲ್ಲಿ ಭೂಗತ ತೈಲ ಸಂಗ್ರಹಗಾರಗಳು ಮೂರು ಕಡೆ ಇವೆ. ಕರ್ನಾಟಕದಲ್ಲಿ ಎರಡು ಮತ್ತು ಆಂಧ್ರದಲ್ಲಿ ಒಂದು ಇದೆ. ಇಲ್ಲಿ ಕಚ್ಚಾ ತೈಲ ಸಂಗ್ರಹ ಕೆಲ ವಾರಗಳ ಬಳಕೆಗೆ ಸಾಕಾಗುವಷ್ಟು ಇದೆ. ಇದರ ಜೊತೆಗೆ ರಿಫೈನರಿಗಳಲ್ಲಿ ತೈಲ ಸಂಗ್ರಹ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ

ಬೆಂಗಳೂರು, ಮಾರ್ಚ್​ 10: ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗೆ ಹಾಲು-ಮೊಟ್ಟೆ ವಿತರಣೆಯಂತಹ ಬೋಧಕೇತರ ಕೆಲಸಗಳಲ್ಲಿಯೂ ನಿರತರಾಗಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶಿಕ್ಷಕರ ಕೊರತೆ ಇದ್ದು, ಇಂತಹ ಸಂದರ್ಭದಲ್ಲಿ ನಾಯಿ ಕಾಯುವ ಜವಾಬ್ದಾರಿ ನೀಡುವುದು ಹಾಸ್ಯಾಸ್ಪದ. ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಪತ್ರ ಮುಖೇನ ತಿಳಿಸಿದ್ದಾರೆ.

ಹೊರಟ್ಟಿ ಬರೆದ ಪತ್ರದಲ್ಲೇನಿದೆ?

ರಾಜ್ಯದ ಎಲ್ಲಾ ಶಿಕ್ಷಕರು ಮತದಾನದ ಕೆಲಸಗಳು, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆ, ಮಕ್ಕಳಿಗೆ ಹಾಲು, ಮೊಟ್ಟೆ ವಿತರಣೆ ಇನ್ನೂ ಮುಂತಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಅವುಗಳ ಜೊತೆಗೆ ಸರ್ಕಾರವು ಬೀದಿ ನಾಯಿಗಳನ್ನು ಕಾಯುವ ಹೊಣೆಗಾರಿಕೆಯನ್ನು ಶಿಕ್ಷಕರಿಗೆ ನೀಡಿರುವ ಕುರಿತು ದಿನಪತ್ರಿಕೆಯಲ್ಲಿ ವರದಿಯಾಗಿದ್ದು, ಸರ್ಕಾರದ ಈ ಕ್ರಮ ನಿಜಕ್ಕೂ ಬಹಳ ಬೇಸರದ ಸಂಗತಿಯಾಗಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಂದಾಗಿರುವ ಸರ್ಕಾರವು, ಶಾಲಾ ಶಿಕ್ಷಕರನ್ನ ನೋಡೆಲ್ ಅಧಿಕಾರಿಗಳನ್ನಾಗಿ ನೇಮಕ ಮಾಡುವಂತೆ ಸೂಚಿಸಿದೆ. ಇದು ಸರ್ಕಾರವು ಶಿಕ್ಷಕರನ್ನು ನಾಯಿಗಳಿಗಿಂತ ಕಡೆಯದಾಗಿ ನೋಡುತ್ತಿದೆ ಎನ್ನುವ ಅರ್ಥದಲ್ಲಿ ಬಿಂಬಿತವಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​; ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ

ಈಗಾಗಲೇ ಶಿಕ್ಷಕರು ಹಲವು ಕೆಲಸಗಳನ್ನು ನಿರ್ವಹಿಸುತ್ತಿರುವ ಕಾರಣ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹೆಚ್ಚು ಗಮನ ಹರಿಸಲು ಆಗುತ್ತಿಲ್ಲ. ಇದರಿಂದ ಮಕ್ಕಳ ಕಲಿಕೆಯ ಗುಣಮಟ್ಟ ಕಡಿಮೆಯಾಗಿ ಫಲಿತಾಂಶವು ಸಹ ಕಡಿಮೆಯಾಗುತ್ತದೆ. ಪ್ರಸ್ತುತ ರಾಜ್ಯಾದ್ಯಂತ ಶಿಕ್ಷಕರ ಕೊರತೆ ಕಾಣುತ್ತಿದೆ. ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸರ್ಕಾರವು ಜನಗಣತಿ ಆರಂಭಿಸುತ್ತಿದ್ದು ಅದರಲ್ಲೂ ಈ ಶಿಕ್ಷಕರೇ ಪಾಲ್ಗೊಳ್ಳಬೇಕಿದೆ. ಶಿಕ್ಷಕರ ಕೊರತೆಯ ನಡುವೆಯೇ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಿಗೂ ಅವರನ್ನು ನಿಯೋಜಿಸುವುದರ ಜೊತೆಗೆ ಈಗ ಬೀದಿ ನಾಯಿಗಳ ನಿಯಂತ್ರಣ ಹೊಣೆ ಅವರಿಗೆ ನೀಡಲು ಹೊರಟ ಕ್ರಮ ನಿಜಕ್ಕೂ ಹಾಸ್ಯಾಸ್ಪದ. ಹೀಗಾಗಿ ಈ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಹೊರಟ್ಟಿ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Team India: ಕಳೆದ 21 ತಿಂಗಳಲ್ಲಿ 365 ಕೋಟಿ ರೂ. ಬಹುಮಾನ ಗೆದ್ದ ಟೀಂ ಇಂಡಿಯಾ

Source link

ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ

ಬೆಂಗಳೂರು, ಮಾರ್ಚ್​ 10: ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗೆ ಹಾಲು-ಮೊಟ್ಟೆ ವಿತರಣೆಯಂತಹ ಬೋಧಕೇತರ ಕೆಲಸಗಳಲ್ಲಿಯೂ ನಿರತರಾಗಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶಿಕ್ಷಕರ ಕೊರತೆ ಇದ್ದು, ಇಂತಹ ಸಂದರ್ಭದಲ್ಲಿ ನಾಯಿ ಕಾಯುವ ಜವಾಬ್ದಾರಿ ನೀಡುವುದು ಹಾಸ್ಯಾಸ್ಪದ. ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಪತ್ರ ಮುಖೇನ ತಿಳಿಸಿದ್ದಾರೆ.

ಹೊರಟ್ಟಿ ಬರೆದ ಪತ್ರದಲ್ಲೇನಿದೆ?

ರಾಜ್ಯದ ಎಲ್ಲಾ ಶಿಕ್ಷಕರು ಮತದಾನದ ಕೆಲಸಗಳು, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆ, ಮಕ್ಕಳಿಗೆ ಹಾಲು, ಮೊಟ್ಟೆ ವಿತರಣೆ ಇನ್ನೂ ಮುಂತಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಅವುಗಳ ಜೊತೆಗೆ ಸರ್ಕಾರವು ಬೀದಿ ನಾಯಿಗಳನ್ನು ಕಾಯುವ ಹೊಣೆಗಾರಿಕೆಯನ್ನು ಶಿಕ್ಷಕರಿಗೆ ನೀಡಿರುವ ಕುರಿತು ದಿನಪತ್ರಿಕೆಯಲ್ಲಿ ವರದಿಯಾಗಿದ್ದು, ಸರ್ಕಾರದ ಈ ಕ್ರಮ ನಿಜಕ್ಕೂ ಬಹಳ ಬೇಸರದ ಸಂಗತಿಯಾಗಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಂದಾಗಿರುವ ಸರ್ಕಾರವು, ಶಾಲಾ ಶಿಕ್ಷಕರನ್ನ ನೋಡೆಲ್ ಅಧಿಕಾರಿಗಳನ್ನಾಗಿ ನೇಮಕ ಮಾಡುವಂತೆ ಸೂಚಿಸಿದೆ. ಇದು ಸರ್ಕಾರವು ಶಿಕ್ಷಕರನ್ನು ನಾಯಿಗಳಿಗಿಂತ ಕಡೆಯದಾಗಿ ನೋಡುತ್ತಿದೆ ಎನ್ನುವ ಅರ್ಥದಲ್ಲಿ ಬಿಂಬಿತವಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​; ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ

ಈಗಾಗಲೇ ಶಿಕ್ಷಕರು ಹಲವು ಕೆಲಸಗಳನ್ನು ನಿರ್ವಹಿಸುತ್ತಿರುವ ಕಾರಣ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹೆಚ್ಚು ಗಮನ ಹರಿಸಲು ಆಗುತ್ತಿಲ್ಲ. ಇದರಿಂದ ಮಕ್ಕಳ ಕಲಿಕೆಯ ಗುಣಮಟ್ಟ ಕಡಿಮೆಯಾಗಿ ಫಲಿತಾಂಶವು ಸಹ ಕಡಿಮೆಯಾಗುತ್ತದೆ. ಪ್ರಸ್ತುತ ರಾಜ್ಯಾದ್ಯಂತ ಶಿಕ್ಷಕರ ಕೊರತೆ ಕಾಣುತ್ತಿದೆ. ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸರ್ಕಾರವು ಜನಗಣತಿ ಆರಂಭಿಸುತ್ತಿದ್ದು ಅದರಲ್ಲೂ ಈ ಶಿಕ್ಷಕರೇ ಪಾಲ್ಗೊಳ್ಳಬೇಕಿದೆ. ಶಿಕ್ಷಕರ ಕೊರತೆಯ ನಡುವೆಯೇ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಿಗೂ ಅವರನ್ನು ನಿಯೋಜಿಸುವುದರ ಜೊತೆಗೆ ಈಗ ಬೀದಿ ನಾಯಿಗಳ ನಿಯಂತ್ರಣ ಹೊಣೆ ಅವರಿಗೆ ನೀಡಲು ಹೊರಟ ಕ್ರಮ ನಿಜಕ್ಕೂ ಹಾಸ್ಯಾಸ್ಪದ. ಹೀಗಾಗಿ ಈ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಹೊರಟ್ಟಿ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ

ಬೆಂಗಳೂರು, ಮಾರ್ಚ್​ 10: ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್​​. ಅಶೋಕ್ ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿನ ವಿಳಂಬ ಮತ್ತು ಆದ್ಯತೆಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಭಿಕ್ಷಾಟನೆ ನಿರ್ಮೂಲನೆಗಾಗಿ ಸಂಗ್ರಹಿಸಲಾದ 3% ಸೆಸ್‌ನಿಂದ ಕೇಂದ್ರ ಪರಿಹಾರ ಸಮಿತಿಗೆ ನೀಡಬೇಕಾದ 23.43 ಕೋಟಿ ರೂ. ಬಾಕಿ ಉಳಿದಿದೆ ಎಂದು ಸದನದ ಗಮನ ಸೆಳೆದರು. ಅಲ್ಲದೆ, ಕೋವಿಡ್‌ ಅಥವಾ ಇತರೆ ದುರಂತಗಳಿಂದ ಪೋಷಕರನ್ನು ಕಳೆದುಕೊಂಡ 26 ಸಾವಿರ ಅನಾಥ ಮಕ್ಕಳಿಗೆ ಕಳೆದ ಏಳು ತಿಂಗಳಿಂದ ಮಾಸಾಶನ ಪಾವತಿಸಿಲ್ಲ. ಈ ಮಕ್ಕಳಿಗೆ ತಿಂಗಳಿಗೆ 4 ಸಾವಿರ ರೂ ಘೋಷಿಸಿದ್ದರೂ, ಸುಮಾರು 73-74 ಕೋಟಿ ರೂ. ಬಾಕಿ ಉಳಿದಿದೆ. ಸರ್ಕಾರಕ್ಕೆ ಕರುಣೆ ಇಲ್ಲ ಎಂದು ಆರ್​ ಅಶೋಕ್ ಕಿಡಿಕಾರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮೂತ್ರಕ್ಕೆ ಹೋಗದೆ ಹೆಚ್ಚು ಸಮಯ ಕಟ್ಟಿಕೊಂಡಿರುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತೆ ಗೊತ್ತೆ?

ಇಂದಿನ ವೇಗದ ಜೀವನಶೈಲಿಯಲ್ಲಿ ಕೆಲಸ, ಪ್ರಯಾಣ ಅಥವಾ ವ್ಯಸ್ತ ದಿನಚರಿಯ ಕಾರಣದಿಂದ ಹಲವರು ಮೂತ್ರವನ್ನು ದೀರ್ಘ ಕಾಲ ಹಿಡಿದಿಟ್ಟುಕೊಳ್ಳುವ ಅಭ್ಯಾಸ ಮಾಡಿಕೊಂಡಿದ್ದಾರೆ. ಕೆಲವರು ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಅಭ್ಯಾಸ ದೇಹದ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಏಕೆಂದರೆ ಮೂತ್ರದ ಮೂಲಕ ದೇಹದಲ್ಲಿರುವ ಹೆಚ್ಚುವರಿ ನೀರು ಮತ್ತು ವಿಷಕಾರಿ ಪದಾರ್ಥಗಳು ಹೊರಹೋಗುತ್ತವೆ. ಇದು ದೇಹದ ಸಮತೋಲನವನ್ನು ಕಾಪಾಡಲು ಅಗತ್ಯವಾದ ಪ್ರಕ್ರಿಯೆ. ಆದರೆ ದೀರ್ಘ ಕಾಲ ಮೂತ್ರವನ್ನು (Urine) ಹಿಡಿದುಕೊಳ್ಳುವುದರಿಂದ ಈ ಸಹಜ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ದೇಹ ನೀಡುವ ಸೂಚನೆಗಳನ್ನು ನಿರ್ಲಕ್ಷಿಸುವುದು ಆರೋಗ್ಯದ ದೃಷ್ಟಿಯಿಂದ ಸರಿಯಲ್ಲ. ನಿಮಗೂ ಕೂಡ ಈ ರೀತಿಯ ಅಭ್ಯಾಸವಿದ್ಯಾ, ಹಾಗಾದರೆ ಇದರಿಂದ ಯಾವ ರೀತಿಯ ಸಮಸ್ಯೆಗಳಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಮೂತ್ರಾಶಯದ ಮೇಲೆ ಒತ್ತಡ ಹೆಚ್ಚಾಗುವ ಸಾಧ್ಯತೆ;

ತಜ್ಞರ ಪ್ರಕಾರ, ಹೆಚ್ಚು ಸಮಯ ಮೂತ್ರವನ್ನು ಹಿಡಿದುಕೊಳ್ಳುವುದರಿಂದ ಮೂತ್ರಾಶಯದಲ್ಲಿ ಒತ್ತಡ ಹೆಚ್ಚಾಗಬಹುದು. ಇದರಿಂದ ಮೂತ್ರಪಿಂಡದ ಸ್ನಾಯುಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ಕೆಲ ಸಂದರ್ಭಗಳಲ್ಲಿ ಇದು ಯೂರಿನರಿ ಟ್ರಾಕ್ಟ್ ಇನ್ಫೆಕ್ಷನ್ (UTI) ಎಂಬ ಸೋಂಕಿನ ಅಪಾಯವನ್ನು ಹೆಚ್ಚಿಸಬಹುದು. ಮೂತ್ರ ದೀರ್ಘ ಕಾಲ ಉಳಿದರೆ ಬ್ಯಾಕ್ಟೀರಿಯಾ ಬೆಳೆಯುವ ಸಾಧ್ಯತೆಯೂ ಹೆಚ್ಚಾಗುತ್ತದೆ. ನಿರಂತರವಾಗಿ ಮೂತ್ರವನ್ನು ಹಿಡಿದುಕೊಳ್ಳುವ ಅಭ್ಯಾಸ ಕೆಲವರಿಗೆ ಹೊಟ್ಟೆಯ ಕೆಳಭಾಗದಲ್ಲಿ ನೋವು ಅಥವಾ ಅಸಹಜತೆಗೆ ಕಾರಣವಾಗಬಹುದು. ದೀರ್ಘಾವಧಿಯಲ್ಲಿ ಇದರಿಂದ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆಗಳ ಸಾಧ್ಯತೆಯೂ ಹೆಚ್ಚಾಗಬಹುದು.

ಅನಿವಾರ್ಯ ಪರಿಸ್ಥಿತಿಯಲ್ಲಿ ಏನು ಮಾಡಬೇಕು?

ಕೆಲವೊಮ್ಮೆ ತಕ್ಷಣ ವಾಶ್‌ರೂಮ್‌ಗೆ ಹೋಗಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಬಹುದು. ಅಂತಹ ಸಂದರ್ಭದಲ್ಲಿ ಶಾಂತವಾಗಿ ಕುಳಿತುಕೊಳ್ಳುವುದು ಉತ್ತಮ. ಹೆಚ್ಚು ಚಲನವಲನದಿಂದ ಮೂತ್ರಾಶಯದ ಮೇಲೆ ಒತ್ತಡ ಹೆಚ್ಚಾಗಬಹುದು. ಜೊತೆಗೆ ಆ ಸಮಯದಲ್ಲಿ ಹೆಚ್ಚು ನೀರು ಅಥವಾ ಪಾನೀಯಗಳನ್ನು ಸೇವಿಸುವುದನ್ನು ತಪ್ಪಿಸುವುದು ಒಳ್ಳೆಯದು.

ಇದನ್ನೂ ಓದಿ: ಮೂತ್ರ ವಿಸರ್ಜನೆ ಮಾಡುವಾಗ ಅತಿಯಾಗಿ ನೊರೆ ಬರುವುದು ನಿರ್ಜಲೀಕರಣವೇ ಅಥವಾ ಮಧುಮೇಹದ ಸಂಕೇತವೇ ತಿಳಿದುಕೊಳ್ಳಿ

ವೈದ್ಯರು ಹೇಳುವುದೇನು?

ಲೇಡಿ ಹಾರ್ಡಿಂಗ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ನಿರ್ದೇಶಕ ಹಾಗೂ ಎಚ್‌ಒಡಿ ಡಾ. ಎಲ್.ಹೆಚ್. ಘೋಟೇಕರ್ ಹೇಳುವ ಪ್ರಕಾರ, ಮೂತ್ರವನ್ನು ದೀರ್ಘ ಕಾಲ ಹಿಡಿದುಕೊಳ್ಳುವುದು ಆರೋಗ್ಯಕರ ಅಭ್ಯಾಸವಲ್ಲ. ದೇಹ ಮೂತ್ರದ ಸೂಚನೆ ನೀಡಿದಾಗ ಅದನ್ನು ನಿರ್ಲಕ್ಷಿಸದೇ ಸಮಯಕ್ಕೆ ಸರಿಯಾಗಿ ವಾಶ್‌ರೂಮ್‌ಗೆ ಹೋಗುವುದು ಮೂತ್ರಾಶಯ ಮತ್ತು ಕಿಡ್ನಿಯ ಆರೋಗ್ಯಕ್ಕೆ ಮುಖ್ಯವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್​​ಗೆ 1 ಸೀಟು!

ಬೆಂಗಳೂರು, (ಮಾರ್ಚ್ 10): ಕರ್ನಾಟಕ ವಿಧಾನಪರಿಷತ್ (Karnataka Legislative Council) ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ (BJP)  ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಒಟ್ಟು ನಾಲ್ಕು ಸೀಟುಗಳ ಪೈಕಿ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ ಮೂರು ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ.  ಇನ್ನುಳಿದ 1  ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರೆಸಿದೆ.

ಯಾರು ಯಾವ ಕ್ಷೇತ್ರಕ್ಕೆ?

ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ, ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್ ಹಾಗೂ
ಆಗ್ನೇಯ ಪದವೀಧರ ಕ್ಷೇತ್ರದ ಟಿಕೆಟ್ ಕೆ.ಎಂ.ಸುರೇಶ್ ಅವರಿಗೆ ನೀಡಲಾಗಿದೆ. ಇನ್ನುಳಿದ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದು, ಜೆಡಿಎಸ್ ಯಾರನ್ನು ಕಣಕ್ಕಿಳಿಸಲಿದೆ ಎನ್ನುವುದೇ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಎಲೆಕ್ಷನ್​​​ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್​​ವೈ ವಿರುದ್ಧ ಭುಗಿಲೆದ್ದ ಆಕ್ರೋಶ

ಜೆಡಿಎಸ್​​ಗೆ 1 ಸ್ಥಾನ

ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಎರಡಕ್ಕೆ ಬೇಡಿಕೆ ಇಟ್ಟಿತ್ತು. ಬೆಂಗಳೂರು ಶಿಕ್ಷಕರ ಮತ್ತು ಆಗ್ನೇಯ ಪದವೀಧರ ಪದವೀಧರ ಕ್ಷೇತ್ರಗಳನ್ನು ಜೆಡಿಎಸ್ ಕೇಳಿತ್ತು. ಆದ್ರೆ, ಆಗ್ನೇಯ ಪದವೀಧರ ಕ್ಷೇತ್ರವನ್ನು ಬಿಜೆಪಿಯ ಚಿದಾನಂದಗೌಡ ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ಬಿಜೆಪಿ ಬಿಟ್ಟುಕೊಟ್ಟಿಲ್ಲ. ಇನ್ನು ಕಾಂಗ್ರೆಸ್‌ನ ಪುಟ್ಟಣ್ಣ ಇರುವ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟು ಕೊಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳು

ಕಾಂಗ್ರೆಸ್ ಈಗಾಗಲೇ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಮರು ಸ್ಪರ್ಧೆ ಮಾಡಲಿದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದಿಂದ ಮೋಹನ್ ಲಿಂಬಿಕೈ, ಆಗ್ನೇಯ ಪದವೀಧರರ ಕ್ಷೇತ್ರದಿಂದ ಶಶಿ ಹುಲಿಕುಂಟೆಮಠ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಶರಣಪ್ಪ ಮಟ್ಟೂರ್ ಅವರಿಗೆ ನೀಡಲಾಗಿದೆ.

2020ರಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗಳು ನಡೆದವು. ಎರಡು ಪದವೀಧರರ ಕ್ಷೇತ್ರಗಳಿಂದ ಎಸ್ ವಿ ಸಂಕನೂರು ಮತ್ತು ಚಿದಾನಂದ್ ಗೌಡ ಆಯ್ಕೆಯಾದ್ದರು. ಎರಡು ಶಿಕ್ಷಕರ ಕ್ಷೇತ್ರಗಳಿಂದ ಶಶಿಲ್ ನಮೋಶಿ ಮತ್ತು ಪುಟ್ಟಣ್ಣ ಆಯ್ಕೆಯಾದ್ದರು. ನಾಲ್ವರೂ ಬಿಜೆಪಿಯವರಾಗಿದ್ದರು. ಆದರೆ ಪುಟ್ಟಣ್ಣ ಕೇಸರಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ, ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಮರು ಆಯ್ಕೆಯಾದರು. ಇವರೆಲ್ಲರ ಅವಧಿಗಳು 2026ರ ನವೆಂಬರ್ 11 ರಂದು ಕೊನೆಗೊಳ್ಳುತ್ತವೆ. ಆದ್ರೆ, ಅವಧಿ ಮುಗಿಯುವ ಒಂದು ತಿಂಗಳ ಮೊದಲು ಚುನಾವಣೆಗಳನ್ನು ನಡೆಸಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಭಾರತದಲ್ಲಿ ಎಲ್​ಪಿಜಿ ಬಿಕ್ಕಟ್ಟು; ಐಪಿಎಲ್ ಆರಂಭಕ್ಕೆ ವಿಘ್ನ

ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ (Middle East Conflict) ಭಾರತದ ಮೇಲೆ ಗಾಢ ಪರಿಣಾಮ ಬೀರುತ್ತಿದೆ. ಇಂಧನ ಪೂರೈಕೆ ಮೇಲಿನ ನಿರ್ಬಂಧಗಳಿಂದಾಗಿ ದೇಶದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಗಗನಕ್ಕೇರುವ ಮುನ್ಸೂಚನೆ ಸಿಕ್ಕಿದೆ. ಇದೆಲ್ಲದರ ನಡುವೆ ಇದ್ದಕ್ಕಿದ್ದಂತೆ ಹುಟ್ಟಿಕೊಂಡಿರುವ ಎಲ್​ಪಿಜಿ (LPG) ಬಿಕ್ಕಟ್ಟು ಮಧ್ಯಮ ವರ್ಗಕ್ಕೆ ದೊಡ್ಡ ಹೊಡೆತ ನೀಡಿದೆ. ಕಮರ್ಷಿಯಲ್ ಸಿಲಿಂಡರ್​​ ಬೆಲೆ 115 ರೂ ಏರಿಕೆ ಆಗಿದ್ದು, ಇದು ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಮಾತ್ರವಲ್ಲದೆ ಬೆಲೆ ಏರಿಕೆ ಜನಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸ ಆಗಿರುವುದು ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಬೇಕಿರುವ ಐಪಿಎಲ್ (IPL 2026)​ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.

ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ- ಧುಮಾಲ್

ದೇಶದಲ್ಲಿ ಉಂಟಾಗಿರುವ ಎಲ್​ಪಿಜಿ ಪೂರೈಕೆಯಲ್ಲಿನ ಬಿಕ್ಕಟ್ಟನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ಹೇಳಿದ್ದಾರೆ. ‘ನಾವು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇವೆ. ಈ ಯುದ್ಧದಲ್ಲಿ ಪ್ರತಿದಿನ ಹೊಸ ಬೆಳವಣಿಗೆಗಳು ನಡೆಯುತ್ತಿವೆ, ಆದ್ದರಿಂದ ಈ ಸಮಯದಲ್ಲಿ ಖಚಿತವಾಗಿ ಏನನ್ನೂ ಹೇಳಲಾಗುವುದಿಲ್ಲ. ಐಪಿಎಲ್ 2026, ಮುಂದಿನ ಕೆಲವು ದಿನಗಳಲ್ಲಿ ಪ್ರಾರಂಭವಾಗಲಿದೆ. ಆ ಸಮಯದಲ್ಲಿ ಪರಿಸ್ಥಿತಿಯ ತೀವ್ರತೆಯನ್ನು ಆಧರಿಸಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ಧುಮಾಲ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಐಪಿಎಲ್ ವೇಳಾಪಟ್ಟಿ ವಿಳಂಬಕ್ಕೆ ಕಾರಣ

ಐಪಿಎಲ್ 2026 ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಆದಾಗ್ಯೂ, ಅದರ ವೇಳಾಪಟ್ಟಿಯನ್ನು ಇನ್ನೂ ಘೋಷಿಸಲಾಗಿಲ್ಲ. ಹಲವಾರು ರಾಜ್ಯಗಳಲ್ಲಿ ನಡೆಯಬೇಕಾಗಿರುವ ಚುನಾವಣೆಗಳಿಂದಾಗಿ ವೇಳಾಪಟ್ಟಿ ಪ್ರಕಟ ವಿಳಂಬವಾಗುತ್ತಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಹೀಗೆ ಮುಂದುವರಿದರೆ ಐಪಿಎಲ್ ಮಾತ್ರವಲ್ಲದೆ ಕೈಗಾರಿಕೆಗಳು, ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಸೇರಿದಂತೆ ಸಮಾಜದ ಪ್ರತಿಯೊಂದು ವಲಯದ ಮೇಲೂ ಪರಿಣಾಮ ಬೀರುತ್ತದೆ.

ಏತನ್ಮಧ್ಯೆ, ಹಲವಾರು ಫ್ರಾಂಚೈಸಿಗಳು ಈಗಾಗಲೇ ತಮ್ಮ ತಮ್ಮ ನಗರಗಳಲ್ಲಿ ತಮ್ಮ ಅಭ್ಯಾಸ ಶಿಬಿರವನ್ನು ಪ್ರಾರಂಭಿಸಿವೆ. ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ತಯಾರಿ ಶುರು ಮಾಡಿದೆ. ರಾಜಸ್ಥಾನ ರಾಯಲ್ಸ್ ಕೂಡ ತಮ್ಮ ತರಬೇತಿ ಶಿಬಿರವನ್ನು ಪ್ರಾರಂಭಿಸಿವೆ. ಪಂಜಾಬ್ ಕಿಂಗ್ಸ್ ಕಳೆದ ಕೆಲವು ದಿನಗಳಿಂದ ಧರ್ಮಶಾಲಾದಲ್ಲಿ ಬೀಡುಬಿಟ್ಟಿದ್ದು, ಸುಮಾರು 10 ಆಟಗಾರರು ಭಾಗವಹಿಸುತ್ತಿದ್ದಾರೆ.

IPL 2026: ಈ ದಿನದಿಂದ 19ನೇ ಆವೃತ್ತಿಯ ಐಪಿಎಲ್ ಆರಂಭ; ಬಿಸಿಸಿಐ ಅಧಿಕೃತ ಮಾಹಿತಿ

ಹೋಟೆಲ್‌ಗಳ ಮೇಲೆ ಪರಿಣಾಮ

ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಉತ್ಪನ್ನಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಹೋಟೆಲ್ ಸಂಘಗಳು ತಮ್ಮಲ್ಲಿ ಒಂದು ಅಥವಾ ಎರಡು ದಿನಗಳು ಮಾತ್ರ ಎಲ್‌ಪಿಜಿ ಸರಬರಾಜು ಉಳಿದಿವೆ ಎಂದು ಹೇಳಿವೆ. ಎಲ್‌ಪಿಜಿ ಬಳಕೆಯನ್ನು ಮಿತಗೊಳಿಸಲು ಅನೇಕ ಹೋಟೆಲ್‌ಗಳು ತಮ್ಮ ಮೆನುಗಳನ್ನು ಸೀಮಿತಗೊಳಿಸಲು ಪ್ರಾರಂಭಿಸಿವೆ. ಇದೇ ಪರಿಸ್ಥಿತಿ ಕೆಲವು ದಿನಗಳವರೆಗೆ ಮುಂದುವರೆದರೆ ಜನಜೀವನ ಸಂಕಷ್ಟಕ್ಕೆ ಸಿಲುಕಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ ಮತ್ತು ಸೆಂಥಿಲ್ ಬಾಲಾಜಿಗೆ ಸಿಬಿಐ ಸಮನ್ಸ್

ತಮಿಳುನಾಡಿನ ಕರೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಸಂಸ್ಥಾಪಕ ದಳಪತಿ ವಿಜಯ್ ಅವರಿಗೆ ಕೇಂದ್ರೀಯ ತನಿಖಾ ದಳ (CBI) ಸಮನ್ಸ್ ಜಾರಿ ಮಾಡಿದೆ. ಇದೇ ಪ್ರಕರಣದಲ್ಲಿ ಡಿಎಂಕೆ ಶಾಸಕ ಸೆಂಥಿಲ್ ಬಾಲಾಜಿ ಅವರಿಗೂ ಮಾರ್ಚ್ 17ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ದೆಹಲಿಯಲ್ಲಿ ಮಾರ್ಚ್ 15ರಂದು ವಿಚಾರಣೆಗೆ ಹಾಜರಾಗುವಂತೆ ದಳಪತಿ ವಿಜಯ್ (Thalapathy Vijay) ಅವರಿಗೆ ಸಮನ್ಸ್ ನೀಡಲಾಗಿದೆ.

ಮಾರ್ಚ್ 15ರಂದು ದೆಹಲಿಯಲ್ಲಿರುವ ಸಿಬಿಐ ಪ್ರಧಾನ ಕಚೇರಿಯಲ್ಲಿ ವಿಚಾರಣೆಗಾಗಿ ಹಾಜರಾಗುವಂತೆ ವಿಜಯ್ ಅವರಿಗೆ ಸೂಚಿಸಲಾಗಿದೆ. ಈ ಹಿಂದೆ ಮಾರ್ಚ್ 10ರಂದು ಹಾಜರಾಗಲು ನೋಟಿಸ್ ನೀಡಲಾಗಿತ್ತು. ಆದರೆ, ರಾಜಕೀಯ ಕಾರ್ಯಕ್ರಮಗಳ ಕಾರಣದಿಂದ ವಿಜಯ್ ಅವರು 15 ದಿನಗಳ ಕಾಲಾವಕಾಶ ಕೋರಿದ್ದರು. ಅಲ್ಲದೇ, ದೆಹಲಿಯ ಬದಲಿಗೆ ಚೆನ್ನೈ ಅಥವಾ ತಮಿಳುನಾಡಿನ ಯಾವುದೇ ಕಚೇರಿಯಲ್ಲಿ ವಿಚಾರಣೆ ನಡೆಸುವಂತೆ ಅವರು ಮನವಿ ಮಾಡಿದ್ದರು.

ವಿಜಯ್ ಅವರ ಈ ಮನವಿಯನ್ನು ಸಿಬಿಐ ಪರಿಶೀಲಿಸಿ ಹೊಸ ದಿನಾಂಕಗಳನ್ನು ನಿಗದಿಪಡಿಸುವ ಸಾಧ್ಯತೆಯಿದೆ. ಇನ್ನೊಂದೆಡೆ, ಕರೂರು ಶಾಸಕ ಸೆಂಥಿಲ್ ಬಾಲಾಜಿ ಅವರಿಗೆ ಮಾರ್ಚ್ 17ರಂದು ಹಾಜರಾಗಲು ಸಮನ್ಸ್ ನೀಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಗೊಂದಲಕಾರಿ ವರದಿಗಳ ನಡುವೆ, ಸಿಬಿಐ ನೀಡಿರುವ ಸಮನ್ಸ್‌ನಂತೆ ನಾನು ಮಾರ್ಚ್ 17ರಂದು ಖುದ್ದಾಗಿ ಹಾಜರಾಗಿ ಅಗತ್ಯ ವಿವರಣೆಗಳನ್ನು ನೀಡಲಿದ್ದೇನೆ’ ಎಂದು ತಿಳಿಸಿದ್ದಾರೆ.

ಏನಿದು ಕರೂರು ಕಾಲ್ತುಳಿತ ಪ್ರಕರಣ?

ಕಳೆದ ವರ್ಷ ಸೆಪ್ಟೆಂಬರ್ 27ರಂದು ಕರೂರ್‌ನಲ್ಲಿ ವಿಜಯ್ ಅವರ ಟಿವಿಕೆ ಪಕ್ಷ ಆಯೋಜಿಸಿದ್ದ ಬೃಹತ್ ರಾಜಕೀಯ ಸಮಾವೇಶದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 41 ಜನರು ಪ್ರಾಣ ಕಳೆದುಕೊಂಡಿದ್ದರು ಮತ್ತು 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಘಟನೆಯು ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

ಇದನ್ನೂ ಓದಿ: ದಳಪತಿ ವಿಜಯ್ ವಿಚ್ಛೇದನಕ್ಕೆ ದೊಡ್ಡ ಟ್ವಿಸ್ಟ್: ತ್ರಿಷಾ ಜತೆ ಮದುವೆಗೆ ಹಾಜರಿ

ಈ ಹಿಂದೆ ಜನವರಿ 12 ಮತ್ತು 19ರಂದು ಸಿಬಿಐ ಈಗಾಗಲೇ ವಿಜಯ್ ಅವರನ್ನು ಎರಡು ಬಾರಿ ವಿಚಾರಣೆಗೆ ಒಳಪಡಿಸಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ತನಿಖಾ ಸಂಸ್ಥೆ ಈಗ ಮತ್ತೊಮ್ಮೆ ವಿಚಾರಣೆ ನಡೆಸಲು ಮುಂದಾಗಿದೆ. ಈ ನಡುವೆ ವಿಜಯ್ ಅವರ ಖಾಸಗಿ ಜೀವನ ಕೂಡ ಚರ್ಚೆಯಲ್ಲಿದೆ. ಪತ್ನಿ ಸಂಗೀತಾ ಅವರು ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ. ತ್ರಿಷಾ ಜೊತೆ ವಿಜಯ್ ಕಾಣಿಸಿಕೊಂಡಿದ್ದು ಭಾರಿ ಚರ್ಚೆಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link