All posts by nagaraj11081993

ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ ಮುನ್ನವೇ ಕಾಂಗ್ರೆಸ್​​ ಪಾಳೆಯದಲ್ಲಿ ಕೋಲಾಹಲ

ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ ಮುನ್ನವೇ ಕಾಂಗ್ರೆಸ್​​ ಪಾಳೆಯದಲ್ಲಿ ಕೋಲಾಹಲ

ದಾವಣಗೆರೆ, ಮಾರ್ಚ್​ 10: ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ (Davangere By-election)  ಮೊದಲೇ ಕಾಂಗ್ರೆಸ್ (Congress)​ ಪಾಳೆಯದಲ್ಲಿ ವಿಘ್ನ ಶುರುವಾಗಿದೆ. ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿ ಆಗಿದೆ. ಇನ್ನೇನು ಉಪ ಚುನಾವಣೆ ಘೋಷಣೆ ಆಗಲಿದೆ. ಇದು ಕಾಂಗ್ರೆಸ್​​ಗೆ ಪ್ರತಿಷ್ಠೆಯ ಪ್ರಶ್ನೆ. ಹೀಗಾಗಿ 10 ಜನ ಸಚಿವರ ತಂಡ ಕೂಡ ಮಾಡಲಾಗಿದೆ. ಅಖಾಡ ಸಜ್ಜಾಗುವ ಮೊದಲೇ ಜಮೀರ್ ಮತ್ತು ಮಲ್ಲಿಕಾರ್ಜುನ ನಡುವೆ ಪೈಟ್ ಶುರುವಾಗಿದೆ.

ರಾಜ್ಯ ಕಾಂಗ್ರೆಸ್​ನಲ್ಲಿ ಹತ್ತಾರು ಕಿತ್ತಾಟಗಳ ಮಧ್ಯೆ ಉಪಚುನಾವಣೆ ಸಹ ಬಂದಿದೆ. ಇದರಲ್ಲಿ ಇದೀಗ ದಾವಣಗೆರೆ ದಂಗಲ್​​ ಗಮನ ಸೆಳೆಯುತ್ತಿದೆ. ಶಾಮನೂರು ಸತತ ಶಾಸಕರಾಗುತ್ತಿದ್ದರು. ಶಾನನೂರ ನಿಧನದ ಬಳಿಕ ಮುಸ್ಲಿಂ ಸಮಾಜ ನಮಗೆ ಟಿಕೆಟ್ ಕೊಡಿ ಎಂದು ಕೇಳುತ್ತಿದೆ. ಇದು ಶಾಮನೂರು ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್​ಎಸ್ ಮಲ್ಲಿಕಾರ್ಜುನ ಕಣ್ಣು ಕೆಂಪಗಾಗಿಸಿದೆ. ಇನ್ನೊಂದು ವಿಚಾರ ಅಂದರೆ ಕ್ಷೇತ್ರದ ಉಸ್ತುವಾರಿಗಳನ್ನ ಜಮೀರ್ ಅಹ್ಮದ್ ಖಾನ್, ಈಶ್ವರ ಖಂಡ್ರೆ ಸೇರಿ ಹತ್ತು ಜನ ಸಚಿವರನ್ನ ಕೆಪಿಸಿಸಿ ನೇಮಕ ಮಾಡಿದೆ. ಆದರೆ ಸಚಿವ ಮಲ್ಲಿಕಾರ್ಜುನ ಜಮೀರ್ ವಿರುದ್ಧ ವಾಗ್ದಾಳಿ ನಡೆಸಿದ್ದು ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಉಪ ಚುನಾವಣೆಗೂ ಮುನ್ನ ವಿಘ್ನ ಶುರುವಾಗಿದೆ.

ಇದನ್ನೂ ಓದಿ: ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

ನಮ್ಮ ಕ್ಷೇತ್ರದ ಬಗ್ಗೆ ಮಾತಾಡಲು ಆತ ಯಾರು ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ಪ್ರಭಾವಿ ಸಚಿವ ನಡುವಿನ ಮಾತುಗಳು ಚರ್ಚೆಗೆ ಗ್ರಾಸವಾಗಿದೆ. ಮುಸ್ಲಿಂ ಮತಗಳನ್ನೇ ಮೆಚ್ಚಿಕೊಂಡ ಕಾಂಗ್ರೆಸ್​ಗೆ ಮಲ್ಲಿಕಾರ್ಜುನ ಮಾತು ಬಿಸಿ ತುಪ್ಪವಾಗಿದೆ. ಈಗ ತಾವು ಸಚಿವೆ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ ಸಂಸದೆ ಹಾಗೂ ಪುತ್ರ ಸಮರ್ಥ ಶಾಮನೂರನನ್ನ ಶಾಸಕ ಮಾಡುವ ಪ್ಲಾನ್ ಮಾಡಿದ್ದಾರೆ. ಆದರೆ ಆರಂಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದು ಮಾತ್ರ ಅಚ್ಚರಿ ಉಂಟುಮಾಡಿದೆ.

ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಕ್ಷಣ ಕ್ಷಮೆಯಾಚಿಸಬೇಕು: ಮುಸ್ಲಿಂ ಸಮಾಜ ಆಕ್ರೋಶ

ಸಚಿವ ಜಮೀರ್ ಅಹಮದ್ ಖಾನ್ ಬಗ್ಗೆ ಸಚಿವ ಎಸ್​ಎಸ್ ಮಲ್ಲಿಕಾರ್ಜುನ ಹೇಳಿಕೆ ಮುಸ್ಲಿಂ ಸಮಾಜ ಆಕ್ರೋಶಗೊಂಡಿದೆ. ಈ ಬಗ್ಗೆಸಚಿವ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಕ್ಷಣ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ. ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ ಮುಸ್ಲಿಂ ಸಮಾಜಕ್ಕೆ ಟಿಕೆಟ್ ಕೇಳಿದ್ದಕ್ಕೆ ಈ ರೀತಿ ಆಕ್ರೋಶ ಸರಿಯಿಲ್ಲ. ಜಮೀರ್ ಅಹಮದ್ ಖಾನ್ ಬಗ್ಗೆ ಹಗುರವಾಗಿ ಮಾತಾಡುವುದು ಸರಿಯಲ್ಲ ಎಂದು ಖಂಡಿಸಿದೆ.

ಪಕ್ಷ ಅಂದರೆ ಹೈಕಮಾಂಡ ಇದೆ. ಟಿಕೆಟ್ ಕೊಡುವ ನಿರ್ಧಾರ ಪಕ್ಷ ತೆಗೆದುಕೊಳ್ಳುತ್ತದೆ. ಮುಸ್ಲಿಂ ಸಮಾಜ ಕಾಂಗ್ರೆಸ್​ಗೆ ಟೇಕನ್ ಫಾರ್ ಗ್ರಾಂಟೆಡ್ ಆಗಿದೆ. ಪಕ್ಷದ ವರಿಷ್ಠರು ಇಲ್ಲಾ ಅಂದರೆ ಮಲ್ಲಿಕಾರ್ಜುನ ಅವರೇ ಟಿಕೆಟ್ ಘೋಷಣೆ ಮಾಡಿಕೊಳ್ಳಲಿ. ತಕ್ಷಣ ಸಚಿವ ಮಲ್ಲಿಕಾರ್ಜುನ ಜಮೀರ್ ಅಹ್ಮದ್ ಖಾನ್​ಗೆ ಕ್ಷಮೆ ಕೇಳಬೇಕು, ಇಲ್ಲಾ ಅಂದರೆ ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ. ಜಮೀರ್ ಖಾನ್, ಮುಸ್ಲಿಂ ಸಮಾಜದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕ. ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ ಎಂಬುದು ಮುಸ್ಲಿಂ ಮುಖಂಡರ ವಾದ.

ಇದನ್ನೂ ಓದಿ: ಎಲೆಕ್ಷನ್​​​ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್​​ವೈ ವಿರುದ್ಧ ಭುಗಿಲೆದ್ದ ಆಕ್ರೋಶ

ಇನ್ನೊಂದು ವಿಚಾರ ದಾವಣಗೆರೆಯ ಪ್ರಭಾವಿ ಮುಸ್ಲಿಂ ಸಮಾಜದ ಮುಖಂಡ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಬಗ್ಗೆ ಸಹ ಮಲ್ಲಿಕಾರ್ಜುನ ಹೇಳಿಕೆ ನೀಡಿದ್ದಾರೆ. ಜಬ್ಬಾರ್​ನಿಂದ ಮಾತ್ರ ಇಡಿ ಊರು ಹಾಳಾಗುತ್ತಿದೆ ಎಂದಿದ್ದಾರೆ. ನಾಲ್ಕು ದಶಕಗಳ ಕಾಲ ಕಾಂಗ್ರೆಸ್​ಗೆ ದುಡಿದ ಮುಖಂಡನಿಗೆ ಈ ರೀತಿ ಹೇಳಿಕೆ ನೀಡಿದ್ದು ಸಹ ಮುಸ್ಲಿಂ ಸಮಾಜಕ್ಕೆ ಸಿಟ್ಟು ತರಿಸಿದೆ. ಒಟ್ಟಿನಲ್ಲಿ ಚುನಾವಣೆಗೂ ಮೊದಲೇ ತಿಕ್ಕಾಟ ಶುರುವಾಗಿದ್ದು ಮಾತ್ರ ಕಾಂಗ್ರೆಸ್​​ಗೆ ತಳಮಳ ಹುಟ್ಟಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಎಲ್​ಪಿಜಿ ಪೂರೈಕೆ ಬಿಕ್ಕಟ್ಟು ಬಗೆಹರಿಸಲು ಸರ್ಕಾರದಿಂದ ಸಮಿತಿ ರಚನೆ

ನವದೆಹಲಿ, ಮಾರ್ಚ್ 10: ಚೆನ್ನೈ, ಪುಣೆ, ಮುಂಬೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಾದ್ಯಂತದ ಹೋಟೆಲ್‌ಗಳಲ್ಲಿ ಎಲ್‌ಪಿಜಿ (LPG Supply) ಸಿಲಿಂಡರ್‌ಗಳ ಕೊರತೆ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಮೂರು ಸದಸ್ಯರ ಸಮಿತಿಯನ್ನು ರಚಿಸಿದೆ. ಸರ್ಕಾರವು ತೈಲ ಮಾರುಕಟ್ಟೆ ಕಂಪನಿಗಳಿಗೆ ರೆಸ್ಟೋರೆಂಟ್ ಸಂಘಗಳೊಂದಿಗೆ ಈ ಸಮಸ್ಯೆಯನ್ನು ಚರ್ಚಿಸಲು ನಿರ್ದೇಶಿಸಿದೆ. ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಪೂರೈಕೆಯ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ವಿವಿಧ ರೆಸ್ಟೋರೆಂಟ್ ಸಂಘಗಳೊಂದಿಗೆ ಮಾತನಾಡಲಿವೆ.

“ಹೋಟೆಲ್ ಮತ್ತು ರೆಸ್ಟೋರೆಂಟ್​​ನವರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರವು ಐಒಸಿ, ಎಚ್‌ಪಿಸಿಎಲ್ ಮತ್ತು ಬಿಪಿಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕರನ್ನು ಒಳಗೊಂಡ 3 ಸದಸ್ಯರ ಸಮಿತಿಯನ್ನು ರಚಿಸಿದೆ. ಕಮರ್ಷಿಯಲ್ ಎಲ್‌ಪಿಜಿಯ ಅವಶ್ಯಕತೆಯನ್ನು ಪೂರೈಸಲಾಗುವುದು. ಈ ಸಮಿತಿಯು ಅವಶ್ಯಕತೆಗಳಿಗೆ ಅನುಗುಣವಾಗಿ ಪೂರೈಕೆಗೆ ಮರು ಆದ್ಯತೆ ನೀಡುತ್ತದೆ” ಎಂದು ವರದಿ ತಿಳಿಸಿದೆ. ಭಾರತವು ವಿವಿಧ ಮೂಲಗಳಿಂದ LPG ಮತ್ತು LNG ಆಮದು ಮಾಡಿಕೊಳ್ಳುತ್ತಿದೆ ಮತ್ತು ಹೊಸ ಸರಕುಗಳು ಶೀಘ್ರದಲ್ಲೇ ಬರುವ ನಿರೀಕ್ಷೆಯಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಪೆಟ್ರೋಲಿಯಂ ಸಚಿವಾಲಯವು ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ದೇಶೀಯ ಬಳಕೆಗಾಗಿ ಹೆಚ್ಚುವರಿ ಪ್ರಮಾಣವನ್ನು ಬೇರೆಡೆಗೆ ತಿರುಗಿಸಲು ಸಂಸ್ಕರಣಾಗಾರಗಳಿಗೆ ನಿರ್ದೇಶನ ನೀಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಜಾಗತಿಕ ಇಂಧನ ಮಾರುಕಟ್ಟೆಗಳು ಏರಿಳಿತವನ್ನು ಕಾಣುತ್ತಿರುವ ಸಮಯದಲ್ಲಿ, ಮನೆಗಳಿಗೆ ಎಲ್‌ಪಿಜಿ ಸಿಲಿಂಡರ್‌ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ದೇಶೀಯ ಅಡುಗೆ ಅನಿಲ ಬೇಡಿಕೆಯು ಭಾರತದ ಎಲ್‌ಪಿಜಿ ಬಳಕೆಗೆ ಬೆನ್ನೆಲುಬಾಗಿದೆ.

ಇದನ್ನೂ ಓದಿ: ಅಗತ್ಯ ಸರಕುಗಳ ಕಾಯ್ದೆ ಎಂದರೇನು? ಎಲ್​ಪಿಜಿ, ಪೈಪ್ಡ್ ಗ್ಯಾಸ್, ಸಿಎನ್​ಜಿ ಸರಬರಾಜು ಖಾತ್ರಿಪಡಿಸಲು ಸರ್ಕಾರದ ಸೂತ್ರವೇನು? ಇಲ್ಲಿದೆ ಡೀಟೇಲ್ಸ್

ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಂತಹ ಅಗತ್ಯ ದೇಶೀಯವಲ್ಲದ ವಲಯಗಳಿಗೆ ಅಗತ್ಯವಿರುವಂತೆ ಎಲ್‌ಪಿಜಿ ಸರಬರಾಜುಗಳನ್ನು ಒದಗಿಸುವುದನ್ನು ಮುಂದುವರಿಸಲಾಗುವುದು ಎಂದು ಕಂಪನಿಗಳು ತಿಳಿಸಿವೆ.

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಗಳ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು ರಕ್ಷಿಸಲು ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆ (ಇಸಿ ಕಾಯ್ದೆ)ಯನ್ನು ಜಾರಿಗೆ ತಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ನೋಡಲು ಹೋದವರಿಗೆ ರಶ್ಮಿಕಾ ಮಂದಣ್ಣ ಕಾಣಲಿದ್ದಾರೆ: ಹೇಗೆ?

ಧುರಂಧರ್ 2’ (Dhurandhar 2) ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಗಡೆ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಇಂದ ಹಿಂದೆ ಸರಿದ ಬಳಿಕವಂತೂ ಸಿನಿಮಾಕ್ಕೆ ತಡೆಯೇ ಇಲ್ಲದಾಗಿದೆ. ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್​​ಗಳು ಬಿಸಿ ದೋಸೆಯಂತೆ ಮಾರಾಟವಾಗುತ್ತಿವೆ. ಇದೀಗ ಈ ಸಿನಿಮಾಕ್ಕೆ ಇರುವ ಜನಪ್ರಿಯತೆ, ಪ್ರೇಕ್ಷಕರಲ್ಲಿ ಇರುವ ಕಾತರತೆಯನ್ನು ಬಳಸಿಕೊಳ್ಳಲು ನಿರ್ಮಾಣ ಸಂಸ್ಥೆ ಮುಂದಾಗಿದೆ. ಇದೇ ಕಾರಣಕ್ಕೆ ‘ಧುರಂಧರ್ 2’ ಸಿನಿಮಾ ನೋಡಲು ಹೋದವರಿಗೆ ರಶ್ಮಿಕಾ ಮಂದಣ್ಣ ಜೊತೆಗೆ ಇತರೆ ಕೆಲವು ತಾರೆಯರ ದರ್ಶನ ಆಗಲಿದೆ.

‘ಧುರಂಧರ್ 2’ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ಸಹ ನಿರ್ಮಾಣ ಮಾಡಿರುವ ಜೊತೆಗೆ ಸಿನಿಮಾದ ಸಂಪೂರ್ಣ ವಿತರಣೆಯ ಜವಾಬ್ದಾರಿಯನ್ನು ತಾನೇ ವಹಿಸಿಕೊಂಡಿದೆ. ಇದೇ ಕಾರಣಕ್ಕೆ ತಮ್ಮದೇ ನಿರ್ಮಾಣದ ಇನ್ನೆರಡು ಸಿನಿಮಾಗಳನ್ನು ಸಹ ‘ಧುರಂಧರ್ 2’ ಸಿನಿಮಾದ ಜೊತೆಗೆ ಲಾಂಚ್ ಮಾಡುವ ಜಾಣ ಯೋಜನೆ ಮಾಡಿಕೊಂಡಿದೆ. ಟ್ರೈಲರ್ ಅನ್ನು ‘ಧುರಂಧರ್ 2’ ಜೊತೆಗೆ ಲಾಂಚ್ ಮಾಡುವ ಮೂಲಕ ಭರ್ಜರಿ ಪ್ರಚಾರವನ್ನು ಮಾಡಲಿದೆ.

2012ರ ಸೂಪರ್ ಹಿಟ್ ಚಿತ್ರ ‘ಕಾಕ್‌ಟೈಲ್’ನ ಮುಂದುವರಿದ ಭಾಗವಾದ ‘ಕಾಕ್​​ಟೇಲ್ 2’ ಸಿನಿಮಾದ ಟೀಸರ್ ಕೂಡ ‘ಧುರಂಧರ್ 2’ ಜೊತೆಗೆ ಅನಾವರಣಗೊಳ್ಳಲಿದೆ. ಸೈಫ್ ಅಲಿ ಖಾನ್, ದೀಪಿಕಾ ಪಡುಕೋಣೆ ಮತ್ತು ಡಯಾನಾ ಪೆಂಟಿ ನಟಿಸಿದ್ದ ಮೊದಲ ಭಾಗದ ಯಶಸ್ಸಿನ ನಂತರ, ಸೀಕ್ವೆಲ್ ಬಗ್ಗೆ ಭಾರಿ ಕುತೂಹಲವಿದೆ. ‘ಕಾಕ್​​ಟೇಲ್ 2’ ಸಿನಿಮಾನಲ್ಲಿ ಶಾಹಿದ್ ಕಪೂರ್, ಕೃತಿ ಸನೋನ್ ಮತ್ತು ರಶ್ಮಿಕಾ ಮಂದಣ್ಣ ಅವರುಗಳು ಒಟ್ಟಿಗೆ ನಟಿಸುತ್ತಿದ್ದಾರೆ. ಈ ಸಿನಿಮಾದ ಟೀಸರ್ ಸಹ ‘ಧುರಂಧರ್ 2’ ಸಿನಿಮಾದ ನಡುವೆ ಪ್ರದರ್ಶನಗೊಳ್ಳಲಿದೆ.

ಇದನ್ನೂ ಓದಿ:ವಿಜಯ್-ರಶ್ಮಿಕಾ ಮಾನ್ಯವರ್ ‘ಮೇಡ್ ಫಾರ್ ಈಚ್ ಒದರ್ ’ ಕ್ಯಾಂಪೇನ್; 300 ಮಿಲಿಯನ್ ವೀಕ್ಷಣೆ

ರಿತೇಶ್ ದೇಶ್​​ಮುಖ್ ನಟಿಸಿ, ನಿರ್ದೇಶನವನ್ನೂ ಮಾಡಿರುವ ‘ರಾಜಾ ಶಿವಾಜಿ’ ಸಿನಿಮಾಕ್ಕೆ ಜಿಯೋ ಸ್ಟುಡಿಯೋಸ್ ಬಂಡವಾಳ ಹೂಡಿದ್ದು, ಆ ಸಿನಿಮಾದ ವಿತರಣೆಯನ್ನೂ ಸಹ ಜಿಯೋ ಸ್ಟುಡಿಯೋಸ್ ಮಾಡಲಿದೆ. ಇದೇ ಕಾರಣಕ್ಕೆ ‘ರಾಜಾ ಶಿವಾಜಿ’ ಸಿನಿಮಾದ ಟ್ರೈಲರ್ ಅನ್ನು ‘ಧುರಂಧರ್ 2’ ಸಿನಿಮಾಕ್ಕೆ ಅಟ್ಯಾಚ್ ಮಾಡಲಿದ್ದು, ಸಿನಿಮಾ ಪ್ರಾರಂಭಕ್ಕೆ ಮುನ್ನ ಅಥವಾ ಸಿನಿಮಾದ ಇಂಟರ್ವೆಲ್ ಸಮಯದಲ್ಲಿ ‘ರಾಜಾ ಶಿವಾಜಿ’ ಸಿನಿಮಾದ ಟ್ರೈಲರ್ ಪ್ರದರ್ಶನವಾಗಲಿದೆ. ಒಟ್ಟಾರೆಯಾಗಿ, ಮಾರ್ಚ್ 19 ರಂದು ಚಿತ್ರಮಂದಿರಕ್ಕೆ ಹೋಗುವ ಪ್ರೇಕ್ಷಕರಿಗೆ ಕೇವಲ ‘ಧುರಂಧರ್ 2’ ಮಾತ್ರವಲ್ಲದೆ, ಮುಂಬರುವ ಎರಡು ದೊಡ್ಡ ಸಿನಿಮಾಗಳ ಝಲಕ್ ನೋಡುವ ಅವಕಾಶವೂ ಸಿಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕುರ್ಚಿ ಕಾದಾಟದ ನಡುವೆಯೂ ಡಿಕೆಶಿ ಗುಣಗಾನ ಮಾಡಿದ ಸಿದ್ದರಾಮಯ್ಯ: ಕಾರಣ ಇಲ್ಲಿದೆ

ಬೆಂಗಳೂರು, ಮಾರ್ಚ್​​ 10: ಕರ್ನಾಟಕದ ಸಿಎಂ ಕುರ್ಚಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಅವರ ನಡುವಿನ ತಿಕ್ಕಾಟ ಎಲ್ಲರಿಗೂ ಗೊತ್ತಿರುವ ವಿಷಯ. ಹೀಗಿದ್ದರೂ ಉಭಯ ನಾಯಕರು ಇಲ್ಲಿಯವರೆಗೂ ಎಲ್ಲಿಯೂ ಒಬ್ಬರ ವಿರುದ್ಧ ಮತ್ತೊಬ್ಬರು ಬಹಿರಂಗ ಸಮರ ಸಾರಿಲ್ಲ. ಮೊನ್ನೆ ಮೊನ್ನೆಯಷ್ಟೇ ನಮ್ಮಿಬ್ಬರದ್ದು ಹಾಲು-ಜೇನಿನ ಸಂಬಂಧ ಎಂದು ಸಿದ್ದರಾಮಯ್ಯ ಹೇಳಿದ್ದಿದ್ದು ಹಲವರ ಹುಬ್ಬೇರಿಸಿತ್ತು. ಈ ನಡುವೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್​ 6 ವರ್ಷ ಪೂರ್ಣಗೊಳಿಸಿದ ಹಿನ್ನೆಲೆ ಎಕ್ಸ್​ ಖಾತೆಯ ಮೂಲಕ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.  ಅಷ್ಟೇ ಅಲ್ಲದೆ ಅಕ್ಷರಶಃ ಕೆಪಿಸಿಸಿ ಅಧ್ಯಕ್ಷರ ಗುಣಗಾನ ಮಾಡಿದ್ದಾರೆ.

ಡಿಕೆಶಿಗೆ ಉಜ್ವಲ ರಾಜಕೀಯ ಭವಿಷ್ಯವಿದೆ ಎಂದ ಸಿಎಂ

ಡಿ.ಕೆ.ಶಿವಕುಮಾರ್​ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ಧತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವ ನಾಯಕರಿಗೆ ಮಾದರಿ. ವಿಪಕ್ಷ ಬಿಜೆಪಿ ಸುಳ್ಳು ಕೇಸ್​ಗಳನ್ನು ಹಾಕಿ ಬಗೆಬಗೆಯ ಕಿರುಕುಳ ನೀಡಿದರೂ ಡಿ.ಕೆ.ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ. ಇದು ಕಾಂಗ್ರೆಸ್​​ನ ಕಾರ್ಯಕರ್ತರಿಗೆ ಸ್ಫೂರ್ತಿದಾಯಕ ನಡವಳಿಕೆಯೂ ಹೌದು. ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್​ ಅಧಿಕಾರಕ್ಕೆ ತರುವುದಕ್ಕೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆ ಡಿಕೆಶಿಯವರು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಹಾಡಿ ಹೊಗಳಿದ್ದಾರೆ.

ಇದನ್ನೂ ಓದಿ: ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ; ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಬಾಣ!

ನನಗಿಂತ ಕಿರಿಯರಾದ ಡಿ.ಕೆ. ಶಿವಕುಮಾರ್​​ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮ ಬಯಕೆ. ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡ ಜೊತೆಯಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ. ಸಿಎಂ ಕುರ್ಚಿ ವಿಚಾರದಲ್ಲಿ ಇಬ್ಬರ ನಡುವೆ ಅದೆಷ್ಟೇ ತಿಕ್ಕಾಟಗಳು ನಡೆದು, ವಿಷಯ ಹೈಕಮಾಂಡ್​​ ಅಂಗಳ ತಲುಪಿದ್ದರೂ ಉಭಯ ನಾಯಕರ ನಡೆ ಮಾತ್ರ ಭಾರೀ ಕುತೂಹಲ ಮೂಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅಶ್ಲೀಲ ಸಂದೇಶ ಕೇಸ್: ಮುಚ್ಚಿದ ಕೊಠಡಿಯಲ್ಲಿ ವಿಚಾರಣೆಗೆ ಹಾಜರಾದ ರಮ್ಯಾ

ಖ್ಯಾತ ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳಿಸಿದ 11 ಆರೋಪಿಗಳ ವಿರುದ್ಧ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಸೈಬರ್ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿರುವ ಹಿನ್ನೆಲೆಯಲ್ಲಿ ರಮ್ಯಾ ಅವರು ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ಇಂದು (ಮಾರ್ಚ್ 10) ನ್ಯಾಯಾಲಯದಲ್ಲಿ ಸಾಕ್ಷ್ಯ ವಿಚಾರಣೆಗೆ ಹಾಜರಾದ ರಮ್ಯಾ (Ramya) ಅವರು ಫಿರ್ಯಾದಿ ಹೇಳಿಕೆ ದಾಖಲಿಸಿದ್ದಾರೆ.

ವೃತ್ತಿ ಜೀವನ ಮತ್ತು ರಾಜಕೀಯ ಜೀವನದ ಬಗ್ಗೆ ರಮ್ಯಾ ಅವರು ಮಾಹಿತಿ ನೀಡಿದ್ದಾರೆ. ಇನ್‌ಸ್ಟಾಗ್ರಾಂ ಅಕೌಂಟ್ ಬಗ್ಗೆಯೂ ಕೋರ್ಟ್​ನಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಆರೋಪಿಗಳು ಇನ್‌ಸ್ಟಾಗ್ರಾಂ ಮೂಲಕ ಕಳುಹಿಸಿದ್ದ ಸಂದೇಶದ ಬಗ್ಗೆಯೂ ರಮ್ಯಾ ಮಾಹಿತಿ ನೀಡಿದ್ದಾರೆ. ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಅನಿಸಿಕೆ ಹಂಚಿಕೊಂಡ ಬಳಿಕ ಕೆಲವರಿಂದ ಅಶ್ಲೀಲ ಸಂದೇಶ ಬಂದಿತ್ತು.

ಇದನ್ನು ಸೂಕ್ಷ್ಮ ಪ್ರಕರಣವೆಂದು ಪರಿಗಣಿಸಲಾಗಿದೆ. ಹಾಗಾಗಿ ಮುಚ್ಚಿದ ಕೊಠಡಿಯಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಜಡ್ಜ್ ಈ. ರಾಜೀವ ಗೌಡ ಅವರು ಇನ್‌ಕ್ಯಾಮರಾ ಪ್ರೊಸೀಡಿಂಗ್ಸ್ ನಡೆಸಿದ್ದಾರೆ. ಇನ್​ಸ್ಟಾಗ್ರಾಮ್​​ನಲ್ಲಿ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿದ್ದ ಹಲವರು ರಮ್ಯಾಗೆ ಅಸಭ್ಯ ಕಮೆಂಟ್ ಮತ್ತು ಸಂದೇಶ ಕಳಿಸಿದ್ದರು.

ರಮ್ಯಾ ದಿವ್ಯ ಸ್ಪಂದನಾ ಅವರು ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ತುಂಬಾ ಆಕ್ಟೀವ್ ಆಗಿದ್ದಾರೆ. ಆದರೆ ಅವರನ್ನು ಕೆಲವರು ಟಾರ್ಗೆಟ್ ಮಾಡಿದ್ದರು. ಅಶ್ಲೀಲ ಕಮೆಂಟ್ ಮತ್ತು ಅಸಭ್ಯ ಮೆಸೇಜ್​ಗಳ ಮೂಲಕ ಕಿರುಕುಳ ನೀಡಿದ್ದರು. ಅಂಥವರಿಗೆ ಕಾನೂನಿನ ಮೂಲಕ ಪಾಠ ಕಲಿಸಲು ರಮ್ಯಾ ಮುಂದಾದರು. ಮುಲಾಜಿಲ್ಲದೇ ದೂರು ದಾಖಲಿಸಿದರು.

ಇದನ್ನೂ ಓದಿ: ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 50 ಸಾಮಾಜಿಕ ಜಾಲತಾಣ ಅಕೌಂಟ್​​ಗಳನ್ನು ಬಂದ್ ಮಾಡಿಸಿದ್ದರು. ಬಂಧನಕ್ಕೆ ಹೆದರಿ 20ಕ್ಕೂ ಹೆಚ್ಚು ಆರೋಪಿಗಳು ಪರಾರಿ ಆಗಿದ್ದರು. ಬಂಧಿತ ಆರೋಪಿಗಳು ಒಂದು ಲಕ್ಷ ರೂಪಾಯಿ ಬಾಂಡ್ ಹಾಗೂ ಇತರೆ ಭದ್ರತೆಗಳನ್ನು ಒದಗಿಸಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು

ರಾಯಚೂರು, (ಮಾರ್ಚ್ 10): ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ರಾಯಚೂರು (Raichur)  ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಸಾವನ್ನಪ್ಪಿದ ಯುವಕ. ಬಟ್ಟೆ ಖರೀದಿಸಿ ವಾಪಸ್ ಬರುವ ವೇಳೆ ನೀರು ಕುಡಿಯಲೆಂದು ಹೋದಾಗ ಕಾರ್ತಿಕ್ ವಿದ್ಯುತ್​ ತಗುಲಿ ಸಾವನ್ನಪ್ಪಿದ್ದು, ಇದರಿಂದ ಆತಂಕಗೊಂಡ ಜೊತೆಗಿದ್ದ ಸ್ನೇಹಿತರು, ತಮ್ಮ ಮೇಲೆ ಬರುತ್ತೆಂಬ ಭಯಕ್ಕೆ ಕಾರ್ತಿಕನ ಶವವನ್ನು ಗೋಣಿಚೀಲದಲ್ಲಿ ತುಂಬಿ ಕಲ್ಲು ಕಟ್ಟಿ ಕೆರೆಗೆ ಎಸೆದಿದ್ದಾರೆ.

ಹೊಸ ಬಟ್ಟೆ ತರಲು ಹೋಗಿದ್ದ ಸ್ನೇಹಿತರು

ಇಂದು (ಮಾರ್ಚ್ 10) ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಇತ್ತು. ಹೀಗಾಗಿ ಸ್ನೇಹಿತರು ಸೇರಿಕೊಂಡು ನಿನ್ನೆ(ಮಾರ್ಚ್ 09) ಹೊಸ ಬಟ್ಟೆ ಖರೀದಿಸಲು ಬೈಕ್​​ನಲ್ಲಿ ಲಿಂಗಸ್ಗೂರಿಗೆ ಹೋಗಿದ್ದರು. ಬಟ್ಟೆ ಎಲ್ಲಾ ಖರೀದಿಸಿ ವಾಪಸ್ ಗುಂಡಸಾಗರಕ್ಕೆ ಹೊರಟ್ಟಿದ್ದರು. ಆದ್ರೆ, ದಾರಿಯಲ್ಲಿ ಕಾರ್ತಿಕನಿಗೆ ಬಾಯಾರಿಕೆಯಾಗಿದ್ದರಿಂದ ಗುಂಡಸಾಗರಕ್ಕೆ ಇನ್ನೂ ನಾಲ್ಕೈದು ಕಿಮಿ ಇರುವ ಮಾರ್ಗ ಮಧ್ಯೆ ರಸ್ತೆ ಪಕ್ಕದ ಹೊಲದಲ್ಲಿ ನೀರು ಕುಡಿಯಕು ಹೋಗಿದ್ದ. ಆಗ ಬೋರ್ ವೆಲ್ ನ ವಿದ್ಯುತ್ ತಗುಲಿದ್ದು, ಬಿದ್ದು ಒದ್ದಾಡಿದ್ದಾನೆ. ಬಳಿಕ ಸ್ನೇಹಿತರು ಕಾರ್ತಿಕ್​​ ನನ್ನು ಬೈಕ್​​ನಲ್ಲಿ ಕೂರಿಸಿಕೊಂಡು ಚಿಕಿ ಲಿಂಗಸುಗೂರು ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದ್ರೆ ಮಾರ್ಗ ಮಧ್ಯೆ ಕಾರ್ತಿಕ್ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ

ಕಾರ್ತಿಕ್ ಮೃತದೇಹವನ್ನು ಕೆರೆಗೆಸೆದ ಸ್ನೇಹಿತರು

ಈ ವೇಳೆ ಆತನ ಕಾಲುಗಳು ರಸ್ತೆಯುದ್ದಕ್ಕೂ ತಾಗಿ ರಕ್ತ ಗಾಯಗಳಾಗಿವೆ.ಇದರಿಂದ ತಮ್ಮ ಮೇಲೆ ಕೊಲೆ ಆರೋಪ ಬರುತ್ತೆ ಎಂದು ಆತಂಕಗೊಂಡ ಸ್ನೇಹಿತರು, ಕಾರ್ತಿಕ್ ನ ಮೃತದೇಹವನ್ನ ಬೈಕ್ ಮೇಲೆ ಕೂರಿಸಿಕೊಂಡು ಲಿಂಗಸುಗೂರು ಎಪಿಎಂಸಿ ಬಳಿ ತೆರಳಿದ್ದು, ಅಲ್ಲಿ ಚೀಲವೊಂದರಲ್ಲಿ ಕಾರ್ತಿಕ್ ಮೃತದೇಹ ಹಾಕಿ ಮೂಟೆ ಕಟ್ಟಿದ್ದಾರೆ. ಬಳಿಕ ಅದರಲ್ಲಿ ಮೂರ್ನಾಲ್ಕು ಕಲ್ಲುಗಳನ್ನ ಹಾಕಿ ಎಪಿಎಂಸಿ ಬಳಿಯ ಕರಡಕಲ್ ಕೆರೆಯಲ್ಲಿ ಬೀಸಾಡಿದ್ದಾರೆ.ಬಳಿಕ ಊರಿಗೆ ಬಂದು ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಆದ್ರೆ ಘಟನೆ ಬಗ್ಗೆ ತುಟಿ ಬಿಚ್ಚಿಲ್ಲ. ಇನ್ನೊಂದೆಡೆ ತಡರಾತ್ರಿ ಆದರೂ ಮಗ ಮನೆ ಬಾರದಕ್ಕೆ ಕಾರ್ತಿಕ್ ಮನೆಯವರು ಹುಡುಕಾಟ ನಡೆಸಿದ್ದು, ಕೊನೆಗೆ ಸಂಬಂಧಿಯೊಬ್ಬರು ಕಾರ್ತಿಕ್ ಸ್ನೇಹಿತರನ್ನು ಪ್ರಶ್ನಿಸಿದಾಗ ಮೂಟೆ ಕಟ್ಟಿ ಕರೆಗೆ ಬೀಸಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಈ ಮಾಹಿತಿ ತಿಳಿದು ಕರಡಕಲ್ ಕೆರೆ ಬಳಿ ಪೊಲೀಸರು ಭೇಟಿ ನೀಡಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶವಕ್ಕಾಗಿ ಕರೆಯಲ್ಲಿ ಹುಡುಕಾಟ ನಡೆಸಿದ್ದು, ಗೋಣಿ ಚೀಲದಲ್ಲಿ ಕಾರ್ತಿಕ್ ಶವ ಪತ್ತೆಯಾಗಿದೆ. ಇನ್ನು ಕಾರ್ತಿಕ್ ಪೋಷಕರು ಆತನನ್ನ ಕರೆದೊಯ್ದಿದ್ದ ಸ್ನೇಹಿತರ ವಿರುದ್ಧ ಕೊಲೆ ಆರೋಪದಡಿ ಲಿಂಗಸುಗೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಸದ್ಯ ಪೊಲೀಸರು ಇಬ್ಬರು ಅಪ್ರಾಪ್ತರನ್ನ ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ

ನಟಿ ರಮ್ಯಾ (Ramya) ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶದವರ ವಿರುದ್ಧ ನಟಿ ರಮ್ಯಾ ಕಾನೂನು ಸಮರ ಮುಂದುವರೆದಿದೆ. ಈಗಾಗಲೇ 11 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಸೈಬರ್ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿರುವ ಹಿನ್ನೆಲೆಯಲ್ಲಿ ರಮ್ಯಾ ಅವರು ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ಇಂದು (ಮಾರ್ಚ್ 10) ನ್ಯಾಯಾಲಯದಲ್ಲಿ ಸಾಕ್ಷ್ಯ ವಿಚಾರಣೆಗೆ ಹಾಜರಾದ ರಮ್ಯಾ (Ramya) ಅವರು ಫಿರ್ಯಾದಿ ಹೇಳಿಕೆ ದಾಖಲಿಸಿದ್ದಾರೆ. ಮುಚ್ಚಿದ ಕೋಣೆಯಲ್ಲಿ ಈ ವಿಚಾರಣೆ ನಡೆದಿದೆ. ರಮ್ಯಾ ನ್ಯಾಯಾಲಯಕ್ಕೆ ಬಂದ ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಲಯಾಳಂ ನಿರ್ದೇಶಕನ ಕಡೆ ವಾಲಿದ ಪ್ರಭಾಸ್, ಹೊಂಬಾಳೆಯದ್ದೇ ಪ್ಲ್ಯಾನ್

ಪ್ರಭಾಸ್ (Prabhas), ಭಾರತದ ಟಾಪ್ ಪ್ಯಾನ್ ಇಂಡಿಯಾ ನಟ. ಆದರೆ ಇದೇ ಅವರಿಗೆ ಒಂದು ರೀತಿ ಶಾಪವೂ ಆದಂತಿದೆ. ಪ್ರಭಾಸ್​ ಸ್ವತಃ ರೊಮ್ಯಾಂಟಿಕ್, ಭಾವುಕ, ಸ್ಲೋ ಸಿನಿಮಾಗಳನ್ನು ಇಷ್ಟಪಡುವ ನಟ. ಆದರೆ ಸ್ಟಾರ್ ಆಗಿರುವ ಕಾರಣ ಅಭಿಮಾನಿಗಳಿಗೆ ಬೇಕಾದ ಮಾಸ್ ಮಸಾಲ ಪ್ಯಾಕೇಜ್ ಸಿನಿಮಾಗಳಲ್ಲಿ ಅವರು ನಟಿಸಲೇ ಬೇಕು. ಫೈಟ್ಸ್, ಡೈಲಾಗ್, ಹಾಡುಗಳು, ರೊಮ್ಯಾನ್ಸ್ ಇಲ್ಲದ ಪ್ರಭಾಸ್ ಸಿನಿಮಾಗಳನ್ನು ಚೆನ್ನಾಗಿದ್ದರೂ ಪ್ರೇಕ್ಷಕರು ಒಪ್ಪುವ ಸ್ಥಿತಿಯಲ್ಲಿಲ್ಲ. ‘ರಾಧೆ-ಶ್ಯಾಮ್’ ಇದಕ್ಕೆ ಉದಾಹರಣೆ. ಆದರೆ ಇದೀಗ ಪ್ರಭಾಸ್ ಮತ್ತೊಮ್ಮೆ ಧೈರ್ಯ ಮಾಡಿದ್ದು, ತಮ್ಮಿಷ್ಟದ ಕತೆಯುಳ್ಳ ಸಿನಿಮಾನಲ್ಲಿ ನಟಿಸುವ ಮನಸ್ಸು ಮಾಡಿದ್ದಾರೆ. ಇದರ ಹಿಂದಿರುವುದು ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಮ್ಸ್.

ಪ್ರಭಾಸ್ ಇತ್ತೀಚೆಗೆ ಮಲಯಾಳಂ ಸಿನಿಮಾ ನಿರ್ದೇಶಕರೊಬ್ಬರನ್ನು ಭೇಟಿ ಆಗಿದ್ದಾರೆ. ಇವರು ನಿರ್ದೇಶಿಸಿರುವುದು ಮೂರೇ ಸಿನಿಮಾ ಆದರೂ ಅದರಲ್ಲಿ ಎರಡು ಸಿನಿಮಾಗಳು ಇಡೀ ದೇಶದ ಸಿನಿಮಾ ಪ್ರೇಮಿಗಳ ಗಮನ ಸೆಳೆದಿವೆ. ಅದುವೇ ‘ಕಿಷ್ಕಿಂದ ಕಾಂಡಂ’ ಮತ್ತು ಕೆಲ ತಿಂಗಳ ಹಿಂದೆ ಬಿಡುಗಡೆ ಆದ ‘ಇಕೊ’. ಈ ಎರಡೂ ಅದ್ಭುತ ಸಿನಿಮಾಗಳ ನಿರ್ದೇಶಕರಾಗಿರುವ ದಿಂಜಿತ್ ಅಯ್ಯತಾನ್ ಅವರನ್ನು ಪ್ರಭಾಸ್ ಭೇಟಿ ಆಗಿದ್ದು, ಸಿನಿಮಾ ಕತೆಯೊಂದರ ಬಗ್ಗೆ ಇಬ್ಬರೂ ನಿರ್ದೇಶಕರು ಚರ್ಚೆ ನಡೆಸಿದ್ದಾರೆ.

ದಿಂಜಿತ್ ಅಯ್ಯತಾನ್ ಹಾಗೂ ಪ್ರಭಾಸ್ ಭೇಟಿಯ ಹಿಂದಿರುವುದು ಹೊಂಬಾಳೆ ಫಿಲಮ್ಸ್. ಈಗಾಗಲೇ ಪ್ರಭಾಸ್ ಜೊತೆಗೆ ಮೂರು ಸಿನಿಮಾಗಳ ಒಪ್ಪಂದ ಮಾಡಿಕೊಂಡಿರುವ ಹೊಂಬಾಳೆ ಫಿಲಮ್ಸ್, ದಿಂಜಿತ್ ಅಯ್ಯತಾನ್ ಅವರ ಬಳಿ ಇರುವ ಕತೆ ಪ್ರಭಾಸ್​​ಗೆ ಒಪ್ಪಬಹುದು ಎಂಬ ಯೋಜನೆಯೊಟ್ಟಿಗೆ ಇಬ್ಬರ ನಡುವೆ ಮೀಟಿಂಗ್ ಆಯೋಜನೆ ಮಾಡಿದೆ. ಈ ಸಭೆಯಿಂದ ಧನಾತ್ಮಕ ಫಲಿತಾಂಶ ಹೊರಬಿದ್ದಿದೆ ಎನ್ನಲಾಗುತ್ತಿದ್ದು, ಇದೇ ವರ್ಷದಲ್ಲಿ ಅಧಿಕೃತವಾಗಿ ಸಿನಿಮಾ ಘೋಷಣೆಯೂ ಆಗುವ ಸಾಧ್ಯತೆ ಇದೆ. ‘ಕಿಷ್ಕಿಂದ ಕಾಂಡಂ’, ‘ಇಕೊ’ ಅಂಥಹಾ ಮಾಸ್ಟರ್ ಕ್ಲಾಸ್ ಥ್ರಿಲ್ಲರ್ ಸಿನಿಮಾಗಳನ್ನು ನೀಡಿರುವ ದಿಂಜಿತ್ ಅಯ್ಯತಾನ್, ಪ್ರಭಾಸ್ ಅವರಿಗಾಗಿ ಅದೇ ಮಾದರಿಯ ಕತೆಯೊಂದನ್ನು ಹೆಣೆದಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ನೆಚ್ಚಿನ ನಿರ್ದೇಶಕನ ಬಗ್ಗೆ ಪ್ರಭಾಸ್ ಭರಪೂರ ಮೆಚ್ಚುಗೆ: ಯಾರು ಆ ನಿರ್ದೇಶಕ?

ಪ್ರಭಾಸ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಘು ಹನುಪುಡಿ ನಿರ್ದೇಶನದ ‘ಫೌಜಿ’ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಇತ್ತೀಚೆಗಷ್ಟೆ ಸಂದೀಪ್ ರೆಡ್ಡಿ ವಂಗಾ ಜೊತೆಗೆ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಶುರು ಮಾಡಿದ್ದಾರೆ. ಅತ್ತ ‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದ ಚಿತ್ರೀಕರಣವೂ ಪ್ರಾರಂಭವಾಗಿದೆ. ಇವುಗಳ ಬಳಿಕ ‘ಸಲಾರ್ 2’ ಶುರುವಾಗಲಿದೆ. ಅದಾದ ಬಳಿಕವಷ್ಟೆ ದಿಂಜಿತ್ ಅಯ್ಯತಾನ್ ಅವರೊಟ್ಟಿಗೆ ಸಿನಿಮಾ ಶುರುವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮದುವೆ ಮಂಟಪದಲ್ಲೂ ಭಾರತದ ಟಿ20 ಕ್ರಿಕೆಟ್ ಗೆಲುವಿನ ಸಂಭ್ರಮ

ಉತ್ತರಕಾಶಿ, ಮಾರ್ಚ್ 10: ಉತ್ತರಕಾಶಿಯ ಮಂಡಿಯಾಸರಿ ಗ್ರಾಮದಲ್ಲಿ ನಡೆದ ಮದುವೆಯು ತನ್ನ ವಿಶೇಷತೆಗಳಿಂದ ಗಮನಸೆಳೆಯಿತು. ಮದುವೆಗೆ (Wedding) ಬಂದಿದ್ದ ಅತಿಥಿಗಳು ಮಂಟಪದಲ್ಲೇ ನ್ಯೂಜಿಲೆಂಡ್ ವಿರುದ್ಧ ಭಾರತದ T20 ಫೈನಲ್ ವಿಜಯವನ್ನು ಆಚರಿಸಿದರು. ಈ ಸಮಾರಂಭವು ಸಂತೋಷ, ದೇಶಭಕ್ತಿ ಮತ್ತು ಸಾಮಾಜಿಕ ಬದಲಾವಣೆಯನ್ನು ಪ್ರತಿಬಿಂಬಿಸಿತು. ಮದುವೆಗೆ ಬಂದಿದ್ದ ಅತಿಥಿಗಳು, ಕುಟುಂಬಸ್ಥರು ಮದುವೆಯನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ಕ್ರಿಕೆಟ್ ಪಂದ್ಯವನ್ನೂ ಎಂಜಾಯ್ ಮಾಡಿದರು.

ಭಾನುವಾರ ನಡೆದ ಅಂಕಿತ್ ರಾವತ್ ಅವರ ವಿವಾಹವು ಕೇವಲ ಎರಡು ಕುಟುಂಬಗಳ ನಡುವಿನ ಸಂಭ್ರಮಕ್ಕಿಂತ ಹೆಚ್ಚಾಗಿತ್ತು. ಇದು ನ್ಯೂಜಿಲೆಂಡ್ ವಿರುದ್ಧದ T20 ಫೈನಲ್‌ನಲ್ಲಿ ಭಾರತದ ಅದ್ಭುತ ವಿಜಯದ ಸಂಭ್ರಮವಾಗಿ ಬದಲಾಯಿತು. ಮದುಮಗ ಅಂಕಿತ್ ರಾವತ್ ಅವರ ವಿವಾಹದ ವಿಧಿವಿಧಾನಗಳ ಸಮಯದಲ್ಲಿಯೂ ಅತಿಥಿಗಳು ಅಲ್ಲಿದ್ದ ದೊಡ್ಡ ಸ್ಕ್ರೀನ್​ನಲ್ಲಿ ಪಂದ್ಯವನ್ನು ನೋಡಿ ಎಂಜಾಯ್ ಮಾಡುತ್ತಿದ್ದರು.

ಇದನ್ನೂ ಓದಿ: ಆಹ್ವಾನ ಇಲ್ಲದೇ ಮದುವೆ, ರಿಸೆಪ್ಷನ್ ಊಟಕ್ಕೆ ಹೋಗಿ ಸಿಕ್ಕಿಬಿದ್ದರೆ ಶಿಕ್ಷೆ ಏನು ಗೊತ್ತೇ? ಕೇಳಿದ್ರೆ ಶಾಕ್ ಆಗ್ತೀರಿ!

ಈ ರೋಮಾಂಚಕ ಆಟವನ್ನು ವೀಕ್ಷಿಸಲು ಅತಿಥಿಗಳು, ಗ್ರಾಮಸ್ಥರು ಮತ್ತು ಕುಟುಂಬದ ಸದಸ್ಯರು ಸುತ್ತಲೂ ಸೇರಿದ್ದರು. ಕ್ರಿಕೆಟ್ ಪಂದ್ಯವು ಅಂತಿಮ ಹಂತ ತಲುಪುತ್ತಿದ್ದಂತೆ ಮದುವೆ ಮಂಟಪದಲ್ಲಿಯೂ ಉತ್ಸಾಹ ಹೆಚ್ಚಾಯಿತು. ಪಂದ್ಯದಲ್ಲಿ ಭಾರತ ಅಂತಿಮವಾಗಿ ಗೆಲುವು ಸಾಧಿಸಿದಾಗ, ಮದುವೆ ಮಂಟಪದಲ್ಲಿ ಸೇರಿದ್ದ ಜನರು ನೃತ್ಯ, ಹರ್ಷೋದ್ಗಾರ, ಮದುವೆ ಮತ್ತು ರಾಷ್ಟ್ರದ ವಿಜಯೋತ್ಸವ ಎರಡನ್ನೂ ಆಚರಿಸುವುದರೊಂದಿಗೆ ಮಂಟಪದಲ್ಲಿ ಸಂತೋಷ ಹೊರಚಿಮ್ಮಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?

ಚಿತ್ರದುರ್ಗ, ಮಾರ್ಚ್​ 10: ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಯೋರ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ. ಮಗುವಿನ ಆರೋಗ್ಯದ ಮಾಹಿತಿ ಕೂಡ ತಮಗೆ ನೀಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದರು. ಹೆರಿಗೆ ಬಳಿಕ ವೈದ್ಯರು ನಿರ್ಲಕ್ಷ ತೋರಿದ ಪರಿಣಾಮ ಶಿಲ್ಪಾಳ ಸಾವು ಸಂಭವಿಸಿದೆ. ಏಕಾಏಕಿ ಐಸಿಯುಗೆ ಶಿಫ್ಟ್ ಮಾಡಬೇಕೆಂದು ಹೇಳಿ ನೇರವಾಗಿ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ ಎಂಬುದು ಮೃತಳ ತಾಯಿ ದುರ್ಗಮ್ಮ ಅವರ ಆರೋಪ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದು, ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಸೇರಿ ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ. ತಪ್ಪಿತಸ್ಥ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ದಲಿತಪರ ಸಂಘಟನೆಗಳ ಮುಖಂಡರು ಮೃತಳ ಸಂಬಂಧಿಕರಿಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ಅನ್ಯಕೋಮಿನ ಯುವಕನಿಂದ ಚಾಕು ಇರಿತ; ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಮುಖ್ಯಸ್ಥ ಡಾ.ರವೀಂದ್ರ, ಶಿಲ್ಪಾ ಅವರನ್ನು ತಡವಾಗಿ ಹೆರಿಗೆಗೆ ಕರೆತಂದಿದ್ದಾರೆ. ಹೆರಿಗೆ ವೇಳೆ‌ ಉಸಿರಾಟ ತೊಂದರೆಯಿಂದ ಅವರು ಮೃತಪಟ್ಟಿದ್ದು, ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಪರಿಶೀಲಿಬೇಕಿದೆ. ಶಿಲ್ಪಾ ಅವರಿಗೆ ಹೆಣ್ಣು ಮಗು ಜನಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಹೀಗಿದ್ದರೂ ವೈದ್ಯರ ವಿರುದ್ಧ ಶಿಲ್ಪಾ ಸಂಬಂಧಿಕರ ಆರೋಪ ಹಿನ್ನೆಲೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಕೋಟೆನಾಡು ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಒಂದಲ್ಲ ಒಂದು ದೂರು ಕೇಳಿ ಬರುತ್ತಲೇ ಇರುವ ನಡುವೆಯೇ ನಡೆದ ಬಾಣಂತಿಯ ಸಾವು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಪತ್ರೆಯ ವ್ಯವಸ್ಥೆ ಸುಧಾರಿಸಿ ಜನರ ಪ್ರಾಣ ರಕ್ಷಣೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link