ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ
ನವದೆಹಲಿ, ಮಾರ್ಚ್ 10: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳ ಒಂದು ಗುಂಪು ಇಂದು ಅವಿಶ್ವಾಸ ನಿರ್ಣಯ ಮಂಡಿಸಿದೆ. ಸ್ಪೀಕರ್ ಆಡಳಿತ ಪಕ್ಷಕ್ಕೆ ಅನುಕೂಲಕರ ರೀತಿಯಲ್ಲಿ ವರ್ತಿಸುತ್ತಿದ್ದಾರೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಸಮಯ ನೀಡದಿರುವ ಮೂಲಕ ಪಕ್ಷಪಾತದ ಧೋರಣೆ ತಳೆದಿದ್ದಾರೆ ಎಂದು ಉಲ್ಲೇಖಿಸಿ ವಿರೋಧ ಪಕ್ಷದ 118 ಸಂಸದರು ಈ ನಿರ್ಣಯಕ್ಕೆ ಸಹಿ ಹಾಕಿದ್ದಾರೆ. ಅವಿಶ್ವಾಸ ನಿರ್ಣಯವನ್ನು ಓದುವಾಗ, ವಿರೋಧ ಪಕ್ಷದ ಮಹಿಳಾ ಸಂಸದರು ಪ್ರಧಾನಿಯ…