Headlines

nagaraj11081993

ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್; ಟ್ರೋಲ್ ಆದ ಬಾಲಿವುಡ್ ನಟ

ಬಾಲಿವುಡ್ ಆಮಿರ್ ಖಾನ್ (Aamir Khan) ಅವರು ಪರ್ಫೆಕ್ಷನಿಸ್ಟ್ ಎನಿಸಿಕೊಂಡಿದ್ದಾರೆ. ಅವರು ಪ್ರೇಕ್ಷಕರನ್ನು ಸಾಕಷ್ಟು ಗೌರವಿಸುತ್ತಾರೆ. ಈಗ ಅವರು ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದಾರೆ. ‘ಸಿತಾರೆ ಜಮೀನ್​​ಪರ್’ ಸಿನಿಮಾ ಈ ಮೊದಲು ಥಿಯೇಟರ್​​ನಲ್ಲಿ ರಿಲೀಸ್ ಆಯಿತು. ಆ ಬಳಿಕ ಯೂಟ್ಯೂಬ್​​​ನಲ್ಲಿ ರಿಲೀಸ್ ಆಯಿತು. ಈ ವೇಳೆ ಆಮಿರ್ ಖಾನ್ ಹೇಳಿದ ಸುಳ್ಳು ಈಗ ಹೊರ ಬಿದ್ದಿದೆ. ಅವರನ್ನು ಸಾಕಷ್ಟು ಟ್ರೋಲ್ ಮಾಡುತ್ತಾ ಇದ್ದಾರೆ. ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಒಟಿಟಿಗೆ ಮಾರಾಟ ಮಾಡಲಿರಲಿಲ್ಲ….

Read More

ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ

ಚಿಕ್ಕಬಳ್ಳಾಪುರ, ಮಾರ್ಚ್​ 10: ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ (kill) ಅಜ್ಜಿಯನ್ನು (grandmother) ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್​ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಎಫ್​​ಎಸ್​ಎಲ್​ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ…

Read More

Video: ಹಾಲಿನ ಬಾಟಲಿ ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟ ಮಹಿಳೆ

ಪುಟ್ಟ ಮಕ್ಕಳನ್ನು (little kids) ನೋಡಿಕೊಳ್ಳುವಾಗ ಅವರ ಮೇಲೆ ಎಷ್ಟು ಕಣ್ಣು ಇಟ್ಟಿದ್ದರೂ ಕಡಿಮೆಯೇ. ಪುಟಾಣಿ ಮಕ್ಕಳೇ ಹಾಗೆ, ಸಿಕ್ಕ ಸಿಕ್ಕ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹೀಗಾಗಿ ಮಕ್ಕಳ ವಿಷಯದಲ್ಲಿ ಹೆತ್ತವರು ಎಷ್ಟು ಜಾಗರೂಕರಾಗಿದ್ದರೂ ಸಾಲುವುದಿಲ್ಲ. ಇನ್ನು ಹೆತ್ತವರ ಕೆಲವು ಬೇಜವಾಬ್ದಾರಿತನದಿಂದ ಪುಟಾಣಿಗಳು ಸಮಸ್ಯೆಗೆ ಸಿಲುಕಿ ಕೊಳ್ಳುವುದಿದೆ. ಇದೀಗ ಇಂತಹದ್ದೇ ವಿಡಿಯೋ ವೈರಲ್‌ ಆಗಿದ್ದು,  ಮಹಿಳೆಯೂ ಹಾಲಿನ ಬಾಟಲಿಯನ್ನು ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟಿದ್ದಾಳೆ. ಈ ದೃಶ್ಯ ನೋಡಿದ ನೆಟ್ಟಿಗರು ಈ ಮಹಿಳೆಯ ವಿರುದ್ಧ…

Read More

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ?

ನೀರಿನಾಂಶದಿಂದ ಸಮೃದ್ಧವಾಗಿರುವ ಕಲ್ಲಂಗಡಿ ಹಣ್ಣನ್ನು (watermelon) ಬೇಸಿಗೆಯ ಸಮಯದ ಅಮೃತವೆಂದೇ ಹೇಳಬಹುದು. ಹೌದು ರುಚಿಕರ, ರಸಭರಿತವಾದ ಈ ಹಣ್ಣು ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸುವುದು ಮಾತ್ರವಲ್ಲದೆ, ನಿರ್ಜಲೀಕರಣವನ್ನೂ ತಡೆಯುತ್ತದೆ. ಅದಕ್ಕಾಗಿಯೇ ಈ ಸಮಯದಲ್ಲಿ ಕಲ್ಲಂಗಡಿ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ ಇರುತ್ತದೆ. ದೇಹವನ್ನು ತಂಪಾಗಿರಿಸಲು, ದೇಹವನ್ನು ಹೈಡ್ರೇಟ್‌ ಆಗಿರಿಸಲು ಜನ ಈ ಹಣ್ಣನ್ನೇ ಹೆಚ್ಚಾಗಿ ಖರೀದಿಸುತ್ತಾರೆ. ಆದ್ರೆ ಅನೇಕ ಸಂದರ್ಭದಲ್ಲಿ ನಾವು ಖರೀದಿಸುವಂತಹ ಕಲ್ಲಂಗಡಿ ಹಣ್ಣು ಅಷ್ಟೇನು ರುಚಿಕರವಾಗಿರುವುದಿಲ್ಲ, ಜೊತೆಗೆ ಅನೇಕರಿಗೆ ರಸಭರಿತ ಕಲ್ಲಂಗಡಿ ಹಣ್ಣನ್ನು ಹೇಗೆ ಆಯ್ಕೆ ಮಾಡೋದು…

Read More

ಮಧ್ಯಪ್ರಾಚ್ಯದಲ್ಲಿನ ಯುದ್ಧ: ರಾಜ್ಯದಲ್ಲಿ ಇಂಧನ ಕೊರತೆಯ ಆತಂಕ; AKFPT ಹೇಳಿದ್ದೇನು?

ಬೆಂಗಳೂರು, ಮಾರ್ಚ್ 10: ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ದೇಶದ ಹಲವೆಡೆ ಈಗಾಗಲೇ LPG ಸಿಲಿಂಡರ್​​ಗಳ ಕೊರತೆ ಎದುರಾಗಿದೆ. ಈ ನಡುವೆ ಪೆಟ್ರೋಲ್​​, ಡೀಸೆಲ್​​ ಸೇರಿ ಇಂಧನಗಳ ಕೊರತೆಯೂ ಉಂಟಾಗುವ ಸಾಧ್ಯತೆ ಹಿನ್ನೆಲೆ ಜನ ಸಾಮಾನ್ಯರು ಆತಂಕಗೊಂಡಿದ್ದಾರೆ. ಮುಂಚಿತವಾಗಿ ಅಗತ್ಯ ಇಂಧನ ದಾಸ್ತಾನಿಗೆ ಮುಂದಾಗ್ತಿದ್ದು, ಕೆಲವೆಡೆ ಪೆಟ್ರೋಲ್​​ ಬಂಕ್​​ಗಳಿಗೆ ವಾಹನಗಳ ಮಾಲಕರು ಮುಗಿಬಿದ್ದ ಘಟನೆಗಳು ವರದಿಯಾಗಿವೆ. ಕೆಲವರು ನೀರಿನ ಟ್ಯಾಂಕ್​​ಗಳಲ್ಲಿ ಇಂಧನ ತುಂಬಿಸಿಕೊಂಡು ಹೋಗುತ್ತಿರುವ ವಿಡಿಯೋಗಳೂ ವೈರಲ್​​ ಆಗಿವೆ. ಈ ನಡುವೆ ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್​​, ಡೀಸೆಲ್​ ಕೊರತೆ…

Read More

ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಮಾರ್ಚ್ 10: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ (Commercial LPG Cylinder) ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಗೆ ಗೃಹ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ…

Read More

ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!

ಚಾಮರಾಜನಗರ, ಮಾರ್ಚ್​ 10: ಜಿಲ್ಲೆಯ ಕೊಳ್ಳೇಗಾಲ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು ಮತ್ತು ಪ್ರಮುಖ ದಾಖಲೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಚೇರಿಯ ಸಿಬ್ಬಂದಿಗಳು ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ, ಘಟನಾ ಸ್ಥಳಕ್ಕೆ ಡಿವೈಎಸ್ಪಿ ಧರ್ಮೇಂದ್ರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಬೆಂಕಿ ಆಕಸ್ಮಿಕ ಘಟನೆಯೇ ಅಥವಾ ಪೂರ್ವನಿಯೋಜಿತ…

Read More

ಪತ್ನಿಗೆ ಮೂರು ಬಾರಿ ವಿಷ ಹಾಕುವ ಯತ್ನ ವಿಫಲ, ನಾಲ್ಕನೇ ಬಾರಿ ಕೊಂದೇ ಬಿಟ್ಟ, ಹೇಗೆ ಗೊತ್ತಾ?

ಮುಂಬೈ, ಮಾರ್ಚ್​ 10: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಮೂರು ಬಾರಿ ವಿಷ ಹಾಕಲು ಯತ್ನಿಸಿ ವಿಫಲವಾಗಿದ್ದ, ನಾಲ್ಕನೇ ಪ್ರಯತ್ನದಲ್ಲಿ ಕಾರು ಗುದ್ದಿಸಿ ಹತ್ಯೆ(Murder) ಮಾಡಿಸಿರುವ ಘಟನೆ ಮಹಾರಾಷ್ಟ್ರದ ಬುಲ್ದಾನದಲ್ಲಿ ನಡೆದಿದೆ. 1 ಲಕ್ಷ ರೂ. ಕೊಟ್ಟು ಹಿಟ್​ಮ್ಯಾನ್ ನೇಮಿಸಿಕೊಂಡು ಅಪಘಾತದಂತೆ ಕಾಣುವ ರೀತಿಯಲ್ಲೇ ಬಿಂಬಿಸಿ ಕೊಲೆ ಮಾಡಿಸಿದ್ದ. ಪೊಲೀಸರ ಪ್ರಕಾರ, ಪ್ರಕಾಶ್ ಗವಾಂಡೆ ಎಂಬ ಆರೋಪಿ, ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ತನ್ನ ಪತ್ನಿ ವೃಶಾಲಿಯನ್ನು ಕೊಲೆ ಮಾಡಲು ಗುತ್ತಿಗೆ ಕೊಲೆಗಾರನನ್ನು ನೇಮಿಸಿಕೊಂಡಿದ್ದ. ಮಾರ್ಚ್ 2 ರಂದು ಈ ಘಟನೆ…

Read More

6 ತಿಂಗಳ ಸ್ಕೆಚ್​​, ಪಕ್ಕಾ ಪ್ಲ್ಯಾನ್​​ ಮಾಡಿ ಕಳ್ಳತನ: 1.8 ಕೆಜಿ ಬಂಗಾರ, ಡೈಮಂಡ್​​ ಕದ್ದವ ಅರೆಸ್ಟ್​

ಬೆಂಗಳೂರು, ಮಾರ್ಚ್​ 10: ಖತರ್ನಾಕ್​​ ಪ್ಲ್ಯಾನ್​​ ಮಾಡಿ ಮನೆಯೊಂದರಿಂದ ಬರೋಬ್ಬರಿ ಮೂರು ಕೋಟಿ ಬೆಲೆ ಬಾಳುವ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬೆಂಗಳೂರಿನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್  ಆರೋಪಿಯಾಗಿದ್ದು, ಈತ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಟೈಲ್ಸ್ ಕಾಮಗಾರಿ ಮಡುತ್ತಿದ್ದ ಎನ್ನಲಾಗಿದೆ. ಬರೋಬ್ಬರಿ 6 ತಿಂಗಳು ಸ್ಕೆಚ್​​ ಹಾಕಿ ಆರೋಪಿ ಮನೆ ದೋಚಿರುವ ವಿಚಾರವೂ ತನಿಖೆ ವೇಳೆ ಬಯಲಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುಡಿಷಿಯಲ್ ಲೇಔಟ್​​​ನಲ್ಲಿನ ಮನೆ ಮಾಲೀಕರು ಅಮೆರಿಕಾದಲ್ಲಿ ಸೆಟಲ್ ಆಗಿದ್ದರು….

Read More

‘ಸುದೀಪ್​​ ಸರ್ ಬಗ್ಗೆ ಯೋಚಿಸೋದಾದ್ರೂ ಈ ಯಮ ಕಿಂಕರರ ದಾಟಬೇಕು’; ರಜತ್-ವಿನಯ್

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ನಟ ಸುದೀಪ್ ಮೇಲೆ ನಿರಂತರವಾಗಿ ಟೀಕೆಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಈ ಪ್ರಕರಣದಲ್ಲಿ ಸುದೀಪ್ ಪರವಾಗಿ ವಿನಯ್ ಹಾಗೂ ರಜತ್ ಮಾತನಾಡುತ್ತಿದ್ದಾರೆ. ಇವರ ವಿರುದ್ಧ ಸತೀಶ್ ದೂರು ದಾಖಲು ಮಾಡಿದ್ದಾರೆ. ಹೀಗಿರುವಾಗಲೇ ರಜತ್ ಅವರು ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​​ನಲ್ಲಿ ತಾವು ಯಾವಾಗಲೂ ಸುದೀಪ್ ಪರ ನಿಲ್ಲೋದಾಗಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಜೊತೆಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಸತೀಶ್ ಅವರು ಮೂತ್ರ ಮಾಡುವ ವಿಡಿಯೋ ಹಾಕಿದ್ದಲ್ಲದೆ, ‘ದಾದಾ…

Read More