ನಾಳೆಯ ಹವಾಮಾನ: ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ; ಉತ್ತರ ಒಳನಾಡಿನ ಹಲವೆಡೆ ಸುಡು ಬಿಸಲು
ಬೆಂಗಳೂರು, ಮಾರ್ಚ್ 31: ತೀವ್ರ ಬಿಸಿಲಿನ ವಾತಾವರಣದ ನಡುವೆಯೂ ನಾಳೆ (ಏಪ್ರಿಲ್ 1) ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಸುಮಾರು 12 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಬಿಸಿಲು ಮತ್ತು ಮಳೆಯ ಮಿಶ್ರ ಹವಾಮಾನ ಕಂಡುಬರಲಿದೆ. ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದರೆ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ? ದಕ್ಷಿಣ ಒಳನಾಡು ಭಾಗದ ತುಮಕೂರು, ಚಿಕ್ಕಬಳ್ಳಾಪುರ,…