ಹಾರ್ಮುಜ್ ಜಲಸಂಧಿಯೊಳಗೆ ತೈಲ ಹರಿವನ್ನು ನಿಲ್ಲಿಸಿದರೆ, ಇರಾನ್ ಒಂದು ರಾಷ್ಟ್ರವಾಗಿಯೇ ಉಳಿಯದು: ಟ್ರಂಪ್ ಎಚ್ಚರಿಕೆ
ವಾಷಿಂಗ್ಟನ್, ಮಾರ್ಚ್ 10: ಇರಾನ್(Iran) ಹಾರ್ಮುಜ್ ಜಲಸಂಧಿಯೊಳಗೆ ತೈಲ ಹರಿವನ್ನು ನಿಲ್ಲಿಸುವ ಕೆಲಸ ಮಾಡಿದ್ದೇ ಆದಲ್ಲಿ ಇರಾನ್ ಒಂದು ದೇಶವಾಗಿಯೇ ಉಳಿಯುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ಆ ರೀತಿಯಾದರೆ 20 ಪಟ್ಟು ಹೆಚ್ಚು ದಾಳಿಯನ್ನು ಎದುರಿಸಬೇಕಾಗುತ್ತದೆ. ಇರಾನ್ ಅನ್ನು ಮತ್ತೆ ಒಂದು ರಾಷ್ಟ್ರವಾಗಿ ನಿರ್ಮಿಸುವುದನ್ನು ಅಸಾಧ್ಯವಾಗಿಸುತ್ತದೆ ಎಂದರು. ಸಾವು, ಬೆಂಕಿ ಮತ್ತು ಕೋಪ ಅವರ ಮೇಲೆ ಆಳ್ವಿಕೆ ನಡೆಸುತ್ತದೆ. ಆದರೆ ಅದು ಸಂಭವಿಸಬಾರದು ಎಂದು ನಾನು ಭಾವಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ…