ಜಗತ್ತಿಗೇ ಕಂಟಕವಾಗಲಿದೆ ಇರಾನ್ ಯುದ್ಧ: ಮಾರಕ ಕಾಯಿಲೆ ಹರಡುವ ಭೀತಿ, ಭಾರತಕ್ಕೂ ಇದೆ ಆತಂಕ!
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೈಲ ಕೇಂದ್ರಗಳ ಮೇಲೆ ದಾಳಿಗಳಿಗೆ ಕಾರಣವಾಗಿದ್ದು, ಇದು ಕೇವಲ ಆರ್ಥಿಕ ನಷ್ಟವಲ್ಲದೆ, ಭೀಕರ ಪರಿಸರ ದುರಂತಕ್ಕೆ ನಾಂದಿ ಹಾಡಿದೆ. ತೈಲ ಬಾವಿಗಳಿಗೆ ಬೆಂಕಿ ಬಿದ್ದಾಗ ಹೊರಹೊಮ್ಮುವ ದಟ್ಟ ಕಪ್ಪು ಹೊಗೆ ನೂರಾರು ಕಿಲೋಮೀಟರ್ ದೂರದವರೆಗೆ ಹರಡಿ ಜನರ ಆರೋಗ್ಯಕ್ಕೆ ಮಾರಕವಾಗಲಿದೆ. ಈ ಹೊಗೆಯಲ್ಲಿರುವ ಕಾರ್ಬನ್ ಮೊನಾಕ್ಸೈಡ್, ಸಲ್ಫರ್ ಡೈಯಾಕ್ಸೈಡ್ ಮತ್ತು ನೈಟ್ರೋಜನ್ ಆಕ್ಸೈಡ್‌ಗಳು ಶ್ವಾಸಕೋಶ ಮತ್ತು ರಕ್ತದ ಮೇಲೆ ನೇರ ಪರಿಣಾಮ ಬೀರುತ್ತವೆ. ಗಾಳಿಯಲ್ಲಿ ಸೇರಿದ ಈ ವಿಷಗಳು ಮಳೆ…