ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ; ಆ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ, ಹೈದರಬಾದ್ಗೆ ಸಿಂಗಾಪುರ ಪ್ರತಿಸ್ಪರ್ಧಿ : ಸಿಎಂ ರೇವಂತ್ ರೆಡ್ಡಿ
ಹೈದರಾಬಾದ್, ಮಾ.9: ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ನೆರೆರಾಜ್ಯದ ರಾಜಕೀಯ ಅಖಾಡದಲ್ಲೂ ಸದ್ದು ಮಾಡುತ್ತಿದೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬೆಂಗಳೂರಿನ ಟ್ರಾಫಿಕ್ ಮತ್ತು ಮುಂಬೈ-ಚೆನ್ನೈನ ಮೂಲಸೌಕರ್ಯಗಳ ಕುರಿತು ವ್ಯಂಗ್ಯವಾಡಿದ್ದಾರೆ. ಬೆಂಗಳೂರು ನಗರ ಇಂದು ಕೇವಲ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರಿನ ಇಂದಿನ ಸ್ಥಿತಿ ಏನಾಗಿದೆ ನೋಡಿ? ಅಲ್ಲಿನ ಜನ ಟ್ರಾಫಿಕ್‌ನಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ,”…