ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ
ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ರಾಮಾಯಣ’ (Ramayana) ಬಗ್ಗೆ ಈಗ ವಿದೇಶದಲ್ಲೂ ಚರ್ಚೆ ಶುರುವಾಗಿದೆ. ಚಿತ್ರತಂಡವು ಇತ್ತೀಚೆಗೆ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನದಲ್ಲಿ ಚಿತ್ರದ ಟೀಸರ್ ಪ್ರದರ್ಶಿಸಿದೆ. ಈ ಮೂಲಕ ಚಿತ್ರದ ದೃಶ್ಯ ವೈಭವವನ್ನು ಮೊದಲ ಬಾರಿಗೆ ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಟೀಸರ್ ಪ್ರದರ್ಶನದ ಬಳಿಕ ಮಾತನಾಡಿದ ನಟ…