ಬೆಂಗಳೂರಿನಲ್ಲಿ ಜೂ. ಎನ್ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್
ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ (Jr NTR) ಅವರಿಗೆ ಬೆಂಗಳೂರಿನಲ್ಲೂ ಅಭಿಮಾನಿಗಳು ಇದ್ದಾರೆ. ಇಂದು (ಮಾರ್ಚ್ 8) ಮಹಾದೇವಪುರ ಕಿಮ್ಸ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ ಏನ್ಟಿಆರ್ ಅವರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಆಸ್ಪತ್ರೆಯ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಜೂನಿಯರ್ ಎನ್ಟಿಆರ್ ಅವರನ್ನು ಹತ್ತಿರದಿಂದ ನೋಡಬೇಕು ಎಂಬ…