ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಪ್ರೇಯಸಿ ಸೇರಿ ಮೂವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೂಪ
ನೆಲಮಂಗಲ, ಮಾರ್ಚ್ 08: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋಗಿ ಪ್ರೇಯಸಿ ಸೇರಿದಂತೆ ಮೂವರ ಮೇಲೆ ಪೆಟ್ರೋಲ್ ಸುರಿದು ವ್ಯಕ್ತಿಯೋರ್ವ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ನಡೆದಿದೆ. ಆರೋಪಿಯ ಪ್ರೇಯಸಿ ಸುಮಲತಾ, ಆಕೆಯ ತಂದೆ ಶ್ರೀರಾಮ(48) ಹಾಗೂ ತಾಯಿ ಮಂಜಮ್ಮ(42) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಆರೋಪಿ ಪಾಂಡುರಂಗ(29)ನನ್ನು ಬಂಧಿಸಲಾಗಿದ್ದು, ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 4 ವರ್ಷದ ಹಿಂದೆ ಗಂಡನಿಂದ ದೂರವಾಗಿದ್ದ ಸುಮಲತಾ, ಯಶವಂತಪುರದ…