ಹುಬ್ಬಳ್ಳಿ: ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್: ಹೆದರಿ ಆತ್ಮಹತ್ಯೆಗೆ ಶರಣಾದ ರೈತ
ಹುಬ್ಬಳ್ಳಿ, (ಮಾರ್ಚ್ 07): ಪೊಲೀಸರ ವಿಚಾರಣೆಗೆ ಹೆದರಿ ರೈತನೋರ್ವ (Farmer) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಉಮಚಗಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಅಂಗಡಿ(48) ಮೃತ ರೈತ. ಹೊಲದ ದಾರಿ ವಿಚಾರವಾಗಿ ಉಮಚಗಿ ಗ್ರಾಮದಲ್ಲಿ ಗಲಾಟೆಯಾಗಿದ್ದು, ಈ ಸಂಬಂಧ ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಲ್ಲೇ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ. ಬಳಿಕ ಪೊಲೀಸರು ಕರೆ ಮಾಡಿ ಸ್ಪೆಷನ್ಗೆ ಬರುವಂತೆ ಹೇಳಿದ್ದಾರೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಪ್ರಾಣಬಿಟ್ಟಿದ್ದಾನೆ. ಜಮೀನು ಹಾದಿ ಸಂಬಂಧ ಉಮಚಗಿ ಗ್ರಾಮದಲ್ಲಿ…