All posts by nagaraj11081993

ಪಶ್ಚಿಮ ಬಂಗಾಳದಲ್ಲಿ ಸ್ವಚ್ಛತಾ ಕ್ರಾಂತಿ; ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಸೆ. 1ರಿಂದ ಭಾರಿ ದಂಡ! – Kannada News | West Bengal Government to Fine Littering and Spitting from September 1

ಕೊಲ್ಕತ್ತಾ, ಜೂನ್ 19: ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದಾದ್ಯಂತ ಸಾರ್ವಜನಿಕ ಸ್ಥಳಗಳನ್ನು ಸುಂದರ ಹಾಗೂ ಸ್ವಚ್ಛವಾಗಿಡುವ ಉದ್ದೇಶದಿಂದ ಸುವೇಂದು ಅಧಿಕಾರಿ (Suvendu Adhikari) ನೇತೃತ್ವದ ಬಿಜೆಪಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬರುವ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ರಸ್ತೆ, ಪಾರ್ಕ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವ ಮತ್ತು ಉಗುಳುವ ಸಾರ್ವಜನಿಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

ಪಶ್ಚಿಮ ಬಂಗಾಳದ ಪ್ರಮುಖ ನಗರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವುದು, ಗುಟ್ಕಾ-ಪಾನ್ ತಿಂದು ಗೋಡೆ ಹಾಗೂ ರಸ್ತೆಗಳ ಮೇಲೆ ಉಗುಳುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಜೊತೆಗೆ ನಗರಗಳ ಸೌಂದರ್ಯವೂ ಹಾಳಾಗುತ್ತಿದೆ. ಹಲವು ಬಾರಿ ಜಾಗೃತಿ ಮೂಡಿಸಿದರೂ ಪರಿಸ್ಥಿತಿ ಸುಧಾರಿಸದ ಹಿನ್ನೆಲೆಯಲ್ಲಿ, ಈಗ ದಂಡದ ಅಸ್ತ್ರವನ್ನು ಬಳಸಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪಶ್ಚಿಮ ಬಂಗಾಳದ ಚುನಾವಣೆ ತಯಾರಿ ಬಗ್ಗೆ ಪ್ರಲ್ಹಾದ್ ಜೋಶಿ ಮಾತು

ಸೆಪ್ಟೆಂಬರ್ 1ರಿಂದ ರಸ್ತೆಗಳು, ಫುಟ್​ಪಾತ್, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಮತ್ತು ಉದ್ಯಾನವನಗಳಲ್ಲಿ ಕಸ ಎಸೆಯುವುದು ಅಥವಾ ಉಗುಳುವುದು ಕಂಡುಬಂದರೆ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಸ್ಥಳದಲ್ಲೇ ದಂಡ ವಿಧಿಸಲಿದ್ದಾರೆ. ಪ್ರಮುಖ ರಸ್ತೆಗಳು ಮತ್ತು ಜಂಕ್ಷನ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾ ಇಡಲಾಗುವುದು. ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ದಂಡದ ನೋಟಿಸ್ ಕಳುಹಿಸುವ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ.

ಮೊದಲ ಬಾರಿಗೆ ತಪ್ಪು ಮಾಡಿದಾಗ ನಿಗದಿಪಡಿಸಿದ ದಂಡದ ಮೊತ್ತವನ್ನು ವಸೂಲಿ ಮಾಡಲಾಗುತ್ತದೆ. ಅದೇ ವ್ಯಕ್ತಿ ಪದೇ ಪದೇ ನಿಯಮ ಉಲ್ಲಂಘಿಸಿದರೆ ದಂಡದ ಮೊತ್ತವನ್ನು ದುಪ್ಪಟ್ಟುಗೊಳಿಸಲಾಗುತ್ತದೆ. ಈ ಹೊಸ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (KMC) ಸೇರಿದಂತೆ ರಾಜ್ಯದ ಎಲ್ಲಾ ಮುನ್ಸಿಪಾಲಿಟಿಗಳು ಮತ್ತು ಪಂಚಾಯತ್‌ಗಳಿಗೆ ಸರ್ಕಾರ ಸಂಪೂರ್ಣ ಅಧಿಕಾರ ನೀಡಿದೆ. ವಾಣಿಜ್ಯ ಪ್ರದೇಶಗಳು, ಮಾರ್ಕೆಟ್‌ಗಳು ಮತ್ತು ಹೋಟೆಲ್‌ಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡದ ಮಾಲೀಕರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ.

ಇದನ್ನೂ ಓದಿ: ಲಡಾಖ್​​ಗೆ ಪ್ರವಾಸ ಹೋಗುತ್ತೀರಾ? ಪ್ಲಾಸ್ಟಿಕ್ ಬಳಸಿದರೆ, ಕಸ ಎಸೆದರೆ ದಂಡ ಕಟ್ಟಬೇಕು!

ಸೆಪ್ಟೆಂಬರ್ 1ರಿಂದ ದಂಡ ಪ್ರಕ್ರಿಯೆ ಆರಂಭವಾಗುವ ಮುನ್ನ, ಇಡೀ ಆಗಸ್ಟ್ ತಿಂಗಳು ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ನಡೆಸಲು ಸರ್ಕಾರ ಯೋಜಿಸಿದೆ. ಮೈಕ್‌ಗಳ ಮೂಲಕ ಪ್ರಚಾರ, ಪೋಸ್ಟರ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಿಗೆ ಹೊಸ ನಿಯಮದ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಸ್ವಚ್ಛ ಭಾರತ ಅಭಿಯಾನದ ಪ್ರಯುಕ್ತ ಬಂಗಾಳದ ಬಿಜೆಪಿ ಸರ್ಕಾರ ಸ್ವಚ್ಛತೆಗಾಗಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಸಿನಿಮಾದ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ – Kannada News | Dhanush OM movie Pushpa Comparisons Director Rajkumar Periasamy Reacts

ಕಾಲಿವುಡ್ ಸ್ಟಾರ್ ನಟ ಧನುಷ್ (Dhanush) ಅಭಿನಯದ ಮುಂಬರುವ ಬಹುನಿರೀಕ್ಷಿತ ಚಿತ್ರ ‘D55’ ಸಿನಿಮಾಗೆ ಟೈಟಲ್ ಅನಾವರಣ ಆಗಿದೆ. ಈ ಚಿತ್ರದ ಗ್ಲಿಂಪ್ಸ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಚಿತ್ರಕ್ಕೆ ‘ಓಂ’ (OM) ಎಂದು ಹೆಸರಿಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೊದಲ ಝಲಕ್ ಭಾರಿ ಸದ್ದು ಮಾಡುತ್ತಿದೆ. ಆದರೆ, ಈ ಗ್ಲಿಂಪ್ಸ್ ನೋಡಿದ ನೆಟ್ಟಿಗರು ಹಾಗೂ ಸಿನಿಪ್ರಿಯರು, ಧನುಷ್ ಅವರ ಈ ಹೊಸ ಚಿತ್ರವನ್ನು ಅಲ್ಲು ಅರ್ಜುನ್ ನಟನೆಯ ಬ್ಲಾಕ್‌ಬಸ್ಟರ್ ಸಿನಿಮಾ ‘ಪುಷ್ಪ’ (Pushpa) ಚಿತ್ರಕ್ಕೆ ಹೋಲಿಸಲು ಶುರು ಮಾಡಿದ್ದಾರೆ.

ಚಿತ್ರತಂಡ ಬಿಡುಗಡೆ ಮಾಡಿರುವ ‘ಓಂ’ ಟೈಟಲ್ ಗ್ಲಿಂಪ್ಸ್‌ನಲ್ಲಿ ಧನುಷ್ ಗಡ್ಡ ಬಿಟ್ಟು, ರಗಡ್ ಲುಕ್‌ನಲ್ಲಿ ಕಾಡಿನ ನಡುವೆ ಕಾಡುಕಳ್ಳನಂತೆ ಕಾಣಿಸಿಕೊಂಡಿದ್ದಾರೆ. ಜೊತೆಗೆ ಈ ವಿಡಿಯೋದಲ್ಲಿ ರಕ್ತಚಂದನದ ದೃಶ್ಯಗಳೂ ಇವೆ. ‘ಪುಷ್ಪ’ ಸಿನಿಮಾ ಸಂಪೂರ್ಣವಾಗಿ ರಕ್ತಚಂದನದ ಕಳ್ಳಸಾಗಣೆ ಹಿನ್ನೆಲೆಯನ್ನು ಹೊಂದಿದ್ದರಿಂದ, ಪ್ರೇಕ್ಷಕರು ತಕ್ಷಣವೇ ‘ಓಂ’ ಚಿತ್ರವನ್ನು ‘ಪುಷ್ಪ’ಗೆ ಹೋಲಿಸಿದ್ದಾರೆ.

ಈ ಕುರಿತು ಸಂದರ್ಶನವೊಂದರಲ್ಲಿ ಪ್ರಶ್ನಿಸಿದಾಗ ಉತ್ತರಿಸಿದ ನಿರ್ದೇಶಕ ರಾಜ್​ಕುಮಾರ್ ಪೆರಿಯಸಾಮಿ, ‘ನಾವು ಚಿತ್ರದ ಕೇವಲ ಒಂದು ಸಣ್ಣ ದೃಶ್ಯವನ್ನು ಮಾತ್ರ ತೋರಿಸಿದ್ದೇವೆ. ‘ಓಂ’ ಸಿನಿಮಾದಲ್ಲಿ ಇನ್ನು ಸಾಕಷ್ಟು ವಿಭಿನ್ನ ಅಂಶಗಳಿವೆ. ಸಿನಿಮಾ ನೋಡಿದಾಗ ಮಾತ್ರ ಅದು ಸಂಪೂರ್ಣವಾಗಿ ತಿಳಿಯುತ್ತದೆ. ಟೈಟಲ್ ಟೀಸರ್ ನೋಡಿದಾಗ ಪ್ರತಿಯೊಬ್ಬರಿಗೂ ಅವರದ್ದೇ ಆದ ವಿಭಿನ್ನ ದೃಷ್ಟಿಕೋನ ಮೂಡುತ್ತದೆ. ನಾವು ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಲು ಮತ್ತು ಚರ್ಚೆ ಹುಟ್ಟುಹಾಕಲು ಮಾತ್ರ ಇದನ್ನು ಬಿಡುಗಡೆ ಮಾಡಿದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಪುಷ್ಪ’ ಸಿನಿಮಾ ರೀತಿಯೇ ‘ಓಂ’ ಚಿತ್ರ ಕೂಡ ಭರ್ಜರಿ ಆ್ಯಕ್ಷನ್ ದೃಶ್ಯಗಳನ್ನು ಹೊಂದಿರಲಿದ್ದು, ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಮೊದಲ ಭಾಗಕ್ಕೆ ‘ಓಂ ಚಾಪ್ಟರ್ 1: ಉಧಿರಂ – ದಿ ಬ್ಲಡ್ ವುಡ್’ ಎಂದು ಹೆಸರಿಡಲಾಗಿದೆ. ಚಿತ್ರವು ಅಕ್ಟೋಬರ್ 16ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಟೀಸರ್ ಮತ್ತು ಶೀರ್ಷಿಕೆಯಿಂದ ಕೌತುಕ ಮೂಡಿದೆ.

ಇದನ್ನೂ ಓದಿ: ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ

‘ಓಂ’ ಚಿತ್ರದಲ್ಲಿ ಧನುಷ್ ಜೊತೆಗೆ ಮಲಯಾಳಂ ಸ್ಟಾರ್ ನಟ ಮಮ್ಮುಟ್ಟಿ ಅವರು ಪ್ರಮುಖ ಪಾತ್ರದಲ್ಲಿದ್ದರೆ, ಸಾಯಿ ಪಲ್ಲವಿ ಹಾಗೂ ಶ್ರೀಲೀಲಾ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಯಿ ಅಭ್ಯಂಕರ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ‘ಅಮರನ್’ ಖ್ಯಾತಿಯ ರಾಜ್​ಕುಮಾರ್ ಪೆರಿಯಸಾಮಿ ಅವರು ನಿರ್ದೇಶನ ಮಾಡಿರುವುದರಿಂದ ಹೈಪ್ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ ತಿರುಗೇಟು – Kannada News | Ram Mandir fund row Those who never visited Ayodhya now talking about Ram bhakti CM Yogi Adityanath said

ಅಯೋಧ್ಯೆ, ಜೂನ್ 19: ಅಯೋಧ್ಯೆಯ (Ayodhya) ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಭೂಮಿ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಮಾಡಿದ್ದ ಆರೋಪಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ತಿರುಗೇಟು ನೀಡಿದ್ದಾರೆ. ತಮ್ಮ ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಭೇಟಿ ನೀಡದ ಮತ್ತು ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ನಾಯಕರು ಇಂದು ರಾಜಕೀಯ ಲಾಭಕ್ಕಾಗಿ ‘ರಾಮಭಕ್ತಿ’ಯ ನಾಟಕವಾಡುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದವರು ಈಗ ರಾಮ ಭಕ್ತರ ಬಗ್ಗೆ ಕಾಳಜಿ ವಹಿಸುತ್ತಿರುವಂತೆ ನಟಿಸುತ್ತಿದ್ದಾರೆ ಎಂದು ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಕೆಲವು ನಾಯಕರು ತಮ್ಮ ಇಡೀ ಜೀವನದಲ್ಲಿ ಎಂದಿಗೂ ಅಯೋಧ್ಯೆಗೆ ಹೆಜ್ಜೆ ಇಟ್ಟವರಲ್ಲ. ಅಯೋಧ್ಯೆಯ ಹೆಸರೆತ್ತಲು ಹೆದರುತ್ತಿದ್ದವರು ಮತ್ತು ಶ್ರೀರಾಮ ಕೇವಲ ಒಂದು ಕಾಲ್ಪನಿಕ ಪಾತ್ರ ಎಂದು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದವರು ಇಂದು ರಾಮಮಂದಿರದ ನಿಧಿಯ ಬಗ್ಗೆ ಮಾತನಾಡುತ್ತಿದ್ದಾರೆ.” ಎಂದು ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ – Kannada News | India vs Afghanistan 3rd ODI: Key Playing XI Changes

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯ ಜೂನ್ 20 ರ ಶನಿವಾರ ಚೆನ್ನೈನಲ್ಲಿ ನಡೆಯಲಿದೆ. ಈ ಸರಣಿಯನ್ನು ಈಗಾಗಲೇ ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿರುವ ಕಾರಣ ಕೊನೆಯ ಏಕದಿನ ಪಂದ್ಯಕ್ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಅದರಂತೆ ಬೆಂಚ್ ಕಾದ ಕೆಲವು ಆಟಗಾರರಿಗೆ ಈ ಪಂದ್ಯದಲ್ಲಿ ಆಡುವ ಅವಕಾಶ ಸಿಗಬಹುದು. ಇದಕ್ಕೆ ಪೂರಕವಾಗಿ ಬೌಲಿಂಗ್ ಆಲ್‌ರೌಂಡರ್ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಕೊನೆಯ ಪಂದ್ಯವನ್ನು ಅರ್ಷ್‌ದೀಪ್ ಸಿಂಗ್ ಆಡುವುದಿಲ್ಲ ಎಂತಲೂ ಹೇಳಲಾಗುತ್ತಿದೆ. ಹೀಗಾಗಿ ತಂಡದಲ್ಲಿ ಕನಿಷ್ಠ ಎರಡರಿಂದ ಮೂರು ಬದಲಾವಣೆಗಳು ಆಗುವುದು ಖಚಿತವಾಗಿದೆ.

ಹರ್ಷಿತ್ ರಾಣಾಗೆ ಅವಕಾಶ

ಮೊಣಕಾಲಿನ ಗಾಯದಿಂದಾಗಿ ಹರ್ಷಿತ್ ರಾಣಾ 2026 ರ ಟಿ20 ವಿಶ್ವಕಪ್ ಮತ್ತು 2026 ರ ಐಪಿಎಲ್ ಅನ್ನು ತಪ್ಪಿಸಿಕೊಂಡಿದ್ದರು. ಈಗ ಅವರು ಸಂಪೂರ್ಣವಾಗಿ ಫಿಟ್ ಆಗಿರುವುದರಿಂದ, ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗೆ ಮುಂಚಿತವಾಗಿ ಅವರಿಗೆ ಪ್ಲೇಯಿಂಗ್ XI ನಲ್ಲಿ ಅವಕಾಶ ನೀಡುವ ಬಗ್ಗೆ ತಂಡದ ಆಡಳಿತ ಮಂಡಳಿ ಪರಿಗಣಿಸುವ ಸಾಧ್ಯತೆಯಿದೆ. ಹರ್ಷಿತ್ ಆಗಮನದಿಂದ ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆಯಾಗುವುದು ಖಚಿತವಾಗಿದೆ. ಹಾಗೆಯೇ ಅರ್ಷದೀಪ್ ಸಿಂಗ್ ಈ ಪಂದ್ಯದಲ್ಲಿ ಆಡದಿದ್ದರೆ, ಮತ್ತೊಬ್ಬ ವೇಗಿಗೆ ಆಡುವ ಅವಕಾಶ ಸಿಗಬಹುದು.

ಯಶಸ್ವಿ ಜೈಸ್ವಾಲ್​ಗೆ ಕೋಕ್

ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಜೊತೆ ಯಶಸ್ವಿ ಜೈಸ್ವಾಲ್ ಅವರಿಗೆ ಆರಂಭಿಕರಾಗಿ ಆಡುವ ಅವಕಾಶ ನೀಡಲಾಗಿತ್ತು. ಆದರೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಜೈಸ್ವಾಲ್ ವಿಫಲರಾದರು. ಆದ್ದರಿಂದ, ಮೂರನೇ ಪಂದ್ಯದಲ್ಲಿ ರೋಹಿತ್ ಮತ್ತು ಶುಭಮನ್ ಗಿಲ್ ಮತ್ತೊಮ್ಮೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ, ಶ್ರೇಯಸ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಕೆಎಲ್ ರಾಹುಲ್ ಐದನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದು, ಆಲ್‌ರೌಂಡರ್​ಗಳಾಗಿ ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್ ಆಡುವ ಸಾಧ್ಯತೆಗಳಿವೆ.

IND vs AFG: ಕೊನೆಯ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಯುವ ವೇಗಿಯ ಆಗಮನ

ಭಾರತದ ಸಂಭಾವ್ಯ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಗುರ್ನೂರ್ ಬ್ರಾರ್, ಪ್ರಸಿದ್ಧ್ ಕೃಷ್ಣ/ಅರ್ಷದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಶಾಸಕ ಎಚ್​ಸಿ ಬಾಲಕೃಷ್ಣ ಸವಾಲು – Kannada News | Farmers to Get Compensation Within 15 Days or I’ll retire from Politics: MLA HC Balakrishna

ರಾಮನಗರ, ಜೂನ್​​ 19: ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಕೆಲ ರೈತರು ತಮ್ಮ ಜಮೀನುಗಳನ್ನು ಯೋಜನೆಗೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ರಾಮನಗರದ ಜಿಬಿಡಿಎ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜ್​​ ಭೂಸ್ವಾಧೀನಕ್ಕೆ ಒಪ್ಪಿದ ರೈತರಿಗೆ ಪರಿಹಾರ ಚೆಕ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ, ನಮ್ಮ ವಿರೋಧಿಗಳು ಪರಿಹಾರ ನೀಡಲು ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅದಕ್ಕೆ ನಾವು ಇಂದು ಪರಿಹಾರ ಚೆಕ್ ವಿತರಿಸುವ ಮೂಲಕ ಉತ್ತರ ನೀಡಿದ್ದೇವೆ. ನಮ್ಮ ಬಳಿ ಸಾಕಷ್ಟು ಹಣವಿದ್ದು, ಅರ್ಹ ರೈತರಿಗೆ ಒಂದು ವಾರದಿಂದ 15 ದಿನಗಳ ಒಳಗಾಗಿ ಅವರ ಖಾತೆಗಳಿಗೆ ನೇರವಾಗಿ ಚೆಕ್ ತಲುಪಿಸಲಾಗುವುದು. ಇದನ್ನು ನಾವು ಮಾಡದೇ ಹೋದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇವೆ ಎಂದು ಸವಾಲು ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮಾ; ರಾಜೀನಾಮೆ ನೀಡಲು ಸಿದ್ಧ ಎಂದ ಉದ್ಧವ್ ಠಾಕ್ರೆ – Kannada News | Uddhav Thackeray says Ready To Resign As UBT Shiv Sena Chief Maharashtra Politics

ಮುಂಬೈ, ಜೂನ್ 19: ಶಿವಸೇನೆಯ ಸಂಸ್ಥಾಪನಾ ದಿನದಂದು ಶಿವಸೇನೆ (Shiv Sena) ಠಾಕ್ರೆ ಬಣದಿಂದ ರ್ಯಾಲಿ ನಡೆಯಿತು. ಇದರಲ್ಲಿ ಭಾಗವಹಿಸಿದ ಉದ್ಧವ್ ಠಾಕ್ರೆ ಶಿವಸೇನೆ ಶಿಂಧೆ ಬಣ, ಬಿಜೆಪಿ ಮತ್ತು ಬಂಡಾಯ ಸಂಸದರ ಮೇಲೆ ದಾಳಿ ನಡೆಸಿದರು. ಈ ವೇಳೆ ಅವರು ತಮ್ಮ ಶಿವಸೇನೆ ಉದ್ಧವ್ ಠಾಕ್ರೆ ಬಣದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ಘೋಷಿಸಿದರು. “ನಾನು ಹೇಗಿದ್ದೇನೆಂದು ನಿಮಗೆ ತಿಳಿದಿದೆ. ಒಬ್ಬ ವ್ಯಕ್ತಿ ನನ್ನತ್ತ ಬೆರಳು ಮಾಡಿ ತೋರಿಸಿದರೂ ನಾನು ಒಂದು ಕ್ಷಣವೂ ಕಚೇರಿಯಲ್ಲಿ ಉಳಿಯುವುದಿಲ್ಲ. ಅದಕ್ಕಾಗಿಯೇ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ನಾನು ಬಯಸಿದರೆ ವಿಧಾನಸಭೆಯಲ್ಲಿ ಕುಳಿತುಕೊಳ್ಳುತ್ತಿದ್ದೆ. 60 ವರ್ಷಗಳು ಕಳೆದಿವೆ. ನನ್ನ ವಿರುದ್ಧದ ಆರೋಪಗಳು ನಿಜವಾಗಿದ್ದರೆ, ನನಗೆ ಹೇಳಿ. ನಾನು ಈಗಲೇ ರಾಜೀನಾಮೆ ನೀಡಲು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.

ಶಿವಸೇನೆ ಪಕ್ಷದ ಪ್ರಮುಖ ನಾಯಕರು ಮತ್ತು ಸಂಸದರ ತುರ್ತು ಸಭೆ ನಡೆಸಿದ ಉದ್ಧವ್ ಠಾಕ್ರೆ, ಪಕ್ಷದಲ್ಲಿ ಉಂಟಾಗಿರುವ ಆಂತರಿಕ ಕಲಹದಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ನನ್ನ ನಾಯಕತ್ವದ ಮೇಲೆ ಯಾರಿಗಾದರೂ ನಂಬಿಕೆ ಇಲ್ಲದಿದ್ದರೆ ನಾನು ಈಗಲೇ ಶಿವಸೇನಾ (UBT) ಮುಖ್ಯಸ್ಥ ಸ್ಥಾನವನ್ನು ತ್ಯಜಿಸಲು ಸಿದ್ಧನಿದ್ದೇನೆ. ಅಧಿಕಾರಕ್ಕಾಗಿ ನಾನು ಎಂದಿಗೂ ಹಪಹಪಿಸಿಲ್ಲ. ನನ್ನ ತಂದೆ ಬಾಳಾಸಾಹೇಬ್ ಠಾಕ್ರೆ ಅವರ ತತ್ವಗಳಿಗಾಗಿ ನಾನು ಹೋರಾಡುತ್ತಿದ್ದೇನೆ” ಎಂದು ಸಭೆಯಲ್ಲಿ ಭಾವುಕರಾಗಿ ನುಡಿದಿದ್ದಾರೆ.

ಇದನ್ನೂ ಓದಿ: ಶಿವಸೇನೆಯಲ್ಲಿ ಮತ್ತೊಂದು ಬಿರುಕು? ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ

ಪಕ್ಷಾಂತರ ಮಾಡಲು ಸಂಚು ರೂಪಿಸುತ್ತಿರುವ ಹಾಗೂ ವಿರೋಧಿ ಪಾಳಯದೊಂದಿಗೆ ಕೈಜೋಡಿಸಿರುವ ಬಂಡಾಯ ಸಂಸದರ ವಿರುದ್ಧ ಉದ್ಧವ್ ಠಾಕ್ರೆ ಕಟು ಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. “ನಮ್ಮ ಚಿಹ್ನೆ ಮತ್ತು ನಮ್ಮ ಪಕ್ಷದ ಟಿಕೆಟ್‌ನಿಂದ ಗೆದ್ದು ಸಂಸತ್ ಪ್ರವೇಶಿಸಿದವರು ಈಗ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಇವರು ಕೇವಲ ಪಕ್ಷದ್ರೋಹಿಗಳಲ್ಲ, ಇಡೀ ಮಹಾರಾಷ್ಟ್ರದ ಜನತೆಗೆ ದ್ರೋಹ ಬಗೆದಿರುವ ದೇಶದ್ರೋಹಿಗಳು” ಎಂದು ಗುಡುಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಏಕನಾಥ್ ಶಿಂದೆ ಅವರ ನೇತೃತ್ವದಲ್ಲಿ ಶಿವಸೇನೆಯಲ್ಲಿ ಭಾರಿ ಬಿರುಕು ಉಂಟಾಗಿತ್ತು. ಈಗ ಮತ್ತೊಮ್ಮೆ ಉದ್ಧವ್ ಠಾಕ್ರೆ ಬಣದ ಕೆಲವು ಸಂಸದರು ಮತ್ತು ಹಿರಿಯ ನಾಯಕರು ಪಕ್ಷದ ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡು ಪ್ರತ್ಯೇಕ ಗುಂಪು ರಚಿಸಲು ಅಥವಾ ಮೈತ್ರಿ ಬದಲಾಯಿಸಲು ಸಿದ್ಧತೆ ನಡೆಸಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್ ಜೊತೆ ವಿಲೀನಕ್ಕೆ ಉದ್ಧವ್ ಠಾಕ್ರೆ ಪ್ಲಾನ್; ಶಿವಸೇನೆಯ 6 ಬಂಡಾಯ ಸಂಸದರಿಂದ ಸ್ಪೀಕರ್‌ಗೆ ದೂರು

ಉದ್ಧವ್ ಠಾಕ್ರೆ ಅವರ ಈ ರಾಜೀನಾಮೆಯ ಪ್ರಸ್ತಾಪ ಬಂಡಾಯಗಾರರನ್ನು ಹಿಡಿದಿಡಲು ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಒಟ್ಟುಗೂಡಿಸಲು ಕೈಗೊಂಡಿರುವ ರಾಜತಾಂತ್ರಿಕ ನಡೆ ಎಂದೂ ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿಜವಾಗಿಯೂ ಡಿಪ್ರೆಶನ್ ಅಂದ್ರೆ ಏನು? ಲಕ್ಷಣಗಳು ಹೇಗಿರುತ್ತೆ? ಇದರಿಂದ ಹೊರಬರಲು ಸುಲಭ ಮಾರ್ಗ ಯಾವುದು? – Kannada News | Depression Symptoms Across Different Age Groups

ಡಿಪ್ರೆಶನ್ (ಖಿನ್ನತೆ) ಎಂಬುದು ಕೇವಲ ದುಃಖ ಅಥವಾ ಮಾನಸಿಕ ದುರ್ಬಲತೆ ಅಲ್ಲ. ಇದು ವ್ಯಕ್ತಿಯ ಆಲೋಚನೆ, ಭಾವನೆ, ನಡವಳಿಕೆ ಮತ್ತು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುವ ಗಂಭೀರ ಮಾನಸಿಕ ಆರೋಗ್ಯ ಸಮಸ್ಯೆಯಾಗಿದೆ. ಅಧ್ಯಯನಗಳ ಪ್ರಕಾರ, ಜೀವನದಲ್ಲಿ ಕನಿಷ್ಠ ಒಮ್ಮೆ ಐವರಲ್ಲಿ ಒಬ್ಬರು ಡಿಪ್ರೆಶನ್ (Depression) ಅನುಭವಿಸುವ ಸಾಧ್ಯತೆ ಇದೆ. ಆದರೆ ಈ ಖಿನ್ನತೆಯ ಲಕ್ಷಣಗಳನ್ನು ಗುರುತಿಸಿ, ಸಮಯಕ್ಕೆ ಸರಿಯಾಗಿ ಸಹಾಯ ಪಡೆದು, ಜೀವನಶೈಲಿಯಲ್ಲಿ ಆರೋಗ್ಯಕರ ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಇದರಿಂದ ಹೊರಬರಬಹುದು. ಆದರೆ ಡಿಪ್ರೆಶನ್‌ಗೆ ಪ್ರಮುಖ ಕಾರಣಗಳೇನು, ಲಕ್ಷಣಗಳು ಹೇಗಿರುತ್ತೆ, ಡಿಪ್ರೆಶನ್‌ನಿಂದ ಹೊರಬರುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಡಿಪ್ರೆಶನ್‌ಗೆ ಪ್ರಮುಖ ಕಾರಣಗಳು

ಸಾಮಾನ್ಯವಾಗಿ ಡಿಪ್ರೆಶನ್‌ಗೆ ಮಾನಸಿಕ ಮತ್ತು ಸಾಮಾಜಿಕ ಅಂಶಗಳು ಕಾರಣವಾಗಬಹುದು. ನಿರಂತರ ನಕಾರಾತ್ಮಕ ಚಿಂತನೆಗಳು, ಆತ್ಮವಿಶ್ವಾಸದ ಕೊರತೆ, ಒತ್ತಡ, ಕುಟುಂಬ ಅಥವಾ ಉದ್ಯೋಗ ಸಂಬಂಧಿತ ಸಮಸ್ಯೆಗಳು ಇದಕ್ಕೆ ಕಾರಣವಾಗುತ್ತವೆ. ಕೆಲವರಲ್ಲಿ ಮೆದುಳಿನಲ್ಲಿರುವ “ಹ್ಯಾಪಿ ಕೆಮಿಕಲ್ಸ್” ಎಂದು ಕರೆಯುವ ಸೆರೋಟೊನಿನ್ ಮತ್ತು ಡೋಪಮಿನ್ ಮಟ್ಟ ಕಡಿಮೆಯಾಗುವುದರಿಂದಲೂ ಡಿಪ್ರೆಶನ್ ಉಂಟಾಗಬಹುದು.

ಸಾಮಾನ್ಯ ಲಕ್ಷಣಗಳು:

  • ನಿರಂತರ ದುಃಖ ಅಥವಾ ಏನು ಇಲ್ಲ ಎಂಬ ಭಾವನೆ
  • ಹಿಂದಿನ ಆಸಕ್ತಿಗಳಲ್ಲಿ ಆಸಕ್ತಿ ಕಳೆದುಕೊಳ್ಳುವುದು
  • ದೈಹಿಕ ಹಾಗೂ ಮಾನಸಿಕ ಆಯಾಸ
  • ನಿದ್ರೆ ಸಮಸ್ಯೆಗಳು
  • ಏಕಾಗ್ರತೆಯ ಕೊರತೆ
  • ಅತಿಯಾದ ಆತಂಕ ಅಥವಾ ಕಿರಿಕಿರಿ
  • ಒಂಟಿತನವನ್ನು ಇಷ್ಟಪಡುವುದು

ಇದನ್ನೂ ಓದಿ: ಈ ಸರಳ ಸಲಹೆಯನ್ನು ಪಾಲಿಸುವ ಮೂಲಕ ಕೋಪವನ್ನು ನಿಯಂತ್ರಿಸಬಹುದು

ವಯಸ್ಸಿನ ಪ್ರಕಾರ ಕಂಡುಬರುವ ಲಕ್ಷಣಗಳು:

ಮಕ್ಕಳಲ್ಲಿ: ಒಂಟಿತನ, ಆಟಗಳಲ್ಲಿ ಆಸಕ್ತಿ ಕಡಿಮೆ, ಶಾಲೆಗೆ ಹೋಗಲು ಹಿಂಜರಿಕೆ.

ಯುವಕರಲ್ಲಿ: ಕೋಪ, ಆತಂಕ, ಆತ್ಮವಿಶ್ವಾಸದ ಕೊರತೆ, ಕೆಲಸಗಳನ್ನು ಮುಂದೂಡುವ ಅಭ್ಯಾಸ.

ಮಹಿಳೆಯರಲ್ಲಿ: ಹಾರ್ಮೋನ್ ಬದಲಾವಣೆಗಳು, ಹೆರಿಗೆಯ ನಂತರದ ಖಿನ್ನತೆ.

ಡಿಪ್ರೆಶನ್‌ನಿಂದ ಹೊರಬರುವುದು ಹೇಗೆ?

  • ಡಿಪ್ರೆಶನ್ ಲಕ್ಷಣಗಳು ಎರಡು ವಾರಗಳಿಗಿಂತ ಹೆಚ್ಚು ಕಾಲ ಮುಂದುವರಿದರೆ ತಜ್ಞರ ಸಲಹೆ ಪಡೆಯುವುದು ಅಗತ್ಯ.
  • ಕೌನ್ಸೆಲಿಂಗ್ ಮತ್ತು ಕಾಗ್ನಿಟಿವ್ ಬಿಹೇವಿಯರಲ್ ಥೆರಪಿ (CBT) ಸಹಾಯಕವಾಗಬಹುದು.
  • ಪ್ರತಿದಿನ ವ್ಯಾಯಾಮ ಮತ್ತು ಯೋಗ ಮಾಡುವುದು ಉತ್ತಮ.
  • ಸರಿಯಾಗಿ ನಿದ್ರೆ ಮಾಡಬೇಕು.
  • ಧ್ಯಾನ ಮತ್ತು ಮೈಂಡ್‌ಫುಲ್‌ನೆಸ್ ಅಭ್ಯಾಸ ಮಾಡಬೇಕು.
  • ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ – Kannada News | Simple Suni Sheelam Moksha Kushal talk about new movie Moda Kavida Vaatavarana

ಹೊಸ ನಟ ಶೀಲಮ್ ಅವರು ಹೀರೋ ಆಗಿ ಅಭಿನಯಿಸಿರುವ ‘ಮೋಡ ಕವಿದ ವಾತಾವರಣ’ (Moda Kavida Vaatavarana) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜೂನ್ 26ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ಶೀಲಂ ಜೊತೆ ಸಾತ್ವಿಕಾ, ಮೋಕ್ಷಾ ಕುಶಾಲ್ ಅವರು ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ‘ರಾಮ್‌ ಮೂವೀಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ, ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ವೇದಿಕೆಯಲ್ಲಿ ಮಾತನಾಡಿದ ಚಿತ್ರತಂಡದವರು ಸಿನಿಮಾದ ವಿಶೇಷತೆಗಳನ್ನು ಹಂಚಿಕೊಂಡರು. ಸಿನಿಮಾದಲ್ಲಿ ನಟಿಸಿದ ಅನುಭವವನ್ನು ಮೋಕ್ಷಾ ಕುಶಾಲ್, ಸಾತ್ವಿಕಾ ಮತ್ತು ಶೀಲಮ್ ಅವರು ವಿವರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫೀಲ್ಡಿಗಿಳಿದ ಸಚಿವ ಕೃಷ್ಣ ಬೈರೇಗೌಡ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್ – Kannada News | Minister Krishna Byregowda Sets Deadlines for Bengaluru Metro Pink Line Completion

ಬೆಂಗಳೂರು, ಜೂನ್​ 19: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಬಿಎಂಆರ್​ಸಿಎಲ್​ ಅಧಿಕಾರಿಗಳೊಂದಿಗೆ ಮೆಟ್ರೋ ಯೋಜನೆಗಳ ಪ್ರಗತಿ ಕುರಿತು ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರಮುಖವಾಗಿ ಮೆಟ್ರೋ ಕಾಮಗಾರಿಗಳಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆ ಮತ್ತು ಕಾರ್ಯಸ್ಥಳಗಳ ಕಳಪೆ ನಿರ್ವಹಣೆ ಬಗ್ಗೆ ಚರ್ಚಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಮೆಟ್ರೋ ಜಾಲ 96 ಕಿ.ಮೀ ಇದೆ. ಮುಂದಿನ ದಿನಗಳಲ್ಲಿ ಪಿಂಕ್ ಮತ್ತು ಬ್ಲೂ ಲೈನ್ ಓಪನ್​​ ಆದರೆ 175 ಕಿಮೀ ಮೆಟ್ರೋ ಜಾಲ ವಿಸ್ತೀರ್ಣ ಆಗಲಿದೆ. ಪಿಂಕ್ ಲೈನ್ ಕಾಳೇನ ಅಗ್ರಹಾರ ಟು ತಾವರೆಕೆರೆ 6 ಮೆಟ್ರೋ ಸ್ಟೇಷನ್​​ಗಳನ್ನು ಆಗಸ್ಟ್ 15ರೊಳಗೆ ಓಪನ್ ಮಾಡಲು ಸೂಚನೆ ಕೊಟ್ಟಿದ್ದೇನೆ. ಉಳಿದ 12 ಅಂಡರ್ ಗ್ರೌಂಡ್ ಮೆಟ್ರೋ ಸ್ಟೇಷನ್ ಮಾಡಲು ಮಾರ್ಚ್ 2027ರೊಳಗೆ ಓಪನ್ ಮಾಡುತ್ತೇವೆ ಅಂತ ಮೆಟ್ರೋ ಅಧಿಕಾರಿಗಳು ಹೇಳಿದ್ದಾರೆ ಎಂದರು. ಬ್ಲೂ ಲೈನ್ ಆಕ್ಟೋಬರ್​ನಲ್ಲಿ ಮಾರತಹಳ್ಳಿ ಭಾಗದಲ್ಲಿ ಟ್ರಯಲ್​​ ರನ್ ಮಾಡಲು ಸೂಚನೆ ನೀಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ನಟಿ ರುಕ್ಮಿಣಿ ವಸಂತ್ ಎಐ ವಿಡಿಯೋ ಪ್ರಕರಣ: ಬೆಂಗಳೂರಲ್ಲಿ ಮೂವರು ಆರೋಪಿಗಳ ಬಂಧನ – Kannada News | Actress Rukmini Vasanth AI Deepfake case 3 Arrested by Bengaluru Cyber Police

ಕನ್ನಡ ಚಿತ್ರರಂಗದ ಖ್ಯಾತ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ಫೋಟೋ ಮತ್ತು ವಿಡಿಯೋಗಳನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಡೀಪ್‌ಫೇಕ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಮೂವರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು (Bengaluru Cyber Police) ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ನಿವಾಸಿಗಳಾದ ಚಂದ್ರಕಾಂತ್ (33), ರಂಜಿತ್ (25) ಮತ್ತು ಬಾಗಲಕೋಟೆ ಮೂಲದ ರವಿಕುಮಾರ್ (24) ಎಂದು ಗುರುತಿಸಲಾಗಿದೆ.

ಕೃತ್ಯಕ್ಕೆ ಬಳಸಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ಬಂಧಿತ ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಎಐ ತಂತ್ರಜ್ಞಾನ ಎಲ್ಲ ಕ್ಷೇತ್ರದಲ್ಲೂ ಬಳಕೆ ಆಗುತ್ತಿದೆ. ಆದರೆ ಕೆಲವರು ಈ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಂಥವರಿಗೆ ಪಾಠ ಕಲಿಸಲು ರುಕ್ಮಿಣಿ ವಸಂತ್ ಅವರು ಕಾನೂನಿನ ಹಾದಿ ಹಿಡಿದಿದ್ದಾರೆ.

ಎಐ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನಟಿಯ ಮುಖವನ್ನು ಬೇರೆ ವಿಡಿಯೋಗಳಿಗೆ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದ ಈ ಮೂವರನ್ನು ಸದ್ಯ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಜಾಲದ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಅಥವಾ ಇವರು ಇಂತಹ ಇನ್ಯಾವ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸುವ ಜಾಲ ಸಕ್ರಿಯವಾಗಿದೆ. ಈ ಹಿಂದೆ ರಶ್ಮಿಕಾ ಮಂದಣ್ಣ ಅವರಿಗೂ ಇಂಥ ಸಮಸ್ಯೆ ಎದುರಾಗಿತ್ತು. ರುಕ್ಮಿಣಿ ವಸಂತ್ ಅವರ ನಕಲಿ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಕ್ರಮ ತೆಗೆದುಕೊಂಡಿದ್ದು ಆರೋಪಿಗಳಿಗೆ ನಡುಕ ಶುರುವಾಗಿದೆ.

ಇದನ್ನೂ ಓದಿ: ರುಕ್ಮಿಣಿ ವಸಂತ್ ಡೀಪ್‌ಫೇಕ್ ವಿಡಿಯೋ ಹಂಚಿಕೊಂಡವರಿಗೆ ನಡುಕ; 29 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್

ಎಐ ತಂತ್ರಜ್ಞಾನದ ಮೂಲಕ ಸಾರ್ವಜನಿಕವಾಗಿ ರುಕ್ಮಿಣಿ ವಸಂತ್ ಅವರ ಮಾನಹಾನಿ ಮಾಡಲು ಯತ್ನಿಸಿದ ಈ ಕೃತ್ಯದ ಬೆನ್ನತ್ತಿದ ಸೈಬರ್ ಕಮಾಂಡ್ ಪೊಲೀಸರು, ತಾಂತ್ರಿಕ ಸಾಕ್ಷ್ಯಾಧಾರಗಳ ನೆರವಿನಿಂದ ಆರೋಪಿಗಳಿರುವ ಸ್ಥಳವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಕಲಿ ವಿಡಿಯೋ ಹಂಚಿಕೊಳ್ಳುವವರಿಗೆ ಈಗ ಭಯ ಹುಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link