ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ! Image Credit source: Deccan herald
ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಬಹುತೇಕ ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳ ವಾಯು ಗುಣಮಟ್ಟ ಸೂಚ್ಯಂಕ (AQI)ವಿವರ ಇಲ್ಲಿದೆ.
ಮುಖ್ಯಾಂಶಗಳು
ಮುಂಗಾರು ಮಳೆಯಿಂದಾಗಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿತ ಕಂಡಿದೆ.
ಗದಗ ನಗರದಲ್ಲಿ ಅತ್ಯಂತ ಸ್ವಚ್ಛ ಹಾಗೂ ಶುದ್ಧ ಗಾಳಿ ದಾಖಲಾಗಿದೆ.
ಧಾರವಾಡ ಮತ್ತು ಮಂಗಳೂರಿನಲ್ಲಿ ಮಾಲಿನ್ಯದ ಪ್ರಮಾಣ ಕೊಂಚ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಹೇಗಿದೆ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ ಇಂದು 33 ರಿಂದ 56ರ ಆಸುಪಾಸಿನಲ್ಲಿ ದಾಖಲಾಗಿದ್ದು, ಉತ್ತಮ ಹಾಗೂ ಸಾಧಾರಣ ಶ್ರೇಣಿಯಲ್ಲಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ವಾತಾವರಣದಲ್ಲಿನ ಧೂಳಿನ ಕಣಗಳು ಕಡಿಮೆಯಾಗಿವೆ.
ಹೆಬ್ಬಾಳ: 30 (ಉತ್ತಮ – ಅತ್ಯಂತ ಶುದ್ಧ ಗಾಳಿ)
ಸಿಲ್ಕ್ ಬೋರ್ಡ್: 54 (ಸಾಧಾರಣ)
ಹೊಂಬೇಗೌಡ ನಗರ: 51 (ಸಾಧಾರಣ)
ಬಿಟಿಎಂ ಲೇಔಟ್: 63 (ಸಾಧಾರಣ)
ಕಡಬೀಸನಹಳ್ಳಿ : 97 (ಅಪಾಯಕಾರಿ)
ಒಟ್ಟಾರೆಯಾಗಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾದ ಪೂರಕ ವಾತಾವರಣವಿದೆ. ರಾಜ್ಯದ ಇತರೆ ನಗರಗಳ ಇಂದಿನ ವಾಯು ಗುಣಮಟ್ಟದ ಶ್ರೇಯಾಂಕಗಳನ್ನು ಗಮನಿಸಿದರೆ, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಧೂಳಿನಿಂದಾಗಿ ಮಾಲಿನ್ಯ ಕೊಂಚ ಏರಿದ್ದರೆ, ಕರಾವಳಿ ಮತ್ತು ಮಲೆನಾಡು ಭಾಗಗಳು ಅತ್ಯಂತ ಶುದ್ಧ ಗಾಳಿಯನ್ನು ಹೊಂದಿವೆ.
ಹೆಚ್ಚು ಮಾಲಿನ್ಯವಿರುವ ನಗರಗಳು
ಧಾರವಾಡ: 153 (ಕಳಪೆ)
ಮಂಗಳೂರು: 108 (ಸಾಧಾರಣಕ್ಕಿಂತ ಕೊಂಚ ಹೆಚ್ಚು)
ಹುಬ್ಬಳ್ಳಿ: 86 (ಸಾಧಾರಣ)
ಅತ್ಯಂತ ಶುದ್ಧ ಗಾಳಿಯಿರುವ ನಗರಗಳು
ಗದಗ: 19 (ಅತ್ಯುತ್ತಮ ಹಾಗೂ ಅತ್ಯಂತ ಸ್ವಚ್ಛ ಗಾಳಿ)
ಕೊಪ್ಪಳ: 44 (ಉತ್ತಮ)
ಮೈಸೂರು: 56 (ಸಾಧಾರಣ)
ಶಿವಮೊಗ್ಗ: 77 (ಸಾಧಾರಣ)
ಮಳೆಯ ಮುನ್ಸೂಚನೆ ಇರುವುದರಿಂದ ಮುಂಬರುವ ದಿನಗಳಲ್ಲಿ ವಾಯು ಗುಣಮಟ್ಟ ಇನ್ನಷ್ಟು ಸುಧಾರಿಸುವ ನಿರೀಕ್ಷೆಯಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಳೇ ವಾಹನಗಳ ಬಳಕೆ ಕಡಿಮೆ ಮಾಡುವುದು ಮತ್ತು ಹಸಿರು ವಲಯವನ್ನು ಹೆಚ್ಚಿಸುವುದು ಇಂದಿನ ಅಗತ್ಯವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್ ಘೋಷಣೆ Image Credit source: India Today
ಬೆಂಗಳೂರು, ಜೂನ್ 14: ನಗರದ ಹಲವೆಡೆ ಶನಿವಾರ ರಾತ್ರಿ ಧಾರಾಕಾರ ಮಳೆ (Weather) ಸುರಿದಿದೆ. ಇಂದೂ ಸಹ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗಾಳಿ ಮುಖಾಂತರ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ.
ಮುಖ್ಯಾಂಶಗಳು
ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗಲಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಗುಡುಗು ಸಹಿತ ಮಳೆ ಮುನ್ಸೂಚನೆ.
ಎಲ್ಲೆಲ್ಲಿ ಮಳೆ?
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮಳೆಯ ಸಮಯದಲ್ಲಿ ಗಂಟೆಗೆ **30-40 ಕಿ.ಮೀ** ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಮತ್ತು ರೈತರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಈ ಮಳೆ ತಂಪೆರೆಯಲಿದ್ದು, ಕೃಷಿ ಚಟುವಟಿಕೆಗಳಿಗೂ ಸಹಕಾರಿಯಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ ತಡವಾಗಿ ಆರಂಭಗೊಂಡು, ತಲಾ 25 ಓವರ್‌ಗಳಿಗೆ ಸೀಮಿತಗೊಂಡಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ರಹಮಾನುಲ್ಲಾ ಗುರ್ಬಾಝ್ (102) ಶತಕ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಅಫ್ಘಾನಿಸ್ತಾನ್ 24.5 ಓವರ್‌ಗಳಲ್ಲಿ 194 ರನ್ ಕಲೆಹಾಕಿತು. ಈ ಗುರಿಯನ್ನು ಭಾರತ ತಂಡವು 22.5 ಓವರ್‌ಗಳಲ್ಲಿ ಚೇಸ್ ಮಾಡಿ 7 ವಿಕೆಟ್‌ಗಳ ಗೆಲುವು ದಾಖಲಿಸಿದೆ.
ಈ ಗೆಲುವಿನ ಬಳಿಕ ಮಾತನಾಡಿದ ಭಾರತ ತಂಡದ ನಾಯಕ ಶುಭ್‌ಮನ್ ಗಿಲ್, “ಓವರ್‌ಗಳು ಕಡಿಮೆಯಾಗಿದ್ದರಿಂದ ಇದು ಒಂಥರಾ ಟಿ20 ಪಂದ್ಯದಂತೆಯೇ ಭಾಸವಾಯಿತು. ನಾವು ಉತ್ತಮ ಆರಂಭವನ್ನು ಪಡೆದಿದ್ದೆವು. ಆದರೆ ಅಫ್ಘಾನ್ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ ಅದ್ಭುತವಾಗಿ ಬ್ಯಾಟ್ ಬೀಸಿ ಪಂದ್ಯವನ್ನು ನಮ್ಮಿಂದ ಕಸಿದುಕೊಂಡಿದ್ದರು. ಆದರೆ, ನಮ್ಮ ಬೌಲರ್‌ಗಳು ಮಿಡಲ್ ಮತ್ತು ಡೆತ್ ಓವರ್‌ಗಳಲ್ಲಿ ಕಂಬ್ಯಾಕ್ ಮಾಡಿದ ರೀತಿ ಅಪ್ರತಿಮವಾಗಿತ್ತು” ಎಂದು ಶ್ಲಾಘಿಸಿದ್ದಾರೆ.
“ಇನ್ನು ಈ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ ಗುರ್ನೂರ್ ಬ್ರಾರ್ ಹೊಸ ಚೆಂಡಿನಲ್ಲಿ ಅತ್ಯುತ್ತಮ ವೇಗ ಮತ್ತು ಸ್ವಿಂಗ್ ಪ್ರದರ್ಶಿಸಿದರು. ಅವರು ನಿರಂತರವಾಗಿ ಕರಾರುವಾಕ್ ಲೆಂಗ್ತ್ನಲ್ಲಿ ಬೌಲಿಂಗ್ ಮಾಡಿದ್ದು ಇಂಪ್ರೆಸಿವ್ ಆಗಿತ್ತು. ಇನ್ನು ಹರ್ಷ್ ದುಬೆ ತಮ್ಮ ಮೊದಲ ಓವರ್‌ನಲ್ಲಿ 16-17 ರನ್ ಬಿಟ್ಟುಕೊಟ್ಟರೂ ಧೃತಿಗೆಡಲಿಲ್ಲ. ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆಯಿಟ್ಟು, ಚೆಂಡನ್ನು ಲೂಪ್ ಮಾಡಿ ವಿಕೆಟ್ ಪಡೆದರು. ಏಕದಿನ ಕ್ರಿಕೆಟ್‌ನಲ್ಲಿ ಮಿಡಲ್ ಓವರ್‌ಗಳು ಅತ್ಯಂತ ಪ್ರಮುಖವಾಗಿದ್ದು, ರನ್ ರೇಟ್ ನಿಯಂತ್ರಿಸಿ ವಿಕೆಟ್ ಕೀಳುವುದು ತಂಡದ ಮುಖ್ಯ ತಂತ್ರವಾಗಿದೆ” ಎಂದು ಗಿಲ್ ವಿವರಿಸಿದರು.
ತಪ್ಪು ನನ್ನದೇ!
ಇದೇ ವೇಳೆ ರೋಹಿತ್ ಶರ್ಮಾ ಅವರ ರನೌಟ್ ಕುರಿತು ಮಾತನಾಡಿದ ಶುಭ್‌ಮನ್ ಗಿಲ್, “ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್ನಲ್ಲಿ ರಿಪ್ಲೇ ನೋಡಿದ್ದಾರೆ, ಎಲ್ಲವೂ ಸರಿಯಾಗಿದೆ ಎಂದಿದ್ದಾರೆ. ಕಳೆದ ಬಾರಿ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಪಂದ್ಯದಲ್ಲೂ ಅವರು ಹೀಗೆಯೇ ರನ್-ಔಟ್ ಆಗಿದ್ದರು” ಎಂದು ಹಳೆಯ ನೆನಪನ್ನು ಮೆಲುಕು ಹಾಕಿದರು.
ಅಂದರೆ ಇಲ್ಲಿ ರೋಹಿತ್ ಶರ್ಮಾ ಎಲ್ಲವೂ ಸರಿಯಾಗಿದೆ ಎನ್ನಲು ಮುಖ್ಯ ಕಾರಣ, ಅವರ ರನೌಟ್ಗೆ ಅವರೇ ಕಾರಣವಾಗಿದ್ದು. ಏಕೆಂದರೆ ಶುಭ್‌ಮನ್ ಗಿಲ್ ರನ್ ಬೇಡ ಎಂದು ಕರೆ ನೀಡಿದ್ದರೂ ಗಮನಿಸದೇ ರೋಹಿತ್ ಶರ್ಮಾ ಓಡಿ ಹೋಗಿದ್ದರು. ಆದರೆ ಅತ್ತ ಕಡೆಯಿಂದ ಗಿಲ್ ನಿರಾಕರಿಸುತ್ತಿರುವುದು ಗಮನಿಸಿ ಹಿಂತಿರುಗುವಷ್ಟರಲ್ಲಿ ರನೌಟ್ ಮಾಡಲಾಗಿತ್ತು. ಹೀಗಾಗಿಯೇ ರೋಹಿತ್ ಶರ್ಮಾ ಎಲ್ಲವೂ ಸರಿಯಾಗಿದೆ, ತಪ್ಪು ನನ್ನದೇ ಎಂದಿದ್ದಾರೆ ಎಂದು ಗಿಲ್ ಸ್ಪಷ್ಟನೆ ನೀಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಹಿಡಿದ ಅದ್ಭುತ ಕ್ಯಾಚ್ ಬಗ್ಗೆ ಮಾತನಾಡಿದ ಗಿಲ್, “ನಾನು ಸ್ಲಿಪ್ ಕ್ಯಾಚಿಂಗ್‌ಗಾಗಿ ಸಾಕಷ್ಟು ಅಭ್ಯಾಸ ನಡೆಸುತ್ತಿದ್ದೇನೆ. ಪಂದ್ಯಕ್ಕೂ ಮುನ್ನ ನನ್ನ ಸ್ನೇಹಿತನೊಬ್ಬ ‘ನೀನು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಯಾವುದೇ ಅದ್ಭುತ ಒನ್-ಹ್ಯಾಂಡೆಡ್ ಕ್ಯಾಚ್ ಹಿಡಿದಿಲ್ಲ’ ಎಂದು ರೇಗಿಸಿದ್ದ. ಈ ಪಂದ್ಯದಲ್ಲಿ ಅಂತಹ ಕ್ಯಾಚ್ ಸಿಕ್ಕಿದ್ದಕ್ಕೆ ತುಂಬಾ ಸಂತೋಷವಾಗಿದೆ” ಎಂದರು.
ಒಟ್ಟಾರೆಯಾಗಿ ಹೇಳುವುದಾದರೆ, ಧರ್ಮಶಾಲಾದಲ್ಲಿ ನಡೆದ ಈ ಮುಖಾಮುಖಿ ಕೇವಲ ಒಂದು ಸರಣಿಯ ಆರಂಭವಾಗಿರಲಿಲ್ಲ. ಬದಲಿಗೆ ಭಾರತೀಯ ಕ್ರಿಕೆಟ್‌ನ ಭವಿಷ್ಯದ ಭರವಸೆಗಳನ್ನು ಜಗತ್ತಿಗೆ ಪರಿಚಯಿಸಿದ ವೇದಿಕೆಯಾಗಿತ್ತು. ಮಳೆಯ ಅಡ್ಡಿಯ ನಡುವೆಯೂ ಟಿ20 ಶೈಲಿಯ ರೋಮಾಂಚನ ನೀಡಿದ ಈ ಪಂದ್ಯ, ನಾಯಕನಾಗಿ ಶುಭ್‌ಮನ್ ಗಿಲ್ ಅವರ ಪ್ರಬುದ್ಧತೆ ಮತ್ತು ಯುವ ಆಟಗಾರರ ಕದನ ಕೌಶಲಕ್ಕೆ ಸಾಕ್ಷಿಯಾಯಿತು. ಅಫ್ಘಾನ್ ಪಡೆಯ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಯುವ ಬೌಲರ್‌ಗಳು ನೀಡಿದ ತಿರುಗೇಟು ಭಾರತ ತಂಡದ ಬೆಂಚ್ ಸ್ಟ್ರೆಂತ್ ಎಷ್ಟು ಬಲಿಷ್ಠವಾಗಿದೆ ಎಂಬುದನ್ನು ಸಾರಿದೆ. ಇದೀಗ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ಟೀಮ್ ಇಂಡಿಯಾ, ಇದೇ ಉತ್ಸಾಹದೊಂದಿಗೆ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.
ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್. ಅಶೋಕ್ ವಿಶೇಷ ಮನವಿImage Credit source: PTI
ಬೆಂಗಳೂರು, ಜೂನ್ 14: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ 39,437 ಕೋಟಿ ಟೆಂಡರ್ ಕುರಿತು ಪರಿಶೀಲನೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್. ಅಶೋಕ್ ವಿಶೇಷ ಮನವಿಯನ್ನು ಮಾಡಿದ್ದಾರೆ. ಯಾವುದೇ ರಾಜಕೀಯ, ಆಡಳಿತಾತ್ಮಕ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ, ಆತ್ಮಸಾಕ್ಷಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ವರದಿ ಸಲ್ಲಿಸಿ ಎಂದು ಆಗ್ರಹಿಸಿರುವ ಅವರು, ಇದು ಕೇವಲ ಒಂದು ಟೆಂಡರ್ ವಿಚಾರವಲ್ಲ. ಬೆಂಗಳೂರಿನ ಭವಿಷ್ಯ, ತೆರಿಗೆದಾರರ ಹಣ ಮತ್ತು ಸಾರ್ವಜನಿಕ ವಿಶ್ವಾಸದ ಪ್ರಶ್ನೆಯಾಗಿದೆ ಎಂದು ತಿಳಿಸಿದ್ದಾರೆ.
ಅಶೋಕ್ ಮನವಿಯಲ್ಲಿ ಏನಿದೆ?
₹39,437 ಕೋಟಿ ಮೊತ್ತದ ಘನತ್ಯಾಜ್ಯ ನಿರ್ವಹಣಾ ಟೆಂಡರ್ ಕುರಿತು ಪರಿಶೀಲನೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದು ಒಂದು ಸ್ಪಷ್ಟ ಮನವಿಯನ್ನು ಮಾಡಿದ್ದೇನೆ.
ಯಾವುದೇ ರಾಜಕೀಯ, ಆಡಳಿತಾತ್ಮಕ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ, ಆತ್ಮಸಾಕ್ಷಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ವರದಿ ಸಲ್ಲಿಸಿ ಎಂದು ಕೋರಿದ್ದೇನೆ.… pic.twitter.com/enhIFFcCWi
ಬೆಂಗಳೂರಿಗೆ ಸಂಬಂಧಿಸಿದ ಅತ್ಯಂತ ಮಹತ್ವದ ವಿಷಯವನ್ನು ಪರಿಶೀಲಿಸಲು ರಾಜ್ಯ ಸರ್ಕಾರ ನಿಮ್ಮನ್ನು ಉನ್ನತ ಮಟ್ಟದ ಸಮಿತಿಗೆ ನೇಮಿಸಿದೆ. ನೀವು ಕೇವಲ ಈ ಸಮಿತಿಯ ಸದಸ್ಯರಲ್ಲ. ನೀವು ಈ ನಗರದ ನಾಗರಿಕರು, ತೆರಿಗೆ ಪಾವತಿಸುವವರು, ಬೆಂಗಳೂರಿನ ಪ್ರಗತಿಯ ಪಾಲುದಾರರು ಮತ್ತು ಹಕ್ಕುದಾರರು. ನಿಮ್ಮ ಕುಟುಂಬಗಳು ಮತ್ತು ಮಕ್ಕಳ ಭವಿಷ್ಯವೂ ಇದೇ ನಗರದ ಭವಿಷ್ಯದೊಂದಿಗೆ ಬೆಸೆದುಕೊಂಡಿದೆ. ಹೀಗಾಗಿ, ನಿಮ್ಮ ಮುಂದೆ ಇರುವ ಪ್ರಶ್ನೆ ಕೇವಲ ಒಂದು ಟೆಂಡರ್ ಕಡತದ ಪ್ರಶ್ನೆಯಲ್ಲ. ಮುಂದಿನ ಮೂರು ದಶಕಗಳ ಕಾಲ ಬೆಂಗಳೂರಿನ ಜನರ ಹಣ, ನಗರದ ಆಡಳಿತ ಮತ್ತು ಸಾರ್ವಜನಿಕ ಸಂಪನ್ಮೂಲಗಳ ಭವಿಷ್ಯವನ್ನು ನಿರ್ಧರಿಸುವ ಪ್ರಶ್ನೆಯಾಗಿದೆ.
ರಾಜ್ಯದ ಹಣಕಾಸು ಇಲಾಖೆಯೇ ಈ ಟೆಂಡರ್ ಕುರಿತು ಗಂಭೀರ ಆಕ್ಷೇಪಣೆಗಳನ್ನು ದಾಖಲಿಸಿದೆ. ಈಗಾಗಲೇ ಬೆಂಗಳೂರು ನಗರದ ಜನರು ಆಸ್ತಿ ತೆರಿಗೆ, ವಿವಿಧ ಸೆಸ್‌ಗಳು, ಬಳಕೆದಾರರ ಶುಲ್ಕಗಳು ಹಾಗೂ ಇತರೆ ತೆರಿಗೆಗಳ ಭಾರವನ್ನು ಹೊರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಹಣದ ಸಾವಿರಾರು ಕೋಟಿ ರೂಪಾಯಿಗಳ ಬಳಕೆಯ ಬಗ್ಗೆ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವೂ ಅತ್ಯಂತ ಜವಾಬ್ದಾರಿಯುತವಾಗಿರಬೇಕು. ನಿಮ್ಮ ಸಮಿತಿಯ ವರದಿ ಕೇವಲ ಸರ್ಕಾರಕ್ಕೆ ಸಲ್ಲಿಸುವ ಒಂದು ದಾಖಲೆಯಾಗಿರುವುದಿಲ್ಲ; ಅದು ಮುಂದಿನ ಪೀಳಿಗೆಗಳ ಮೇಲೂ ಪರಿಣಾಮ ಬೀರುವ ನಿರ್ಧಾರದ ಅಡಿಪಾಯವಾಗಲಿದೆ. ಆದ್ದರಿಂದ ಯಾವುದೇ ರಾಜಕೀಯ, ಆಡಳಿತಾತ್ಮಕ ಅಥವಾ ಇತರ ಒತ್ತಡಗಳಿಗೆ ಮಣಿಯದೆ, ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ಸಾರ್ವಜನಿಕ ಹಿತಾಸಕ್ತಿಯನ್ನು ಮಾತ್ರ ಮಾನದಂಡವನ್ನಾಗಿಸಿಕೊಂಡು ಸಂಪೂರ್ಣ ಪಾರದರ್ಶಕ, ಪ್ರಾಮಾಣಿಕ ಹಾಗೂ ನಿರ್ಭೀತ ವರದಿಯನ್ನು ಸಲ್ಲಿಸುವಂತೆ ವಿನಂತಸೋದಾಗಿ ಮನವಿಯಲ್ಲಿ ಅಶೋಕ್ ಉಲ್ಲೇಖಿಸಿದ್ದಾರೆ.
ಮನೆಯ ಸಿಂಹದ್ವಾರದ ಮಹತ್ವImage Credit source: Pinterest
ಭಾರತೀಯ ಸಂಸ್ಕೃತಿಯಲ್ಲಿ ಮನೆ ಮತ್ತು ಅದರ ಪ್ರತಿಯೊಂದು ಭಾಗಕ್ಕೂ ತನ್ನದೇ ಆದ ಪಾವಿತ್ರ್ಯತೆ ಹಾಗೂ ಮಹತ್ವವಿದೆ. ವಿಶೇಷವಾಗಿ ಮನೆಯ ಮುಖ್ಯ ದ್ವಾರ, ಇದನ್ನು ಸಿಂಹದ್ವಾರ ಎಂದು ಕರೆಯುತ್ತೇವೆ, ಇದು ಕೇವಲ ಪ್ರವೇಶ ದ್ವಾರ ಮಾತ್ರವಲ್ಲದೆ, ಮನೆಯ ಶಕ್ತಿ ಕೇಂದ್ರವೂ ಹೌದು. ಆದರೆ, ಅನೇಕ ಮನೆಗಳಲ್ಲಿ, ವಿಶೇಷವಾಗಿ ಹಳ್ಳಿಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲೂ, ಸಂಜೆ ವೇಳೆ ಮನೆ ಬಾಗಿಲ ಮುಂದೆ ಅಥವಾ ಜಗಳಿಯ ಮೇಲೆ ಕುಳಿತುಕೊಳ್ಳುವ ರೂಢಿ ಕಂಡುಬರುತ್ತದೆ. ಈ ಅಭ್ಯಾಸ ಶುಭಕರವೇ ಅಥವಾ ಅಶುಭಕರವೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.
ಜನರು ಸಾಮಾನ್ಯವಾಗಿ ಸೂರ್ಯಾಸ್ತದ ಸಮಯದಲ್ಲಿ, ಸಂಧ್ಯಾಕಾಲದಲ್ಲಿ ಮನೆಯ ಮುಂದೆ ಕುಳಿತುಕೊಳ್ಳುತ್ತಾರೆ. ಇದಕ್ಕೆ ಮುಖ್ಯ ಕಾರಣ ಮನಸ್ಸಿಗೆ ಒಂದು ರೀತಿಯ ನೆಮ್ಮದಿ, ಬೀದಿಯಲ್ಲಿ ಹೋಗುವವರನ್ನು ಗಮನಿಸುವುದು, ಅಥವಾ ಅಕ್ಕಪಕ್ಕದವರೊಂದಿಗೆ ಹರಟೆ ಹೊಡೆಯುವುದು. ಆದರೆ, ಈ ಸಮಯದಲ್ಲಿ ಯಾವುದೇ ದೇವರ ನಾಮಸ್ಮರಣೆ ಅಥವಾ ಆಧ್ಯಾತ್ಮಿಕ ಚಿಂತನೆಗಿಂತ ಹೆಚ್ಚಾಗಿ ಲೌಕಿಕ ವಿಷಯಗಳ ಬಗ್ಗೆಯೇ ಮಾತುಕತೆ ನಡೆಸುವುದು ಹೆಚ್ಚು ಸಾಮಾನ್ಯವಾಗಿದೆ. ಈ ಅಭ್ಯಾಸದ ಬಗ್ಗೆ ಶಾಸ್ತ್ರಗಳು ಏನು ಹೇಳುತ್ತವೆ ಎಂಬುದನ್ನು ತಿಳಿದುಕೊಳ್ಳುವುದು ಅವಶ್ಯಕ.
ಸಿಂಹದ್ವಾರದ ಅಪಾರ ಮಹತ್ವ:
ಮನೆಯ ಮುಖ್ಯ ಬಾಗಿಲು ಅಥವಾ ಸಿಂಹದ್ವಾರವನ್ನು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಇದನ್ನು ಮನೆಯ ಶಕ್ತಿ ಕೇಂದ್ರ ಎಂದು ಕರೆಯುವುದರಲ್ಲಿ ತಪ್ಪಿಲ್ಲ. ಈ ಬಾಗಿಲಿಗೆ ಧನಾತ್ಮಕ ಶಕ್ತಿಗಳನ್ನು ಆಕರ್ಷಿಸುವ ಮತ್ತು ಮನೆಯೊಳಗೆ ಪ್ರವೇಶಿಸಲು ಅನುವು ಮಾಡಿಕೊಡುವ ಸಾಮರ್ಥ್ಯವಿದೆ. ಶಾಸ್ತ್ರೋಕ್ತವಾಗಿ ಈ ಬಾಗಿಲನ್ನು ಪ್ರತಿಷ್ಠಾಪಿಸುವಾಗ, ಅದರ ಅಡಿಯಲ್ಲಿ ಚಿನ್ನ, ಬೆಳ್ಳಿ, ಹಳೆಯ ನಾಣ್ಯಗಳು ಅಥವಾ ಕುಟುಂಬದ ಕೆಲವು ಪವಿತ್ರ ವಸ್ತುಗಳನ್ನು ಇಡುವ ಸಂಪ್ರದಾಯವಿದೆ. ಇದು ಬಾಗಿಲಿಗೆ ಮತ್ತಷ್ಟು ದೈವಿಕ ಶಕ್ತಿಯನ್ನು ನೀಡುತ್ತದೆ.
ಬೆಳಗಿನ ಬ್ರಾಹ್ಮಿ ಮುಹೂರ್ತ, ಅಭಿಜಿತ್ ಮುಹೂರ್ತ ಮತ್ತು ವಿಶೇಷವಾಗಿ ಸಂಜೆಯ ಗೋದೋಳಿ ಮುಹೂರ್ತದಲ್ಲಿ ಸಿಂಹದ್ವಾರಕ್ಕೆ ಅಪಾರ ಶಕ್ತಿ ಇರುತ್ತದೆ. ಈ ಸಮಯದಲ್ಲಿ ಮಹಾಲಕ್ಷ್ಮಿಯು ಮನೆಯೊಳಗೆ ಪ್ರವೇಶಿಸುತ್ತಾಳೆ ಎಂದು ನಂಬಲಾಗಿದೆ. ಮನೆಯ ಗಡಿಭಾಗ ಮತ್ತು ಪ್ರವೇಶ ದ್ವಾರವಾಗಿರುವುದರಿಂದ, ಯಾವುದೇ ಶುಭ ಶಕ್ತಿಯು ಮೊದಲು ಈ ಬಾಗಿಲಿನ ಮೂಲಕವೇ ಪ್ರವೇಶಿಸುತ್ತದೆ. ಹಾಗಾಗಿ, ಈ ಬಾಗಿಲನ್ನು ಸದಾ ಶುಭ್ರವಾಗಿ ಮತ್ತು ಪವಿತ್ರವಾಗಿಡುವುದು ಅತಿ ಮುಖ್ಯ.
ಮಹಾಲಕ್ಷ್ಮಿ ಪ್ರವೇಶಿಸುವ ಇಂತಹ ಪವಿತ್ರ ಸ್ಥಳದಲ್ಲಿ ಸಂಧ್ಯಾಕಾಲದಲ್ಲಿ ಕುಳಿತುಕೊಳ್ಳುವುದು ಅಷ್ಟು ಶುಭಸೂಚಕವಲ್ಲ ಎಂದು ಶಾಸ್ತ್ರಗಳು ಹೇಳುತ್ತವೆ. ಇದಕ್ಕೆ ಹಲವಾರು ಕಾರಣಗಳಿವೆ:
ನಕಾರಾತ್ಮಕ ಶಕ್ತಿಗಳ ಪ್ರವೇಶ: ಸಂಧ್ಯಾಕಾಲದಲ್ಲಿ ನಕಾರಾತ್ಮಕ ಶಕ್ತಿಗಳ ಸಂಚಾರ ಹೆಚ್ಚಿರುತ್ತದೆ ಎಂದು ನಂಬಲಾಗಿದೆ. ಮನೆಯ ಮುಂದೆ ಕುಳಿತಿರುವ ವ್ಯಕ್ತಿಯು ಆ ಶಕ್ತಿಗಳಿಗೆ ದ್ವಾರಪಾಲಕನಂತೆ ವರ್ತಿಸಬಹುದು, ಇದರಿಂದ ಅವು ಸುಲಭವಾಗಿ ಮನೆಯೊಳಗೆ ಪ್ರವೇಶಿಸಬಹುದು.
ಅನವಶ್ಯಕ ಮಾತುಕತೆ ಮತ್ತು ಒತ್ತಡ: ಮನೆ ಬಾಗಿಲ ಮುಂದೆ ಕುಳಿತಾಗ, ಅನೇಕರು ನೆರೆಹೊರೆಯವರ ಬಗ್ಗೆ, ಹಾದಿಹೋಕರ ಬಗ್ಗೆ, ಅವರ ಮದುವೆ, ಮಕ್ಕಳು, ವೃತ್ತಿಯ ಬಗ್ಗೆ ಹೀಗೆ ಹಲವು ವಿಷಯಗಳನ್ನು ಅತಿಯಾಗಿ ಮಾತನಾಡುತ್ತಾರೆ. ಇಂತಹ ಗಾಸಿಪ್ ಮತ್ತು ಅನವಶ್ಯಕ ಮಾತುಕತೆಗಳು ಮನೆಯೊಳಗೆ ನಕಾರಾತ್ಮಕ ಕಂಪನಗಳನ್ನು ತರುತ್ತವೆ ಮತ್ತು ಮನೆಯ ಸದಸ್ಯರಲ್ಲಿ ಒತ್ತಡವನ್ನು ಸೃಷ್ಟಿಸುತ್ತವೆ. ಇದು ಮನೆಯ ಶಾಂತಿ ಮತ್ತು ಸಮೃದ್ಧಿಗೆ ಭಂಗ ತರುತ್ತದೆ.
ಮಹಾಲಕ್ಷ್ಮಿಗೆ ಅಡ್ಡಿ: ಮಹಾಲಕ್ಷ್ಮಿ ಪ್ರವೇಶಿಸುವ ದ್ವಾರದಲ್ಲಿ ವ್ಯಕ್ತಿ ಕುಳಿತಿದ್ದರೆ, ಅದು ಲಕ್ಷ್ಮಿಯ ಪ್ರವೇಶಕ್ಕೆ ಅಡ್ಡಿಯಾಗಬಹುದು. ಅಲ್ಲದೆ, ಅಶುಭ ಮಾತುಕತೆಗಳು ಲಕ್ಷ್ಮಿಗೆ ಸ್ವಾಗತಾರ್ಹವಲ್ಲ.
ಪೌರಾಣಿಕ ಉಲ್ಲೇಖ:
ವಿಷ್ಣುಪುರಾಣದಲ್ಲಿ ಬರುವ ಹಿರಣ್ಯಕಶಿಪುವಿನ ಸಂಹಾರದ ಕಥೆಯೂ ಸಿಂಹದ್ವಾರದ ಮಹತ್ವವನ್ನು ಎತ್ತಿ ತೋರಿಸುತ್ತದೆ. ನರಸಿಂಹನು ಹಿರಣ್ಯಕಶಿಪುವನ್ನು ಮನೆಯ ಹೊಸ್ತಿಲ ಮೇಲೆ ಇಟ್ಟುಕೊಂಡು ಸಂಹಾರ ಮಾಡುತ್ತಾನೆ. ಇದು ಹೊಸ್ತಿಲಿಗೆ ಇರುವ ಬಲ ಮತ್ತು ಅದರ ಮಹತ್ವವನ್ನು ಸೂಚಿಸುತ್ತದೆ. ಇಂತಹ ಪವಿತ್ರ ಸ್ಥಳದಲ್ಲಿ ಅನವಶ್ಯಕವಾಗಿ ಕುಳಿತು ನಕಾರಾತ್ಮಕ ಕಾರ್ಯಗಳಲ್ಲಿ ತೊಡಗುವುದು ಸಮಂಜಸವಲ್ಲ.
ಆದ್ದರಿಂದ, ಸಂಧ್ಯಾಕಾಲದಲ್ಲಿ ಮನೆ ಬಾಗಿಲ ಮುಂದೆ ಕುಳಿತುಕೊಳ್ಳುವ ಪದ್ಧತಿ ಅಷ್ಟು ಶುಭಕರವಲ್ಲ. ಮನೆಯವರು ಅಥವಾ ಅನ್ಯರು ಯಾರೇ ಆಗಿರಲಿ, ಈ ಪವಿತ್ರ ಸ್ಥಳದಲ್ಲಿ ಕುಳಿತುಕೊಳ್ಳುವುದರಿಂದ ಮನೆಯ ಶಾಂತಿಗೆ ಮತ್ತು ಧನಾತ್ಮಕ ಶಕ್ತಿಗಳ ಪ್ರವೇಶಕ್ಕೆ ಧಕ್ಕೆಯಾಗುತ್ತದೆ. ಬದಲಿಗೆ, ಸಂಜೆಯ ಸಮಯದಲ್ಲಿ ವಾಕಿಂಗ್ ಹೋಗುವುದು, ದೇವರ ನಾಮಸ್ಮರಣೆ ಮಾಡುವುದು ಅಥವಾ ಮನೆಯೊಳಗೆ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಹೆಚ್ಚು ಸೂಕ್ತ. ಮನೆಯ ಸಮೃದ್ಧಿ ಮತ್ತು ಶಾಂತಿಗಾಗಿ ಈ ಧಾರ್ಮಿಕ ಸಲಹೆಯನ್ನು ಪಾಲಿಸುವುದು ಉತ್ತಮ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕಳೆದ ಕೆಲವು ದಿನಗಳಿಂದ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಪ್ರಾದೇಶಿಕ ಸಿನಿಮಾಗಳು ಮತ್ತು ಹಾಲಿವುಡ್ ಚಿತ್ರ ‘ಅಬ್ಸೆಷನ್’ (Obsession) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯ ಚಿತ್ರಮಂದಿರಗಳಲ್ಲಿ ಬರೋಬ್ಬರಿ 14ಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶನಗೊಳ್ಳುತ್ತಿದ್ದು, ಪರದೆಗಾಗಿ ಕಸರತ್ತು ನಡೆಸುತ್ತಿವೆ. ಈ ಮಧ್ಯೆ, ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ಅವರು ಚಿತ್ರಮಂದಿರಗಳ ಶೋ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅವರು ನಿರ್ದೇಶನ ಮಾಡಿರುವ ‘ಬಂದರ್’ ಸಿನಿಮಾಗೆ ಸರಿಯಾದ ಶೋಗಳು ಸಿಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಸದ್ಯ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಅನುರಾಗ್ ಕಶ್ಯಪ್, ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಬಗ್ಗೆ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಸೂಪರ್ ಹಿಟ್ ಆಗಿ ಮುನ್ನುಗ್ಗುತ್ತಿರುವ ಹಾಲಿವುಡ್ ಚಿತ್ರ ‘ಅಬ್ಸೆಷನ್’ಗೆ ಪ್ರೈಮ್ ಟೈಮ್ (ಉತ್ತಮ ಪ್ರದರ್ಶನದ ಸಮಯ) ನೀಡಲಾಗುತ್ತಿದೆ, ಆದರೆ ನಮ್ಮದೇ ದೇಶದ ಸಿನಿಮಾಗಳು ಚಿತ್ರಮಂದಿರ ಸಿಗದೇ ಪರದಾಡುತ್ತಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
‘ಪ್ರತಿಯೊಬ್ಬರೂ ಅಬ್ಸೆಷನ್ ಸಿನಿಮಾ ನೋಡಲು ಬಯಸುತ್ತಾರೆ ಎಂಬುದನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲೆ. ಆದರೆ ಕಡಿಮೆ ಶೋಗಳೊಂದಿಗೆ ಆ ಸಿನಿಮಾ ದೀರ್ಘಕಾಲ ಓಡಬಹುದು. ನಾವು ನಮ್ಮದೇ ಆದ ಸಿನಿಮಾಗಳಿಗೆ ಆದ್ಯತೆ ನೀಡಿ ಉತ್ತಮ ಪ್ರದರ್ಶನಗಳನ್ನು ನೀಡದಿದ್ದರೆ, ನಮ್ಮ ಚಿತ್ರರಂಗ ಹೇಗೆ ಬೆಳೆಯಲು ಸಾಧ್ಯ?’ ಎಂದು ಅನುರಾಗ್ ಕಶ್ಯಪ್ ಪ್ರಶ್ನೆ ಮಾಡಿದ್ದಾರೆ.
‘ಕಳೆದ ವಾರ ನನ್ನ ‘ಬಂದರ್’ ಚಿತ್ರಕ್ಕೆ ಹೀಗಾಯಿತು. ಈ ವಾರ ಇಮ್ತಿಯಾಜ್ ಅಲಿ ಅವರ ‘ಮೈ ವಾಪಸ್ ಆವುಂಗಾ’, ‘ಸಿಂಗ್ ಗೀತಂ’ ಮತ್ತು ‘ಗವರ್ನರ್’ ಚಿತ್ರಗಳಿಗೆ ಇದೇ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನಲ್ಲಿ ‘ಮೈ ವಾಪಸ್ ಆವುಂಗಾ’ ಮತ್ತು ‘ಗವರ್ನರ್’ ಚಿತ್ರಗಳಿಗೆ ಕೇವಲ ಒಂದು ಬೆಳಗಿನ ಪ್ರದರ್ಶನ ಸಿಕ್ಕಿದೆ. ಇನ್ನು ‘ಸಿಂಗ್ ಗೀತಂ’ ಚಿತ್ರಕ್ಕೆ ಒಂದೂ ಶೋ ಸಿಕ್ಕಿಲ್ಲ. ಆದರೆ ‘ಅಬ್ಸೆಷನ್’ ಚಿತ್ರಕ್ಕೆ ದಿನಕ್ಕೆ 6 ರಿಂದ 7 ಶೋಗಳನ್ನು ನೀಡಲಾಗುತ್ತಿದೆ’ ಎಂದು ಅನುರಾಗ್ ಬರೆದುಕೊಂಡಿದ್ದಾರೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ‘ಮೈ ವಾಪಸ್ ಆವುಂಗಾ’, ‘ಭಾರತ್ ಭಾಗ್ಯ ವಿಧಾತ’, ‘ಹಾಂಟೆಡ್ 3ಡಿ’, ‘ಹೀರ್ ಸಾರಾ’, ‘ಡಿಸ್ಕ್ಲೋಸರ್ ಡೇ’ ಸೇರಿದಂತೆ ಹಲವು ಚಿತ್ರಗಳು ಚಿತ್ರಮಂದಿರದಲ್ಲಿವೆ. ಇದರೊಂದಿಗೆ ಕಳೆದ ವಾರ ಬಿಡುಗಡೆಯಾಗಿದ್ದ ಅನುರಾಗ್ ಕಶ್ಯಪ್ ನಿರ್ದೇಶನದ ‘ಬಂದರ್’ ಚಿತ್ರಕ್ಕೆ ಉತ್ತಮ ವಿಮರ್ಶೆ ಸಿಕ್ಕಿದ್ದರೂ, ಶೋಗಳ ಕೊರತೆಯ ನಡುವೆ ಇದುವರೆಗೆ ಕೇವಲ 4 ಕೋಟಿ ರೂ. ಗಳಿಸಲಷ್ಟೇ ಶಕ್ತವಾಗಿದೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 14, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚತುರ್ದಶಿ, ರೋಹಿಣಿ ನಕ್ಷತ್ರ, ಧೃತಿ ಯೋಗ, ಶಕುನಿ ಕರಣ ಇರತಕ್ಕಂತಹ ಈ ಶುಭ ದಿನದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿಶ್ಲೇಷಿಸಿದ್ದಾರೆ. ಈ ದಿನ ರಾಹುಕಾಲ ಸಂಜೆ 5:07 ರಿಂದ 6:44 ರವರೆಗೆ ಇದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭಕಾಲ ಬೆಳಗ್ಗೆ 10:43 ರಿಂದ ಮಧ್ಯಾಹ್ನ 12:19 ರವರೆಗೆ ಇರುತ್ತದೆ. ಇಂದು ವಿಶ್ವ ರಕ್ತದಾನಿಗಳ ದಿನವಾಗಿದ್ದು, ರಕ್ತದಾನ ಮಾಡುವ ಎಲ್ಲರಿಗೂ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ. ರವಿ ಮತ್ತು ಚಂದ್ರ ಗ್ರಹಗಳು ವೃಷಭ ರಾಶಿಯಲ್ಲಿ ರೋಹಿಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿರುವುದು ಇಂದಿನ ವಿಶೇಷ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆImage Credit source: PTI
ಬೆಂಗಳೂರು, ಜೂನ್ 14:ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಆರಂಭವಾಗುತ್ತಿದ್ದಂತೆ ರಸಗೊಬ್ಬರ ಕೊರತೆಯಾಗಿದೆ ಎಂದು ಬಿಂಬಿಸಿ, ಸುಖಾಸುಮ್ಮನೆ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳನ್ನು ಸುರಿಸುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ. ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣ ರಸಗೊಬ್ಬರ ಪೂರೈಸಿದೆ. ಆದರೆ ಕರ್ನಾಟಕ ಸರ್ಕಾರವೇ ಸರಿಯಾಗಿ ರಸಗೊಬ್ಬರ ವಿತರಣೆ ಮಾಡಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
‘ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ’
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಆರಂಭವಾಗುತ್ತಿದ್ದಂತೆ ರಸಗೊಬ್ಬರ ಕೊರತೆಯಾಗಿದೆ ಎಂದು ಬಿಂಬಿಸಿ, ಸುಖಾಸುಮ್ಮನೆ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳನ್ನು ಸುರಿಸುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಸಾಕ್ಷಿ.
ಜಾಗತಿಕ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆಯನ್ನು ಕರ್ನಾಟಕದ ರೈತರಿಗೆ 2026ರ ಮುಂಗಾರು (ಖಾರಿಫ್)…
ರಾಜ್ಯದ ಹಲವೆಡೆ ರಸಗೊಬ್ಬರಕ್ಕಾಗಿ ರೈತರ ಪರದಾಟ ವಿಚಾರ ಸಂಬಂಧ ಸ್ಪಷ್ಟನೆ ನೀಡಿರುವ ಅವರು, ಜಾಗತಿಕ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ರೈತರ ಹಿತಕ್ಕಾಗಿ ಮುಂಗಾರಿಗೆ ಮೊದಲೇ ಅಗತ್ಯ ರಸಗೊಬ್ಬರ ಪೂರೈಕೆ ಮಾಡಿದೆ. ಆದರೂ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಗೂಬೆ ಕೂರಿಸಲು ಯತ್ನ ನಡೆಸುತ್ತಿದೆ. ವಾಸ್ತವವಾಗಿ ಕರ್ನಾಟಕದಲ್ಲಿ ಸಮರ್ಪಕ ರಸಗೊಬ್ಬರ ಲಭ್ಯತೆಯಿದ್ದು, ಅದನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ತಲುಪಿಸದೆ ಬೇಜವಾಬ್ದಾರಿಯಾಗಿ ವರ್ತಿಸುತ್ತಿದೆ. ಮುಂಗಡ ದಾಸ್ತಾನು ಪ್ರಕ್ರಿಯೆಯನ್ನು ಸುಲಭಗೊಳಿಸಲು 2026ರ ಜನವರಿ ಮತ್ತು ಮಾರ್ಚ್ ನಡುವಿನ ಅವಧಿಯಲ್ಲೇ, ರಾಜ್ಯವು ಅಂದಾಜು ಅಗತ್ಯತೆಗಿಂತ ಹೆಚ್ಚುವರಿಯಾಗಿ 0.33 ಲಕ್ಷ ಮೆಟ್ರಿಕ್ ಟನ್ ಯೂರಿಯಾ, 1.29 ಲಕ್ಷ ಮೆಟ್ರಿಕ್ ಟನ್ ಡಿಎಪಿ ಮತ್ತು 1.58 ಲಕ್ಷ ಮೆಟ್ರಿಕ್ ಟನ್ ಎನ್‌ಪಿಕೆಎಸ್ ಅನ್ನು ಪಡೆದುಕೊಂಡಿದೆ ಎಂದವರು ತಿಳಿಸಿದ್ದಾರೆ.
ಜೂನ್ 10 ರವರೆಗೆ 3.13 ಲಕ್ಷ ಮೆಟ್ರಿಕ್ ಟನ್ ಅನುಪಾತದ ಅಗತ್ಯತೆಯ ಮಧ್ಯೆ, 5.59 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಲಭ್ಯತೆಯನ್ನು ಖಾತರಿಪಡಿಸಲಾಗಿದೆ. 2.47 ಲಕ್ಷ ಮೆಟ್ರಿಕ್ ಟನ್ ಮಾರಾಟದ ನಂತರವೂ, 3.12 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಬಾಕಿ ಉಳಿದಿದೆ ಹಾಗೂ ಇನ್ನೂ 17,190 ಮೆಟ್ರಿಕ್ ಟನ್ ಸಾಗಣೆಯಲ್ಲಿದೆ. 1.89 ಲಕ್ಷ ಮೆಟ್ರಿಕ್ ಟನ್ ಡಿಎಪಿ ಅಗತ್ಯತೆಯ ನಡುವೆ, 2.57 ಲಕ್ಷ ಮೆಟ್ರಿಕ್ ಟನ್ ಲಭ್ಯತೆಯನ್ನು ಖಚಿತಪಡಿಸಲಾಗಿದೆ. ಪ್ರಸ್ತುತ ದಾಸ್ತಾನು 1.09 ಲಕ್ಷ ಮೆಟ್ರಿಕ್ ಟನ್ ಇದ್ದು, ಹೆಚ್ಚುವರಿ ಪೂರೈಕೆ ನಡೆಯುತ್ತಿದೆ. 4.36 ಲಕ್ಷ ಮೆಟ್ರಿಕ್ ಟನ್ ಅಗತ್ಯ ವಿರುವ ಎನ್ಪಿಕೆಎಸ್ನ 9.28 ಲಕ್ಷ ಮೆಟ್ರಿಕ್ ಟನ್ ಲಭ್ಯತೆಯನ್ನು ಖಾತರಿಪಡಿಸಲಾಗಿದೆ. ಗಣನೀಯ ಪ್ರಮಾಣದ ಮಾರಾಟದ ನಂತರವೂ, ಸಾಗಣೆಯಲ್ಲಿರುವ ದಾಸ್ತಾನು ಸೇರಿದಂತೆ 5.6 ಲಕ್ಷ ಮೆಟ್ರಿಕ್ ಟನ್‌ಗಿಂತಲೂ ಹೆಚ್ಚು ರಸಗೊಬ್ಬರ ಲಭ್ಯವಿದೆ. ರೈತರ ಹಿತರಕ್ಷಣೆಯನ್ನು ಕಾಯಲು ಭಾರತ ಸರ್ಕಾರವು ಸಂಪೂರ್ಣವಾಗಿ ಬದ್ಧವಾಗಿದೆ ಎಂದವರು ತಿಳಿಸಿದ್ದಾರೆ.
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಾವು ಮನೆಗೆ ಪ್ರವೇಶಿಸಿದಾಗ ಅದನ್ನು ಕೊಲ್ಲುವುದು ಶಾಸ್ತ್ರಗಳ ಪ್ರಕಾರ ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಶಿವನ ಕುತ್ತಿಗೆಯಲ್ಲಿ, ವಿಷ್ಣುವಿನ ಹಾಸಿಗೆಯಾಗಿ, ಗಣಪತಿಯ ಹೊಟ್ಟೆಯ ಸುತ್ತ ಕಾಣಿಸಿಕೊಳ್ಳುತ್ತದೆ. ಇಡೀ ಬ್ರಹ್ಮಾಂಡವೇ ಹಾವಿನ ಮೇಲೆ ನಿಂತಿದೆ ಎಂದು ಪುರಾಣಗಳು ಹೇಳುತ್ತವೆ.
ಇಂದು ಕಾಡುಗಳ ನಾಶದಿಂದಾಗಿ ಹಾವಿನ ಸಂತತಿ ಕಡಿಮೆಯಾಗುತ್ತಿದ್ದು, ಹಾವುಗಳು ಮಾನವ ವಾಸದ ಪ್ರದೇಶಗಳಿಗೆ ಬರುವುದು ಅನಿವಾರ್ಯವಾಗಿದೆ. ಮನೆಗೆ ಹಾವು ಬಂದಾಗ ತಕ್ಷಣ ಅದನ್ನು ಕೊಲ್ಲುವ ಬದಲು, ಹಾವಾಡಿಗರು ಅಥವಾ ಅರಣ್ಯ ಇಲಾಖೆಯವರನ್ನು ಕರೆದು ಅದನ್ನು ಸುರಕ್ಷಿತವಾಗಿ ಸ್ಥಳಾಂತರಿಸಬೇಕು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.
ಬೆಂಗಳೂರು, ಜೂನ್ 14: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಫಲಾನುಭವಿಗಳಿಗೆ ಸೂಚಿಸಿದ್ದಾರೆ. ನಿಜವಾದ ಫಲಾನುಭವಿಗಳನ್ನು ಗುರುತಿಸುವ ಹಾಗೂ ಯೋಜನೆಯ ದುರ್ಬಳಕೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ನೂರಾರು ಕೋಟಿ ರೂಪಾಯಿ ಈಗಾಗಲೇ ಮೃತಪಟ್ಟವರ ಖಾತೆಗಳಿಗೆ ಹೋಗಿರುವುದು ಪತ್ತೆಯಾಗಿದ್ದು, ಫಲಾನುಭವಿಗಳ ಬ್ಯಾಂಕ್ ಮಾಹಿತಿ ಸ್ಪಷ್ಟವಾಗಿ ಲಭ್ಯವಾಗಬೇಕಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ 1.64 ಲಕ್ಷ ಜನರೂ ಸಹ ಮರು ಅರ್ಜಿ ಸಲ್ಲಿಸಬೇಕು ಎಂದೂ ಅವರು ತಿಳಿಸಿದ್ದಾರೆ.