ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ – Kannada News | More Than Required Fertilizer Supplied to Karnataka: Union Minister Pralhad Joshi Refutes Shortage Allegations
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆImage Credit source: PTI ಬೆಂಗಳೂರು, ಜೂನ್ 14: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಆರಂಭವಾಗುತ್ತಿದ್ದಂತೆ ರಸಗೊಬ್ಬರ ಕೊರತೆಯಾಗಿದೆ ಎಂದು ಬಿಂಬಿಸಿ, ಸುಖಾಸುಮ್ಮನೆ ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳನ್ನು ಸುರಿಸುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ. ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣ ರಸಗೊಬ್ಬರ ಪೂರೈಸಿದೆ. ಆದರೆ ಕರ್ನಾಟಕ ಸರ್ಕಾರವೇ ಸರಿಯಾಗಿ ರಸಗೊಬ್ಬರ ವಿತರಣೆ ಮಾಡಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ‘ರಾಜ್ಯ ಕಾಂಗ್ರೆಸ್ ಸರ್ಕಾರದ…