ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ
ಬೆಂಗಳೂರು, ಮಾರ್ಚ್ 7: ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ನಿಟ್ಟಿನಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದ್ದು, ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (KIMS Group of Hospitals) ವತಿಯಿಂದ ನಿರ್ಮಿಸಲಾಗಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ 8 ರಂದು ಲೋಕಾರ್ಪಣೆಯಾಗಲಿವೆ. ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್‌ಟಿಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆಸ್ಪತ್ರೆಗಳ ಉದ್ಘಾಟನಾ ಸಮಾರಂಭವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ…