Aiden Markram: ನಂಗೆ ಮುಖಕ್ಕೆ ಹೊಡೆದಂಗಾಯ್ತು..! – Kannada News | It felt like a slap in the face: Aiden Markram on Semi Final Loss
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಸೆಮಿಫೈನಲ್ಗೆ ಪ್ರವೇಶಿಸಿದ್ದ ಸೌತ್ ಆಫ್ರಿಕಾ ತಂಡವನ್ನು ನ್ಯೂಝಿಲೆಂಡ್ ತಂಡ ಹೀನಾಯವಾಗಿ ಸೋಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಇದಾಗ್ಯೂ ಮಾರ್ಕೊ ಯಾನ್ಸೆನ್ (55) ಬಾರಿಸಿದ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 20 ಓವರ್ಗಳಲ್ಲಿ 169 ರನ್ ಕಲೆಹಾಕಿತು….