ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್ ಶಾಸಕರು ವಾಪಸ್: ಟ್ರಿಪ್ಗೆ ಹೋಗಿದ್ಯಾಕೆ? ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ! – Kannada News | Karnataka Congress MLAs Return: Foreign Trip Purpose Sparks Political Row
ವಿದೇಶ ಪ್ರವಾಸದಿಂದ ಕಾಂಗ್ರೆಸ್ ಸಾಸಕರು ವಾಪಸ್ ದೇವನಹಳ್ಳಿ, ಮಾರ್ಚ್ 04: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಚ್ಚಾಟದ ನಡುವೆ ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದರೆ ಟ್ರಿಪ್ಗೆ ಹೋಗಿದ್ದೇಕೆ ಎಂಬ ವಿಚಾರದಲ್ಲಿ ಶಾಸಕರ ಹೇಳಿಕೆಯಲ್ಲೇ ಗೊಂದಲ ಕಂಡುಬಂದಿದೆ. ಇನ್ನು ಕೆಲ ಶಾಸಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಕಣ್ಣುತಪ್ಪಿಸಿ ತೆರಳಿದ್ದಾರೆ. ಹೆಚ್.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್ ಶಾಸಕರು ಮಧ್ಯರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದು, ಕ್ಯಾಮರಾ ಕಾಣುತ್ತಿದ್ದಂತೆ ಈ ಪೈಕಿ ಕೆಲ…