Video: ಹೆತ್ತವರನ್ನು ತಾನು ಕೆಲಸ ಮಾಡುವ ಮೈಕ್ರೋಸಾಫ್ಟ್ ಆಫೀಸ್ ತೋರಿಸಲು ಕರೆತಂದ ಮಗಳು – Kannada News | Hyderabad: Daughter takes parents to show them around Microsoft Office in Hyderabad
ತಂದೆ ತಾಯಿಗೆ ತಮ್ಮ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ (job) ಪಡೆದು ಜೀವನದಲ್ಲಿ ಸೆಟಲ್ ಆಗಬೇಕೆನ್ನುವ ಆಸೆಯಿರುತ್ತದೆ. ಅದರಂತೆ ಮಕ್ಕಳು ಬದುಕು ಕಟ್ಟಿಕೊಂಡರೆ ಹೆತ್ತವರಿಗೆ ಅದಕ್ಕಿಂತ ಖುಷಿ ಮತ್ತೊಂದಿಲ್ಲ. ಭಾವನಾತ್ಮಕ ಕ್ಷಣಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬರು ಪೋಷಕರನ್ನು ಹೈದರಾಬಾದ್‌ನ (Hyderabad) ತಮ್ಮ ಆಫೀಸಿಗೆ ಕರೆದುಕೊಂಡು ಹೋಗಿದ್ದಾರೆ. ಹೆತ್ತವರು ಹೆಮ್ಮೆ ಪಡುವಂತೆ ಮಾಡಿದ ಮಗಳ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತನೇಯಾ ಸೋನಿ (taneyasoni_vlogs) ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋಗೆ ಕನಸು…