All posts by nagaraj11081993

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಭಾರತದಿಂದ ಅಧಿಕೃತ ಹೇಳಿಕೆ ಬಿಡುಗಡೆ; ಗಲ್ಫ್​ನಲ್ಲಿ ಭಾರತೀಯರ ಸುರಕ್ಷತೆ ಕುರಿತು ಕಾಳಜಿ – Kannada News | India’s official statement on West Asia conflict, says safety of Indian citizen is its utmost priority

ನವದೆಹಲಿ, ಮಾರ್ಚ್ 3: ಇಸ್ರೇಲ್-ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧದ (Iran war) ಕುರಿತು ಭಾರತ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದೆ. ಇರಾನ್ ಮತ್ತು ಗಲ್ಫ್​ನಲ್ಲಿ ಬಿಕ್ಕಟ್ಟು ಶುರುವಾಗಿರುವುದು ಹಾಗೂ ಅದರಿಂದ ಸಾವು ನೋವುಗಳಾಗಿ ಸಹಜ ಬದುಕು ಅಸ್ತವ್ಯಸ್ತಗೊಳ್ಳುತ್ತಿರುವುದಕ್ಕೆ ಭಾರತ ಆತಂಕ ವ್ಯಕ್ತಪಡಿಸಿದೆ. ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಕೋಟಿ ಸಂಖ್ಯೆಯ ಭಾರತೀಯರ ಸುರಕ್ಷತೆ ಬಗ್ಗೆ ಚಿಂತೆ ವ್ಯಕ್ತಪಡಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿಕೆ ಬಿಡುಗಡೆ ಮಾಡಿದ್ದು, ಎಲ್ಲಾ ಕಡೆಗಳಿಂದ ಮಾತುಕತೆಗಳಾಗಿ, ಬಿಕ್ಕಟ್ಟು ಅಂತ್ಯಗೊಳ್ಳುವಂತಾಗಲಿ ಎಂದು ಮನವಿ ಮಾಡಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ಈ ಬಿಕ್ಕಟ್ಟಿನ ತೀವ್ರತೆ ಹೆಚ್ಚಾಗಿ, ಇತರ ದೇಶಗಳಿಗೆ ಅದು ಹರಡುವುದನ್ನು ನಾವು ಕಂಡಿದ್ದೇವೆ. ವಿನಾಶ ಮತ್ತು ಸಾವು ಹೆಚ್ಚಿದ್ದು, ಸಹಜ ಜೀವನ ಮತ್ತು ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ. ಪ್ರಮುಖ ನೆರೆಯ ದೇಶವಾದ ನಮಗೆ ಈ ಪ್ರದೇಶದ ಭದ್ರತೆ ಮತ್ತು ಸ್ಥಿರತೆ ಮುಖ್ಯವಾಗಿದ್ದು, ಈ ಬೆಳವಣಿಗೆಗಳನ್ನು ಆತಂಕದಿಂದ ಗಮನಿಸುತ್ತಿದ್ದೇವೆ’ ಎಂದು ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ

‘ಗಲ್ಫ್ ಪ್ರದೇಶದಲ್ಲಿ ವಾಸಿಸುತ್ತಿರುವ ಮತ್ತು ಕೆಲಸ ಮಾಡುತ್ತಿರುವ ಭಾರತೀಯ ಸಂಖ್ಯೆ ಒಂದು ಕೋಟಿ ಹತ್ತಿರ ಇದೆ. ಇವರಿಗೆ ಋಣಾತ್ಮಕವಾಗಿ ಪರಿಣಾಮ ಬೀರುವಂತಹ ಯಾವುದೇ ಘಟನೆಯನ್ನು ಕಣ್ಮುಚ್ಚಿ ನೋಡಿಕೊಂಡಿರಲು ಆಗುವುದಿಲ್ಲ. ನಮ್ಮ ವ್ಯಾಪಾರ ಮತ್ತು ಇಂಧನ ಸರಬರಾಜು ಸರಪಳಿಯೂ ಈ ಭೂಭಾಗದಲ್ಲಿದೆ. ದೊಡ್ಡ ವಿಪತ್ತು ಬಂದರೆ ಭಾರತೀಯ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಜಾಗತಿಕ ಕಾರ್ಮಿಕಸಮೂಹದಲ್ಲಿ ಪ್ರಮುಖವೆನಿಸಿರುವ ನಾಗರಿಕರನ್ನು ಹೊಂದಿರುವ ದೇಶವಾಗಿ ಭಾರತವು ಸರಕು ಸಾಗಣೆ ಹಡಗಿನ ಮೇಲಿನ ದಾಳಿಯನ್ನು ಪ್ರಬಲವಾಗಿ ವಿರೋಧಿಸುತ್ತದೆ. ಈಗಾಗಲೇ ಕೆಲ ಭಾರತೀಯ ರಾಷ್ಟ್ರೀಯರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಕಾಣೆಯಾಗಿದ್ದಾರೆ’ ಎಂದು ಭಾರತದ ವತಿಯಿಂದ ಬಿಡುಗಡೆಯಾದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂಧಾನ ಮತ್ತು ರಾಜತಾಂತ್ರಿಕ ಮಾತುಕತೆಗಳು ನಡೆಯಬೇಕು. ಈ ಬಿಕ್ಕಟ್ಟು ಬೇಗ ಅಂತ್ಯಗೊಳ್ಳಬೇಕು ಎಂದು ಹಾರೈಸಿರುವ ಭಾರತ, ಸರ್ಕಾರವು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ರಾಷ್ಟ್ರೀಯ ಹಿತಾಸಕ್ತಿ ಪ್ರಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಇರಾನ್ ಮೇಲೆ 4-5 ವಾರ ದಾಳಿ ಮುಂದುವರೆಯಲಿದೆ; ಟ್ರಂಪ್ ಘೋಷಣೆ

ಬಾಧಿತ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ರಾಜತಾಂತ್ರಿಕ ಕಚೇರಿಗಳು ಭಾರತೀಯ ನಾಗರಿಕರು ಹಾಗೂ ಸಮುದಾಯ ಸಂಘಟನೆಗಳೊಂದಿಗೆ ನಿಕಟ ಸಂಪರ್ಕದಲ್ಲಿವೆ. ನಿಯಮಿತವಾಗಿ ನಿರ್ದೇಶನಗಳನ್ನು ನೀಡುತ್ತಿವೆ. ಬಾಧಿತ ನಾಗರಿಕರಿಗೆ ಸಾಧ್ಯವಾದ ನೆರವು ಒದಗಿಸಲಾಗುತ್ತಿದೆ. ಈ ಪ್ರದೇಶದ ಸರ್ಕಾರಗಳು ಹಾಗೂ ಇತರ ಪ್ರಮುಖ ಪಾಲುದಾರರೊಂದಿಗೆ ಸಂಪರ್ಕದಲ್ಲಿರಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ – Kannada News | A little boy who sent his mother off to school with a caring word

ಪುಟಾಣಿಗಳೇ (little kids) ಹಾಗೆ, ತುಂಟಾಟ ಮಾಡೋದರಲ್ಲಿ ಎತ್ತಿದ ಕೈ. ಅದಲ್ಲದೇ ಶಾಲೆಗೆ ಹೋಗಲು ವಿಷಯದಲ್ಲಿ ಸ್ವಲ್ಪ ಹಿಂದೇಟು ಹಾಕುತ್ತಾರೆ. ಆದರೆ ಈ ಹೆತ್ತವರು ಪುಲಾಯಿಸಿ ಶಾಲೆಗೆ ಕಳಿಸಿ ಕೊಡುತ್ತಾರೆ. ಆದರೆ ಈ ಪುಟಾಣಿ ಮಾತ್ರ ಶಾಲೆಗೆ (school) ಹೋಗಲ್ಲ ಎಂದು ಹಠ ಮಾಡಿಲ್ಲ. ಶಾಲೆಗೆ ಕಳಿಸಿಕೊಡಲು ಬಂದ ಅಮ್ಮನನ್ನು  ಪುಟಾಣಿಯೊಂದು ಮುದ್ದಾಗಿ ಕಳಿಸಿಕೊಟ್ಟಿದೆ. ಮನೆಗೆ ಹೋಗಿ ನೀನು ಟಿವಿ ನೋಡು ಎನ್ನುವ ಪುಟಾಣಿಯ ಮುದ್ದು ಮಾತು ನೆಟ್ಟಿಗರ ಗಮನ ಸೆಳೆದಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರೆಡಿ ಎಫ್ಎಂ ಕನ್ನಡ (Red FM Kannada) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಪುಟಾಣಿಯೊಂದು ಶಾಲೆಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದು ಮುದ್ದಾಗಿ ಮಾತನಾಡಿದೆ. ಈ ವಿಡಿಯೋದಲ್ಲಿ ಪುಟ್ಟ ಮಗುವು ತನ್ನ ತಾಯಿ ಬಳಿ ಟಾಟಾ ಬೇಗ ಬಾ ಎನ್ನುತ್ತಿರುವುದನ್ನು ಕಾಣಬಹುದು. ಆ ಬಳಿಕ ಮನೆಗೆ ಹೋಗಿ ಟಿವಿ ನೋಡು ಎನ್ನುವುದನ್ನು ನೀವಿಲ್ಲಿ ನೋಡಬಹುದು. ಮತ್ತೆ ಮತ್ತೆ ತನ್ನ ತಾಯಿ ಇರುವಲ್ಲಿಗೆ ಓಡಿ ಬರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮೇಕೆ ಮರಿಯನ್ನು ರಕ್ಷಿಸಲು ಬಾಲಕನಿಗೆ ಹಗ್ಗ ಕಟ್ಟಿ 40 ಅಡಿ ಆಳದ ಬಾವಿಗೆ ಇಳಿಸಿದ್ರು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಮುದ್ದು ಕಂದ ಎಂದರೆ, ಮತ್ತೊಬ್ಬರು ಸೂಪರ್ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮುದ್ದಾದ ವಿಡಿಯೋ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ: ಗ್ರಾಹಕರಿಲ್ಲದೇ ಹೋಟೆಲ್‌ಗಳು ಖಾಲಿ.. ಖಾಲಿ – Kannada News | Ketugrasta Lunar Eclipse Sparks Traditional Beliefs and Community Impact

ಕೇತುಗ್ರಸ್ತ ಚಂದ್ರಗ್ರಹಣ ಆರಂಭವಾಗಿದ್ದು, ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣಗಳನ್ನು ವೀಕ್ಷಿಸಬಹುದಾಗಿದೆ. ಲಾಸ್ ಏಂಜಲೀಸ್‌ನಲ್ಲಿ ಗೋಚರಿಸುತ್ತಿರುವ ಈ ಗ್ರಹಣ ಭಾರತದಲ್ಲಿ ಕೊನೆಯ 21 ನಿಮಿಷಗಳ ಕಾಲ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಚಂದ್ರನ ಕಾಲು ಭಾಗ ಮಾತ್ರ ಗೋಚರಿಸುತ್ತದೆ, ಉಳಿದ ಭಾಗ ತಾತ್ಕಾಲಿಕವಾಗಿ ನೆರಳಿನಲ್ಲಿ ಆವೃತವಾಗಿರುತ್ತದೆ. ಚಂದ್ರಗ್ರಹಣದ ಬಗ್ಗೆ ವೈಜ್ಞಾನಿಕ ಹಾಗೂ ಧಾರ್ಮಿಕ ನಂಬಿಕೆಗಳು ಭಾರತದಲ್ಲಿ ಮಾತ್ರವಲ್ಲದೆ, ಜಪಾನ್, ಚೀನಾ, ಅಮೆರಿಕಾದಂತಹ ದೇಶಗಳಲ್ಲೂ ಇವೆ. ಈ ಗ್ರಹಣದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಜನಸಂಚಾರ ಕಡಿಮೆಯಾಗಿ, ಹೋಟೆಲ್‌ಗಳು ಖಾಲಿ ಹೊಡೆದಿವೆ. ಇದು ಗ್ರಹಣದ ಪ್ರಭಾವದಿಂದ ಜನರು ಮನೆಯಿಂದ ಹೊರಬರದ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಅದೇ ರೀತಿ, ಶಿವಮೊಗ್ಗದ ಬಲಮುರಿ ಗಣಪತಿ ದೇಗುಲ ಸೇರಿದಂತೆ ಹಲವೆಡೆ ಗ್ರಹಣದ ನಕಾರಾತ್ಮಕ ಶಕ್ತಿಗಳಿಂದ ರಕ್ಷಣೆಗಾಗಿ ವಿಶೇಷ ಪೂಜೆಗಳು, ಗಂಗಾ ಪೂಜೆ ಮತ್ತು ಸಂಕಲ್ಪ ಪೂಜೆಗಳು ನಡೆದಿವೆ. ನಂಬಿಕೆಗಳು ಮತ್ತು ವಾಸ್ತವದ ನಡುವಿನ ಸಮತೋಲನವನ್ನು ಕಾಪಾಡುವುದು ಮುಖ್ಯ ಎಂದು ಈ ಸಂದರ್ಭದಲ್ಲಿ ಚರ್ಚಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ; ಬಿಹಾರದಿಂದ ಪಕ್ಷದ ಮುಖ್ಯಸ್ಥ ನಿತಿನ್ ನಬಿನ್ ಕಣಕ್ಕೆ – Kannada News | BJP announces 9 candidates List for Rajya Sabha elections fields BJP National President Nitin Nabin from Bihar

ನವದೆಹಲಿ, ಮಾರ್ಚ್ 3: ಬಿಜೆಪಿ ಇಂದು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ಸಹ ನಾಮನಿರ್ದೇಶನ ಮಾಡಲಾಗಿದೆ. ಬಿಹಾರದಿಂದ ರಾಜ್ಯಸಭಾ ಚುನಾವಣೆಗೆ ನಿತಿನ್ ನಬಿನ್ ಮತ್ತು ಶಿವೇಶ್ ರಾಮ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 5. ಮಾರ್ಚ್ 16ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶಗಳನ್ನು ಪ್ರಕಟವಾಗಲಿದೆ.

ಬಿಹಾರದಿಂದ ಬಿಜೆಪಿ ನಿತಿನ್ ನಬಿನ್ ಮತ್ತು ಶಿವೇಶ್ ಕುಮಾರ್ ಅವರನ್ನು ಕಣಕ್ಕಿಳಿಸಿದೆ. ಅಸ್ಸಾಂನಲ್ಲಿ ಬಿಜೆಪಿ ತೇರಶ್ ಗೋವಲ್ಲ ಮತ್ತು ಜೋಗೆನ್ ಮೋಹನ್ ಅವರನ್ನು ನಾಮನಿರ್ದೇಶನ ಮಾಡಿದೆ. ಛತ್ತೀಸ್‌ಗಢದಲ್ಲಿ ಲಕ್ಷ್ಮಿ ವರ್ಮಾ ಅವರನ್ನು ತನ್ನ ಅಭ್ಯರ್ಥಿಯಾಗಿ ಹೆಸರಿಸಿದೆ. ಹರಿಯಾಣದಿಂದ ಸಂಜಯ್ ಭಾಟಿಯಾ ಅವರನ್ನು ಆಯ್ಕೆ ಮಾಡಿದೆ. ಒಡಿಶಾದಲ್ಲಿ ಬಿಜೆಪಿ ಸುಜೀತ್ ಕುಮಾರ್ ಜೊತೆಗೆ ರಾಜ್ಯ ಘಟಕದ ಮುಖ್ಯಸ್ಥ ಮನಮೋಹನ್ ಸಮಲ್ ಅವರನ್ನು ನಾಮನಿರ್ದೇಶನ ಮಾಡಿದೆ. ಪಶ್ಚಿಮ ಬಂಗಾಳದಿಂದ ಬಿಜೆಪಿ ರಾಹುಲ್ ಸಿನ್ಹಾ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: ಬಿಹಾರದ ನೂತನ ಮಂತ್ರಿಗಳಿಗೆ ಖಾತೆ ಹಂಚಿಕೆ; ನಿತೀಶ್ ಕುಮಾರ್ ಸಂಪುಟದ ಸಚಿವರ ಪಟ್ಟಿ ಇಲ್ಲಿದೆ

ಬಿಹಾರದ ಐವರು ರಾಜ್ಯಸಭಾ ಸದಸ್ಯರ ಅವಧಿ ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಅವರೆಂದರೆ ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್, ಪ್ರೇಮಚಂದ್ ಗುಪ್ತಾ, ಕೇಂದ್ರ ಸಚಿವರಾದ ರಾಮನಾಥ್ ಠಾಕೂರ್, ಅಮರೇಂದ್ರ ಧರಿ ಸಿಂಗ್ ಮತ್ತು ಉಪೇಂದ್ರ ಕುಶ್ವಾಹ. ಹರಿವಂಶ್ ನಾರಾಯಣ್ ಸಿಂಗ್ ಮತ್ತು ರಾಮನಾಥ್ ಠಾಕೂರ್ ಅವರು ಜೆಡಿಯು ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ. ಪ್ರೇಮಚಂದ್ ಗುಪ್ತಾ ಮತ್ತು ಅಮರೇಂದ್ರ ಧಾರಿ ಸಿಂಗ್ ಅವರು ಆರ್‌ಜೆಡಿಯನ್ನು ಪ್ರತಿನಿಧಿಸುತ್ತಿದ್ದಾರೆ. ಉಪೇಂದ್ರ ಕುಶ್ವಾಹ ಅವರು ರಾಷ್ಟ್ರೀಯ ಲೋಕ ಮೋರ್ಚಾವನ್ನು ಪ್ರತಿನಿಧಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​ – Kannada News | Karnataka Phone Tapping Row: Congress Vs Opposition on Intelligence Misuse Claims

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿImage Credit source: Google

ಬೆಂಗಳೂರು, ಮಾರ್ಚ್​​ 03: ಕಳೆದ ಕೆಲ ತಿಂಗಳುಗಳಿಂದ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಕುರ್ಚಿ ಕಾಳಗದ ಮಧ್ಯೆ ಇದೀಗ ಫೋನ್​​ ಟ್ಯಾಪಿಂಗ್​​ ಆರೋಪ ವಿಚಾರ ಬಿರುಗಾಳಿ ಎಬ್ಬಿಸಿದೆ. ಗುಪ್ತಚರ ಇಲಾಖೆಯನ್ನು ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಇಲಾಖೆ ಮೂಲಕ ಪಕ್ಷದ ಶಾಸಕರುಗಳು ಮತ್ತು ನಾಯಕರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಡಿಸಿಎಂ ಪರವಾದ ಶಾಸಕರನ್ನು ಗಮನಿಸಲು ಸಿಎಂರಿಂದ ಗುಪ್ತಚರ ಇಲಾಖೆ ಬಳಕೆ ಆಗ್ತಿದೆ. ಯಾರ್ಯಾರು ಡಿಕೆಶಿ ಪರವಾಗಿದ್ದಾರೋ ಅವರ ಚಲನವಲನ ನೋಡಲು ಎಸ್ಪಿ ನೇತೃತ್ವದ ತಂಡವನ್ನೇ ಮಾಡಿದ್ದಾರೆಂದು ವಿಪಕ್ಷಗಳು ಆರೋಪಿಸಿರೋದು ಈಗ ಚರ್ಚೆಗೆ ಗ್ರಾಸವಾಗಿದೆ.

ಗಾದೆ ಮಾತು ಹೇಳಿ ಸಿಎಂ ಕೌಂಟರ್​

ಈ ಬೆನ್ನಲ್ಲೇ ವಿಪಕ್ಷಗಳ ಆರೋಪದ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಕೌಂಟರ್​​ ಕೊಟ್ಟಿರುವ ಸಿಎಂ, ಇದು ತಾ ಕಳ್ಳ ಇತರರ ನಂಬ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ ಎಂದು ಕುಟುಕಿದ್ದಾರೆ. ವಿಪಕ್ಷ ನಾಯಕರು ನನ್ನ, ಡಿಕೆ ನಡುವೆ ಹುಳಿ ಹಿಂಡಲು ಪ್ರಯತ್ನಿಸ್ತಿದ್ದಾರೆ. ನಮ್ಮ ಹಾಗೂ ಡಿಕೆಶಿ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸಿ ಅವರೊಳಗಿನ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧ ಮೇಲೆ ಯಾವ ಪರಿಣಾಮ ಆಗಲ್ಲ. ಆರೋಪ ಮಾಡಿರುವ ಒಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು. ಇನ್ನೊಬ್ಬರು ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದವರು. ಅವರ ಕಾಲದಲ್ಲೂ ಗುಪ್ತಚರ ವಿಭಾಗ ಮುಖ್ಯಮಂತ್ರಿ ಬಳಿ ಇತ್ತು. ಹೀಗಾಗಿ ತಮ್ಮ ಅನುಭವದ ಬಲದಿಂದಲೇ ಈ ಆರೋಪ ಮಾಡಿದಂತೆ ಕಾಣ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ; ಹೆಚ್​​.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ. ಏಕ ಕುಟುಂಬದ ಅಧಿಪತ್ಯ ಇರುವ ಜೆಡಿಎಸ್ ಅಲ್ಲ. ನಮ್ಮ ಶಾಸಕರಲ್ಲಿ ಯಾರೂ ನನ್ನ, ಇಲ್ಲವೇ ಡಿಕೆಶಿ ಬೆಂಬಲಿಗರಲ್ಲ. ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸುವ ಜೊತೆಯಲ್ಲಿ ಊಟ-ತಿಂಡಿ ಮಾಡುವ ಎಲ್ಲ ಸ್ವಾತಂತ್ರ್ಯ ಅವರಿಗೆ ಇದೆ. ಶಾಸಕರು ಏನೇ ಹೇಳಿದರೂ ಹೈಕಮಾಂಡ್ ಆದೇಶಕ್ಕೆ ತಲೆಬಾಗ್ತೇವೆ. ಶಾಸಕರೂ ಸೇರಿ ನಾನು, ಶಿವಕುಮಾರ್​​ ಹೈಕಮಾಂಡ್ ಆದೇಶಕ್ಕೆ ತಲೆಬಾಗ್ತೇವೆ ಎಂದು ತಿಳಿಸಿದ್ದಾರೆ.

ಸರ್ಕಾರ ನಡೆಸೋದು ನಾವು. ನಮಗೆ ಹೆಚ್ಚಿನ ಮಾಹಿತಿ ಇರುತ್ತೆ, ಅವರಿಗಲ್ಲ ಅಂತ ವಿಪಕ್ಷ ನಾಯಕರ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಕೂಡ ತಿರುಗೇಟು ಕೊಟ್ಟಿದ್ದಾರೆ. ವಿಪಕ್ಷದವರಿಗೆ ಯಾರು ಹೇಳಿದ್ದು ಗೂಢಚಾರಿಕೆ, ಫೋನ್ ಟ್ಯಾಪಿಂಗ್‌ ಮಾಡ್ತಿದ್ದಾರೆ ಎಂದು? ಅಂತಹ ಬೆಳವಣಿಗೆ ಯಾವುದೂ ನಡೆಯುತ್ತಿಲ್ಲ. ನಮ್ಮ ಗಮನಕ್ಕೆ ಅಧಿಕೃತವಾಗಿ ಆತರಹದ್ದು ಯಾವುದೂ ಇಲ್ಲ. ಪೊಲಿಟಿಕಲ್ ಇಂಟಲಿಜೆನ್ಸ್ ಅನ್ನೋ ಪ್ರತ್ಯೇಕ ವಿಭಾಗವೇ ಇದೆ. ಅದರ ಮೂಲಕ ಸಿಎಂಗೆ ಮಾಹಿತಿ ಸಹಜವಾಗಿ ನಿತ್ಯ ಹೋಗುತ್ತೆ. ನಿರ್ದಿಷ್ಟವಾಗಿ ಯಾವ ಮಾಹಿತಿ ಬೇಕು ಅನ್ನೋದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದಿದ್ದಾರೆ. ಹೀಗಿದ್ದರೂ ಈ ವಿಚಾರ ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮುಂದೆ ಇದು ಯಾವ ಸ್ವರೂಪ ಪಡೆಯುತ್ತೆ ಎಂದು ಕಾದು ನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕನ್ನಡ ಪ್ರೇಕ್ಷಕರ ನಿರ್ಲಕ್ಷ್ಯ, ತಮಿಳು ಪ್ರೇಕ್ಷಕರ ಅಪ್ಪುಗೆ ಪಡೆದ ಕನ್ನಡ ಸಿನಿಮಾ – Kannada News | Second case of Seetharam movie getting good response in Tamil Nadu

ಕನ್ನಡದ ದೊಡ್ಡ ಬಜೆಟ್ ಪ್ಯಾನ್ ಇಂಡಿಯಾ (Pan India) ಸಿನಿಮಾಗಳು ಅಥವಾ ಸುದೀಪ್, ಯಶ್, ದರ್ಶನ್ ಅಂಥಹಾ ದೊಡ್ಡ ನಟರ ಸಿನಿಮಾಗಳಷ್ಟೆ ರಾಜ್ಯದ ಗಡಿ ದಾಟಿ ಹೊರ ರಾಜ್ಯಗಳಲ್ಲಿ ಪ್ರದರ್ಶನ ಕಾಣುತ್ತವೆ. ಅದರಲ್ಲೂ ಸಿನಿಮಾ ಚೆನ್ನಾಗಿದ್ದರಷ್ಟೆ ಪರಭಾಷೆ ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಾರೆ. ಕನ್ನಡದ ಕೆಲವು ಸ್ಟಾರ್ ನಟರ ಕನ್ನಡ ಸಿನಿಮಾಗಳು ಪರಭಾಷೆಯಲ್ಲಿ ಅಟ್ಟರ್ ಫ್ಲಾಪ್ ಆದ ಉದಾಹರಣೆಯೂ ಇದೆ. ಆದರೆ ಇದೀಗ ಕನ್ನಡದ ಸಿನಿಮಾ ಒಂದು ನೆರೆಯ ತಮಿಳುನಾಡಿನಲ್ಲಿ ಸದ್ದು ಮಾಡಲು ಆರಂಭಿಸಿದೆ. ಆದರೆ ಇದು ಸಂತೋಷ ಪಡಬೇಕಾದ ಸುದ್ದಿಯೋ ಅಥವಾ ಬೇಸರ ಪಟ್ಟುಕೊಳ್ಳಬೇಕಾದ ಸುದ್ದಿಯೋ ಗೊಂದಲದಲ್ಲಿದೆ ಚಿತ್ರತಂಡ.

ವಿಜಯ್ ರಾಘವೇಂದ್ರ ನಟಿಸಿರುವ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ವಾರದ ಹಿಂದಷ್ಟೆ ಬಿಡುಗಡೆ ಆಗಿದ್ದು ಸಿನಿಮಾದ ಬಗ್ಗೆ ಬಹಳ ಒಳ್ಳೆಯ ವಿಮರ್ಶೆಗಳು ವ್ಯಕ್ತವಾಗಿವೆ. ಸಿನಿಮಾ ಪ್ರೇಮಿಗಳು, ಸಿನಿಮಾ ನೋಡಿದವರು ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ. ಆದರೆ ಈ ಹಿಂದಿನ ಕನ್ನಡದ ಕೆಲ ಒಳ್ಳೆಯ ಸಿನಿಮಾಗಳಿಗೆ ಆದ ಗತಿಯೇ ಈ ಸಿನಿಮಾಕ್ಕೂ ಆಗಿದೆ. ಸಿನಿಮಾವನ್ನು ಚಿತ್ರಮಂದಿರಗಳಿಂದ ಎತ್ತಂಗಡಿ ಮಾಡಲಾಗುತ್ತಿದೆ. ಆದರೆ ನೆರೆಯ ತಮಿಳುನಾಡಿನಲ್ಲಿ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾಕ್ಕೆ ಬೆಂಗಳೂರಿನಲ್ಲಿ ಪ್ರಸ್ತುತ ಕೆಲವೇ ಚಿತ್ರಮಂದಿರಗಳಲ್ಲಿ ಕೆಲವೇ ಶೋಗಳಷ್ಟೆ ಲಭ್ಯವಿದೆ. ಅದೂ ಇತ್ತೀಚೆಗಷ್ಟೆ ಕೆಲವು ಶೋಗಳು ಹೆಚ್ಚುವರಿಯಾಗಿ ನೀಡಲಾಗಿದೆ. ಅತ್ತ ತಮಿಳುನಾಡಿನಲ್ಲಿ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾವು ದಿನದಿಂದ ದಿನಕ್ಕೆ ಶೋಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಳ್ಳುತ್ತಿದೆ. ಬುಕ್​ಮೈಶೋ ಮಾಹಿತಿಯಂತೆ ಚೆನ್ನೈನಲ್ಲಿ ನಾಳೆ (ಮಾರ್ಚ್ 03) ಸಿನಿಮಾಕ್ಕೆ ನಾಲ್ಕು ಚಿತ್ರಮಂದಿರಗಳಲ್ಲಿ ಐದು ಶೋಗಳು ನಿಗದಿ ಆಗಿವೆ. ಸಣ್ಣ ಬಜೆಟ್​​ನ ಕನ್ನಡ ಸಿನಿಮಾ ಕೇವಲ ತನ್ನ ಕಂಟೆಂಟ್ ಒಂದಿರಂದಲೇ ಪರರಾಜ್ಯದಲ್ಲಿ ಶೋಗಳನ್ನು ಗಿಟ್ಟಿಸಿಕೊಳ್ಳುತ್ತಿರುವುದು ಸಾಮಾನ್ಯ ಸಂಗತಿಯಲ್ಲ.

ಇದನ್ನೂ ಓದಿ:ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು

ಐದು ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ‘ಸೀತಾರಾಮ್ ಬಿನೋಯ್’ ಸಿನಿಮಾದ ಎರಡನೇ ಭಾಗ ಇದಾಗಿದೆ. ಸಿನಿಮಾ ನೋಡಿದವರು ಮೊದಲ ಭಾಗಕ್ಕಿಂತಲೂ ಎರಡನೇ ಭಾಗ ಚೆನ್ನಾಗಿ ಮೂಡಿ ಬಂದಿದೆ ಎಂಬ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕತೆ ಆಗಿದ್ದು, ಹೆಚ್ಚುವರಿ ದೃಶ್ಯಗಳಿಲ್ಲದೆ ಬಹಳ ಗಟ್ಟಿಯಾದ ಚಿತ್ರಕತೆಯನ್ನು ಸಿನಿಮಾ ಹೊಂದಿದೆ. ನಿರ್ದೇಶಕ, ನಿರ್ಮಾಪಕರೂ ಆಗಿರುವ ಪವನ್ ಒಡೆಯರ್ ಅವರು ಈ ಸಿನಿಮಾವನ್ನು ತಮಿಳುನಾಡಿನಲ್ಲಿ ವಿತರಣೆ ಮಾಡಿದ್ದು, ತಮಿಳುನಾಡಿನಲ್ಲಿ ಸಿನಿಮಾ ಪಡೆದುಕೊಳ್ಳುತ್ತಿರುವ ಪ್ರತಿಕ್ರಿಯೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇವಿಪ್ರಸಾದ್ ಶೆಟ್ಟಿ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ: ಜೆಡಿಎಸ್ ವ್ಯಂಗ್ಯ – Kannada News | Karnataka Debt Crisis: Siddaramaiah’s 2025 26 Budget Faces Opposition Over Rs7.6 Lakh Crore Loan

ಬೆಂಗಳೂರು, ಮಾ.3: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ರ ಆಯವ್ಯಯದ ಮೇಲೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ರಾಜ್ಯದ ಸಾಲದ ಪ್ರಮಾಣವು ಅಪಾಯಕಾರಿ ಮಟ್ಟವನ್ನು ತಲುಪುತ್ತಿದ್ದು, ಮುಂದಿನ ವರ್ಷದ ಅಂತ್ಯಕ್ಕೆ ಕರ್ನಾಟಕದ ಒಟ್ಟು ಸಾಲ 7,64,655 ಕೋಟಿ ರೂಪಾಯಿ ದಾಟಲಿದೆ ಎಂಬ ಅಂಕಿಅಂಶಗಳು ಆತಂಕ ಮೂಡಿಸಿವೆ. 2025-26ರ ಅಂತ್ಯಕ್ಕೆ ಈ ಸಾಲದ ಪರಿಣಾಮ ಜನರ ಮೇಲೆ ಬೀಳಲಿದೆ. ಪ್ರಸಕ್ತ ಆರ್ಥಿಕ ವರ್ಷವೊಂದರಲ್ಲೇ ಸರ್ಕಾರ ಸುಮಾರು 1.16 ಲಕ್ಷ ಕೋಟಿ ರೂ. ಸಾಲ ಪಡೆದಿದೆ ಎಂದು ಜೆಡಿಎಸ್​​​ ಎಕ್ಸ್​​​ನಲ್ಲಿ ಬರೆದುಕೊಂಡಿದೆ.

ವಾರ್ಷಿಕವಾಗಿ ಸುಮಾರು 50,000 ಕೋಟಿ ರೂ. ಹಣವನ್ನು ಕೇವಲ ಸಾಲದ ಬಡ್ಡಿ ಪಾವತಿಗಾಗಿಯೇ ಮೀಸಲಿಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದು ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆ ಉಂಟುಮಾಡಬಹುದು. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 50,000 ರಿಂದ 60,000 ಕೋಟಿ ರೂ. ಅಗತ್ಯವಿದ್ದು, ಇದನ್ನು ಸರಿದೂಗಿಸಲು ಸರ್ಕಾರ ಸಾಲದ ಮೊರೆ ಹೋಗುತ್ತಿದೆ ಎಂದು ಹೇಳಿದೆ.

JDS  ಹಂಚಿಕೊಂಡ ಪೋಸ್ಟ್​​ನಲ್ಲಿ ಏನಿದೆ ?

ಗ್ಯಾರಂಟಿಯಿಂದ ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞ
@siddaramaiah, ಕರ್ನಾಟಕದ ಜನರ ತಲೆಯ ಮೇಲೆ ಮತ್ತೊಂದು ಸಾಲದ ಹೊರೆ ಹೊರಿಸುವ ಬಜೆಟ್‌ ಮಂಡಿಸಲು ರೆಡಿಯಾಗಿದ್ದಾರೆ. 2025-26 ರ ಅಂತ್ಯಕ್ಕೆ ಕರ್ನಾಟಕ ರಾಜ್ಯದ ಒಟ್ಟು ಸಾಲ 7,64,655 ಕೋಟಿ ರೂ. ದಾಟಲಿದೆ. ವಾರ್ಷಿಕ 50,000 ಕೋಟಿ ರೂ. ಗಳಷ್ಟು ಬಡ್ಡಿ ಪಾವತಿ ಒತ್ತಡ, ಆದಾಯ ಹಾಗೂ ಖರ್ಚಿನ ನಡುವಿನ ಅಂತರ @INCKarnataka ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.16 ಲಕ್ಷ ಕೋಟಿ ರೂ. ಸಾಲ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಕ್ಕಾ ಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ.

ಇದನ್ನೂ ಓದಿ: ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ಡಿಸಿಎಂ ನಡೆ

ಜೆಡಿಎಸ್​​​​ ಪೋಸ್ಟ್​​;

ತೆರಿಗೆ ಸಂಗ್ರಹದ ಗುರಿ ತಲುಪಿದರೂ, ಬದ್ಧ ವೆಚ್ಚಗಳು (ಸಂಬಳ, ಪಿಂಚಣಿ, ಬಡ್ಡಿ) ಮತ್ತು ಗ್ಯಾರಂಟಿ ವೆಚ್ಚಗಳ ನಡುವಿನ ಸಮತೋಲನ ಕಾಪಾಡುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.16 ಲಕ್ಷ ಕೋಟಿ ರೂ. ಎಂದು ಹೇಳಿದೆ. ಈ ಮೂಲಕ ಸಾಲ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಕ್ಕಾ ಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ ಎಂದು ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ರಾಜ್ಯದ ಸಾಲವು ಜಿಎಸ್‌ಡಿಪಿ (GSDP) ಮಿತಿಯೊಳಗೇ ಇದೆ. ಬಡವರ ಕೈಗೆ ಹಣ ನೀಡುವ ಮೂಲಕ ಮಾರುಕಟ್ಟೆಯಲ್ಲಿ ಚಲಾವಣೆ ಹೆಚ್ಚುತ್ತಿದ್ದೇವೆ” ಎಂದು ಈ ಹಿಂದೆಯೇ ಸರ್ಕಾರ ಸಮರ್ಥಿಸಿಕೊಂಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ – Kannada News | Death Toll rises to 787 in Iran US Israel strikes Irans nuke facility

ಟೆಹ್ರಾನ್, ಮಾರ್ಚ್ 3: ಫೆಬ್ರವರಿ 28ರಂದು ಇರಾನ್​ನ ಮೇಲೆ ದಾಳಿ ಆರಂಭಿಸಿದ್ದ ಇಸ್ರೇಲ್ (Israel War) ಹಾಗೂ ಅಮೆರಿಕ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಇದಾದ ನಂತರ ಈ ಸಂಘರ್ಷ ಬೇರೆ ದೇಶಗಳಿಗೂ ಪಸರಿಸಿತು. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ ನಡೆಸಲಾರಂಭಿಸಿದೆ. ಇದೀಗ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ದಾಳಿಯ ಸಾವಿನ ಸಂಖ್ಯೆ 787ಕ್ಕೆ ಏರಿದೆ. ಸೋಮವಾರ, ಸಾವಿನ ಸಂಖ್ಯೆ 555 ಇತ್ತು. ಇಂದು ಇರಾನ್​ನ ಪರಮಾಣು ಸೌಲಭ್ಯದ ಮೇಲಿನ ದಾಳಿಯ ಬಳಿಕ ಸಾವಿನ ಸಂಖ್ಯೆ ಏರಿಕೆಯಾಗಿದೆ.

ಇರಾನ್ ಪ್ರದೇಶದ ಮೇಲೆ ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯ ನಂತರ ಸಂಘರ್ಷ ಪ್ರಾರಂಭವಾಯಿತು. ಈ ದಾಳಿಗಳು ಖಮೇನಿ ಮತ್ತು ಅವರ ಕುಟುಂಬದ ಇತರ ಸದಸ್ಯರು ಸೇರಿದಂತೆ ಉನ್ನತ ಮಿಲಿಟರಿ ಮತ್ತು ರಾಜಕೀಯ ನಾಯಕರ ಜೀವಗಳನ್ನು ಬಲಿ ಪಡೆದಿವೆ. ಇರಾನ್ ಗಲ್ಫ್‌ನಾದ್ಯಂತ ಅಮೆರಿಕದ ಮಿಲಿಟರಿ ತಾಣಗಳು ಮತ್ತು ಪ್ರಾದೇಶಿಕ ಮಿತ್ರರಾಷ್ಟ್ರಗಳ ಮೇಲೆ ಸರಣಿ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ. ಬಹ್ರೇನ್, ಇರಾಕ್, ಕುವೈತ್ ಮತ್ತು ಯುಎಇಗಳಲ್ಲಿನ 6 ಯುಎಸ್ ಮಿಲಿಟರಿ ಸ್ಥಳಗಳನ್ನು ಹೊಡೆದುರುಳಿಸಲಾಗಿದೆ ಎಂದು ಸ್ಯಾಟಲೈಟ್ ಚಿತ್ರಗಳು ಸೂಚಿಸುತ್ತವೆ.

ಇದನ್ನೂ ಓದಿ: ಇರಾನ್ ಮೇಲೆ 4-5 ವಾರ ದಾಳಿ ಮುಂದುವರೆಯಲಿದೆ; ಟ್ರಂಪ್ ಘೋಷಣೆ

ಇರಾನ್‌ನ ದಾಳಿಗಳು ಇತರ ಗಲ್ಫ್ ರಾಷ್ಟ್ರಗಳಿಗೂ ವಿಸ್ತರಿಸಿದ್ದು, ಕ್ಷಿಪಣಿಗಳು ಮತ್ತು ಡ್ರೋನ್‌ಗಳು ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಅದರಾಚೆಗಿನ ನಾಗರಿಕ ಮೂಲಸೌಕರ್ಯ, ವಿಮಾನ ನಿಲ್ದಾಣಗಳು ಮತ್ತು ವಾಣಿಜ್ಯ ಕೇಂದ್ರಗಳನ್ನು ಗುರಿಯಾಗಿಸಿಕೊಂಡಿವೆ. ಸ್ಪೋಟಕಗಳಿಂದ ಭಗ್ನಾವಶೇಷಗಳು ದುಬೈ ಮತ್ತು ಅಬುಧಾಬಿಯಲ್ಲಿ ಸಾವುನೋವುಗಳು ಮತ್ತು ಆಸ್ತಿ ಹಾನಿಯನ್ನುಂಟುಮಾಡಿವೆ. ಹಲವಾರು ಗಲ್ಫ್ ರಾಷ್ಟ್ರಗಳು ತಮ್ಮ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿವೆ.

ಇದನ್ನೂ ಓದಿ: ರಿಯಾದ್​​ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ

ಯುಎಸ್, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್‌ನ ಭೂಗತ ನಟಾಂಜ್ ಪರಮಾಣು ಸೌಲಭ್ಯದಲ್ಲಿ ಹಾನಿ ಸಂಭವಿಸಿರುವುದು ದೃಢಪಟ್ಟಿದೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ನಟಾಂಜ್ ಸ್ಥಳದಲ್ಲಿನ ಪ್ರವೇಶ ಕಟ್ಟಡಗಳು ಹಾನಿಗೊಳಗಾಗಿವೆ. ಈ ಹಿಂದೆ, ಇರಾನಿನ ಯಾವುದೇ ಪರಮಾಣು ತಾಣಗಳ ಮೇಲೆ ದಾಳಿ ನಡೆದಿಲ್ಲ ಎಂದು ಹೇಳಲಾಗಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 5:12 pm, Tue, 3 March 26

Source link

IPL 2026: ಬೆಂಗಳೂರಿನಲ್ಲಿ ಆಡಲು ಒಪ್ಪಿದ ಆರ್​ಸಿಬಿ; ಚಿನ್ನಸ್ವಾಮಿಯಲ್ಲೇ ಉದ್ಘಾಟನಾ ಪಂದ್ಯ – Kannada News | RCB’s 2026 IPL Journey Starts in Bengaluru: Home Games and KKR Opening Clash!

2026 ರ ಐಪಿಎಲ್ ಸಮೀಪಿಸುತ್ತಿರುವ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೆಂಗಳೂರಿನಲ್ಲಿ ತನ್ನ ತವರು ಪಂದ್ಯಗಳನ್ನು (5 ಪಂದ್ಯಗಳು) ಆಡಲು ಒಪ್ಪಿಗೆ ಸೂಚಿಸಿದೆ. ಇದರ ಜೊತೆಗೆ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವು ಕೂಡ ಬೆಂಗಳೂರಿನಲ್ಲೇ ನಡೆಯಲಿದೆ. ವಾಸ್ತವವಾಗಿ ಕಳೆದ ಆವೃತ್ತಿಯ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯುವುದು ವಾಡಿಕೆ. ಅದರಂತೆ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯವನ್ನು ಆಡಬೇಕಿತ್ತು. ಆದರೆ ಈ ಬಾರಿ ಹಾಲಿ ಚಾಂಪಿಯನ್ ಆರ್​ಸಿಬಿ, ಕೆಕೆಆರ್ ತಂಡವನ್ನು ಉದ್ಘಾಟನಾ ಪಂದ್ಯದಲ್ಲಿ ಎದುರಿಸಲಿದೆ ಎಂದು ವರದಿಯಾಗಿದೆ.

Published On – 5:03 pm, Tue, 3 March 26

Source link

ಕಿವಿ ಕೇಳಿಸದಿರುವುದು ಕೇವಲ ವೃದ್ಧಾಪ್ಯದ ಸಮಸ್ಯೆಯಲ್ಲ; ಚಿಕ್ಕ ವಯಸ್ಸಿನಲ್ಲಿ ಹೀಗಾಗುವುದಕ್ಕೆ ಕಾರಣವೇನು? – Kannada News | Causes of Hearing Loss in Your 40s

ಸಾಮಾನ್ಯವಾಗಿ ಕಿವಿ (Ear) ಕೇಳಿಸದಿರುವುದು ಅಥವಾ ಕೇಳುವ ಸಾಮರ್ಥ್ಯ ಕಡಿಮೆಯಾಗುವುದು ವೃದ್ಧಾಪ್ಯದ ಸಮಯದಲ್ಲಿ ಎಂಬುದು ಹಲವರ ಭಾವನೆ. ಆದರೆ ಈಗ ಹಾಗಲ್ಲ ಚಿಕ್ಕ ವಯಸ್ಸಿನಲ್ಲಿಯೇ ಈ ರೀತಿಯ ಸಮಸ್ಯೆಗಳು ಕಂಡುಬರುತ್ತಿದೆ. ಇದಕ್ಕೆ ಕಾರಣಗಳು ಹಲವಾರಿದ್ದರೂ ಕೂಡ ಇಯರ್‌ಫೋನ್ ಅಥವಾ ಹೆಡ್‌ಫೋನ್‌ನಲ್ಲಿ ಹೆಚ್ಚು ವಾಲ್ಯೂಮ್ ಇಟ್ಟು ಸಂಗೀತ ಅಥವಾ ಇತರೆ ವಿಷಯಗಳನ್ನು ಕೇಳುವ ಅಭ್ಯಾಸ, ದಿನಪೂರ್ತಿ ಇಯರ್‌ಫೋನ್ ಬಳಸುವುದು. ಕೆಲಸಕ್ಕಾಗಿ ಬಳಕೆ ಮಾಡುತ್ತಿದ್ದರೂ ಕೂಡ ಹೆಚ್ಚಿನ ವಾಲ್ಯೂಮ್ ಇಟ್ಟು ಕೇಳಿಸಿಕೊಳ್ಳುವುದು ಹೀಗೆ ನಾನಾ ಅಭ್ಯಾಸಗಳಿಂದ ಸಣ್ಣ ವಯಸ್ಸಿನಲ್ಲಿಯೇ ಕಿವುಡುತನ ಹೆಚ್ಚಾಗುತ್ತಿದೆ. ಈ ವಿಷಯವಾಗಿ ಎಐಐಎಂಎಸ್‌ನ ಇಎನ್‌ಟಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪೂನಂ ಸಾಗರ್ ಅವರು ಕೆಲವು ರೀತಿಯ ಮಾಹಿತಿ ಹಂಚಿಕೊಂಡಿದ್ದು, ಚಿಕ್ಕ ವಯಸ್ಸಿನಲ್ಲಿ ಈ ರೀತಿಯ ಸಮಸ್ಯೆ ಹೆಚ್ಚುತ್ತಿರುವುದಕ್ಕೆ ಕಾರಣವೇನು, ನಮಗೆ ಸರಿಯಾಗಿ ಕೇಳಿಸುತ್ತಿಲ್ಲ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. ಈ ಕುರಿತು ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಹಲವು ಅಧ್ಯಯನಗಳ ಪ್ರಕಾರ, ಮೊಬೈಲ್ ಅಥವಾ ಇತರ ವೈಯಕ್ತಿಕ ಸಾಧನಗಳ ವಾಲ್ಯೂಮ್ ಅನ್ನು 60 ಶೇಕಡಕ್ಕಿಂತ ಹೆಚ್ಚು ಇಟ್ಟುಕೊಂಡರೆ ಕಿವುಡುತನದ ಅಪಾಯ ಹೆಚ್ಚುತ್ತದೆ. ಹಾಗಾಗಿ ಈ ರೀತಿಯ ಸಾಧನಗಳನ್ನು ಬಳಸುವಾಗ ಎಚ್ಚರಿಕೆ ಅಗತ್ಯವಿರುತ್ತದೆ. ಕಿವಿಯ ಕೇಳುವ ಸಾಮರ್ಥ್ಯಕ್ಕೆ ಹಾನಿಯಾಗದಂತೆ ನೋಡಿಕೊಳ್ಳಲು ಕಡಿಮೆ ವಾಲ್ಯೂಮ್ ನಲ್ಲಿ ಮಾತ್ರ ಕೇಳಬೇಕು. ಜೊತೆಗೆ ಸುಮಾರು 60 ನಿಮಿಷಗಳ ಕಾಲ ಕೇಳಿದ ನಂತರ ಕಡ್ಡಾಯವಾಗಿ ಒಂದು ಸಣ್ಣ ವಿರಾಮ ತೆಗೆದುಕೊಳ್ಳಬೇಕು. ಈ 60- 60 ನಿಯಮವನ್ನು ಪಾಲಿಸುವವರಿಗೆ ಕಿವಿ ಸಂಬಂಧಿತ ಸಮಸ್ಯೆಗಳ ಅಪಾಯ ಕಡಿಮೆ ಇರುತ್ತದೆ. ಶಬ್ದದ ಮಟ್ಟ ಹೆಚ್ಚಾದಷ್ಟೂ ಕೇಳುವ ಸಾಮರ್ಥ್ಯ ಕಡಿಮೆಯಾಗುವ ಅಪಾಯ ಹೆಚ್ಚುತ್ತದೆ. ಆದ್ದರಿಂದ 60 ನಿಮಿಷಗಳ ನಂತರ ಕನಿಷ್ಠ ಕೆಲವು ಸಮಯ ವಿರಾಮ ತೆಗೆದುಕೊಳ್ಳಬೇಕು. ನಿರಂತರವಾಗಿ ಹೆಡ್‌ಫೋನ್ ಅಥವಾ ಇಯರ್ ಫೋನ್ ಬಳಸುವುದರಿಂದ ಕಿವಿಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಕಡಿಮೆ ವಯಸ್ಸಿವರಲ್ಲಿ ಹೆಚ್ಚುತ್ತಿರುವ ಸಮಸ್ಯೆ:

ಸಾಮಾನ್ಯವಾಗಿ 50 ವರ್ಷಗಳ ನಂತರ ಕೆಲವರಿಗೆ ಕಿವುಡುತನ ಅಥವಾ ಕೇಳಿಸಿಕೊಳ್ಳುವ ಸಾಮರ್ಥ್ಯದಲ್ಲಿ ಕುಸಿತ ಕಾಣಿಸಿಕೊಳ್ಳುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ 40 ವರ್ಷ ದಾಟುತ್ತಿದ್ದಂತೆಯೇ ಹಿಯರಿಂಗ್ ಪವರ್ ಕಡಿಮೆಯಾಗುತ್ತಿರುವುದು ಗಮನಕ್ಕೆ ಬರುತ್ತಿದೆ. ಇದರ ಪ್ರಮುಖ ಕಾರಣಗಳಲ್ಲಿ ವೈಯಕ್ತಿಕ ಆಡಿಯೋ ಸಾಧನಗಳ ಹೆಚ್ಚಿನ ಶಬ್ದ ಬಳಕೆ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಕಿವಿಯ ಸೋಂಕು ಹೆಚ್ಚಾಗುವುದಕ್ಕೆ ಈ ಅಂಶಗಳೇ ಕಾರಣ! ಇದನ್ನು ತಡೆಯಲು ಚಳಿಗಾಲದಲ್ಲಿ ಈ ಸಲಹೆಗಳನ್ನು ಪಾಲಿಸಿ

ಕೇಳಿಸಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತಿರುವುದರ ಲಕ್ಷಣಗಳು:

  • ಸಾಮಾನ್ಯ ಸಂಭಾಷಣೆ ಸರಿಯಾಗಿ ಅರ್ಥವಾಗದಿರುವುದು.
  • ಜನಸಂದಣಿ ಅಥವಾ ಗದ್ದಲದ ಸ್ಥಳಗಳಲ್ಲಿ ಮಾತು ಅರ್ಥಮಾಡಿಕೊಳ್ಳಲು ಕಷ್ಟವಾಗುವುದು.
  • ಫೋನ್‌ನಲ್ಲಿ ಮಾತನಾಡುವಾಗ ಶಬ್ದ ಸ್ಪಷ್ಟವಾಗಿ ಕೇಳಿಸದಿರುವುದು ಅಥವಾ ಪದಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುವುದು.
  • ಕಿವಿಯಲ್ಲಿ ಗಂಟೆ ಅಥವಾ ಸೀಟಿ ಶಬ್ದ ಕೇಳಿಸುವುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link