ವಿಧಾನ ಸಭೆಯಲ್ಲಿ ದೋಸ್ತಿ, ಹೊರಗಡೆ ಕುಸ್ತಿ: ಸಿದ್ದರಾಮಯ್ಯ ಮತ್ತು ಅಶೋಕ್ ನಡುವೆ ಕಳ್ಳೆತ್ತು, ಕುಂಟೆತ್ತು ಕಾಳಗ
ಬೆಂಗಳೂರು, ಮಾರ್ಚ್ 31: ವಿಧಾನಸಭೆ ಬಜೆಟ್ ಅಧಿವೇಶನದ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ನಡುವೆ ಹೇಳಿಕೊಳ್ಳುವಂತಹ ವಾಗ್ಯುದ್ಧವೇನೂ ನಡೆದಿರಲಿಲ್ಲ. ಇಬ್ಬರ ಮಾತುಗಳೂ ಕೊಂಚ ಮಟ್ಟಿಗೆ ಮೃದು ಎಂಬಂತೆಯೇ ಭಾಸವಾಗಿತ್ತು. ಆದರೆ ಇದೀಗ ಉಪ ಚುನಾವಣೆ ಅಖಾಡದಲ್ಲಿ ಇವರಿಬ್ಬರ ನಡುವಿನ ಮಾತಿನ ಸಮರ ಬಹಳ ಜೋರಾಗಿಯೇ ನಡೆಯುತ್ತಿದೆ. ನಿನ್ನೆ ಬಾಗಲಕೋಟೆಗೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಸಿಎಂ ಸಿದ್ದರಾಮಯ್ಯ 2028ಕ್ಕೂ ನಾವೇ ಗೆಲ್ತೇವೆ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ…