‘ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ’: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ದಾವಣಗೆರೆ, ಮಾ.2: ಇರಾನ್ ದೇಶದ ಪೈಲ್ವಾನ್ ಮಿರ್ಜಾ ಅವರು ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ. ಇತ್ತ ಇರಾನ್-ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿದ್ದರೂ, ಪೂರ್ವ ನಿಗದಿಯಂತೆ ದಾವಣಗೆರೆಯ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುವ ಮೂಲಕ ಮಿರ್ಜಾ ಅವರು ಅದ್ಭುತ ಕ್ರೀಡಾ ಪ್ರೇಮ ಮೆರೆದಿದ್ದಾರೆ. ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರದ ಪುಣೆ ಮೂಲದ ಪೈಲ್ವಾನ್ ರವಿರಾಜ್ ಮತ್ತು ಇರಾನ್‌ನ ಮಿರ್ಜಾ ಮುಖಾಮುಖಿಯಾಗಿದ್ದರು. ಬರೋಬ್ಬರಿ 43 ನಿಮಿಷಗಳ ಕಾಲ ನಡೆದ ಈ ರೋಚಕ ಹೋರಾಟದಲ್ಲಿ ಇಬ್ಬರು ಪೈಲ್ವಾನರು…