All posts by nagaraj11081993

ನೋವಿನ ನಡುವೆಯೂ ರಿಂಕು ಸಿಂಗ್ ಆಗಮನ – Kannada News | T20 World Cup 2026: Rinku Singh To Rejoin Team India In Kolkata

ಟೀಮ್ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ ಅವರು ಇಂದು (ಫೆ.28) ಕೋಲ್ಕತ್ತಾದಲ್ಲಿ ಭಾರತ ತಂಡವನ್ನು ಮತ್ತೆ ಕೂಡಿಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೂ ಮುನ್ನ ಅವರು ಟೀಮ್ ಇಂಡಿಯಾಗೆ ಮರಳಲಿದ್ದಾರೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

ರಿಂಕು ಸಿಂಗ್ ಅವರ ತಂದೆ ಖಾನ್‌ಚಂದ್ ಸಿಂಗ್ (54 ವರ್ಷ) ಅವರು ಲಿವರ್ ಕ್ಯಾನ್ಸರ್‌ನಿಂದಾಗಿ ಫೆಬ್ರವರಿ 27, ಶುಕ್ರವಾರ ಮುಂಜಾನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಹೀಗಾಗಿ ಅವರು ಶುಕ್ರವಾರವೇ ಅಲಿಗಢಕ್ಕೆ ತೆರಳಿ ತಮ್ಮ ತಂದೆಯ ಅಂತಿಮ ವಿಧಿವಿಧಾನಗಳನ್ನು ಪೂರೈಸಿದ್ದರು.

ತಂದೆಯ ಅಗಲಿಕೆಯ ನೋವಿನ ನಡುವೆಯೂ ರಿಂಕು ಸಿಂಗ್ ಭಾರತದ ಪರ ಆಡಲು ಮನಸ್ಸು ಮಾಡಿದ್ದಾರೆ. ಅದರಂತೆ ಇಂದು (ಫೆಬ್ರವರಿ 28) ಕೋಲ್ಕತ್ತಾಗೆ ತಲುಪಲಿದ್ದು, ಕೂಡಲೇ ಈಡನ್ ಗಾರ್ಡನ್ಸ್‌ನಲ್ಲಿ ತಂಡದ ಅಭ್ಯಾಸದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಮಾರ್ಚ್ 1, 2026 ರಂದು ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡವು ಸೆಮಿಫೈನಲ್​ಗೇರಲಿದೆ.

ರಿಂಕು ಆಗಮನ ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್:

ರಿಂಕು ಸಿಂಗ್ ಅವರ ವೈಯಕ್ತಿಕ ನಷ್ಟದ ಹೊರತಾಗಿಯೂ, ಟೂರ್ನಿಯ ಅಂತಿಮ ಹಂತದಲ್ಲಿ ಅವರ ಫಿನಿಶಿಂಗ್ ಸಾಮರ್ಥ್ಯವು ಭಾರತ ತಂಡಕ್ಕೆ ಬಹಳ ಮುಖ್ಯವಾಗಿದೆ. ಅದರಲ್ಲೂ ಭಾರತ ತಂಡವು ಕೊಲ್ಕತ್ತಾದಲ್ಲಿ ಪಂದ್ಯವಾಡುತ್ತಿರುವುದರಿಂದ ರಿಂಕು ಸಿಂಗ್ ಆಗಮನವು ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

ಏಕೆಂದರೆ ಐಪಿಎಲ್​ನಲ್ಲಿ  ಕಳೆದ ಕೆಲ ವರ್ಷಗಳಿಂದ ರಿಂಕು ಸಿಂಗ್ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಕೊಲ್ಕತ್ತಾ ಪಿಚ್ ರಿಂಕು ಪಾಲಿಗೆ ತವರು ಮೈದಾನ ಇದ್ದಂತೆ.

ಇದೀಗ ನಿರ್ಣಾಯಕ ಪಂದ್ಯಕ್ಕೂ ಮುನ್ನ ಅವರು ಭಾರತ ತಂಡವನ್ನು ಕೂಡಿಕೊಳ್ಳಲು ಮನಸ್ಸು ಮಾಡಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಕ್ಕೂ ಮುನ್ನ ರಿಂಕು ಸಿಂಗ್ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ಇದಾಗ್ಯೂ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ನೀಡಲಿದ್ದಾರಾ ಎಂಬುದೇ ಈಗ ಕುತೂಹಲ.

ಇದನ್ನೂ ಓದಿ: 12.4, 13.2, 13.5: ಹೀಗಿದೆ ಪಾಕಿಸ್ತಾನ್ ತಂಡದ ಸೆಮಿಫೈನಲ್ ಲೆಕ್ಕಾಚಾರ

ಏಕೆಂದರೆ ಕಳೆದ ಮ್ಯಾಚ್​ನಲ್ಲಿ ರಿಂಕು ಸಿಂಗ್ ಸ್ಥಾನದಲ್ಲಿ ಫಿನಿಶರ್ ಆಗಿ ತಿಲಕ್ ವರ್ಮಾ ಕಣಕ್ಕಿಳಿದಿದ್ದರು. ಅಲ್ಲದೆ ಕೇವಲ 16 ಎಸೆತಗಳಲ್ಲಿ 44 ರನ್ ಬಾರಿಸಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರಿಂಕು ಸಿಂಗ್​ಗೆ ಅವಕಾಶ ಸಿಗಲಿದೆಯಾ ಎಂಬುದೇ ಪ್ರಶ್ನೆ.

Published On – 9:04 am, Sat, 28 February 26

Source link

ದಳಪತಿ ವಿಜಯ್​​ಗೆ ನಟಿಯ ಜೊತೆ ಅಫೇರ್; ತ್ರಿಶಾ ಮೇಲೆ ಗೂಬೆ ಕೂರಿಸಿದ ನೆಟ್ಟಿಗರು – Kannada News | Vijay Sangeetha Divorce: Affair Allegations Emerge, Trisha Speculated as Other Woman

ದಳಪತಿ ವಿಜಯ್ (Vijay) ಅವರ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಿಜಯ್​​ಗೆ ಬೇರೆ ನಟಿಯ ಜೊತೆ ಸಂಬಂಧ ಇದೆ ಎಂದು ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ವಿಜಯ್ ಹಾಗೂ ಸಂಗೀತಾ ಹಲವು ವರ್ಷಗಳಿಂದ ದೂರವೇ ವಾಸವಾಗಿದ್ದಾರೆ ಎನ್ನಲಾಗಿದೆ. ಈಗ ಅವರು ಏಕಾಏಕಿ ಕೌಟುಂಬಿಕ ನ್ಯಾಯಲಕ್ಕೆ ಅರ್ಜಿ ಸಲ್ಲಿಕೆ ಮಾಡಿ ಡಿವೋರ್ಸ್ ಕೇಳಿದ್ದಾರೆ. ಈ ಮಧ್ಯೆ ನಟಿ ತ್ರಿಶಾ ಮೇಲೆ ಎಲ್ಲರೂ ಅನುಮಾನ ಹೊರಹಾಕುತ್ತಿದ್ದಾರೆ.

ವಿಜಯ್ ಹಾಗೂ ಸಂಗೀತಾ ಅವರು 1999ರ ಆಗಸ್ಟ್ 25ರಂದು ವಿವಾಹ ಆದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಜೇಸನ್ ಸಂಜಯ್ ಹಾಗೂ ದಿವ್ಯಾ ಶಾಶಾ ಎಂಬುದು ಮಕ್ಕಳ ಹೆಸರು. ಸಂಗೀತಾ ಅವರು ಲಂಡನ್ ಮೂಲದ ಉದ್ಯಮಿಯ ಮಗಳು. 1996ರಲ್ಲಿ ರಿಲೀಸ್ ಆದ ವಿಜಯ್ ನಟನೆಯ ‘ಪೂವೆ ಉನಕ್ಕಗ’ ಸಿನಿಮಾ ನೋಡಿ ಸಂಗೀತಾ ಇಂಪ್ರೆಸ್ ಆದರು. ಅವರು ಲಂಡನ್​ ಅಲ್ಲಿ ಇದ್ದುಕೊಂಡೇ ವಿಜಯ್​​ಗೆ ಪತ್ರಗಳನ್ನು ಬರೆಯುತ್ತಿದ್ದರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಈಗ ವಿಜಯ್ ಹಾಗೂ ಸಂಗೀತಾ ಸಂಬಂಧ ವಿಚ್ಛೇದನಕ್ಕೆ ಬಂದು ನಿಂತಿದೆ.

ಬೇರೆ ಆಗುತ್ತಿರುವುದಕ್ಕೆ ಕಾರಣ ಏನು ಎಂಬುದನ್ನು ಸಂಗೀತಾ ಅವರೇ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ವಿಜಯ್​​ಗೆ ನಟಿಯ ಜೊತೆ ಅನೈತಿಕ ಸಂಬಂಧ ಇದೆ ಎಂದು ಅವರು ಆರೋಪಿಸಿದ್ದಾರೆ. ಇದು ತ್ರಿಶಾ ಇರಬಹುದು ಎಂದು ಎಲ್ಲರೂ ಊಹಿಸುತ್ತಾ ಇದ್ದಾರೆ. ಈ ಬಗ್ಗೆ ಸಾಕಷ್ಟು ಮೀಮ್​​ಗಳು ಹರಿದಾಡಿವೆ.

ಇದನ್ನೂ ಓದಿ: ಡೇಟಿಂಗ್ ವದಂತಿ; ಎಲ್ಲರಿಗೂ ಗೊಂದಲ ಮೂಡಿಸಿದ ತ್ರಿಶಾ ಕೃಷ್ಣನ್

ವಿಜಯ್ ಹಾಗೂ ತ್ರಿಶಾ ಒಟ್ಟಿಗೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರ ಕೆಮಿಸ್ಟ್ರಿ ತೆರೆಮೇಲೆ ಗಮನ ಸೆಳೆದಿದೆ. ಇತ್ತೀಚಿನ ವರ್ಷಗಳಲ್ಲಿ ರಿಲೀಸ್ ಆದ ‘ಲಿಯೋ’ ಸಿನಿಮಾದಲ್ಲೂ ವಿಜಯ್ ಹಾಗೂ ತ್ರಿಶಾ ಒಟ್ಟಾಗಿ ನಟಿಸಿದ್ದಾರೆ. ಇವರ ಗೆಳೆತನವನ್ನು ಕೆಲವರು ತಪ್ಪಾಗಿ ಭಾವಿಸಿದ್ದಾರೆ. ಈ ಕಾರಣದಿಂದಲೇ ಸಂಗೀತಾ ಆರೋಪದ ಬಳಿಕ ಎಲ್ಲರೂ ತ್ರಿಶಾ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

12.4, 13.2, 13.5: ಹೀಗಿದೆ ಪಾಕಿಸ್ತಾನ್ ತಂಡದ ಸೆಮಿಫೈನಲ್ ಲೆಕ್ಕಾಚಾರ – Kannada News | Pakistan’s semi final qualification scenario

T20 World Cup 2026: ಟಿ20 ವಿಶ್ವಕಪ್​ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಪಾಕ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡ ಸೆಮಿಫೈನಲ್​ಗೇರಬಹುದು. ಆದರೆ ಈ ಗೆಲುವಿನೊಂದಿಗೆ ಪಾಕ್ ಪಡೆ ನೆಟ್ ರನ್ ರೇಟ್ ಲೆಕ್ಕಾಚಾರವನ್ನು ಸಹ ಮಾಡಬೇಕಿದೆ.

ಅಂದರೆ ಗ್ರೂಪ್-2 ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದೆ. ಇತ್ತ ದ್ವಿತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್​ಗೇರಬೇಕಿದ್ದರೆ ಪಾಕಿಸ್ತಾನ್ ತಂಡವು ಶ್ರೀಲಂಕಾ ವಿರುದ್ಧ ಭಾರೀ ಅಂತರದಿಂದ ಗೆಲ್ಲಬೇಕು.

ಗ್ರೂಪ್ 2 ಅಂಕಪಟ್ಟಿ:

  • ಇಂಗ್ಲೆಂಡ್: 6 ಅಂಕ (ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ).
  • ನ್ಯೂಝಿಲೆಂಡ್: 3 ಅಂಕ (ನೆಟ್ ರನ್ ರೇಟ್ +1.390).
  • ಪಾಕಿಸ್ತಾನ್: 1 ಅಂಕ (ನೆಟ್ ರನ್ ರೇಟ್ -0.461).
  • ಶ್ರೀಲಂಕಾ: 0 ಅಂಕ (ಟೂರ್ನಿಯಿಂದ ಹೊರಬಿದ್ದಿದೆ).

ಪಾಕಿಸ್ತಾನ್ ತಂಡವು ಭರ್ಜರಿ ಗೆಲುವಿನೊಂದಿಗೆ ನ್ಯೂಝಿಲೆಂಡ್ ತಂಡ ನೆಟ್ ರನ್ ರೇಟ್ ಅನ್ನು ಹಿಂದಿಕ್ಕಿದರೆ ಮಾತ್ರ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಇದಕ್ಕಾಗಿ ಪಾಕಿಸ್ತಾನ್ ತಂಡ ಇಂದಿನ ಮ್ಯಾಚ್​ನಲ್ಲಿ ಕೆಳಗೆ ನೀಡಲಾದ ಅಂತರದಲ್ಲಿ ಗೆಲ್ಲಲೇಬೇಕು.

ಮೊದಲು ಬ್ಯಾಟ್ ಮಾಡಿದರೆ:

ಪಾಕಿಸ್ತಾನ್ ತಂಡವು ಟಾಸ್ ಗೆದ್ದು ಅಥವಾ ಸೋತು ಮೊದಲು ಬ್ಯಾಟ್ ಮಾಡಿದರೆ ಈ ಲೆಕ್ಕಾಚಾರದಲ್ಲಿ ರನ್​ಗಳಿಸಬೇಕು. ಹಾಗೆಯೇ ಶ್ರೀಲಂಕಾ ತಂಡವನ್ನು ಈ ಅಂತರದಿಂದ ಸೋಲಿಸಬೇಕು.

  • ಪಾಕ್ ತಂಡ ಮೊದಲು ಬ್ಯಾಟ್ ಮಾಡಿ 200 ರನ್​ಗಳಿಸಿದರೆ, ಶ್ರೀಲಂಕಾ ತಂಡವನ್ನು 135 ರನ್​ಗಳ ಒಳಗೆ ಆಲೌಟ್ ಮಾಡಬೇಕು ಇಲ್ಲಾ ನಿಯಂತ್ರಿಸಬೇಕು.
  • ಪಾಕಿಸ್ತಾನ್ ಮೊದಲು ಬ್ಯಾಟಿಂಗ್ ಮಾಡಿ 180 ರನ್​ ಕಲೆಹಾಕಿದರೆ, ಲಂಕಾ ಪಡೆಯನ್ನು 115 ರನ್​ಗಳಿಗೆ ನಿಯಂತ್ರಿಸುವುದು ಅನಿವಾರ್ಯ.
  • ಪಾಕ್ ತಂಡ 150 ರನ್​ ಗಳಿಸಿದರೆ, ಶ್ರೀಲಂಕಾ ತಂಡವನ್ನು ಕೇವಲ 85 ರನ್ ಅಥವಾ ಅದಕ್ಕಿಂತ ಕಡಿಮೆ ಮೊತ್ತಕ್ಕೆ ಕಟ್ಟಿಹಾಕಬೇಕು.

ಅಂದರೆ ಇಲ್ಲಿ ಪಾಕಿಸ್ತಾನ್ ತಂಡದ ಗೆಲುವಿನ ಅಂತರ ಕನಿಷ್ಠ 64 ರನ್​ಗಿಂತ ಹೆಚ್ಚಿರಬೇಕು. 65 ರನ್​ಗಿಂತ ಕಡಿಮೆ ರನ್​ಗಳ ಅಂತರದಿಂದ ಪಾಕ್ ತಂಡ ಗೆದ್ದರೆ ಸೆಮಿಫೈನಲ್​ಗೇರಲು ಸಾಧ್ಯವಾಗುವುದಿಲ್ಲ.

ಚೇಸಿಂಗ್ ಮಾಡಿದರೆ:

ಪಾಕಿಸ್ತಾನ್ ತಂಡವು ಮೊದಲು ಬೌಲಿಂಗ್ ಮಾಡಿ ಆ ಬಳಿಕ ಶ್ರೀಲಂಕಾ ತಂಡ ನೀಡುವ ಗುರಿಯನ್ನು ಚೇಸಿಂಗ್ ಮಾಡಿದರೆ ನಿರ್ದಿಷ್ಟ ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು. ಅದರಂತೆ ಪಾಕ್ ತಂಡ ಚೇಸಿಂಗ್ ಲೆಕ್ಕಾಚಾರ ಈ ಕೆಳಗಿನಂತಿದೆ…

  • ಶ್ರೀಲಂಕಾ ತಂಡವು 200 ರನ್​ಗಳಿಸಿದರೆ, ಪಾಕಿಸ್ತಾನ್ ತಂಡವು 201 ರನ್​ಗಳ ಗುರಿಯನ್ನು 13.5 ಓವರ್​ಗಳಲ್ಲಿ ಚೇಸ್ ಮಾಡಬೇಕು.
  • ಶ್ರೀಲಂಕಾ ಮೊದಲು ಬ್ಯಾಟ್ ಮಾಡಿ 181 ರನ್​ಗಳ ಗುರಿ ನೀಡಿದರೆ, ಪಾಕಿಸ್ತಾನ್ ತಂಡವು ಈ ಗುರಿಯನ್ನು 13.4 ಓವರ್​ಗಳಲ್ಲಿ ಬೆನ್ನತ್ತಬೇಕಾಗುತ್ತದೆ.
  • ಶ್ರೀಲಂಕಾ ತಂಡವು 150 ರನ್​ಗಳಿಸಿದರೆ, ಪಾಕಿಸ್ತಾನ್ ತಂಡವು 12.4 ಓವರ್​ಗಳಲ್ಲಿ 151 ರನ್​ಗಳಿಸಲೇಬೇಕು.

ಅಂದರೆ ಶ್ರೀಲಂಕಾ ತಂಡವ ಮೊದಲು ಬ್ಯಾಟಿಂಗ್ ಮಾಡಿ 160 ಕ್ಕಿಂತ ಅಧಿಕ ರನ್​ಗಳ ಗುರಿ ನೀಡಿದರೆ ಪಾಕಿಸ್ತಾನ್ ತಂಡವು 38+ ಎಸೆತಗಳನ್ನು ಬಾಕಿಯಿರಿಸಿಯೇ ಚೇಸಿಂಗ್ ಮಾಡಬೇಕಾಗುತ್ತದೆ.

ಇನ್ನು ಪಾಕಿಸ್ತಾನ್ ತಂಡವು ಮೊದಲು ಬ್ಯಾಟ್ ಮಾಡಿ 160 ಕ್ಕಿಂತ ಅಧಿಕ ರನ್ ಕಲೆಹಾಕಿದರೆ, ಶ್ರೀಲಂಕಾ ತಂಡವನ್ನು 64+ ರನ್​ಗಳ ಅಂತರದಿಂದ ಸೋಲಿಸುವುದು ಅನಿವಾರ್ಯ.

ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಟಾಸ್ ಗೆದ್ದರೆ ಚೇಸಿಂಗ್ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಶ್ರೀಲಂಕಾ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿ ನಿರ್ದಿಷ್ಟ ಓವರ್​ಗಳಲ್ಲಿ ಲಂಕಾ ತಂಡ ನೀಡುವ ಗುರಿಯನ್ನು ಬೆನ್ನತ್ತಲು ಪ್ಲ್ಯಾನ್ ರೂಪಿಸಲಿದೆ.

ಒಂದು ವೇಳೆ ಪಾಕಿಸ್ತಾನ್ ತಂಡವು ಶ್ರೀಲಂಕಾ ನೀಡುವ ಗುರಿಯನ್ನು (ಸುಮಾರು 200 ರನ್ಸ್​) ಬೆನ್ನತ್ತಲು 14 ಓವರ್​ಗಳನ್ನು ತೆಗೆದುಕೊಂಡರೆ ನ್ಯೂಝಿಲೆಂಡ್ ತಂಡವು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಹಾಗೆಯೇ 64 ಕ್ಕಿಂತ ಕಡಿಮೆ ರನ್​ಗಳ ಅಂತರದಿಂದ ಗೆದ್ದರೂ ಸಹ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್

ಹೀಗಾಗಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಪ್ರತಿ ಹಂತದಲ್ಲೂ ನೆಟ್ ರನ್ ರೇಟ್​ ಅನ್ನು ಲೆಕ್ಕಾಚಾರ ಮಾಡಲಿದೆ. ಈ ಮೂಲಕ ಪಾಕ್ ಪಡೆ ಲಂಕಾ ತಂಡಕ್ಕೆ ಸೋಲುಣಿಸಿ ಸೆಮಿಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

Published On – 8:31 am, Sat, 28 February 26

Source link

ಸೆಮಿಫೈನಲ್​ಗೂ ಮುನ್ನ ಭಾರತಕ್ಕೆ ‘ಫೈನಲ್’ ಮ್ಯಾಚ್ – Kannada News | India vs West indies Must Win Game in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್​ಗೇರಿದರೆ, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಎಲಿಮಿನೇಟ್ ಆಗಿದೆ. ಇನ್ನು ಭಾರತ, ಪಾಕಿಸ್ತಾನ್, ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ ರೇಸ್​ನಲ್ಲಿದೆ. ಆದರೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ.

‘ಫೈನಲ್’ ಮ್ಯಾಚ್

ಈ ಎರಡು ಪಂದ್ಯಗಳಲ್ಲಿ 4 ತಂಡಗಳ ಸೆಮಿಫೈನಲ್ ಭವಿಷ್ಯ ನಿರ್ಧಾರವಾಗಲಿದೆ. ಅದರಲ್ಲೂ ಮಾರ್ಚ್ 1 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್​ ತಂಡಗಳು ಮುಖಾಮುಖಿಯಾಗಲಿದೆ.

ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಅಂದರೆ ಸೂಪರ್-8 ಸುತ್ತಿನ ಕೊನೆಯ ಪಂದ್ಯ​ ಭಾರತ ಮತ್ತು ವೆಸ್ಟ್ ಇಂಡೀಸ್​ ತಂಡಗಳಿಗೆ  ‘ಫೈನಲ್’ ಮ್ಯಾಚ್​ ಆಗಿ ಮಾರ್ಪಟ್ಟಿದೆ. ಇದರಲ್ಲಿ ಗೆದ್ದ ತಂಡವು ಸೆಮಿಫೈನಲ್​ಗೇರುವುದರಿಂದ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಪಾಕಿಸ್ತಾನ್/ನ್ಯೂಝಿಲೆಂಡ್

ಮತ್ತೊಂದೆಡೆ ಪಾಕಿಸ್ತಾನ್ ಹಾಗೂ ಶ್ರೀಲಂಕಾ ನಡುವೆ ಇಂದು (ಫೆ.28) ನಡೆಯಲಿರುವ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳ ಸೆಮಿಫೈನಲ್​ ಭವಿಷ್ಯ ನಿರ್ಧಾರವಾಗಲಿದೆ. ಅಂದರೆ ಶ್ರೀಲಂಕಾ ವಿರುದ್ಧ ಪಾಕಿಸ್ತಾನ್ ತಂಡ ಸೋತರೆ ನ್ಯೂಝಿಲೆಂಡ್ ತಂಡವು ನೇರವಾಗಿ ಸೆಮಿಫೈನಲ್​​ಗೇರಲಿದೆ.

ಒಂದು ವೇಳೆ ಪಾಕಿಸ್ತಾನ್ ತಂಡವು ಶ್ರೀಲಂಕಾ ನೀಡುವ ಗುರಿಯನ್ನು ನಿರ್ದಿಷ್ಟ ಓವರ್​ಗಳಲ್ಲಿ ಅಥವಾ ಇಂತಿಷ್ಟು ಎಸೆತಗಳನ್ನು ಉಳಿಸಿ ಚೇಸ್ ಮಾಡಿದರೆ ನೆಟ್ ರನ್ ರೇಟ್ ನೆರವಿನೊಂದಿಗೆ ಸೆಮಿಫೈನಲ್​ಗೆ ಅರ್ಹತೆ ಪಡೆಯಬಹುದು. ಹೀಗಾಗಿ ಪಾಕಿಸ್ತಾನ್ ಪಾಲಿಗೂ ಇಂದಿನ ಪಂದ್ಯವು ‘ಫೈನಲ್’ ಮ್ಯಾಚ್​ ಎಂದರೆ ತಪ್ಪಾಗಲಾರದು.

‘ಸೆಮಿ’ ಎದುರಾಳಿಗಳು

ಒಂದು ವೇಳೆ ಪಾಕಿಸ್ತಾನ್ ಅಥವಾ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೇರಿದರೆ ಗ್ರೂಪ್-1 ರಲ್ಲಿ ಅಗ್ರಸ್ಥಾನ ಪಡೆದಿರುವ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಹಾಗೆಯೇ ಭಾರತ ಅಥವಾ ವೆಸ್ಟ್ ಇಂಡೀಸ್ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದರೆ ಗ್ರೂಪ್-2 ನಲ್ಲಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡ ವಿರುದ್ಧ ಕಣಕ್ಕಿಳಿಯಬೇಕಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಟೀಮ್ ಇಂಡಿಯಾ

ಹೀಗಾಗಿ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ತಮ್ಮ ಎದುರಾಳಿಗಳನ್ನು ಎದುರು ನೋಡುತ್ತಿದ್ದಾರೆ. ಅದರಂತೆ ಭಾರತ, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ತಂಡಗಳಲ್ಲಿ ನಾಕೌಟ್ ಹಂತಕ್ಕೇರುವವರು ಯಾರು ಎಂಬದು ಇಂದು ಮತ್ತು ನಾಳೆ ನಿರ್ಧಾರವಾಗಲಿದೆ. ಇದರೊಂದಿಗೆ 20 ತಂಡಗಳೊಂದಿಗೆ ಶುರುವಾದ ಟೂರ್ನಿಯು 4 ತಂಡಗಳ ಕದನವಾಗಿ ಮಾರ್ಪಡಲಿದೆ. ಈ ನಾಲ್ಕು ತಂಡಗಳಲ್ಲಿ 2 ತಂಡವು ಮಾರ್ಚ್ 8 ರಂದು ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

Source link

ಬೈಕ್​​ಗೆ ಲಾರಿ ಡಿಕ್ಕಿ: ಹಿಟ್​​ ಆ್ಯಂಡ್​​ ರನ್​​ಗೆ ಮೂವರು ಯುವಕರು ಬಲಿ

ರಾಯಚೂರು, ಫೆಬ್ರವರಿ 28: ಬೈಕ್​​ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಆಘಾತಕಾರಿ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಮೊಹಮ್ಮದ್​​ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ.

ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್​​ಗೆ ಹೈದರಾಬಾದ್​​​​ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದೆ)

Source link

ಮತ್ತೊಂದು ದೊಡ್ಡ ಅವಕಾಶ ಕಳೆದುಕೊಂಡ ದೀಪಿಕಾ ಪಡುಕೋಣೆ – Kannada News | Deepika Padukone’s Career Crossroads: Motherhood and Lost Film Opportunities

ನಟಿ ದೀಪಿಕಾ ಪಡುಕೋಣೆ ಅವರು ದೊಡ್ಡ ದೊಡ್ಡ ಅವಕಾಶವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ಅವರು ಹಾಕುವ ಷರತ್ತು ಎಂದರೂ ತಪ್ಪಾಗಲಿಕ್ಕಿಲ್ಲ. ಅವರು ಇತ್ತೀಚೆಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ 2’ ಚಿತ್ರದಿಂದ ಹಾಗೂ ‘ಸ್ಪಿರಿಟ್’ ಚಿತ್ರದಿಂದ ಹೊರ ಹೋದರು. ಈಗ ಅವರಿಗೆ ಮತ್ತೊಂದು ಅವಕಾಶ ಕಳೆದು ಹೋಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ದೀಪಿಕಾ ಪಡುಕೋಣೆ ಅವರು ಸಿನಿಮಾದಲ್ಲಿ ನಟಿಸಲು ತಮ್ಮದೇ ಆದ ಷರತ್ತು ಹೊಂದಿದ್ದಾರೆ. ಮಗುವನ್ನು ಸಾಕುವ ಜವಾಬ್ದಾರಿ ಅವರಿಗೆ ಇರುವುದರಿಂದ ಅವರು ದಿನದಲ್ಲಿ 8 ಗಂಟೆ ಮಾತ್ರ ಕೆಲಸ ಮಾಡೋದಾಗಿ ಹೇಳಿದ್ದಾರೆ. ಈ ಕಾರಣದಿಂದಲೇ ಅವರು ‘ಕಲ್ಕಿ 2898 ಎಡಿ’ ಹಾಗೂ ‘ಸ್ಪಿರಿಟ್ ಚಿತ್ರದಿಂದ ಹೊರ ಹೋದರು. ಅವರಿಗೆ ಈ ಮಧ್ಯೆ ಒಂದು ಹಾಲಿವುಡ್ ಆಫರ್ ಕೂಡ ಕೈ ತಪ್ಪಿತ್ತು.

ಅವರಿಗೆ ಇಂಗ್ಲಿಷ್​​ನ ಕಾಮಿಡಿ ಸೀರಿಸ್ ‘ವೈಟ್ ಲೋಟಸ್’ ಆಫರ್ ಬಂದಿತ್ತು. ಮಗು ಜನಿಸಿದ ತಕ್ಷಣವೇ ಈ ಆಫರ್ ಬಂದಿತ್ತು. ಹೀಗಾಗಿ, ಅವರಿಗೆ ಆಡಿಷನ್​​ಗೆ ತೆರಳು ಸಾಧ್ಯವಾಗಿಲ್ಲ. ಅಮೆರಿಕದ ಪ್ರಸಿದ್ಧ ಬ್ಲ್ಯಾಕ್ ಕಾಮಿಡಿ ಸರಣಿ ಇದಾಗಿದೆ. ಮೈಕ್ ವೈಟ್ ಇದನ್ನು ನಿರ್ದೇಶನ ಮಾಡುತ್ತಿದ್ದಾರೆ.

ದೀಪಿಕಾ ಪಡುಕೋಣೆ ಮಗು ಜನಿಸುವುದಕ್ಕೂ ಮೊದಲು ಯಾವುದೇ ಷರತ್ತು ಇಲ್ಲದೆ ಕೆಲಸ ಮಾಡುತ್ತಾ ಸಾಗುತ್ತಿದ್ದರು. ಅವರು ಈಗ ಅಲ್ಲು ಅರ್ಜುನ್ ಹಾಗೂ ಅಟ್ಲಿ ಸಿನಿಮಾಗೆ ನಾಯಕಿ ಆಗಿದ್ದಾರೆ. ಪ್ಲ್ಯಾನ್ ಪ್ರಕಾರವೇ ಎಲ್ಲವೂ ನಡೆದರೆ ದೀಪಿಕಾ ಅವರು ಈ ಚಿತ್ರದ ಮೂಲಕ ದೊಡ್ಡ ಕಂಬ್ಯಾಕ್ ಮಾಡಲಿದ್ದಾರೆ. ಅವರು ದೊಡ್ಡ ಬ್ರೇಕ್ ತೆಗದುಕೊಂಡಿದ್ದು, ಅವರಿಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ಇದನ್ನೂ ಓದಿ: ಪೌರಾಣಿಕ ಸಿನಿಮಾನಲ್ಲಿ ದೀಪಿಕಾ ಪಡುಕೋಣೆ, ನಾಯಕ ಯಾರು?

ಎಲ್ಲ ನಟಿಯರ ಕರಿಯರ್​​ನಲ್ಲೂ ಏರಿಳಿತ ಸಾಮಾನ್ಯ. ಅದೇ ರೀತಿ ದೀಪಿಕಾ ಪಡುಕೋಣೆ ಜೀವನದಲ್ಲೂ ಬಂದಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಸದ್ಯ ಮಗುವಿನ ಆರೈಕೆಯಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ! – Kannada News | Murder Mystery: Unidentified Decomposed Body Found in Rental Home; Tenants Missing

ಶವ ಪತ್ತೆಯಾಗಿರುವ ಮನೆImage Credit source: Tv9 Kannada

ನೆಲಮಂಗಲ, ಫೆಬ್ರವರಿ 28: ಯುವಕನೋರ್ವನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿದ್ದಲ್ಲದೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್​​ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಮೃತದೇಹ ಪತ್ತೆಯಾಗಿರುವ ಈ ಮನೆಯನ್ನು ಮಾಲಿಕ ನಟರಾಜ್​​ ಅವರ ಬಳಿ ಎರಡು ತಿಂಗಳ ಹಿಂದೆ ಮೋಹನ್ ಕೃಷ್ಣ ಮತ್ತು ಊರ್ವಶಿ ಎಂಬುವವರು ಬಾಡಿಗೆ ಗೆ ಪಡೆದಿದ್ದರು. ಊರ್ವಶಿ ನಾನು ಸಿನೆಮಾ ಸಹ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದೆನೆ ಅಂತ ಮನೆ ಮಾಲಿಕರ ಬಳಿ ಪರಿಚಯಿಸಿಕೊಂಡಿದ್ದಳು ಎನ್ನಲಾಗಿದೆ. ಬಾಡಿಗೆ ಸಂಬಂಧ ಇನ್ನೇನು ಅಗ್ರಿಮೆಂಟ್ ಮಾಡಿಸಬೇಕು ಅಂದುಕೊಳ್ಳುವಷ್ಟರಲ್ಲಿ ಮುಂದಿನ ತಿಂಗಳು ಮನೆ ಖಾಲಿ ಮಾಡಿಬಿಡ್ತೀವಿ ಎಂದು ಇವರು ತಿಳಿಸಿದ್ದರಂತೆ. ಹೀಗಾಗಿ ಮತ್ತೇನಕ್ಕೆ ಅಗ್ರಿಮೆಂಟ್​​ ಮಾಡಿಸೋದು ಎಂದು ಭಾವಿಸಿ ಮನೆ ಮಾಲಿಕ ನಟರಾಜ್​​ ಕೂಡ ಸುಮ್ಮನಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಟೆಕ್ಕಿ ಆತ್ಮಹತ್ಯೆ? ಹಸೆಮಣೆ ಏರಬೇಕಿದ್ದವಳ ದಾರುಣ ಅಂತ್ಯ

ಆ ಬಳಿಕ ನಟರಾಜ್​​ ಮನೆ ಬಳಿ ಬಂದಾಗೆಲ್ಲ ಬಾಗಿಲಿಗೆ ಬೀಗ ಹಾಕಿರೋದು ಕಂಡುಬರುತ್ತಿತ್ತು. ಈ ನಡುವೆ ಅಕ್ಕಪಕ್ಕದ ಮನೆಯವರು ನಟರಾಜ್ ಮಗನಿಗೆ ಫೋನ್ ಮಾಡಿ ನಿಮ್ಮ ಮನೆಯಿಂದ ಏನೋ ಕೆಟ್ಟ ವಾಸನೆ ಬರ್ತಿದೆ ಎಂದು ತಿಳಿಸಿದ್ದಾರೆ.  ರವಿಕಿರಣ್ ಮನೆಗೆ ಬಂದು ನೋಡಿದಾಗ ಕೊಲೆಯಾದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ ಕೂಡಲೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೊಲೆಗೂ ಮುನ್ನ ಮನೆಯಲ್ಲಿ ಪಾರ್ಟಿ ನಡೆದಿರುವ ಬಗ್ಗೆಯೂ ಸಂಶಯ ವ್ಯಕ್ತವಾಗಿದ್ದು, ಮೃತದೇಹವನ್ನು ಶಿಫ್ಟ್​​ ಮಾಡಲಾಗಿದೆ.

ಇನ್ನು ಕೊಲೆಯಾಗಿರುವ ವ್ಯಕ್ತಿ ಯಾರೆಂಬ ಬಗ್ಗೆ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದು ನಾಲ್ಕೈದು ದಿನಗಳಾಗಿರುವ ಹಿನ್ನೆಲೆ ದೇಹ ಗುರುತು ಸಿಗದಷ್ಟು ಕೊಳೆತಿದ್ದು, ಈ ವ್ಯಕ್ತಿ ಯಾರೆಂಬುದು ಗೊತ್ತಾಗಿಲ್ಲ. ಮನೆ ಬಾಡಿಗೆಗೆ ಪಡೆದಿದ್ದ ಊರ್ವಶಿ ಮತ್ತು ಮೋಹನ ಕೃಷ್ಣ ಗಂಡ ಹೆಂಡತಿನಾ ಎಂಬ ಅನುಮಾನ ಕೂಡ ಇದ್ದು, ಕೊಲೆಯಾದ ವ್ಯಕ್ತಿ ಯಾರು ಎಂಬ ಪ್ರಶ್ನೆಗೆ ಬೀಗ ಹಾಕಿಕೊಂಡು ಹೋಗಿರುವ ಇವರ ಬಂಧನದ ನಂತರವೇ ಉತ್ತರ ಸಿಗಬೇಕಿದೆ.

ಮಂಜುನಾಥ್ ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Bengaluru Air Quality: ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ! – Kannada News | Bangalore Air Pollution Crisis: Bengaluru and Belagavi’s Air quality is dropping fast

ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ!

ಬೆಂಗಳೂರು, ಫೆಬ್ರವರಿ 28: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಬೆಳಗಾವಿ, ಕಲಬುರ್ಗಿ ಸೇರಿದಂತೆ ವಿವಿಧೆಡೆ ಗಾಳಿಯ ಗುಣಮಟ್ಟ ನೆಲಕಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 172ಕ್ಕೆ ತಲುಪಿದೆ. ಹಲವು ದಿನಗಳಿಂದ ವಿಪರೀತ ಏರಿಕೆ ಕಾಣುತ್ತಿರುವ ಬೆಳಗಾವಿಯ ಏರ್ ಕ್ವಾಲಿಟಿ ಇಂದು 156 ಆಗಿದ್ದು, 200ರ ಗಡಿ ತಲುಪಿರುವುದು ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –172
  • ಮಂಗಳೂರು-106
  • ಮೈಸೂರು –143
  • ಬೆಳಗಾವಿ – 156
  • ಕಲಬುರ್ಗಿ-126
  • ಶಿವಮೊಗ್ಗ – 85
  • ಬಳ್ಳಾರಿ – 154
  • ಹುಬ್ಬಳ್ಳಿ- 132
  • ಉಡುಪಿ –100
  • ವಿಜಯಪುರ –126

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಧುರಂಧರ್ 2 Vs ಟಾಕ್ಸಿಕ್; ಯಶ್-ರಣವೀರ್ ಸಿಂಗ್ ಪೈಕಿ ಯಾರ ಸಿನಿಮಾ ಬಜೆಟ್ ಹೆಚ್ಚು? – Kannada News | Yash vs Ranveer: Toxic and Dhruvandhar 2 Box Office Clash! Who Wins

ಧುರಂಧರ್ 2 Vs ಟಾಕ್ಸಿಕ್ (Toxic) ಟಾಕ್ ಜೋರಾಗಿದೆ. ರಣವೀರ್ ಸಿಂಗ್ ಅವರ ‘ಧುರಂಧರ್ 2’ ಚಿತ್ರ ಮತ್ತು ಯಶ್ ಅವರ ‘ಟಾಕ್ಸಿಕ್’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಪರಸ್ಪರ ಕ್ಲ್ಯಾಶ್ ಆಗುತ್ತಿವೆ. ಈ ಎರಡು ಚಿತ್ರಗಳಲ್ಲಿ ಯಾವುದು ಹೆಚ್ಚು ಹಣ ಗಳಿಸುತ್ತದೆ ಎಂಬ ಕುತುಹೂಲ ಮೂಡಿದ್ದು, ಬಿಡುಗಡೆಯಾದ ಬಳಿಕ ಆ ಬಗ್ಗೆ ತಿಳಿಯಲಿದೆ. ಹಾಗಾದರೆ ಯಾವ ಚಿತ್ರದ ಬಜೆಟ್ ಹೆಚ್ಚಿದೆ? ಆ ಬಗ್ಗೆ ಇಲ್ಲಿ ನೋಡೋಣ.

ಮಾರ್ಚ್ ತಿಂಗಳು ಸಿನಿಮಾ ಪ್ರಿಯರಿಗೆ ಸುಗ್ಗಿಯೇ ಸರಿ. ಏಕೆಂದರೆ ಮಾರ್ಚ್ 19ರಂದು ಎರಡು ದೊಡ್ಡ ಚಿತ್ರಗಳು ಬಿಡುಗಡೆಯಾಗಲಿವೆ. ಧುರಂಧರ್ 2 ಚಿತ್ರದಲ್ಲಿ ರಣವೀರ್ ಸಿಂಗ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರೆ, ಇನ್ನೊಂದು ಟಾಕ್ಸಿಕ್. ಇದರಲ್ಲಿ ರಾಕಿಂಗ್ ಸ್ಟಾರ್ ಯಶ್ ಇದ್ದಾರೆ. ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ ಎರಡೂ ಚಿತ್ರಗಳು ಮಾರ್ಚ್ 19ರಂದು ಒಂದೇ ದಿನ ಬಿಡುಗಡೆಯಾಗಲಿವೆ. ಈ ಎರಡೂ ಚಿತ್ರಗಳ ಮಧ್ಯೆ ಕ್ಲ್ಯಾಶ್ ಏರ್ಪಡಲಿದೆ. ಈ ಎರಡೂ ಚಿತ್ರಗಳ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಎರಡೂ ಚಿತ್ರಗಳು ದೊಡ್ಡ ಬಜೆಟ್​​ನ್ಲಿ ನಿರ್ಮಾಣವಾಗಿವೆ.

ಯಶ್ ಮತ್ತು ರಣವೀರ್ ನಡುವೆ ಬಾಕ್ಸ್ ಆಫೀಸ್ ಅಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಸದ್ಯದ ಚರ್ಚೆ. ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ತಾರಾ ಸುತಾರಿಯಾ, ಹುಮಾ ಖುರೇಷಿ ಮುಂತಾದ ದೊಡ್ಡ ನಟಿಯರು ನಟಿಸಿದ್ದಾರೆ. ವರದಿಗಳ ಪ್ರಕಾರ, ಈ ಚಿತ್ರದ ಬಜೆಟ್ ಸುಮಾರು 500 ಕೋಟಿ ರೂ.

‘ಧುರಂಧರ್ 2’ ಚಿತ್ರದ ಬಜೆಟ್ ‘ಟಾಕ್ಸಿಕ್’ ಚಿತ್ರಕ್ಕೆ ಹೋಲಿಸಿದರೆ ಕಡಿಮೆ. ‘ಧುರಂಧರ್ 2’ ಚಿತ್ರದ ಬಜೆಟ್ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ಇಲ್ಲ. ಏಕೆಂದರೆ ಇದನ್ನು ಮೊದಲ ಭಾಗದ ಜೊತೆಗೆ ಚಿತ್ರೀಕರಿಸಲಾಗಿದೆ. ವರದಿಗಳ ಪ್ರಕಾರ, ಎರಡೂ ಭಾಗಗಳಿಗೆ 300-350 ಕೋಟಿ ರೂ. ಖರ್ಚು ಮಾಡಲಾಗಿದೆ.

ಇದನ್ನೂ ಓದಿ: ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್

ಯಶ್ ನಟನೆಯ ‘ಟಾಕ್ಸಿಕ್’ ಚಿತ್ರವೇ ಗೆಲ್ಲಬಹುದು ಎಂಬುದು ಅಭಿಮಾನಿಗಳ ಊಹೆ. ನಿಜವಾದ ಸಿನಿಪ್ರಿಯರು ಎರಡೂ ಸಿನಿಮಾ ಗೆಲ್ಲಲಿ ಎಂದು ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇನ್ನು ಕೆಲ ದಿನ ಶುಷ್ಕ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ – Kannada News | Bengaluru temperature: Heat wave alert in Bengaluru, cloudy sky in Bengaluru

ರಾಜ್ಯದೆಲ್ಲೆಡೆ ಇನ್ನು ಕೆಲ ದಿನ ಶುಷ್ಕ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವುದೂ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link