ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?
‘ಆರ್ಆರ್ಆರ್’ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ನಟನೆಯ ಸತತ ಎರಡು ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಫ್ಲಾಪ್ ಆಗಿವೆ. ‘ಗೇಮ್ ಚೇಂಜರ್’ ಮತ್ತು ‘ಆಚಾರ್ಯ’ ಎರಡೂ ಸಿನಿಮಾಗಳು ಹೀನಾಯ ಸೋಲು ಕಂಡಿವೆ. ಇದೀಗ ರಾಮ್ ಚರಣ್ ಅವರು ಗೆಲುವಿನ ಹುಡುಕಾಟದಲ್ಲಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಬಹುತೇಕ ಮುಗಿಸಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 30 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ನಿರ್ಮಾಪಕರೊಬ್ಬರು ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿರುವ ಬಗ್ಗೆ ಸುಳಿವು…