ಜಿಂಬಾಬ್ವೆ ವಿರುದ್ಧ ಗೆದ್ದರೂ ಮೇಲೇಳದ ಟೀಂ ಇಂಡಿಯಾ ಸೆಮಿಫೈನಲ್ ತಲುಪುವುದು ಹೇಗೆ? – Kannada News | Team India’s T20 World Cup Semis Path: Beat WI After Zimbabwe Win to Qualify!
2026 ರ ಟಿ20 ವಿಶ್ವಕಪ್‌ನ (T20 World Cup 2026) ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ತಂಡವನ್ನು 72 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ ತನ್ನ ಸೆಮಿಫೈನಲ್ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 256 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆ 184 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ಗೇರುವ ಅವಕಾಶವನ್ನು ಹೊಂದಿದೆಯಾದರೂ, ಪಾಯಿಂಟ್…